Connect with us

Belthangady

ಧರ್ಮಸ್ಥಳ ಅಸಹಜ ಸಾವುಗಳ ಬಗ್ಗೆ ಪ್ರಗತಿ ವರದಿಯನ್ನುರಾಜ್ಯ ಮಹಿಳಾ ಆಯೋಗಕ್ಕೆ ಸಲ್ಲಿಸಲು ಎಸ್. ಐ. ಟಿ. ಸಿದ್ದತೆ

Published

on

ಬೆಂಗಳೂರು: ಧರ್ಮಸ್ಥಳ ಪ್ರಕರಣದ (ಅಪರಾಧ ಸಂಖ್ಯೆ 39/2025) ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಈ ವಾರದ ಕೊನೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಪ್ರಗತಿ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಗೃಹಇಲಾಖೆಯ ಮೂಲಗಳು ತಿಳಿಸಿವೆ ಎಂಬುವುದಾಗಿ ಡಿ.22ರಂದು blrpost.com ವರದಿ ಮಾಡಿದೆ.

ಈ ವರದಿಯಲ್ಲಿ ಧರ್ಮಸ್ಥಳ ಪ್ರಕರಣದ ವಿಶೇಷ ತನಿಖಾ ತಂಡ (ಎಸ್‌ಐಟಿ) 1000 ಪುಟಗಳ ಸಮಗ್ರ ವರದಿಯನ್ನು ಈ ವಾರ ರಾಜ್ಯ ಮಹಿಳಾ ಆಯೋಗಕ್ಕೆ ಸಲ್ಲಿಸಲು ತಯಾರಾಗಿದ್ದು, ವರದಿ 1990-2021ರಲ್ಲಿನ ಕನಿಷ್ಠ 74 ಗುರುತಿಸಲಾಗದ ಶವಗಳನ್ನು ಅದೇ ದಿನದಲ್ಲಿ ಸಮಾಧಿ ಮಾಡಲಾಗಿರುವುದು, ಶವಗಳ ಮರಣೋತ್ತರ ಪರೀಕ್ಷೆ ಅಥವಾ ಗುರುತಿಸುವಿಕೆಯ ಕೊರತೆ, ಮತ್ತು ನ್ಯಾಯ ಹಾಗೂ ಪಾರದರ್ಶಕತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿ ಹಿಡಿದಿದೆ.

ಎಸ್‌ಐಟಿ ವರದಿ ಪ್ರದೇಶದ ಕೊಲೆ, ಕಣ್ಮರೆ,ಅಸ್ವಾಭಾವಿಕ ಸಾವು ಪ್ರಕರಣಗಳ ಸಂಪೂರ್ಣ ತನಿಖೆಗಾಗಿ ಮಾರ್ಗದರ್ಶಿ ಆಗಲಿದೆ.ವರದಿ ಪ್ರಕಾರ, ಶವಗಳು ಧರ್ಮಸ್ಥಳ ಗ್ರಾಮ, ನೇತ್ರಾವತಿ ನದಿ, ಸ್ನಾನಘಟ್ಟ, ಬಸ್ ನಿಲ್ದಾಣ, ಪಾರ್ಕಿಂಗ್ ಪ್ರದೇಶಗಳು ಮತ್ತು ಬಾಹುಬಲಿ ಬೆಟ್ಟಬಳಿಯ ಅರಣ್ಯ ಪ್ರದೇಶಗಳಲ್ಲಿ ಪತ್ತೆಯಾಗಿವೆ. ಕೆಲವುದಾಖಲೆಗಳಲ್ಲಿ ಶವಗಳನ್ನು ಭಿಕ್ಷುಕ,'ಪ್ರಜ್ಞಾಹೀನ’ಅಥವಾ `ಆತ್ಮಹತ್ಯೆ’ ಎಂದು ವರ್ಗೀಕರಿಸಲಾಗಿದೆ, ಆದರೆ ಯಾವುದೇ ದೃಢೀಕರಣ ಅಥವಾ ತನಿಖಾ ದಾಖಲೆ ಇಲ್ಲ. ಮರಣೋತ್ತರ ಪರೀಕ್ಷೆ ಅಥವಾ ಗುರುತಿಸುವಿಕೆ ಮಾಡದೇ ಶವಗಳನ್ನು ತ್ವರಿತವಾಗಿ ಸಮಾಧಿ ಮಾಡಲಾಗಿದೆ, ಇದು ಕಾನೂನು ಪ್ರಕ್ರಿಯೆ ಮತ್ತು ಸಾರ್ವಜನಿಕ ವಿಶ್ವಾಸದ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟಿಸಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.


ಮಹಿಳಾ ಆಯೋಗವು ತನ್ನ ಪತ್ರದಲ್ಲಿ, ಕಾಣೆಯಾದ ಮಹಿಳೆಯರು, ವಿದ್ಯಾರ್ಥಿಗಳು,ಕೊಲೆಗಳು, ಅಸ್ವಾಭಾವಿಕ ಸಾವುಗಳು ಸೇರಿದಂತೆಎಲ್ಲಾ ಪ್ರಕರಣಗಳನ್ನು ಸಮಗ್ರವಾಗಿ ಪರಿಶೀಲಿಸಲು ಸೂಚಿಸಿತ್ತು. ಇದಾದ ನಂತರ, ಎಸ್‌ಐಟಿ ವರದಿ ಐದು ವಿಭಿನ್ನ ವಿಭಾಗಗಳಲ್ಲಿ ಪರಿಶೀಲನೆ ನಡೆಸಿದ್ದು ಚಿನ್ನಯ್ಯ ಮತ್ತು ಸೌಜನ್ಯ ಪ್ರಕರಣಗಳಿಗೆ ಸಂಬoಧಿಸಿದ ಅಪರಾಧ ಮತ್ತು ಆರೋಪಿಗಳ ವಿಚಾರಣೆಗಳನ್ನು ಒಳಗೊಂಡಿದೆ. ಈ ವರದಿ ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನ್ಯಾಯದ ಅಂಗೀಕಾರ,ಪತ್ತೆ ಪ್ರಕ್ರಿಯೆ, ಶವ ನಿರ್ವಹಣೆ ಮತ್ತು ಸಾರ್ವಜನಿಕ ವಿಶ್ವಾಸ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದೆ. ವರದಿ ಸಲ್ಲಿಕೆಯನ್ನು ರಾಜ್ಯಮಹಿಳಾ ಆಯೋಗ ಪರಿಶೀಲಿಸುವ ಮೂಲಕ ಮುಂದಿನ ತಕ್ಷಣದ ತನಿಖೆಗಳಿಗೆ ಮಾರ್ಗದರ್ಶಿ ಆಗಲಿದೆ ಮತ್ತು ಈ ಪ್ರದೇಶದಲ್ಲಿ ಮಾನವ ಅವಶೇಷಗಳ ನಿರ್ವಹಣೆ, ಪತ್ತೆ, ಸಮಾದಿಕ್ರಮಗಳು ಮತ್ತು ಸಂಬoದಪಟ್ಟ ಅಪರಾಧ ಪ್ರಕರಣಗಳ ಪರಿಶೀಲನೆಗೆ ಶಕ್ತಿ ನೀಡಲಿದೆ ಎಂದು ವರದಿ ತಿಳಿಸಿದೆ.
ಕೃಪೆ : blrpost.com

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement
Click to comment

Leave a Reply

Your email address will not be published. Required fields are marked *

arrest

ಮಂಗಳೂರು: MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ; 15.30 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

Published

on

ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿತೆಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗುರಿಂಗಾನ ನಿವಾಸಿ, ಪ್ರಸ್ತುತ ಪಂಪ್‌ವೆಲ್ ಉಜ್ಜೋಡಿಯ ರಾಧಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್ ನಂಬರ್ 103ರಲ್ಲಿ ವಾಸ್ತವ್ಯವಿದ್ದ ನಸೀಮಾ @ ನಸೀಮ (42) ಬಂಧಿತ ಆರೋಪಿ.

ಘಟನೆಯ ವಿವರ: ದಿನಾಂಕ 01-11-2026ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಆರೋಪಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಈ ವೇಳೆ ಪಂಪ್‌ವೆಲ್ ಉಜ್ಜೋಡಿ ಬಳಿಯ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, ಆರೋಪಿತೆಯ ವಶದಲ್ಲಿದ್ದ ಸುಮಾರು 15,30,000 ರೂಪಾಯಿ ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿತೆಯು ಮಂಗಳೂರು ನಗರದ ವಿವಿಧೆಡೆ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದುದು ವಿಚಾರಣೆ ವೇಳೆ ತಿಳಿದುಬಂದಿದೆ. ಪೊಲೀಸರು ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಜಾಲದಲ್ಲಿ ಇನ್ನು ಹಲವು ಆರೋಪಿಗಳು ಭಾಗಿಯಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Continue Reading

Belthangady

ಸೌಜನ್ಯ ಪ್ರಕರಣದ ತನಿಖಾ ಸಮಿತಿ ಪುನಾರಚನೆ: ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಮುಖ್ಯಸ್ಥರಾಗಿ ನೇಮಕ

Published

on

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿ ತಿದ್ದುಪಡಿ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಒಳಾಡಳಿತ ಇಲಾಖೆ (ಅಪರಾಧಗಳು) ದಿನಾಂಕ 30-10-2026 ರಂದು ಆದೇಶ ಸಂಖ್ಯೆ: ಹೆಚ್‌ಸಿಡಿ 228 ಸಿಒಡಿ 2026 ರಂತೆ ಈ ತಿದ್ದುಪಡಿ ಆದೇಶವನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 24, 2026 ರಂದು ಹೊರಡಿಸಿದ್ದ ಮೂಲ ಆದೇಶದ ಕೋಷ್ಟಕದ ಕ್ರಮ ಸಂಖ್ಯೆ 01 ಮತ್ತು 05 ರಲ್ಲಿದ್ದ ಅಧಿಕಾರಿಗಳನ್ನು ಬದಲಾಯಿಸಲಾಗಿದೆ.

ತಿದ್ದುಪಡಿ ಆದೇಶದ ಪ್ರಕಾರ:

  1. ಶ್ರೀ ಚೇತನ್ ಸಿಂಗ್ ರಾಥೋಡ್, ಐಪಿಎಸ್, ಐಜಿಪಿ, ಸಿಐಡಿ, ಬೆಂಗಳೂರು – ಮುಖ್ಯಸ್ಥರಾಗಿ ನೇಮಕ
  2. ಶ್ರೀ ಶ್ರೀನಿಧಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹಾಸನ ಜಿಲ್ಲೆ – ಸದಸ್ಯರಾಗಿ ನೇಮಕ

ಈ ಇಬ್ಬರು ಅಧಿಕಾರಿಗಳನ್ನು ಹೊರತುಪಡಿಸಿ ಉಳಿದ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರ ಸಹಿಯಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಆದೇಶದ ಪ್ರತಿಯನ್ನು ಡಿಜಿ & ಐಜಿಪಿ, ಸಿಐಡಿ ಮುಖ್ಯಸ್ಥರು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ರವಾನಿಸಲಾಗಿದೆ.

Continue Reading

Belthangady

ಸೌಜನ್ಯ ಕೇಸ್ ಮರುತನಿಖೆಗೆ ಬಿಗ್ ಟ್ವಿಸ್ಟ್: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಹಿಂದೆ ಸರಿದ ಐಜಿಪಿ ಶಶಿಕುಮಾರ್!

Published

on

ಬೆಂಗಳೂರು: ಧರ್ಮಸ್ಥಳದ ಬಹುಚರ್ಚಿತ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ (SIT) ಮರುತನಿಖೆ ಬಿರುಸಿನಿಂದ ಸಾಗುತ್ತಿರುವ ನಡುವೆಯೇ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದೆ. ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಎನ್. ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DG-IGP) ಲಿಖಿತ ಮನವಿ ಸಲ್ಲಿಸಿದ್ದಾರೆ.

ಹೋರಾಟಗಾರರ ಅಪಸ್ವರ ಮತ್ತು ವಿರೋಧ: ಸೌಜನ್ಯ ಕುಟುಂಬಸ್ಥರು ಹಾಗೂ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಂಘಟನೆಗಳು ಐಜಿಪಿ ಶಶಿಕುಮಾರ್ ಅವರ ನೇಮಕಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು. ಶಶಿಕುಮಾರ್ ಅವರು ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದ ವೇಳೆ ಸ್ಥಳೀಯ ಪ್ರಭಾವಿಗಳೊಂದಿಗೆ ಒಡನಾಟ ಹೊಂದಿದ್ದರು, ಹೀಗಾಗಿ ಅವರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೋರಾಟಗಾರರು ಆರೋಪಿಸಿದ್ದರು. ಇತ್ತೀಚೆಗೆ ಹೋರಾಟಗಾರರ ನಿಯೋಗವು ಗೃಹ ಸಚಿವರನ್ನು ಭೇಟಿಯಾಗಿ ಎಸ್‌ಐಟಿ ಮುಖ್ಯಸ್ಥರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತಲ್ಲದೆ, ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿಯೂ ಎಚ್ಚರಿಸಿತ್ತು.

ತನಿಖೆಯ ಪಾರದರ್ಶಕತೆಗಾಗಿ ನಿರ್ಧಾರ: ಸಾರ್ವಜನಿಕ ವಲಯದಲ್ಲಿ ಎದ್ದಿರುವ ಅಪಸ್ವರಗಳು ಹಾಗೂ ತನಿಖೆಯ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಶಶಿಕುಮಾರ್ ಅವರು ಸ್ವತಃ ತಾವೇ ಈ ಜವಾಬ್ದಾರಿಯಿಂದ ಕೈಬಿಡುವಂತೆ ಡಿಜಿ-ಐಜಿಪಿ ಎಂ.ಎ. ಸಲೀಂ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ವಿಶೇಷವೆಂದರೆ, ಅಕ್ಟೋಬರ್ 28 ರಂದು ಶಶಿಕುಮಾರ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮರುತನಿಖೆಯ ಪ್ರಗತಿ ಕುರಿತು ಮಾಹಿತಿ ನೀಡಿದ್ದರು. ಅಲ್ಲದೆ, ಅಕ್ಟೋಬರ್ 30 ರಂದು ಆರಂಭಿಕ ತನಿಖಾಧಿಕಾರಿಗಳು ಹಾಗೂ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿತ್ತು. ಈ ಹಂತದಲ್ಲೇ ಮುಖ್ಯಸ್ಥರು ಹಿಂದೆ ಸರಿಯಲು ಮನವಿ ಮಾಡಿರುವುದು ಕುತೂಹಲ ಮೂಡಿಸಿದೆ.

ಈಗಾಗಲೇ ತಂಡದ ಮತ್ತೊಬ್ಬ ಪ್ರಮುಖ ಸದಸ್ಯರಾದ ಹೆಚ್ಚುವರಿ ಎಸ್ಪಿ ವೆಂಕಟೇಶ್ ಪ್ರಸನ್ನ ಅವರು ವೈಯಕ್ತಿಕ ಕಾರಣಗಳಿಂದ ಹೊರಬಂದಿದ್ದು, ಇದೀಗ ಮುಖ್ಯಸ್ಥರೂ ವಿನಾಯಿತಿ ಕೋರಿರುವುದರಿಂದ ರಾಜ್ಯ ಸರ್ಕಾರವು ಶೀಘ್ರದಲ್ಲೇ ಎಸ್‌ಐಟಿಗೆ ನೂತನ ದಕ್ಷ ಅಧಿಕಾರಿಯನ್ನು ನೇಮಕ ಮಾಡುವ ಸಾಧ್ಯತೆಯಿದೆ

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!