Politics
ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ಮತ್ತು ದ್ವೇಷ ಭಾಷಣ ತಡೆ ವಿಧೇಯಕಗಳು ಅಂಗೀಕಾರ
ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಮತ್ತು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಡಿ.18ರಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆಯಲ್ಲಿ ಸರ್ವಾನುಮತದ ಮೂಲಕ ಅಂಗೀಕಾರ ಪಡೆಯಿತು

ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇಪ್ಪ ಅವರು ಅಸಂವಿಧಾನಿಕ ಆಚರಣೆಗಳಾದ ಜಾತಿ ಪಂಚಾಯಿತಿಗಳು ಹೇರುವ ಸಾಮಾಜಿಕ ಬಹಿಷ್ಕಾರ, ಕಿರುಕುಳ, ವಿವಿಧ ರೀತಿಯ ಶಿಕ್ಷೆಗಳನ್ನು ತಡೆಗಟ್ಟಿ ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಸಮಾಜದಿಂದ ನಿರ್ಮೂಲನೆ ಮಾಡುವುದಕ್ಕಾಗಿ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025ನ್ನು ಸರ್ಕಾರ ಜಾರಿಗೆ ತರುತ್ತಿದೆ ಎಂದು ತಿಳಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಈ ವಿಧೇಯಕವು ವ್ಯಕ್ತಿಗಳ, ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷ ಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ದಂಡನೆಯನ್ನು ಉಪಬಂದಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದೆ ಎಂದು ತಿಳಿಸಿದರು. ದ್ವೇಷ ಭಾಷಣ ಪುನರಾವರ್ತನೆಗೆ ಗರಿಷ್ಠ ಶಿಕ್ಷೆ 10 ವರ್ಷದ ಬದಲಾಗಿ 7 ವರ್ಷ ಜೈಲು ಶಿಕ್ಷೆ ಎಂದು ತಿದ್ದುಪಡಿ ಮಾಡಲಾಗಿದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

ಪ್ರತಿಪಕ್ಷ ಸದಸ್ಯರು ವಿಧೇಯಕ ಪ್ರತಿಗಳನ್ನು ಹರಿದು ತೀವ್ರ ವಿರೋಧ ವ್ಯಕ್ತಪಡಿಸಿದ ಮದ್ಯೆಯೇ ಸರ್ವಾನುಮತಗಳಿಂದ ವಿಧೇಯಕ ಅಂಗೀಕಾರ ಪಡೆಯಿತು.
ವಿಧೇಯಕದ ಕುರಿತು ಚರ್ಚಿಸುವಾಗ, ಈಗಾಗಲೇ ಮುದ್ರಿತವಾಗಿರುವ ಪುಸ್ತಕ, ಗ್ರಂಥದಲ್ಲಿ ದ್ವೇಷದ ಮಾತುಗಳು ಇವೆ ಎಂದಾದರೆ ಏನು ಕ್ರಮ? ಎಂದು ಕೇಳಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಶ್ನೆಗೆ, ಹಳೆ ಪುಸ್ತಕದಲ್ಲಿ ಇಂತಹ ಅಂಶ ಇದ್ದರೆ, ಅದು ಕೂಡಾ ಈ ಕಾನೂನಿನ ವ್ಯಾಪ್ತಿಯಲ್ಲಿ ಬರಲಿದೆ. ಅಂತವನ್ನು ಬ್ಯಾನ್ ಮಾಡುವ ಪ್ರಕ್ರಿಯೆಗೆ ಅವಕಾಶ ಇದೆ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದರು.
Bantawala
ಮಾಣಿಲ ಶಿರಿಯಾ ನದಿಗೆ ಸೇತುವೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಸ್ಥಳ ಪರಿಶೀಲನೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿಲ ಗ್ರಾಮದ ಶಿರಿಯಾ ನದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಿಸಬೇಕೆಂಬ ದಶಕಗಳ ಕಾಲದ ಬೇಡಿಕೆಗೆ ಕೊನೆಗೂ ಜೀವಕಳೆ ಬಂದಿದೆ. ಈ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಶಕಗಳ ಬೇಡಿಕೆಗೆ ಸ್ಪಂದನೆ
ಮಾಣಿಲ ಭಾಗದ ಜನರು ಕೇರಳದ ಪ್ರದೇಶಗಳಿಗೆ ತೆರಳಲು ಮತ್ತು ಗಡಿ ಭಾಗದ ಸಂಪರ್ಕ ಸುಗಮಗೊಳಿಸಲು ಈ ಸೇತುವೆಯ ನಿರ್ಮಾಣ ಅತ್ಯಂತ ಅವಶ್ಯಕವಾಗಿದೆ.

ಪ್ರಸ್ತುತ ಮಳೆಗಾಲದಲ್ಲಿ ಹಾಗೂ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ಜನರು ನದಿ ದಾಟಲು ಹರಸಾಹಸ ಪಡುತ್ತಿದ್ದಾರೆ. ಈ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದ ಸ್ಥಳೀಯರು, ಕೂಡಲೇ ಸುಸಜ್ಜಿತ ಸೇತುವೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು.
ತಾಂತ್ರಿಕ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ
ಸ್ಥಳ ಪರಿಶೀಲನೆಯ ನಂತರ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು:”ಈ ಭಾಗದ ಜನರ ದಶಕಗಳ ಬೇಡಿಕೆಯ ಬಗ್ಗೆ ಗಂಭೀರವಾಗಿ ಗಮನ ಹರಿಸಲಾಗುವುದು. ಸೇತುವೆಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ವರದಿ ಹಾಗೂ ಅಂದಾಜು ಪಟ್ಟಿಯನ್ನು (Estimation) ಸಿದ್ಧಪಡಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.

ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಮನವರಿಕೆ
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಚಿವರಿಗೆ ಈ ಯೋಜನೆಯ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಗಡಿ ಭಾಗದ ಅಭಿವೃದ್ಧಿ ಹಾಗೂ ಜನರ ಸಂಕಷ್ಟ ನಿವಾರಣೆಗೆ ಈ ಸೇತುವೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಶ್ರೀಧರ್ ಬಾಳೆಕಲ್ಲು , ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು

Bantawala
ಬೊಬ್ಬೆಕೇರಿ ರಸ್ತೆ ಕಾಂಕ್ರೀಟೀಕರಣಕ್ಕೆ 60 ಲಕ್ಷ ಮಂಜೂರು: ಶಾಸಕ ಅಶೋಕ್ ರೈ ಕೊಟ್ಟ ಮಾತು ಈಡೇರಿಕೆ
ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಯ ಕಾಂಞoಗಾಡು-ಕಡೂರು ರಾಜ್ಯ ಹೆದ್ದಾರಿಯ ಬೊಬ್ಬೆಕೇರಿ ಎಂಬಲ್ಲಿನ ರಸ್ತೆ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಹಲವು ವರ್ಷಗಳ ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿರುವ ಪುತ್ತೂರು ಶಾಸಕ ಅಶೋಕ್ ರೈ, ರಸ್ತೆ ಕಾಂಕ್ರೀಟೀಕರಣ ಮತ್ತು ಅಭಿವೃದ್ಧಿಗಾಗಿ 60 ಲಕ್ಷ ರೂಪಾಯಿ ಅನುದಾನ ಮಂಜೂರುಗೊಳಿಸಿದ್ದಾರೆ.
ಸಮಸ್ಯೆಯ ಹಿನ್ನೆಲೆ:
ಅಂತರರಾಜ್ಯ ಸಂಪರ್ಕಿಸುವ ಈ ಪ್ರಮುಖ ಹೆದ್ದಾರಿಯ ಬೊಬ್ಬೆಕೇರಿ ಭಾಗದಲ್ಲಿ ರಸ್ತೆ ಅತ್ಯಂತ ಕಿರಿದಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದರು. ರಸ್ತೆ ಕಿರಿದಾಗಿದ್ದರಿಂದ ಮಳೆನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ನೀರು ನಿಲ್ಲುತ್ತಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಖಾಸಗಿ ಜಮೀನುಗಳಿದ್ದ ಕಾರಣ ರಸ್ತೆ ಅಗಲೀಕರಣ ಸಾಧ್ಯವಾಗಿರಲಿಲ್ಲ, ಇದರಿಂದಾಗಿ ಇಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದವು. ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ನಡೆದಾಡಲು ರಸ್ತೆ ಬದಿಯಲ್ಲಿ ಕನಿಷ್ಠ ಜಾಗವೂ ಇಲ್ಲದಂತಾಗಿತ್ತು.

ಶಾಸಕರ ಇಚ್ಛಾಶಕ್ತಿ:
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಅಶೋಕ್ ರೈ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗಳೊAದಿಗೆ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಖಾಸಗಿ ಜಮೀನು ಮಾಲೀಕರೊಂದಿಗೆ ಮಾತುಕತೆ ನಡೆಸಿ, ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದ್ದರು. ಭರವಸೆ ನೀಡಿದ ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡುವ ಮೂಲಕ ಶಾಸಕರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.
“ಬೊಬ್ಬೆಕೇರಿಯಲ್ಲಿ ರಸ್ತೆ ಕಿರಿದಾಗಿದ್ದರಿಂದ ಶಾಲಾ ಮಕ್ಕಳಿಗೆ ಹಾಗೂ ವಾಹನ ಸವಾರರಿಗೆ ಜೀವಭಯವಿತ್ತು. ಈ ಸಮಸ್ಯೆಯನ್ನು ಮನಗಂಡು ಖಾಸಗಿ ಜಮೀನು ಮಾಲೀಕರೊಂದಿಗೆ ಚರ್ಚಿಸಿದ್ದೇನೆ. ಸಾರ್ವಜನಿಕರ ಅನುಕೂಲಕ್ಕಾಗಿ ಯಾರೇ ಅಡ್ಡಿಪಡಿಸಿದರೂ ಇಲ್ಲಿ ವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡುವುದು ಖಚಿತ.”
— ಅಶೋಕ್ ರೈ, ಶಾಸಕರು, ಪುತ್ತೂರು
Politics
ಬಿಜೆಪಿಯಲ್ಲಿ ಯಡಿಯೂರಪ್ಪ ಏನು ? ಹೊಸ ಪಕ್ಷ ಸ್ಥಾಪನೆಯ ಮುನ್ಸೂಚನೆಯೇ ? ಇದು ಯಡಿಯೂರಪ್ಪ ಸ್ಟೈಲ್ !!
ಇಂದು ಕರ್ನಾಟಕದಲ್ಲಿ ಬಿಜೆಪಿ ಒಂದು ಪ್ರಬಲ ರಾಜಕೀಯ ಶಕ್ತಿಯಾಗಿ ಬೆಳೆದು ನಿಂತಿರುವುದರ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ತ್ಯಾಗ ಮತ್ತು ಪರಿಶ್ರಮದ ದೊಡ್ಡ ಪಾಲಿದೆ. ಅವರು ಪಕ್ಷದ ಸಂಸದೀಯ ಮಂಡಳಿಯ ಸದಸ್ಯರಾಗಿ ಇಂದಿಗೂ ಪಕ್ಷದ ಉನ್ನತ ಮಟ್ಟದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೂ ತನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ವಿಚಲಿತರಾಗದೆ ಧೈರ್ಯವಾಗಿ ಎದುರಿಸಿ ಜಯಶಾಲಿಯಾದವರು. ಅವರ ಯಾವುದೇ ಮಾತುಗಳಲ್ಲಿ, ಕೃತಿಗಳಲ್ಲಿ ಮುಂದಿನ ಭವಿಷ್ಯದ ನಿರ್ಧಾರಗಳಿವೆ. ಬಿಜೆಪಿಯಲ್ಲಿ ಯಡಿಯೂರಪ್ಪ ಏನು ? ಎಂಬುವುದನ್ನುಪರೋಕ್ಷವಾಗಿ ತೋರಿಸುವಾಗ ಇದು ಹೊಸ ಪಕ್ಷ ಸ್ಥಾಪನೆಯ ಮುನ್ಸೂಚನೆಯಾಗಿರಬಹುದೇ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಇದುವೇ ಯಡಿಯೂರಪ್ಪ ಸ್ಟೈಲ್ !!

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನೀಡಿದ ಇತ್ತೀಚಿನ ಹೇಳಿಕೆಯು ಬಿಜೆಪಿ ನಾಯಕರ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಹೈಕಮಾಂಡ್ ಅನುಮತಿಗೂ ಮುನ್ನವೇ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಯಡಿಯೂರಪ್ಪ ಅವರ ನಡೆಗೆ ಪಕ್ಷದ ಹಿರಿಯ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ (BSY) ಅವರು ಇತ್ತೀಚೆಗೆ (ಮಾರ್ಚ್ 2026) ದಾವಣಗೆರೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಕುರಿತು ನೀಡಿದ ಹೇಳಿಕೆಯು ಪಕ್ಷದೊಳಗೆ ಸಂಚಲನ ಮೂಡಿಸಿದೆ. ಚುನಾವಣೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶವಿರುವಾಗಲೇ ಅವರು ಕೆಲವು ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವುದು ಈ ವಿವಾದಕ್ಕೆ ಮುಖ್ಯ ಕಾರಣವಾಗಿದೆ.

ಈ ಬೆಳವಣಿಗೆಯಿಂದಾಗಿ ಪಕ್ಷದ ಆಂತರಿಕ ಕಲಹ ಬೀದಿಗೆ ಬಂದಂತಾಗಿದ್ದು, ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಕೆಲವು ಪ್ರಭಾವಿ ಬಿಜೆಪಿ ನಾಯಕರು ಈ ನಡೆಯನ್ನು ಖಂಡಿಸಿ, ಯಡಿಯೂರಪ್ಪ ಅವರು ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಪಕ್ಷದ ಕೇಂದ್ರ ಸಮಿತಿಗೆ ಸೇರಿದ್ದು, ಏಕಪಕ್ಷೀಯ ನಿರ್ಧಾರಗಳು ಸರಿಯಲ್ಲ’ ಎಂಬ ಮಾತುಗಳು ಕೇಳಿಬರುತ್ತಿವೆ. ಅಷ್ಟೇ ಅಲ್ಲದೇ, ಈ ನಡೆಯ ಹಿಂದೆ ಗಂಭೀರವಾದ ರಾಜಕೀಯ ತಂತ್ರ ಅಡಗಿದೆ ಎಂದು ಹಲವರು ಶಂಕಿಸಿದ್ದಾರೆ.ಯಡಿಯೂರಪ್ಪ ಅವರಿಗೆ ಪಕ್ಷ ಬಿಡುವ ಮತ್ತು ಸ್ವಂತ ಪ್ರಾದೇಶಿಕ ಪಕ್ಷವನ್ನು ಕಟ್ಟುವ ಉದ್ದೇಶವಿದ್ದಂತಿದೆ’ ಎಂದು ಕೆಲವು ಮೂಲಗಳು ಗಂಭೀರ ಆರೋಪ ಮಾಡಿವೆ.
ಈ ಅನಿರೀಕ್ಷಿತ ಘೋಷಣೆಯು ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಹಾನಿಯುಂಟು ಮಾಡಬಹುದು ಎಂದು ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಸೂಚನೆಗೂ ಮೊದಲೇ ಅಭ್ಯರ್ಥಿಗಳನ್ನು ಹೆಸರಿಸುವುದು ಪಕ್ಷದ ಒಗ್ಗಟ್ಟನ್ನು ಹದಗೆಡಿಸುತ್ತದೆ ಎನ್ನುವುದು ವಿರೋಧಿಬಣದ ವಾದ. ಇತ್ತ ಯಡಿಯೂರಪ್ಪ ಬೆಂಬಲಿಗರು ಇದನ್ನು ಸಾಮಾನ್ಯ ಸಲಹೆ ಎಂದು ಸಮರ್ಥಿಸಿಕೊಳ್ಳುತ್ತಿದ್ದರೂ, ಪಕ್ಷದ ವರಿಷ್ಠರು ಈ ಬಗ್ಗೆ ತೀವ್ರ ನಿಗಾ ವಹಿಸಿದ್ದಾರೆ.
ಸದ್ಯ ಈ ಬೆಳವಣಿಗೆಯು ರಾಜ್ಯ ರಾಜಕಾರಣದಲ್ಲಿ ದೊಡ್ಡಮಟ್ಟದ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿಯ ಮುಂದಿನ ನಡೆ ಕುತೂಹಲ ಮೂಡಿಸಿದೆ. ಯಡಿಯೂರಪ್ಪ ಅವರು ತಮ್ಮ ನಿಲುವಿಗೆ ಬದ್ಧರಾಗಿರುತ್ತಾರೋ ಅಥವಾ ವರಿಷ್ಠರ ಮನವೊಲಿಕೆಗೆ ಬಾಗುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ.

ಸಾಮಾನ್ಯವಾಗಿ ಅಭ್ಯರ್ಥಿಗಳ ಆಯ್ಕೆಯನ್ನು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (CEC) ಮತ್ತು ಹೈಕಮಾಂಡ್ ಅಂತಿಮಗೊಳಿಸುತ್ತದೆ. ಆದರೆ ಯಡಿಯೂರಪ್ಪ ಅವರು ಸಂಸದೀಯ ಮಂಡಳಿಯ ಸದಸ್ಯರಾಗಿದ್ದರೂ, ಏಕಪಕ್ಷೀಯವಾಗಿ ಹೆಸರು ಘೋಷಿಸಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಎಂಬ ಆರೋಪ ಕೇಳಿಬಂದಿದೆ. ಪ್ರತಿ ಕ್ಷೇತ್ರದಲ್ಲಿ ಹತ್ತಾರು ಜನ ಆಕಾಂಕ್ಷಿಗಳು ಕೆಲಸ ಮಾಡುತ್ತಿರುವಾಗ, ಇಷ್ಟು ಮುಂಚಿತವಾಗಿಯೇ ಹೆಸರು ಘೋಷಿಸುವುದರಿಂದ ಇತರ ಕಾರ್ಯಕರ್ತರಲ್ಲಿ ನಿರಾಸಕ್ತಿ ಮೂಡುತ್ತದೆ ಎಂಬುದು ಸ್ಥಳೀಯ ನಾಯಕರ ವಾದ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಈ ಹಿಂದೆಯೇ ಸ್ಪಷ್ಟಪಡಿಸಲಾಗಿತ್ತು. ಹೀಗಿದ್ದರೂ ಬಿಎಸ್ವೈ ಅವರ ಹೇಳಿಕೆ ಹೈಕಮಾಂಡ್ಗೆ ಸವಾಲು ಹಾಕಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಈ ವಿಚಾರ ತಿಳಿದುಕೊಂಡೇ ಯಡಿಯೂರಪ್ಪನವರು ಸವಾಲು ಹಾಕಿದ್ದಾರೆ ಎಂದರೆ ಹೈಕಮಾಂಡ್ ಇವರ ಮಾತಿಗೆ , ತೀರ್ಮಾನಕ್ಕೆ ಮನ್ನಣೆ ನೀಡಿಲ್ಲವೆಂದರೆ ಮುಂದಿನ ನಿರ್ಧಾರ ಏನು ಎಂಬುವುದರ ಮೇಲೆ ಬಿಜೆಪಿಯ ಭವಿಷ್ಯತ್ತು ನಿಂತಿದೆ.

ಯಡಿಯೂರಪ್ಪನವರು ಕೇವಲ ಒಬ್ಬ ನಾಯಕನಾಗಿ ಮಾತ್ರವಲ್ಲದೆ, ಪಕ್ಷದ ಕಾರ್ಯಕರ್ತರನ್ನು ಹೆಸರು ಹಿಡಿದು ಕರೆಯುವಷ್ಟು ಆತ್ಮೀಯತೆಯನ್ನು ಹೊಂದಿದ್ದರು. ಎಂತಹ ಕಠಿಣ ಪರಿಸ್ಥಿತಿಯಲ್ಲೂ ಧೃತಿಗೆಡದೆ ಪಕ್ಷವನ್ನು ಮುನ್ನಡೆಸುವ ಅವರ ಗುಣವೇ ಅವರನ್ನು ‘ಹೋರಾಟದ ಹರಿಕಾರ’ ಎಂದು ಕರೆಯುವಂತೆ ಮಾಡಿತು. ಒಟ್ಟಾರೆಯಾಗಿ ಹೇಳುವುದಾದರೆ, ಇಂದು ಕರ್ನಾಟಕದಲ್ಲಿ ಬಿಜೆಪಿ ಒಂದು ಪ್ರಬಲ ರಾಜಕೀಯ ಶಕ್ತಿಯಾಗಿ ಬೆಳೆದು ನಿಂತಿರುವುದರ ಹಿಂದೆ ಯಡಿಯೂರಪ್ಪ ಅವರ ತ್ಯಾಗ ಮತ್ತು ಪರಿಶ್ರಮದ ದೊಡ್ಡ ಪಾಲಿದೆ. ಅವರು ಪಕ್ಷದ ಸಂಸದೀಯ ಮಂಡಳಿಯ ಸದಸ್ಯರಾಗಿ ಇಂದಿಗೂ ಪಕ್ಷದ ಉನ್ನತ ಮಟ್ಟದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೂ ತನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ವಿಚಲಿತರಾಗದೆ ಧೈರ್ಯವಾಗಿ ಎದುರಿಸಿ ಜಯಶಾಲಿಯಾದವರು.ಅವರ ಮಾತಿಗೆ ಮನ್ನಣೆ ಸಿಗಲೇ ಬೇಕು ಇಲ್ಲವಾದರೆ ಅದರ ಪರಿಣಾಮವನ್ನು ಪಕ್ಷ ಅನುಭವಿಸಲೇ ಬೇಕು ಎಂಬುವುದರ ಮೇಲೆ ಮುಂದೆ ಹೊಸ ಪಕ್ಷದ ಸ್ಥಾಪನೆಯೊಂದು ಅವರ ಅವರ ಭತ್ತಳಿಕೆಯಿಂದ ಬಂದರೂ ಬರಬಹುದು !
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
