Bantawala
ವಿದ್ಯಾರ್ಥಿಗಳು ಅವಕಾಶದ ಸದ್ಬಳಕೆ ಮಾಡಿಕೊಳ್ಳಬೇಕು: ಯಕ್ಷಿತಾ ಎಂ ಓಜಾಲ
ವಿದ್ಯಾರ್ಥಿಗಳು ತಮಗೆ ಸಿಗುವ ಎಲ್ಲ ಅವಕಾಶಗಳನ್ನು ಮುಕ್ತ ಮನಸ್ಸಿನಿಂದ ಸದ್ಬಳಕೆ ಮಾಡಿಕೊಳ್ಳಬೇಕು. ವೇದಿಕೆಯೇರಲು ಹಿಂಜರಿಕೆಯಿರಬಾರದು. ವಿದ್ಯಾರ್ಥಿಗಳಲ್ಲಿರುವ ಸಭಾ ಕಂಪನವು ಮಾನಸಿಕ ಅಧೈರ್ಯವೇ ಹೊರತು ಸ್ವಸಾಮರ್ಥ್ಯದ ಕೊರತೆಯಲ್ಲ. ಕೆಲವೊಮ್ಮೆ ಸೋಲಾದರೂ ಬೆನ್ನ ಹಿಂದೆ ನೆರಳಾಗಿ ಜಯವೂ ಇರುತ್ತದೆ. ನಾವು ಎದುರಿಸುವ ಸವಾಲುಗಳು ನಮ್ಮ ಸಾಮರ್ಥ್ಯವನ್ನು ಬಲಗೊಳಿಸುತ್ತವೆ. ನಾವು ಸಾಹಿತ್ಯವನ್ನು ರಕ್ಷಿಸಿ ಬಳಸಿ ಬೆಳೆಸಿದರೆ ಅದುವೇ ನಮ್ಮನ್ನು ಬೆಳೆಸುತ್ತದೆ ಎಂದು ವಿಠಲ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ಶಾಸ್ತ್ರ ವಿದ್ಯಾರ್ಥಿನಿ ಯಕ್ಷಿತಾ ಎಂ ಓಜಾಲ ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಮಕ್ಕಳ ಕಲಾ ಲೋಕದ ನೇತೃತ್ವ ಮತ್ತು ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಚಂದಳಿಕೆ ಸಹಯೋಗದಲ್ಲಿ ಜರಗಿದ ಬಂಟ್ವಾಳ ತಾಲೂಕು 19ನೇ ವರ್ಷದ ಮಕ್ಕಳ ಸಾಹಿತ್ಯಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು
ಸಮ್ಮೇಳನದ ಸರ್ವಾಧ್ಯಕ್ಷರಾದ ಚಂದಳಿಕೆ ಶಾಲೆಯ ವಿದ್ಯಾರ್ಥಿನಿ ಕುಮಾರಿ ವನ್ಯ ಎನ್ ಅವರು ಮಾತನಾಡುತ್ತಾ ತನಗೆ ಈ ಸಮ್ಮೇಳನ ಹೊಸ ಸಾಹಿತ್ಯ ಜಗತ್ತನ್ನು ತೋರಿಸಿದೆ. ಅವಕಾಶಕ್ಕಾಗಿ ಎಲ್ಲರಿಗೂ ವಂದಿಸುವೆ ಎಂದರು. ಇದೇ ಸಂದರ್ಭದಲ್ಲಿ ಮಕ್ಕಳ ಕಲಾಲೋಕದ ಅಧ್ಯಕ್ಷರಾದ ರಮೇಶ ಎಂ ಬಾಯಾರು ವನ್ಯ ಎನ್ ಇವರನ್ನುಸಮ್ಮೇಳನದ ವತಿಯಿಂದ ಸನ್ಮಾನಿಸಿದರು.
ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷೆ ಸುಮತಿ ದೇಜಪ್ಪ, ಉದ್ಯಮಿ ನಿಡ್ಯ ದೇಜಪ್ಪ ಪೂಜಾರಿ, ಚಂದಳಿಕೆ ಶಾಲಾ ಮುಖ್ಯೋಪಾಧ್ಯಾಯ ವಿಶ್ವನಾಥ ಗೌಡ ಬಿ ಕುಳಾಲು ಮತ್ತು ಮಕ್ಕಳ ಕಲಾ ಲೋಕದ ಗೌರವ ಸಲಹೆಗಾರ ಭಾಸ್ಕರ ಅಡ್ವಳ ಉಪಸ್ಥಿತರಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯರಾದ ಶಿವರಾಮ ಭಟ್, ಎಂ.ಕೆ ನಾಯ್ಕ್ ಅಡ್ಯನಡ್ಕ, ಸಹಶಿಕ್ಷಕರಾದ ವಿಲ್ಮ ಸಿಕ್ವೇರ, ಸ್ವಾತಿ, ಕಲಾ ಲೋಕದ ಪುಷ್ಪಾ ಎಚ್ ಮತ್ತು ಚಂದಳಿಕೆ ಶಾಲಾ ಗೌರವ ಶಿಕ್ಷಕ ಶಿವಶಂಕರ್ ಎಂ. ವ್ಯವಸ್ಥಾಪಕರಾಗಿ ಸಹಕರಿಸಿದರು. ಸಾಹಿತ್ಯ ಗೋಷ್ಠಿಯ ಅಧ್ಯಕ್ಷತೆಯನ್ನು ಶ್ರೀರಾಮ ಕಲ್ಲಡ್ಕ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮಾ. ನಿನಾದ್ ಕೈರಂಗಳ, ಆಶುಮಾತುಕತೆಯ ಅಧ್ಯಕ್ಷತೆಯನ್ನು ವಿಠಲ ಪ್ರೌಢ ಶಾಲಾ ವಿದ್ಯಾರ್ಥಿನಿ ಕು. ಶರಣ್ಯ ವಹಿಸಿದರು.
ವೇದಿಕೆಯ ವಿವಿಧ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ವಿದ್ಯಾರ್ಥಿಗಳಾದ ಚಂದಳಿಕೆಯ ಗೀತಾ ಶ್ರೀ, ಮಾನ್ವಿ, ಮಿತ್ತೂರಿನ ಪ್ರವೀಣ್ ಗೋಣಿ, ವಿಟ್ಲದ ಸಾನ್ವಿ,ನವನೀತ್, ಚಿಂತನಾ, ಗುಣಶ್ರೀಯ ವಂಶಿ, ಶೃತಿ, ಓಜಾಲದ ಲಿಪಿಕಾ, ಗನ್ಯ, ನಿಶಿತಾ, ಅಡ್ಯನಡ್ಕ ಜನತಾ ಆಂಗ್ಲ ಮಾಧ್ಯಮ ಶಾಲೆಯ ಮನ್ವಿತ್ ಮುಳಿಯಾಲ, ಫಾತಿಮತ್ ಫಿದಾ, ಅಳಕೆಮಜಲಿನ ಮೊಹಿನುದ್ದೀನ್, ಆದ್ಯ, ಮೊದಲಾದವರು ಸಹಕರಿಸಿದರು.
ಚಟುವಟಿಕೆಗಲಲ್ಲಿ ಭಾಗವಹಿಸಿದವರಿಗೆ ಪುಸ್ತಕ ಸ್ಮರಣಿಕೆ ಮತ್ತು ಸ್ಫೂರ್ತಿ ಪತ್ರ ವಿತರಿಸಲಾಗಿದೆ. ಸಮಯ ಪಾಲನೆ, ರಜಾದಿನದಂದೂ ಮಕ್ಕಳು ಭಾಗವಹಿಸಿ ಉತ್ತಮ ಪ್ರತಿಕ್ರಿಯೆ ತೋರಿರುವುದನ್ನು ಸಾರ್ವಜನಿಕರು ಶ್ಲಾಘಿಸಿದರು.


Bantawala
ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ
ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಡ ಕಾರ್ಮಿಕೆ ಗಾರ್ಬಲ್ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.
accident
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.

ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.
Bantawala
ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನಾ ಸಭೆ
ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನೆಯ ಸಭೆ ನಡೆಯಿತು.
ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು. ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ ಎಂ ಶೆಟ್ಟಿ ಅಳಕೆಮಜಲು, ಉಪಾಧ್ಯಕ್ಷರಾಗಿ ರೋಹಿಣಿ ರೈ ನೇರಳಕಟ್ಟೆ, ಹಾಗೂ ಚಂದ್ರಹಾಸ ರೈ ಮುಲ್ಕಾಜೆ ಮಾ ಡ, ಕಾರ್ಯದರ್ಶಿಯಾಗಿ ಗಣೇಶ್ ರೈ, ಕೋಶಾಧಿಕಾರಿಯಾಗಿ ಧನಂಜಯ ಶೆಟ್ಟಿ ಮುತ್ತೂರು, ಇವರನ್ನು ಟ್ರಸ್ಟಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರನ್ನು ಕುಟುಂಬಿಕರ ಮತ್ತು ಟ್ರಸ್ಟಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

