Connect with us

Belthangady

ತಿಮರೋಡಿಗೆ ಮತ್ತೆ ಗಡಿಪಾರು; ಉಜಿರೆಯಲ್ಲಿ ಮೈಕ್ ಪ್ರಚಾರ

Published

on

ಬೆಳ್ತಂಗಡಿ : ಸೌಜನ್ಯ ಹೋರಾಟಗಾರ ರಾಷ್ಟಿಯ ಹಿಂದೂ ಜಾಗರಣಾ ವೇದಿಕೆಯ ರಾಷ್ಟಿಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ಎರಡನೇಯ ಬಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಗಡಿಪಾರು ಆದೇಶ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಈ ಹಿಂದೆ ಗಡಿಪಾರು ಮಾಡುವಂತೆ ಅರ್ಜಿ ಸಲ್ಲಿಸಿದ್ದು, ಅದರಂತೆ ಸಹಾಯಕ ಆಯುಕ್ತರು ಮತ್ತು ಉಪವಿಭಾಗೀಯ ದಂಡಾಧಿಕಾರಿಯವರು, ಕರ್ನಾಟಕ ಪೊಲೀಸ್ ಕಾಯ್ದೆ-1962 ಕಲಂ 55(ಎ) ಮತ್ತು (ಬಿ) ರಂತೆ ಗಡಿಪಾರು ಆದೇಶ ಹೊರಡಿಸಿದ್ದರು. ಸದ್ರಿ ಆದೇಶಕ್ಕೆ ಸಂಬoಧಿಸಿದoತೆ ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಪಿಟಿಷನ್ ಸಂಖ್ಯೆ:30021/2025 ರಂತೆ ಕೆ.ಪಿ ಆಕ್ಟ್ನ ಯಾವ ಕಲಂ ಅಡಿಯಲ್ಲಿ ಆದೇಶವನ್ನು ಮಾಡಲಾಗಿದೆ ಎಂಬುದನ್ನು ಸ್ಪಷ್ಟವಾಗಿ ಕಾರಣ ಸಹಿತ ಮತ್ತೊಂದು ಆದೇಶ ಮಾಡಲು ಸೂಚಿಸಿದ್ದು,. ಸದ್ರಿ ಆದೇಶವನ್ನು ರಿಟ್ ಪಿಟಿಷನ್ ಆದೇಶದ ಪ್ರತಿಯನ್ನು ಸ್ವೀಕರಿಸಿದ 15 ದಿನದೊಳಗಾಗಿ ಮಾಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಇದೀಗ ಎರಡನೇಯ ಬಾರಿ ಡಿಸೆಂಬರ್ 16ರಿಂದ 2026ರ ಸೆಪ್ಟೆಂಬರ್ 16ರವರೆಗೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶವನ್ನು ಹೊರಡಿಸಿರುತ್ತಾರೆ

ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗರವರು ಮಹೇಶ್ ಶೆಟ್ಟಿ ತಿಮರೋಡಿಗೆ ಆದೇಶವನ್ನು ಜಾರಿ ಮಾಡಲು ಪೊಲೀಸ್ ನಿರೀಕ್ಷಕರು, ಬೆಳ್ತಂಗಡಿ ಠಾಣೆಯವರಿಗೆ ಸೂಚನೆ ನೀಡಿದ್ದು, ಅದರಂತೆ ಪೊಲೀಸರು ತಿಮರೋಡಿಯ ಮನೆಗೆ ತೆರಳಿದ್ದು, ಮನೆಯಲ್ಲಿ ಹಾಜರಿಲ್ಲದೇ ಇದ್ದುದರಿಂದ ಸಹಾಯಕ ಆಯುಕ್ತರು, ಪುತ್ತೂರುರವರ ಅನುಮತಿಯನ್ನು ಪಡೆದು ಸದ್ರಿಯವರನ್ನು ಕೆ.ಪಿ ಆಕ್ಟ್ ಅನ್ವಯ ತಲೆ ಮರೆಸಿಕೊಂಡಿರುವ ವ್ಯಕ್ತಿಯ ಪ್ರಕ್ರಿಯೆ ಪ್ರಕಾರ ಗಡಿಪಾರು ಆದೇಶವನ್ನು ಸದ್ರಿಯವರ ಮನೆಯ ಗೋಡೆಗೆ ಅಂಟಿಸಿ ಮತ್ತು ಉಜಿರೆ ಪರಿಸರದಲ್ಲಿ ಸಾರ್ವಜನಿಕವಾಗಿ ಮೈಕ್ ಪ್ರಚಾರ ಮಾಡಿ ಜಾರಿ ಮಾಡಿರುತ್ತಾರೆ.

Continue Reading
Advertisement

Belthangady

ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ; ಬಯಲಾದ ನಿಜಾಂಶ

Published

on

ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಕೊನೆಗೂ ಬಯಲಾಗಿದೆ.
ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ CCTV ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ. ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿಕೊಂಡ ಗಾಯ (Self inflicted wound) ಎಂದು ತಿಳಿಸಲಾಗಿದ್ದು, ನಂತರ ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಲಾಗಿದ್ದು, ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ತಿಳಿಸಿರುವುದರ ಮೂಲಕ ಪ್ರಕರಣದ ನಿಜಾಂಶ ಬಯಲಾಗಿದೆ. ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಸದ್ರಿ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು ಎಂದು ಪೊಲೀಸ್‌ ವರಿಷ್ಠರು ಮಾಹಿತಿ ನೀಡಿದ್ದು, ಅಪ್ರಾಪ್ತೆಗೆ ಚಲಾಯಿಸಲು ವಾಹನ ನೀಡಿರುವ ಕುರುತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್‌ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ

ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ 16 ವರ್ಷದ ಶಾಲಾ ಬಾಲಕಿ ಕಾಲೇಜಿಗೆ ಸ್ಕೂಟಿಯಲ್ಲಿ ತೆರಳಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಒಮ್ನಿ ಬಂದಿದೆ. ಮಾರುತಿ ಒಮ್ನಿಯ ನಂಬರ್‌ ಪ್ಲೇಟ್‌ ಮುಚ್ಚಲಾಗಿತ್ತು, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ಮುಸುಕುದಾರಿ ವ್ಯಕ್ತಿಗಳು ಇದ್ದರು, ಸ್ಕೂಟಿಗೆ ಅಡ್ಡ ಇಟ್ಟು ಮೂವರು ಮುಸುಕುದಾರಿಗಳು ವಿದ್ಯಾರ್ಥಿನಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ, ಅವರು ಒಮ್ನಿಯಲ್ಲಿ ವಿದ್ಯಾರ್ಥಿನಿಯನ್ನು ಹಾಕಿಕೊಂಡು ಅಪಹರಿಸಲು ಯತ್ನಿಸಿದಾಗ ಅವಳು ಪ್ರತಿರೋಧಿಸಿ ಬೊಬ್ಬೆ ಹೊಡೆದಿದ್ದಾಳೆ. ಹಿಂದಿನಿಂದ ಒಂದು ದ್ವಿಚಕ್ರ ವಾಹನವೂ ಬಂದಿದೆ. ಇದರಿಂದ ಬೆದರಿದ ಅಪಹರಣಕಾರರು ತಮ್ಮಲ್ಲಿದ್ದ ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಅಪಹರಣಕಾರರು ಬೆದರಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಇದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರಣೆಯ ವಿದ್ಯಾರ್ಥಿನಿಯ ಹೇಳಿಕೆ.

ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಎಂಬ ಸುದ್ದಿಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ಸರಕಾರ ಮತ್ತು ಗೃಹ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಆಯ್ತು. ಮದ್ಯಾಹ್ನ ನಂತರ ಘಟನೆಯ ಸತ್ಯಾಂಶ ಒಂದೊಂದಾಗಿ ಹೊರಬರುತ್ತಲೇ ಆತಂಕದ ವಾತಾವರಣ ಕಡಿಮೆಯಾಗುತ್ತಾ ಬಂದಿದೆ. ಈವರೆಗೆ ಅಪಹರಣಕಾರರ ಪತ್ತೆಯಾಗಿಲ್ಲ, ಮಾರುತಿ ಒಮ್ನಿ ಯಾವ ಸಿಸಿ ಕ್ಯಾಮಾರದಲ್ಲೂ ಕಂಡುಬರಲೇ ಇಲ್ಲ. ಅಂದರೆ ವಿದ್ಯಾರ್ಥಿನಿಯ ಸುತ್ತಲೇ ಅಪಹರಣದ ಕಥೆ ಕಂಡುಬರುತ್ತಿತ್ತು.ಕೊನೆಗೂ ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಬಯಲಾಗಿದೆ.

Continue Reading

Belthangady

ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ಏನಾಗಿದೆ ?

Published

on

ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್‌ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರಂತೆ !


ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ 16 ವರ್ಷದ ಶಾಲಾ ಬಾಲಕಿ ಕಾಲೇಜಿಗೆ ಸ್ಕೂಟಿಯಲ್ಲಿ ತೆರಳಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಒಮ್ನಿ ಬಂದಿದೆ. ಮಾರುತಿ ಒಮ್ನಿಯ ನಂಬರ್‌ ಪ್ಲೇಟ್‌ ಮುಚ್ಚಲಾಗಿತ್ತು, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ಮುಸುಕುದಾರಿ ವ್ಯಕ್ತಿಗಳು ಇದ್ದರು, ಸ್ಕೂಟಿಗೆ ಅಡ್ಡ ಇಟ್ಟು ಮೂವರು ಮುಸುಕುದಾರಿಗಳು ವಿದ್ಯಾರ್ಥಿನಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ, ಅವರು ಒಮ್ನಿಯಲ್ಲಿ ವಿದ್ಯಾರ್ಥಿನಿಯನ್ನು ಹಾಕಿಕೊಂಡು ಅಪಹರಿಸಲು ಯತ್ನಿಸಿದಾಗ ಅವಳು ಪ್ರತಿರೋಧಿಸಿ ಬೊಬ್ಬೆ ಹೊಡೆದಿದ್ದಾಳೆ. ಹಿಂದಿನಿಂದ ಒಂದು ದ್ವಿಚಕ್ರ ವಾಹನವೂ ಬಂದಿದೆ. ಇದರಿಂದ ಬೆದರಿದ ಅಪಹರಣಕಾರರು ತಮ್ಮಲ್ಲಿದ್ದ ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಅಪಹರಣಕಾರರು ಬೆದರಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ.

ಇದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರಣೆಯ ವಿದ್ಯಾರ್ಥಿನಿಯ ಹೇಳಿಕೆ. ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಎಂಬ ಸುದ್ದಿಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ಸರಕಾರ ಮತ್ತು ಗೃಹ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಆಯ್ತು. ಮದ್ಯಾಹ್ನ ನಂತರ ಘಟನೆಯ ಸತ್ಯಾಂಶ ಒಂದೊಂದಾಗಿ ಹೊರಬರುತ್ತಲೇ ಆತಂಕದ ವಾತಾವರಣ ಕಡಿಮೆಯಾಗುತ್ತಾ ಬಂದಿದೆ. ಈವರೆಗೆ ಅಪಹರಣಕಾರರ ಪತ್ತೆಯಾಗಿಲ್ಲ, ಮಾರುತಿ ಒಮ್ನಿ ಯಾವ ಸಿಸಿ ಕ್ಯಾಮಾರದಲ್ಲೂ ಕಂಡುಬರಲೇ ಇಲ್ಲ. ಅಂದರೆ ವಿದ್ಯಾರ್ಥಿನಿಯ ಸುತ್ತಲೇ ಅಪಹರಣದ ಕಥೆ ಕಂಡುಬರುತ್ತಿದೆ.

ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಬೆನ್ನಲ್ಲೇ ಜನತೆಗೆ ಸತ್ಯಾಂಶ ತಿಳಿಸಿ ಆತಂಕ ದೂರ ಮಾಡುವ ಉದ್ದೇಶಕ್ಕಾಗಿ ಮಾಧ್ಯಮ ಪ್ರತಿನಿಧಿಗಳು ಜಿಲ್ಲಾ ಎಸ್ಪಿಯವರ ಅಧಿಕೃತ ಹೇಳಿಕೆಗಾಗಿ ಕಾಯುತ್ತಿದ್ದಾರೆ.

ರಾಜಸ್ಥಾನದ ಘಟನೆ: ರಾಜಸ್ಥಾನದ ಬಿಕನೇರ್‌ನಲ್ಲಿ 10ನೇ ತರಗತಿಯ ಹುಡುಗಿಯೊಬ್ಬಳು ಶಾಲೆಗೆ ಹೋಗಲು ಇಷ್ಟವಿಲ್ಲದೆ ತನ್ನನ್ನು ಅಪಹರಿಸಲಾಗಿದೆ ಎಂದು ಸುಳ್ಳು ಕಥೆ ಸೃಷ್ಟಿಸಿದ್ದಳು. ಪೊಲೀಸರು ತನಿಖೆ ನಡೆಸಿದಾಗ ಆಕೆ ಸುಳ್ಳು ಹೇಳುತ್ತಿರುವುದು ಬಯಲಾಗಿತ್ತು.
ಬೆಂಗಳೂರು ಅಥವಾ ಇತರ ನಗರಗಳಲ್ಲಿ ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಮಕ್ಕಳು ತಮ್ಮ ಕೈ-ಕಾಲುಗಳನ್ನು ತಾವೇ ಕಟ್ಟಿಕೊಂಡು ಅಥವಾ ಬಾಯಿಗೆ ಪಟ್ಟಿ ಅಂಟಿಸಿಕೊಂಡು ಪೋಷಕರನ್ನು ಭಯಪಡಿಸುತ್ತಾರೆ.

ಇಂತಹ ಘಟನೆಗಳು ಬಹುತೇಕ ಪರೀಕ್ಷಾ ಸಮಯ ಹತ್ತಿರಕ್ಕೆ ಬರುವ ಸಂದರ್ಭಗಳಲ್ಲಿಯೇ ನಡೆಯುತ್ತಿದ್ದು, ಪರೀಕ್ಷೆ ಅಥವಾ ಹೋಮ್ ವರ್ಕ್ ಪೂರ್ಣಗೊಳಿಸದಿದ್ದಾಗ ಶಿಕ್ಷಕರಿಗೆ ಹೆದರಿ ಹೀಗೆ ಮಾಡುತ್ತಾರೆ. ಶಾಲೆಯಲ್ಲಿ ಕಿರುಕುಳ (Bullying): ಶಾಲೆಯಲ್ಲಿ ಬೇರೆ ವಿದ್ಯಾರ್ಥಿಗಳು ತೊಂದರೆ ನೀಡುತ್ತಿದ್ದರೆ ಅಲ್ಲಿಗೆ ಹೋಗದಿರಲು ಇಂತಹ ದಾರಿ ಹುಡುಕುತ್ತಾರೆ. ತಮ್ಮ ಮಕ್ಕಳು ಅತೀ ಹೆಚ್ಚು ಅಂಕಗಳನ್ನು ಪಡೆಯಬೇಕೆಂದು ಮಕ್ಕಳ ಮೇಲೆ ಪೋಷಕರು ನಿರಂತರವಾಗಿ ಒತ್ತಡ ಹೇರುತ್ತಿರುವಾಗ ಪೋಷಕರ ಅತಿಯಾದ ನಿರೀಕ್ಷೆಗಳು ಮಕ್ಕಳನ್ನು ಇಂತಹ ಹಂತಕ್ಕೆ ತಳ್ಳಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯ ತನಿಖೆ ನಡೆಯಬೇಕಾಗಿದೆ.

Continue Reading

Belthangady

ಬೆಳ್ತಂಗಡಿಯಲ್ಲಿ ಅಪರಿಚಿತರಿಂದ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ

Published

on

ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದೆ. ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ, 16 ವರ್ಷದ ಶಾಲಾ ಬಾಲಕಿ ಶಾಲೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ವ್ಯಕ್ತಿಗಳು ಅವಳನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ ಮತ್ತು ಅವಳು ಪ್ರತಿರೋಧಿಸಿದಾಗ, ಅವರು ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿರುತ್ತಾರೆ ಗಾಯಗಳು ಮೇಲ್ಮೈಯಾಗಿದ್ದು, ಹೊಲಿಗೆ ಹಾಕಿರುವುದಿಲ್ಲ. ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


ಘಟನೆಯ ವಿವರ: ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿಯಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದಿನಂತೆ ಸೋಮವಾರ ಬೆಳಿಗ್ಗೆ 8:30ರ ಸುಮಾರಿಗೆ ತನ್ನ ಸ್ಕೂಟರ್‌ನಲ್ಲಿ ಸಂತೆಕಟ್ಟೆ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಸ್ಕೂಟರ್ ಅನ್ನು ಅಡ್ಡಗಟ್ಟಿದ್ದಾರೆ. ಅಪರಿಚಿತ ನಂಬರ್ ಪ್ಲೇಟ್ ಗೆ ಬಟ್ಟೆ ಕಟ್ಟಿದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸ್ಕೂಟರಿಗೆ ಅಡ್ಡಗಟ್ಟಿ ವಿದ್ಯಾರ್ಥಿನಿಯನ್ನು ಕಾರಿನೊಳಗೆ ಎಳೆದು ತಂದಾಗ ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿ ಹೊರಬಂದಿದ್ದಾಳೆ.

ಈವೇಳೆ ಹಿಂಭಾಗದಿಂದ ಸ್ಕೂಟರ್ ಬರುವುದನ್ನು ನೋಡಿದ ದುಷ್ಕರ್ಮಿಗಳು ಚೂರಿಯಿಂದ ಬಾಲಕಿಯ ಕೈಗೆ ,ಬೆರಳಿಗೆ ಚುಚ್ಚಿ ಕಾಲೇಜ್ ಬ್ಯಾಗ್ ಕಿತ್ತುಕೊಂಡು ಕಾರಿನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣವೇ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿನಿ ಬಳಿಯಿಂದ ಮಾಹಿತಿ ಪಡೆದುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

Continue Reading

Trending

Copyright © 2025 Deevatige