accident
ಬಸ್ಸು ದುರಂತದಲ್ಲಿ 32 ಪ್ರಯಾಣಿಕರ ಪೈಕಿ 25 ಜನರನ್ನು ಟ್ರೇಸ್ ಮಾಡಲಾಗಿದೆ. ಅಸಲಿಗೆ ಸಾವನ್ನಪ್ಪಿದವರ ಸಂಖ್ಯೆ ಎಷ್ಟು? ಮಿಸ್ಸಿಂಗ್ ಆದವರು ಎಷ್ಟು ? ಜಿಲ್ಲಾ ಎಸ್ಪಿಯಿಂದ ಮಾಹಿತಿ
ಚಿತ್ರದುರ್ಗ: ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಬಸ್ಸು ಬೆಂಕಿಗಾಹುತಿಯಾದ ಪ್ರಕರಣದಲ್ಲಿ ನಾಪತ್ತೆಯಾದವರು ಮೃತರಾಗಿದ್ದಾರೆ ಎಂದು ಊಹಿಸಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಗೊಂದಲ ಮೂಡಿತ್ತು. ಇದೀಗ ಘಟನೆಗೆ ಸಂಬoಧ ಪಟ್ಟಂತೆ ಎಸ್ಪಿ ರಂಜೀತ್ ಕುಮಾರ್ ಸ್ಪಷ್ಟ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘನಘೋರ ದುರಂತದಲ್ಲಿ ಕೆಲವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನಿoದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಯಲ್ಲಿ ಭಸ್ಮಗೊಂಡಿದೆ. ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಗೊಂದಲ ಮೂಡಿತ್ತು. ಇದೀಗ ಘಟನೆ ಸಂಬoಧ ಪೊಲೀಸರು ಸ್ಪಷ್ಟ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಐವರು ಪ್ರಯಾಣಿಕರ ಸಜೀವ ದಹನ
ಆರಂಭದಲ್ಲಿ ಈ ದುರ್ಘಟನೆಯಲ್ಲಿ 15ಕ್ಕಿಂತಲೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು, ಮತ್ತೆ ಕೆಲವರು ಪ್ರತ್ಯಕ್ಷವಾಗಿದ್ದು, 10 ಮಂದಿ ಮಾತ್ರ ಮೃತಪಟ್ಟಿದ್ದಾರೆ ಎನ್ನಲಾಗಿತ್ತು, ಇದೀಗ ಪ್ರಯಾಣಿಕರನ್ನು ಟ್ರೇಸ್ ಮಾಡಲಾಗಿದ್ದು, ಬಳಿಕ ಕೆಲ ಮೂಲಗಳ ಮಾಹಿತಿ ಆಧರಿಸಿ ಐವರು ಪ್ರಯಾಣಿಕರು ಮಾತ್ರ ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೂಡ ಐವರು ಪ್ರಯಾಣಿಕರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಎಸ್ಪಿ ರಂಜೀತ್ ಕುಮಾರ್ ಮಾಹಿತಿ
ಹಿರಿಯೂರು ತಾಲೂಕು ಆಸ್ಪತ್ರೆಗೆ ಚಿತ್ರದುರ್ಗ ಎಸ್ಪಿ ರಂಜೀತ್ಕುಮಾರ್ ಬಂಡಾರು ಭೇಟಿ ಮಾಡಿದ್ದು, ಗಾಯಾಳು ಮಿಲನ ಸೇರಿದಂತೆ ಅನೇಕರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಮಾತಾಡಿದ ಎಸ್ಪಿ, ಬಸ್ನಲ್ಲಿದ್ದ 32 ಪ್ರಯಾಣಿಕರ ಪೈಕಿ 25 ಪ್ರಯಾಣಿಕರ ಟ್ರೇಸ್ ಮಾಡಿರುವುದಾಗಿ ತಿಳಿಸಿದ್ದಾರೆ.
accident
ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ನಡೆದಿದೆ.
ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ನಿವಾಸಿ ಭಾರತಿ (48) ಅಪಘಾತಕ್ಕೀಡಾದ ಮಹಿಳೆ. ಇವರು ತನ್ನ ಮಗಳು ದೀಪ್ತಿ ಅವರೊಂದಿಗೆ ಸಜಿಪಮುನ್ನೂರಿನ ಗುಳಿಗಜ್ಜನ ಕಟ್ಟೆಗೆ ಕಾಣಿಕೆ ಹಾಕಲು ಬಂದಿದ್ದರು. ಕಾಣಿಕೆ ಮುಗಿಸಿ ವಾಪಸ್ಸಾಗುವಾಗ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬಂದ ಬಿಳಿ ಬಣ್ಣದ ಕಾರು ಮಹಿಳೆಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ: ಡಿಕ್ಕಿಯ ರಭಸಕ್ಕೆ ಭಾರತಿ ಅವರು ಗಾಳಿಯಲ್ಲಿ ಹಾರಿ ರಸ್ತೆಯ ಬದಿಗೆ ಬಿದ್ದಿದ್ದಾರೆ. ಅಪಘಾತದ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಭಾರತಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
accident
ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು
ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:
ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
accident
ರಸ್ತೆ ತಿರುವಿನಲ್ಲಿ ದಿಢೀರನೆ ತೆರೆದುಕೊಂಡ ಬಾಗಿಲು..ಸರ್ಕಾರಿ ಬಸ್ಸಿಂದ ಹೊರಕ್ಕೆಸೆಯಲ್ಪಟ್ಟು ಸಹೋದರಿಯರಿಗೆ ಗಂಭೀರ ಗಾಯ.
ಬೆಳ್ತಂಗಡಿ : ಸರ್ಕಾರಿ ಬಸ್ಸಿನಲ್ಲಿ ಶಾಲೆಗೆ ತೆರಳುತ್ತಿದ್ದ ಸಹೋದರಿಯರಿಬ್ಬರು
ರಸ್ತೆ ತಿರುವಿನಲ್ಲಿ ಏಕಾಏಕಿ ಬಸ್ಸಿನ ಬಾಗಿಲು ತೆರೆದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ರೇಷ್ಮೆರೋಡ್ ಎಂ ಆರ್ ಪಿ ಎಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಬೆಳಿಗ್ಗೆ ಎಂದಿನಂತೆ ಗೇರುಕಟ್ಟೆಯಿಂದ ಬೆಳ್ತಂಗಡಿ ಶಾಲೆಗೆ ತೆರಳಲು ಕೆಎಸ್ ಆರ್ ಟಿ ಸಿ ಬಸ್ ಗೆ ಹತ್ತಿದ್ದ ಸಹೋದರಿಯರು ರೇಷ್ಮೆ ರೋಡ್ ಎಂಬಲ್ಲಿನ ರಸ್ತೆ ತಿರುವಿನಲ್ಲಿ ದಿಢೀರನೆ ಬಸ್ಸಿನ ಬಾಗಿಲು ತೆರೆಯಲ್ಪಟ್ಟು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ಸಂಚರಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟ ಸಹೋದರಿಯರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಸ್ಥಳೀಯರು ಬೆಳ್ತಂಗಡಿ ಹಾಗೂ ಉಜಿರೆ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
ಸಹೋದರಿಯರ ಪೈಕಿ ಒಬ್ಬಾಕೆ ಎಸ್ ಎಸ್ ಎಲ್.ಸಿ ಪರೀಕ್ಷೆಗೆ ತೆರಳುತ್ತಿದ್ದು ಮತ್ತೊಬ್ಬಳು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಾಗರಾಜ ಹಾಗೂ ರೂಪ ದಂಪತಿಗಳ ಪುತ್ರಿಯರು ಗಾಯಾಳುಗಳೆಂದು ತಿಳಿದುಬಂದಿದೆ. ಗಾಯಾಳು ಸಹೋದರಿಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
