Connect with us

Bantawala

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ‌ ಹಾಜಿ ಬಿ.ಎಚ್. ಖಾದರ್ ಬಂಟ್ವಾಳ ಅವರಿಗೆ ಜಮೀಯ್ಯತುಲ್ ಫಲಾಹ್ ವತಿಯಿಂದ ಸನ್ಮಾನ

Published

on

ಬಂಟ್ವಾಳ : ಹಿರಿಯ ಸಾಮಾಜಿಕ ರಾಜಕೀಯ ಮುಂದಾಳು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್ ಖಾದರ್ ಅವರು ಈ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದು ಅವರನ್ನು ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ವತಿಯಿಂದ ಬಂಟ್ವಾಳದ ಬಿ.ಎಚ್ ಖಾದರ್ ಅವರ ನಿವಾಸದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ‌ ಅಭಿನಂದನಾ ಭಾಷಣ ಮಾಡಿದ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ, ಬಂಟ್ವಾಳ ಹಮ್ಮಬ್ಬ ಖಾದರ್ ಅವರು ತಮ್ಮ ತಂದೆಯಿಂದ ಬಳುವಳಿಯಾಗಿ ಬಂದ ವ್ಯವಹಾರವನ್ನು ಮುನ್ನಡೆಸುತ್ತಾ ಬದುಕು ಕಟ್ಟಿಕೊಂಡವರು, 1974 ರಲ್ಲಿ ನೇತ್ರಾವತಿಯಲ್ಲಿ ಬಂದ ದೊಡ್ಡ ಪ್ರವಾಹದ ನಂತರ ತನ್ನ ವ್ಯವಹಾರವನ್ನು ಕಳೆದುಕೊಂಡು
ಸಾಮಾಜಿಕ, ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು.‌ ಹಿರಿಯ ರಾಜಕಾರಣಿ ಶಿವರಾಮ ಶೆಟ್ಟರ ಪ್ರಭಾವದಿಂದ ರಾಜಕೀಯ ಪ್ರವೇಶಿಸಿ ವಿವಿಧ ಹುದ್ದೆಗಳನ್ನು ಅಲಂಕರಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಮಂಡಳಿ, ಸಮಿತಿ , ನಿಗಮಗಳ ಜವಾಬ್ದಾರಿಯುತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. ಶೈಕ್ಷಣಿಕ , ಸಾಮಾಜಿಕ ಸುಧಾರಣೆಗಳಿಗೆ ಪ್ರೇರಣಾದಾಯಕರಾಗಿ ಸೇವೆಗೈದ ನಿರಾಡಂಬರದ ಬಿ.ಎಚ್.ಖಾದರ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

ಸನ್ಮಾನವನ್ನು ಸ್ವೀಕರಿಸಿದ ಬಿ.ಎಚ್.ಖಾದರ್ ಮಾತನಾಡಿ, ಬದುಕಿನ ಬೇರೆ ಬೇರೆ ಮಜಲುಗಳಲ್ಲಿ ಕಾರ್ಯಾ ನಿರ್ವಹಿಸುವ ಅವಕಾಶಸಿಕ್ಕಿದಾಗ ಜನರಿಗೆ ಪ್ರಾಮಣಿಕ ಸೇವೆ ಸಲ್ಲಿಸಿದ ಪ್ರತೀಕವಾಗಿ ಈ ಪ್ರಶಸ್ತಿ ಬಂದಿದ್ದು ಜಮೀಯ್ಯತುಲ್ ಫಲಾಹ್ ಸಂಸ್ಥೆಯ ಪ್ರೀತಿ ಗೌರವಾದರಗಳಿಗೆ ಋಣಿಯಾಗಿದ್ದೇನೆ ಎಂದರು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಜಿಲ್ಲಾಧ್ಯಕ್ಷ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಶುಭ ಹಾರೈಸಿದರು.

ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶೇಕ್ ರಹ್ಮತುಲ್ಲಾ ಕಾವಳಕಟ್ಟೆ, ಪಿ.ಮೊಹಮ್ಮದ್ ಪಾಣೆಮಂಗಳೂರು, ಎನ್. ಮೊಹಮ್ಮದ್ ನಾರಂಗೋಡಿ, ಮೊಹಮ್ಮದ್ ಸಾಗರ್ ಮಿತ್ತಬೈಲ್, ಪ್ರಮುಖರಾದ ಹಾರೂನ್ ರಶೀದ್ ಬಂಟ್ವಾಳ, ಸವಾಝ್ ಬಂಟ್ವಾಳ, ಇಫಾಝ್ ಬಂಟ್ವಾಳ, ಅನ್ವರ್ ಕರೋಪಾಡಿ, ಎ.ಕೆ.ಮಹಮ್ಮದ್, ರಿಯಾಝ್ ಕೆ, ಅಹ್ಮದ್ ಶಾಫಿ, ಅಬ್ಬಾಸ್ ಹಾಗೂ ಬಿ.ಎಚ್ ಖಾದರ್ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

ಸಂಸ್ಥೆಯ ಕೋಶಾಧಿಕಾರಿ ಲತೀಫ್ ನೇರಳಕಟ್ಟೆ ಸ್ವಾಗತಿಸಿ ಕಾರ್ಯದರ್ಶಿ ಅಬ್ದುಲ್ ಹಕೀಂ ಕಲಾಯಿ ವಂದಿಸಿದರು.

Bantawala

ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ

Published

on

ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.


ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಬಡ ಕಾರ್ಮಿಕೆ ಗಾರ್ಬಲ್‌ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

Continue Reading

accident

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..

Published

on

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.


ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.

Continue Reading

Bantawala

ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನಾ ಸಭೆ

Published

on

ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನೆಯ ಸಭೆ ನಡೆಯಿತು.

ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು. ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ ಎಂ ಶೆಟ್ಟಿ ಅಳಕೆಮಜಲು, ಉಪಾಧ್ಯಕ್ಷರಾಗಿ ರೋಹಿಣಿ ರೈ ನೇರಳಕಟ್ಟೆ, ಹಾಗೂ ಚಂದ್ರಹಾಸ ರೈ ಮುಲ್ಕಾಜೆ ಮಾ ಡ, ಕಾರ್ಯದರ್ಶಿಯಾಗಿ ಗಣೇಶ್‌ ರೈ, ಕೋಶಾಧಿಕಾರಿಯಾಗಿ ಧನಂಜಯ ಶೆಟ್ಟಿ ಮುತ್ತೂರು, ಇವರನ್ನು ಟ್ರಸ್ಟಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರನ್ನು ಕುಟುಂಬಿಕರ ಮತ್ತು ಟ್ರಸ್ಟಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Continue Reading

Trending

Copyright © 2025 Deevatige