Connect with us

Dakshina Kannada

ಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ

Published

on

ಕೇಪು: ಇತಿಹಾಸ ಪ್ರಸಿದ್ಧ ಕೇಪು ಕಜಂಬು ಉತ್ಸವ ದ್ವಜಾವರೋಹಣ ನಡೆದ ಬಳಿಕ ಸಂಪ್ರದಾಯದoತೆ ಜೂಜುರಹಿತವಾಗಿ ನಡೆದುಕೊಂಡು ಬಂದ ಕೋಳಿ ಅಂಕಕ್ಕೆ ಪೊಲೀಸರಿಂದ ಪರವಾನಿಗೆ ನಿರಾಕರಣೆ ಅಡ್ಡಿಗಳ ಮಧ್ಯೆಯೇ ಕ್ಷೇತ್ರದ ಶಾಸಕರಾದ ಆಶೋಕ್ ಕುಮಾರ್ ರೈ ದಿಢೀರನೆ ಸ್ಥಳಕ್ಕೆ ಆಗಮಿಸಿ ಸ್ಥಳದಲ್ಲಿಯೇ ನಿಂತು ಧಾರ್ಮಿಕ ನಂಬಿಕೆಯ ಜೂಜುರಹಿತ ಕೋಳಿ ಅಂಕವನ್ನು ನಡೆಸುವಲ್ಲಿ ಭಕ್ತಾದಿಗಳ ಇಚ್ಛೆಗೆ ಸಹಕರಿಸಿದ ವಿದ್ಯಮಾನವೊಂದು ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ ನಡೆಯಿತು.

ಇಂದು ಕೋಳಿಅಂಕ ನಡೆದೇ ನಡೆಯುತ್ತದೆ ಎಂಬುವುದನ್ನು ಮಾಹಿತಿ ಪಡೆದುಕೊಂಡ ಪೊಲೀಸರು ಸ್ಥಳಕ್ಕೆ ಆಗಮಿಸಿತ್ತಿರುವಂತೆ ಕ್ಷೇತ್ರದ ಶಾಸಕರೂ ಸ್ಥಳಕ್ಕೆ ಆಗಮಿಸಿದ್ದಾರೆ. ಧಾರ್ಮಿಕ ನಂಬಿಕೆಯ ಜೂಜುರಹಿತ ಕೋಳಿ ಅಂಕವನ್ನು ಸ್ಥಳದಲ್ಲಿಯೇ ನಿಂತು ನಡೆಸುವಲ್ಲಿ ಭಕ್ತಾದಿಗಳ ಇಚ್ಛೆಗೆ ಸಹಕರಿಸಿದ್ದಾರೆ. ಒಂದು ಕಾಲಮಿತಿಯೊಳಗಡೆ ಸಂಪ್ರಾದಾಯಿಕವಾಗಿ ಕೋಳಿಅಂಕವನ್ನು ಮುಗಿಸುವಂತೆಯೂ ವ್ಯವಸ್ಥಾಪಕರಲ್ಲಿ ಮನವಿಮಾಡಿ ಅಲ್ಲಿಯೇ ಮೊಕ್ಕಾಂ ಹೂಡಿದ್ದಾರೆ ಎಂದು ತಿಳಿದು ಬಂದಿದೆ. ಮುಂದೆ ಎನಾಗುತ್ತದೋ ಎಲ್ಲವೂ ದೈವೇಚ್ಛೆ ಎನ್ನುತ್ತಿದ್ದಾರೆ ಭಕ್ತರು.

ಕಳೆದ ಹಲವಾರು ವರ್ಷಗಳಿಂದ ಕೋಮು ಸಂಘರ್ಷಗಳಿoದ ತತ್ತರಿಸುತ್ತಿದ್ದ ಕರಾವಳಿಯನ್ನು ಹತೋಟಿಗೆ ತರಲು ಪ್ರತಿಯೊಬ್ಬರಿಗೂ ಸಾಮರಸ್ಯದ ಜೀವನ ಮತ್ತು ನ್ಯಾಯ ಸಮ್ಮತವಾದ ಬದುಕು ನೀಡಲು ಆಡಳಿತ ವ್ಯವಸ್ಥೆ ದಕ್ಷ ಪೊಲೀಸ್ ಅಧಿಕಾರಿಗಳನ್ನು ನೇಮಿಸಿದ ಬಳಿಕ ಬಹುತೇಕ ಅಕ್ರಮ ಚಟುವಟಿಕೆಗಳು ಸೇರಿದಂತೆ ಎಲ್ಲಾ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಿತ್ತು. ಅದರಂತೆ ಜೂಜು, ಕೋಳಿಅಂಕ ಸೇರಿದಂತೆ ತಡರಾತ್ರಿಗಳಲ್ಲಿ ನಡೆಯುವ ಮೋಜಿನ ಕಾರ್ಯಕ್ರಮಗಳಿಗೂ ಬ್ರೇಕ್ ನೀಡಲಾಗಿತ್ತು. ಆದರೆ ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ ಧಾರ್ಮಿಕ ನಂಟು ಹೊಂದಿರುವ ಜೂಜುರಹಿತವಾಗಿ ನಡೆಯುವ ಕೋಳಿ ಅಂಕಕ್ಕೆ ಕೋಳಿ ಅಂಕ ಪ್ರಿಯರು, ದೈವಾಭಿಮಾನಿಗಳು ಕೊನೆಯ ಘಳಿಗೆವರೆಗೂ ಪರವಾನಿಗೆಯ ನಿರೀಕ್ಷೆಯಲ್ಲಿದ್ದರು. ಆದರೆ ಕೋಳಿ ಅಂಕಕ್ಕೆ ಪರ್ಮಿಷನ್ ಸಿಗಲಿಲ್ಲ ಎಂದರೆ ನಾವು ಜೂಜುರಹಿತವಾಗಿ ಕೋಳಿಅಂಕವನ್ನು ಸಾಂಪ್ರದಾಯಿಕವಾಗಿ ಮಾಡಲೇಬೇಕು ಎಂಬುವುದು ಭಕ್ತರ ನಿಲುವು ಆಗಿತ್ತು.

ಮಕ್ಕಳನ್ನು ಸಾಂಕೇತಿಕವಾಗಿ ಉಳ್ಳಾಲ್ತಿ ದೇವಿಗೆ ಹರಿಕೆ ಒಪ್ಪಿಸುವ ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರಾ ಸಂಪ್ರದಾಯವೇ ಕಜಂಬು ಉತ್ಸವ. ಈ ಕ್ಷೇತ್ರದ ವಿಶಿಷ್ಟ ಸಂಪ್ರದಾಯ ಜಗತ್ತಿನ ಯಾವ ಮೂಲೆಯಲ್ಲೂ ಈವರೆಗೆ ಕಂಡು ಬಂದಿಲ್ಲ.ಆ ಬಳಿಕ ದೈವದ ನೆರಿ ಇಳಿಯುವ ಕಾರ್ಯಕ್ರಮ. ಆ ದಿನವೇ ಜನ್ಮ ತಾಳಿದ ಕೋಳಿ ಮರಿಯೊಂದನ್ನು ದೈವವು ಮೇಲಕ್ಕೆ ಹಾರಿಸುತ್ತದೆ. ಅದು ಕೆಳಗೆ ಬೀಳದೆ ಮೇಲೆಯೇ ಮಾಯವಾಗಿ ಬಿಡುತ್ತದೆ. ಅದಕ್ಕೆ ಉಳ್ಳಾಲ್ತಿ ಕಟ್ಟು ಕಟ್ಟು ನೆರಿ ಇಳಿಯುವುದು ಎನ್ನುತ್ತಾರೆ.

ಜಾತ್ರೆ ಮರುಳು ಎಂಬ ಗದ್ದಲವನ್ನು ಮರೆಮಾಚಿ ಜಾತ್ರೆಯಲ್ಲಿ ಕೊಡು-ಕೊಳ್ಳುವಿಕೆ,ಸಂತೆ ವ್ಯಾಪಾರ,ವ್ಯವಹಾರ, ಆಡಂಭರಗಳು ಜೂಜು ಕೋಳಿ ಅಂಕ ಸಂಪೂರ್ಣವಾಗಿ ನಿಷೇಧವಾಗಿದೆ. ಇದನ್ನು ಮೀರಿನಡೆದರೆ ಕ್ಷಣಮಾತ್ರದಲ್ಲಿಯೇ ಸಂಕಷ್ಟಗಳು ಎದುರಾಗಿ ದೇವಿಯ ಕಾರಣೀಕದ ದರ್ಶನವಾಗುವುದು ಇಂದಿಗೂ ಕಂಡುಬರುತ್ತದೆ. ಇಲ್ಲಿನ ಕಟ್ಟುಪಾಡುಗಳನ್ನು ಮೀರಿ ನಡೆದು ಸಂಕಷ್ಟಗಳನ್ನು ಅನುಭವಿಸಿದ ಅದೆಷ್ಟೋ ಮಂದಿ ಈಗಲೂ ಪ್ರಾಯಶ್ಚಿತ್ತವಾಗಿ ಸನ್ನಿಧಿಗೆ ಬಂದು ಪ್ರಸಾದ ಸ್ವೀಕರಿಸುತ್ತಾರೆ. ಈ ಗ್ರಾಮದಲ್ಲಿ ಧರ್ಮದ ತಳಹದಿಯಲ್ಲಿ ಕಾರ್ಯನಿರ್ವಹಿಸಿದರೆ ಮಾತ್ರ ಬಾಳುವೆ. ಯಾರಾದರೂ ತಪ್ಪು ಮಾಡಲು ಮುಂದಾದರೆ ‘ಉಳ್ಳಾಲ್ತಿ ಮಣು’್ಣ ಜಾಗೃತರಾಗಿರುವಂತೆ ಹಿರಿಯರು ಎಚ್ಚರಿಸುತ್ತಾರೆ.

Continue Reading
Advertisement

award

ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕೆ. ಮತ್ತು ಎಸಿಪಿ ನಜ್ಮಾ ಫಾರೂಕಿ ಸೇರಿದಂತೆ ಜಿಲ್ಲೆಯ ಹಲವು ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕದ ಗೌರವ

Published

on

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ (SP) ಡಾ. ಅರುಣ್ ಕೆ. ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ. ಅವರೊಂದಿಗೆ ಮಂಗಳೂರು ನಗರದ ಸಂಚಾರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ (ACP) ನಜ್ಮಾ ಫಾರೂಕಿ ಅವರಿಗೂ ಚಿನ್ನದ ಪದಕ ಪ್ರಕಟಗೊಂಡಿದೆ.


ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕದ ಗರಿ ಪ್ರಕಟಗೊಂಡಿದ್ದು, ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವವನ್ನು ಘೋಷಿಸಿದೆ.
ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸ್ಪೆಷಲ್ ಎಆರ್‌ಎಸ್‌ಐ, 7ನೇ ಪಡೆ ಕೆಎಸ್‌ಆರ್‌ಪಿಯ ಕೆ.ಎಂ. ಶಿವಶೇಖರ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಡಿಎಆರ್ ವಿಭಾಗದ ಎಎಸ್‌ಐ ತಿಲಕ್ ರಾಜ್ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರಲ್ಲದೆ, ಬಂಟ್ವಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಇರ್ಷಾದ್ ಪಿ. , ಮಂಗಳೂರು ನಗರದ ಊರ್ವ ಪೊಲೀಸ್ ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಲಲಿತಾಲಕ್ಷ್ಮಿ , ಬೆಳ್ತಂಗಡಿ ಗ್ರಾಮಾಂತರ ಠಾಣೆಯ ವಿಜಯ ಕುಮಾರ್ ರೈ , ಕಂಕನಾಡಿ ನಗರ ಠಾಣೆಯ ಜಯಾನಂದ ಎನ್., ಮತ್ತು ಮಂಗಳೂರು ಸೈಬರ್ ಕ್ರೈಂ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ಗಳಾದ ಮಣಿ ಎಂ.ಎನ್. ಹಾಗೂ ಸತೀಶ್ ಅವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಈ ಪದಕ ಪ್ರದಾನ ಸಮಾರಂಭವು ಏಪ್ರಿಲ್ 02, 2026 ರಂದು ಬೆಂಗಳೂರಿನಲ್ಲಿ ಜರುಗಲಿದೆ. ಈ ಹಿನ್ನೆಲೆಯಲ್ಲಿ ಪದಕ ವಿಜೇತ ಅಧಿಕಾರಿಗಳು ಮಾರ್ಚ್ 29 ರಿಂದಲೇ ಬೆಂಗಳೂರಿನ ಕೆಎಸ್‌ಆರ್‌ಪಿ 3ನೇ ಪಡೆಯಲ್ಲಿ ನಡೆಯುವ ಪೂರ್ವಾಭ್ಯಾಸದಲ್ಲಿ ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರ ಕಚೇರಿ ತಿಳಿಸಿದೆ.

Continue Reading

accident

ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್ ಭೀಕರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ

Published

on

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಧಕ್ಕೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದ ಆರಿಫ್, ಪ್ರತಿದಿನದಂತೆ ಇಂದು ಮುಂಜಾನೆ ತನ್ನ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂದು ದುಷ್ಕರ್ಮಿಗಳು ಆರಿಫ್ ಗಾಗಿ ಫೈಓವರ್‌ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್‌ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್‌ನಲ್ಲಿ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದಾಗ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅತಿ ವೇಗವಾಗಿ ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆರಿಫ್ ರಸ್ತೆಗೆ ಬೀಳುತ್ತಿದ್ದಂತೆ, ಕಾರಿನಿಂದ ಇಳಿದು ಬಂದ ತಂಡವು ತಲವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ತಲೆ ಮತ್ತು ದೇಹದ ಭಾಗಕ್ಕೆ ಮನಬಂದಂತೆ ಕಡಿದು ಸಿನಿಮೀಯ ರೀತಿಯಲ್ಲಿ ಕೊಲೆಗೈದು ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದಾಗಿ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ತೊಡಗಿಸಿ ಕೊಂಡಿದ್ದ ಆರಿಫ್ ನನ್ನು ವೈಯಕ್ತಿಕ ದ್ವೇಷ ದಿಂದ ಹತ್ಯೆ ಗೈದಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ.ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ.


2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆತನ ಮೇಲೆ ಒಮ್ಮೆ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣದಲ್ಲಿ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು. ಹಳೆಯ ವೈಯಕ್ತಿಕ ದ್ವೇಷವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.’ ಹತ್ಯೆಗೆ ಸ್ಪಷ್ಟ ಕಾರಣ ಏನೆಂಬುದು ಪೊಲೀಸರ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಸದ್ಯಕ್ಕೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Continue Reading

cyber crime

AI ತಂತ್ರಜ್ಞಾನ ಬಳಸಿ ಕೋಮುದ್ವೇಷ ಹರಡುವ ವಿಡಿಯೋ ಹಂಚಿಕೆ: ಮಂಗಳೂರಿನ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

Published

on

ಮಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಈತ ಫೇಸ್‌ಬುಕ್‌ನಲ್ಲಿ “ನಝೀರ ಮಂಗಳೂರು” ಎಂಬ ಹೆಸರಿನ ಖಾತೆಯ ಮೂಲಕ ವಿವಾದಾತ್ಮಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

2025ರ ಅಕ್ಟೋಬರ್‌ನಲ್ಲಿ ಆರೋಪಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ AI ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾದ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಇದು ಸಮಾಜದಲ್ಲಿ ಶಾಂತಿ ಕದಡುವ ಮತ್ತು ಕೋಮು ಸಂಘರ್ಷಕ್ಕೆ ಪ್ರಚೋದಿಸುವ ಉದ್ದೇಶ ಹೊಂದಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196, 353(1), ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 22, 2026 ರಂದು ಬೆಂಗಳೂರಿನಲ್ಲಿ ಆತನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆತನನ್ನು ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

Trending

Copyright © 2025 Deevatige