Connect with us

accident

ಚಿತ್ರದುರ್ಗ: ಹೊತ್ತಿಉರಿದ ಖಾಸಗಿ ಬಸ್ಸು; 15ಕ್ಕೂ ಹೆಚ್ಚು ಜನರು ಸಜೀವ ದಹನ

Published

on

ಚಿತ್ರದುರ್ಗ: ಬೆಂಗಳೂರಿನಿoದ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಅಪಘಾತಕ್ಕೆ ಹೊತ್ತಿ ಉರಿದ ಪರಿಣಾಮ 15ಕ್ಕೂ ಹೆಚ್ಚು ಜನರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಗುರುವಾರ (ಡಿ.25) ಬೆಳಗ್ಗಿನ ಜಾವ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಅವಘಡ ಸಂಭವಿಸಿದೆ. ಕಂಟೇನರ್ ಲಾರಿಯೊಂದು ಡಿವೈಡರ್ ದಾಟಿ ರಸ್ತೆಯ ಮತ್ತೊಂದು ಬದಿಯಲ್ಲಿ ಸಂಚರಿಸುತ್ತಿದ್ದ ಸೀಬರ್ಡ್ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದಿದ್ದು, ಡಿಸೇಲ್ ಟ್ಯಾಂಕಿ ಸ್ಫೋಟಗೊಂಡು ಪರಿಣಾಮ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಅಪಘಾತಕ್ಕೆ ನಿದ್ದೆ ಮಂಪರಿನಲ್ಲಿ ಅಜಾಗರೂಕತೆಯಿಂದ ಲಾರಿ ಚಲಾಯಿಸಿದ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ.


ಬಸ್‌ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಚಾಲಕ ಮತ್ತು ನಿರ್ವಾಹಕ ಕಿಟಕಿಯಿಂದ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಗಾಢ ನಿದ್ರೆಯಲ್ಲಿದ್ದ ಪ್ರಯಾಣಿಕರಿಗೆ ಹೊರಬರಲು ಸಾಧ್ಯವಾಗದೆ ಬೆಂಕಿಯ ನಡುವೆ ಸಿಲುಕಿಕೊಂಡಿದ್ದಾರೆ. ಅಪಘಾತಕ್ಕೀಡಾದ ಬಸ್‌ನಲ್ಲಿ ಒಟ್ಟು 32 ಜನರಿದ್ದರು. ಈ ಪೈಕಿ ಇದುವರೆಗೆ 15 ಜನರು ಪತ್ತೆಯಾಗಿದ್ದಾರೆ. ಉಳಿದ 15 ಜನರ ಮಾಹಿತಿ ದೊರೆತಿಲ್ಲ. ಹಾಗಾಗಿ, ಅವರು ಸಾವನ್ನಪ್ಪಿರಬಹುದು, ಜೊತೆಗೆ ಲಾರಿ ಚಾಲಕ ಕೂಡ ಸಾವಿಗೀಡಾಗಿದ್ದಾರೆ ಎಂದು ಚಿತ್ರದುರ್ಗ ಎಸ್‌ಪಿ ರಂಜಿತ್ ಮಾಹಿತಿ ನೀಡಿದ್ದಾರೆ.

ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬಸ್ ಬೆಂಗಳೂರಿoದ ಗೋಕರ್ಣಕ್ಕೆ ಹೋಗುತ್ತಿತ್ತು. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯ ಇರುವವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

ಬಸ್‌ನಲ್ಲಿ ಹೆಚ್ಚಿನ ಜನರು ಗೋಕರ್ಣ ಮೂಲದವರೇ ಇದ್ದರು. ಹಾಗಾಗಿ, ಅಲ್ಲಿನವರೇ ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗಿರುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಘಟನಾ ಸ್ಥಳಕ್ಕೆ ಕ್ರೇನ್‌ಗಳನ್ನು ತಂದು ಸುಟ್ಟು ಕರಕಲಾದ ಬಸ್‌ನ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ. ವೈದ್ಯರು ಮತ್ತು ತಜ್ಞರ ತಂಡ ಬಸ್‌ನ ಒಳಗಡೆಯಿಂದ ಮೃತದೇಹಗಳನ್ನು ಹೊರ ತೆಗೆದು, ಅವುಗಳಿಗೆ ಗುರುತು ಹಾಕುತ್ತಿದ್ದು, ಡಿಎನ್‌ಎ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ 21 ಪ್ರಯಾಣಿಕರನ್ನು ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಹಿರಿಯೂರು ಹಾಗೂ ತುಮಕೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಉಚ್ಚಿಲ: ಜಿಒಎಸ್ ಆಫ್ ಮಾಡದೆ ಟ್ರಾನ್ಸ್‌ಫಾರ್ಮರ್ ಏರಿದ ಮೆಸ್ಕಾಂ ಲೈನ್‌ಮ್ಯಾನ್ ವಿದ್ಯುತ್ ಆಘಾತದಿಂದ ಸಾವು

Published

on

ಉಳ್ಳಾಲ: ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಮಾಡದೆ ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್‌ಮ್ಯಾನ್‌ ಒಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ದುರಂತ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝುಮೀರ್ (49) ಮೃತಪಟ್ಟ ದುರದೃಷ್ಟಕರ ವ್ಯಕ್ತಿ.

ಘಟನೆಯ ವಿವರ:

ಉಚ್ಚಿಲ ನಯಾಪಟ್ಟಣದ ಟ್ರಾನ್ಸ್‌ಫಾರ್ಮರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಬಗ್ಗೆ ಮೆಸ್ಕಾಂಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಶೇಖ್ ಝುಮೀರ್ ಹಾಗೂ ಅವರ ಸಹೋದ್ಯೋಗಿ ಸಂಗಪ್ಪ ಎಂಬುವರು ಇಂದು ಬೆಳಿಗ್ಗೆ ಸ್ಥಳಕ್ಕೆ ತೆರಳಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು.

ಜಿಒಎಸ್ (GOS) ಆಫ್ ಆಗಿದೆ ಎಂದು ತಪ್ಪಾಗಿ ಗ್ರಹಿಸಿದ ಝುಮೀರ್, ಟ್ರಾನ್ಸ್‌ಫಾರ್ಮರ್ ಏರಿದ್ದಾರೆ. ಈ ವೇಳೆ ತೀವ್ರ ವಿದ್ಯುತ್ ಆಘಾತಕ್ಕೊಳಗಾಗಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತೀವ್ರ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ಝುಮೀರ್ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Continue Reading

accident

ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ: ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದಾರುಣ ಸಾವು

Published

on

ಉಡುಪಿ: ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಹಾಗೂ ನೈವೇದ್ಯ ಹೋಟೆಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ, ಬಿಜೆಪಿ ಹಾಗೂ ಹಿಂದೂ ಮುಖಂಡ ಮಂಜುನಾಥ್ ಕೊಳ ಅವರ ಪತ್ನಿ ಲಕ್ಷ್ಮೀ ಮಂಜುನಾಥ್ ಕೊಳ (37) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ವಿವರ:

ಶನಿವಾರ ಬೆಳಿಗ್ಗೆ ಕಡಿಯಾಲಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಲಕ್ಷ್ಮೀ ಮಂಜುನಾಥ್ ಅವರು, ಬಳಿಕ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಮನೆಗೆ ಮರಳಲು ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಿ ರಸ್ತೆ ದಾಟುತ್ತಿದ್ದ ವೇಳೆ, ವೇಗವಾಗಿ ಬಂದ ಖಾಸಗಿ ಬಸ್‌ ಒಂದಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಸ್ಥಳದಲ್ಲೇ ಕೊನೆಯುಸಿರು:

ಬಸ್ ಡಿಕ್ಕಿಯಾದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಲಕ್ಷ್ಮೀ ಮಂಜುನಾಥ್ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಪೊಲೀಸ್ ತನಿಖೆ:

ಘಟನೆ ನಡೆದ ತಕ್ಷಣವೇ ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ

Continue Reading

accident

ಮಾಣಿ ಸಮೀಪ ಭೀಕರ ರಸ್ತೆ ಅಪಘಾತ: ಕೆಟ್ಟು ನಿಂತಿದ್ದ ಟಿಪ್ಪರ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ

Published

on

ಮಾಣಿ / ಉಪ್ಪಿನಂಗಡಿ, ಜು. 28: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಪೆರ್ನೆ ಮೈರ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಅತೀವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮೇಲ್ಭಾಗ ಹಾಗೂ ಬದಿಯ ಭಾಗಕ್ಕೂ ಭಾರೀ ಹಾನಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಎರಡು ಆಂಬ್ಯುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಗಾಯಾಳುಗಳಿಗೆ ಶೀಘ್ರ ವೈದ್ಯಕೀಯ ನೆರವು ದೊರಕಿದೆ.

ಘಟನೆಯಲ್ಲಿ ಗಾಯಗೊಂಡವರ ಹೆಸರು, ವಿಳಾಸ ಹಾಗೂ ಅವರು ಎಲ್ಲಿಂದ ಎಲ್ಲಿಗೆ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Continue Reading

Trending

Copyright © 2025 Deevatige

error: Content is protected !!