Bantawala
ಕ್ರೀಡಾಕೂಟಗಳು ದೇಶದ ಸೌಹಾರ್ಧತೆಗೆ ಪೂರಕವಾಗಬೇಕು: ಕುಳಾಲು ಸುಭಾಶ್ಚಂದ್ರ ಶೆಟ್ಟಿ.
ಕ್ರೀಡಾಕೂಟಗಳು ದೇಶದ ಸೌಹಾರ್ಧತೆಗೆ ಪೂರಕವಾಗಬೇಕು:
ವಿಟ್ಲ: ಬಿಬಿಕೆ ಕೋಡಪದವು ತಂಡದ ಆಯೋಜನೆಯಲ್ಲಿ ಎರಡು ದಿನಗಳ ಕಾಲ ನಡೆದ ಅಂಡರ್ ಆರ್ಮ್ 8 ತಂಡಗಳ ಲೀಗ್ ಮಾದರಿಯ ಬೃಹತ್ ಕ್ರಿಕೆಟ್ ಕೂಟದ ಸಮಾರೋಪ ಸಮಾರಂಭ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸಮಾರಂಭ ಭಾನುವಾರ ನಡೆಯಿತು. ಕ್ರೀಡಾಭಿಮಾನಿಗಳ ಅಪಾರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮವು ಸೌಹಾರ್ದತೆ, ಏಕತೆ ಮತ್ತು ಸಾಮಾಜಿಕ ಒಗ್ಗಟ್ಟಿನ ಸಂದೇಶವನ್ನು ನೀಡಿತು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು, ಹಿಂದಿನ ಕಾಲದಲ್ಲಿ ಜಾತಿ–ಮತ ಬೇಧವಿಲ್ಲದೆ ನಡೆಯುತ್ತಿದ್ದ ಕ್ರೀಡಾಕೂಟಗಳ ಸಂಸ್ಕೃತಿಯನ್ನು ಸ್ಮರಿಸಿದರು. ಕ್ರೀಡೆಗಳು ಸಮಾಜವನ್ನು ಒಗ್ಗೂಡಿಸುವ ಶಕ್ತಿಯುತ ಮಾಧ್ಯಮವಾಗಿದ್ದು, ಇಂದಿನ ಕಾಲಘಟ್ಟದಲ್ಲಿ ದೇಶದ ಸೌಹಾರ್ದತೆಯನ್ನು ಕಾಪಾಡುವಲ್ಲಿ ಅವುಗಳ ಪಾತ್ರ ಅತ್ಯಂತ ಮಹತ್ವದಾಗಿದೆ ಎಂದು ಹೇಳಿದರು.

ಬಿಬಿಕೆ ತಂಡವು ಕೇವಲ ಕ್ರಿಕೆಟ್ ಕೂಟವನ್ನಷ್ಟೇ ಆಯೋಜಿಸದೆ, ಸಾಮಾಜಿಕ ಸೌಹಾರ್ದತೆಗೆ ಒತ್ತು ನೀಡಿ ಎಲ್ಲ ವರ್ಗದ ಜನರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿರುವುದು ಶ್ಲಾಘನೀಯ ಕಾರ್ಯವೆಂದು ಅವರು ಪ್ರಶಂಸಿಸಿದರು. ಇಂತಹ ಕ್ರೀಡಾಕೂಟಗಳು ಯುವಜನರಲ್ಲಿ ಶಿಸ್ತು, ಸಹಕಾರ ಮತ್ತು ಸಹಬಾಳ್ವೆಯ ಮನೋಭಾವ ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು.
ಗ್ರಾಮೀಣ ಮಟ್ಟದಲ್ಲಿ ಇಂತಹ ಬೃಹತ್ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಬಿಬಿಕೆ ಕೋಡಪದವು ತಂಡವು ಮಾದರಿಯನ್ನೇ ನಿರ್ಮಿಸಿದೆ ಎಂದು ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ಕ್ರೀಡೆಯ ಮೂಲಕ ಸಾಮಾಜಿಕ ಏಕತೆ ಮತ್ತು ರಾಷ್ಟ್ರಭಾವನೆಯನ್ನು ಮತ್ತಷ್ಟು ಬಲಪಡಿಸುವ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾದನೆ ಮಾಡಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಸೈನಾರ್ ತಾಳಿತ್ತನೂಜಿ,ಎ.ಕೆ.ಕುಕ್ಕಿಲ, ಡಿ ಗ್ರೂಪ್ ವಿಟ್ಲ ಹಾಗೂ ಪೊಲೀಸ್ ಇಲಾಖೆಯಲ್ಲಿ ನಿವೃತ್ತಿ ಹೊಂದಿದ ಮೋನಪ್ಪ ಗೌಡ ಕುಕ್ಕಿಲ, ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ ಶಕುಂತಲಾ ಎಂ.ಬಿ., 4 ಬಾರಿ ರಾಷ್ಟ್ರೀಯ ತಂಡದಲ್ಲಿ ಆಡಿದ ಕಬಡ್ಡಿ ಕ್ರೀಡಾಪಟು ಕುಮಾರಿ ಕೀರ್ತಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯೂ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಂ.ಎಸ್.ಮಹಮ್ಮದ್, ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರೇಮಲತಾ, ಗ್ರಾಮ ಪಂಚಾಯತ್ ಸದಸ್ಯರಾದ ಹರ್ಷದ್ ಕುಕ್ಕಿಲ, ಬಿಬಿಕೆ ಇದರ ಅಧ್ಯಕ್ಷರಾದ ರಿಯಾಜ್ ತಾಳಿತ್ತನೂಜಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
Bantawala
ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ
ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಡ ಕಾರ್ಮಿಕೆ ಗಾರ್ಬಲ್ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.
accident
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.

ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.
Bantawala
ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನಾ ಸಭೆ
ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನೆಯ ಸಭೆ ನಡೆಯಿತು.
ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು. ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ ಎಂ ಶೆಟ್ಟಿ ಅಳಕೆಮಜಲು, ಉಪಾಧ್ಯಕ್ಷರಾಗಿ ರೋಹಿಣಿ ರೈ ನೇರಳಕಟ್ಟೆ, ಹಾಗೂ ಚಂದ್ರಹಾಸ ರೈ ಮುಲ್ಕಾಜೆ ಮಾ ಡ, ಕಾರ್ಯದರ್ಶಿಯಾಗಿ ಗಣೇಶ್ ರೈ, ಕೋಶಾಧಿಕಾರಿಯಾಗಿ ಧನಂಜಯ ಶೆಟ್ಟಿ ಮುತ್ತೂರು, ಇವರನ್ನು ಟ್ರಸ್ಟಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರನ್ನು ಕುಟುಂಬಿಕರ ಮತ್ತು ಟ್ರಸ್ಟಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

