Connect with us

Dakshina Kannada

ಮಾಣಿಯ ಬಾಲವಿಕಾಸ ಶಾಲೆಯಲ್ಲಿ ಅದ್ದೂರಿಯಾಗಿ ನಡೆದ ಪ್ರತಿಭಾ ಕಲೋತ್ಸವ-2025

Published

on

ವಿಟ್ಲ :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮಾಣಿ ಸ್ಥಳೀಯ ಸಂಸ್ಥೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಮಾಣಿ ಇವರ ಸಹಭಾಗಿತ್ವದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಲೋತ್ಸವ–2025 ಡಿಸೆಂಬರ್ 23ರಂದು ಬಾಲವಿಕಾಸ ಆಡಿಟೋರಿಯಂನಲ್ಲಿ ಅದ್ಧೂರಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರೂ ಹಾಗೂ ಬಾಲವಿಕಾಸ ಟ್ರಸ್ಟ್ ಅಧ್ಯಕ್ಷರೂ ಆದ ಪ್ರಹ್ಲಾದ ಶೆಟ್ಟಿ ಜೆ. ವಹಿಸಿದ್ದರು. ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ಭುವನೇಶ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಂಟ್ವಾಳ ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಕೆ. ಪ್ರತಿಭಾ ಕಲೋತ್ಸವ ಸಮಿತಿ–2025ರ ಸಂಚಾಲಕ ಬದಿಗುಡ್ಡೆ ಜಗನ್ನಾಥ ಚೌಟ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಕಿರಣ್ ಕುಮಾರ್ ಉಪಸ್ಥಿತರಿದ್ದು ಕಾರ್ಯಕ್ರಮದ ಸುವ್ಯವಸ್ಥಿತ ಆಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು.

ಈ ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಶ್ಯಾಮಲಾ ಸ್ವಾಗತಿಸಿ, ಜಿಲ್ಲಾ ತರಬೇತಿ ಆಯುಕ್ತ ಪ್ರತೀಮ್ ಕುಮಾರ್ ವಂದಿಸಿದರು. ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾರ್ಯಕ್ರಮದ ನಿರೂಪಣೆಯನ್ನು ಮಾಣಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಬಾಲಕೃಷ್ಣ ಆಳ್ವ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೈಡ್ಸ್ ವಿಭಾಗದ ಜಿಲ್ಲಾ ಆಯುಕ್ತೆ ಶ್ರೀಮತಿ ವಿಮಲ ರಂಗಯ್ಯ, ಜಿಲ್ಲಾ ತರಬೇತಿ ಆಯುಕ್ತರಾದ ಶಾಂತಾರಾಮ ಪ್ರಭು, ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ, ಜಿಲ್ಲಾ ಜೊತೆ ಕಾರ್ಯದರ್ಶಿ ಜಯವಂತಿ ಸೋನ್ಸ್, ಬಾಲವಿಕಾಸ ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ದೇವರಮಜಲು, ಮಾಣಿ ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಇಬ್ರಾಹಿಂ ಹಾಗೂ ಕಾರ್ಯದರ್ಶಿ ಸದಾನಂದ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧ ಶಾಲಾ -ಕಾಲೇಜುಗಳಿಂದ 1200 ಕಬ್ಸ್, ಬುಲ್ ಬುಲ್ಸ್, ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ದಿನ ನಡೆದ ಒಟ್ಟು 56 ಸ್ಪರ್ಧೆಗಳಿಗೆ ವಿವಿಧ ರಂಗಗಳಲ್ಲಿ ಪರಿಣಿತಿ ಪಡೆದ 36 ಅರ್ಹ ತೀರ್ಪುಗಾರರನ್ನು ಆಹ್ವಾನಿಸಿ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಕಾರ್ಯಕ್ರಮದ ಕೊನೆಯಲ್ಲಿ ಅಧಿಕ ಅಂಕಗಳನ್ನು ಗಳಿಸಿದ್ದ ಶಾಲೆಗಳಿಗೆ ವಿಭಾಗವಾರು ಸಮಗ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಲೋತ್ಸವಕ್ಕೆ ಕಳೆ ತುಂಬಿದ ಪಿ. ಜಿ . ಆರ್. ಸಿಂಧ್ಯ ಆಗಮನ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ರಾಜ್ಯ ಆಯುಕ್ತರಾದ ಶ್ರೀ ಪಿ. ಜಿ. ಆರ್ ಸಿಂಧ್ಯರವರು ಕಾರ್ಯಕ್ರಮಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ ಬಾಲವಿಕಾಸ ಶಾಲೆಯು ಅಳವಡಿಸಿಕೊಂಡ ತಂತ್ರಜ್ಞಾನದ ಬಗ್ಗೆ ಮುಕ್ತ ಕಂಠದಿಂದ ಶ್ಲಾಘಿಸಿದರು. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಅಳವಡಿಸಿಕೊಂಡ RFID ಗೇಟ್ , ಕಲೋತ್ಸವದ ವಿಜೇತ ವಿದ್ಯಾರ್ಥಿಗಳಿಗೆ ನೀಡಿದ ಸ್ಕೌಟ್ಸ್ – ಗೈಡ್ ಲೋಗೋ ಆಕಾರದ ಅಚ್ಚಿನ ಪದಕಗಳು, ಸ್ಪರ್ಧಾ ವಿಜೇತರ ಭಾವಚಿತ್ರ ಸಮೇತವಾಗಿ ಮುದ್ರಣಗೊಳ್ಳುತ್ತಿದ್ದ ಪ್ರಶಸ್ತಿ ಪತ್ರಗಳನ್ನು ಬಹುವಾಗಿ ಮೆಚ್ಚಿಕೊಂಡರು. ಬಾಲವಿಕಾಸ ಶಾಲೆಯನ್ನು ಸಂಪೂರ್ಣವಾಗಿ ವೀಕ್ಷಿಸಿದ ಅವರು ಬಾಲವಿಕಾಸ ಶಾಲೆಯು ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಸಂಸ್ಥೆಯಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ರು. ಈ ಸಂದರ್ಭದಲ್ಲಿ ಪಿ. ಜಿ. ಆರ್ ಸಿಂಧ್ಯರವರನ್ನು ಬಾಲವಿಕಾಸ ವಿದ್ಯಾಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.

Continue Reading
Advertisement

award

ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕೆ. ಮತ್ತು ಎಸಿಪಿ ನಜ್ಮಾ ಫಾರೂಕಿ ಸೇರಿದಂತೆ ಜಿಲ್ಲೆಯ ಹಲವು ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕದ ಗೌರವ

Published

on

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ (SP) ಡಾ. ಅರುಣ್ ಕೆ. ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ. ಅವರೊಂದಿಗೆ ಮಂಗಳೂರು ನಗರದ ಸಂಚಾರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ (ACP) ನಜ್ಮಾ ಫಾರೂಕಿ ಅವರಿಗೂ ಚಿನ್ನದ ಪದಕ ಪ್ರಕಟಗೊಂಡಿದೆ.


ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕದ ಗರಿ ಪ್ರಕಟಗೊಂಡಿದ್ದು, ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವವನ್ನು ಘೋಷಿಸಿದೆ.
ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸ್ಪೆಷಲ್ ಎಆರ್‌ಎಸ್‌ಐ, 7ನೇ ಪಡೆ ಕೆಎಸ್‌ಆರ್‌ಪಿಯ ಕೆ.ಎಂ. ಶಿವಶೇಖರ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಡಿಎಆರ್ ವಿಭಾಗದ ಎಎಸ್‌ಐ ತಿಲಕ್ ರಾಜ್ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರಲ್ಲದೆ, ಬಂಟ್ವಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಇರ್ಷಾದ್ ಪಿ. , ಮಂಗಳೂರು ನಗರದ ಊರ್ವ ಪೊಲೀಸ್ ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಲಲಿತಾಲಕ್ಷ್ಮಿ , ಬೆಳ್ತಂಗಡಿ ಗ್ರಾಮಾಂತರ ಠಾಣೆಯ ವಿಜಯ ಕುಮಾರ್ ರೈ , ಕಂಕನಾಡಿ ನಗರ ಠಾಣೆಯ ಜಯಾನಂದ ಎನ್., ಮತ್ತು ಮಂಗಳೂರು ಸೈಬರ್ ಕ್ರೈಂ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ಗಳಾದ ಮಣಿ ಎಂ.ಎನ್. ಹಾಗೂ ಸತೀಶ್ ಅವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಈ ಪದಕ ಪ್ರದಾನ ಸಮಾರಂಭವು ಏಪ್ರಿಲ್ 02, 2026 ರಂದು ಬೆಂಗಳೂರಿನಲ್ಲಿ ಜರುಗಲಿದೆ. ಈ ಹಿನ್ನೆಲೆಯಲ್ಲಿ ಪದಕ ವಿಜೇತ ಅಧಿಕಾರಿಗಳು ಮಾರ್ಚ್ 29 ರಿಂದಲೇ ಬೆಂಗಳೂರಿನ ಕೆಎಸ್‌ಆರ್‌ಪಿ 3ನೇ ಪಡೆಯಲ್ಲಿ ನಡೆಯುವ ಪೂರ್ವಾಭ್ಯಾಸದಲ್ಲಿ ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರ ಕಚೇರಿ ತಿಳಿಸಿದೆ.

Continue Reading

accident

ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್ ಭೀಕರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ

Published

on

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಧಕ್ಕೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದ ಆರಿಫ್, ಪ್ರತಿದಿನದಂತೆ ಇಂದು ಮುಂಜಾನೆ ತನ್ನ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂದು ದುಷ್ಕರ್ಮಿಗಳು ಆರಿಫ್ ಗಾಗಿ ಫೈಓವರ್‌ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್‌ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್‌ನಲ್ಲಿ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದಾಗ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅತಿ ವೇಗವಾಗಿ ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆರಿಫ್ ರಸ್ತೆಗೆ ಬೀಳುತ್ತಿದ್ದಂತೆ, ಕಾರಿನಿಂದ ಇಳಿದು ಬಂದ ತಂಡವು ತಲವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ತಲೆ ಮತ್ತು ದೇಹದ ಭಾಗಕ್ಕೆ ಮನಬಂದಂತೆ ಕಡಿದು ಸಿನಿಮೀಯ ರೀತಿಯಲ್ಲಿ ಕೊಲೆಗೈದು ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದಾಗಿ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ತೊಡಗಿಸಿ ಕೊಂಡಿದ್ದ ಆರಿಫ್ ನನ್ನು ವೈಯಕ್ತಿಕ ದ್ವೇಷ ದಿಂದ ಹತ್ಯೆ ಗೈದಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ.ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ.


2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆತನ ಮೇಲೆ ಒಮ್ಮೆ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣದಲ್ಲಿ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು. ಹಳೆಯ ವೈಯಕ್ತಿಕ ದ್ವೇಷವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.’ ಹತ್ಯೆಗೆ ಸ್ಪಷ್ಟ ಕಾರಣ ಏನೆಂಬುದು ಪೊಲೀಸರ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಸದ್ಯಕ್ಕೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Continue Reading

cyber crime

AI ತಂತ್ರಜ್ಞಾನ ಬಳಸಿ ಕೋಮುದ್ವೇಷ ಹರಡುವ ವಿಡಿಯೋ ಹಂಚಿಕೆ: ಮಂಗಳೂರಿನ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

Published

on

ಮಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಈತ ಫೇಸ್‌ಬುಕ್‌ನಲ್ಲಿ “ನಝೀರ ಮಂಗಳೂರು” ಎಂಬ ಹೆಸರಿನ ಖಾತೆಯ ಮೂಲಕ ವಿವಾದಾತ್ಮಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

2025ರ ಅಕ್ಟೋಬರ್‌ನಲ್ಲಿ ಆರೋಪಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ AI ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾದ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಇದು ಸಮಾಜದಲ್ಲಿ ಶಾಂತಿ ಕದಡುವ ಮತ್ತು ಕೋಮು ಸಂಘರ್ಷಕ್ಕೆ ಪ್ರಚೋದಿಸುವ ಉದ್ದೇಶ ಹೊಂದಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196, 353(1), ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 22, 2026 ರಂದು ಬೆಂಗಳೂರಿನಲ್ಲಿ ಆತನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆತನನ್ನು ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

Trending

Copyright © 2025 Deevatige