Connect with us

Dakshina Kannada

ರಾಜ್ಯ ರಾಜಕೀಯದಲ್ಲಿ ಕೇಸರಿ ಪಡೆಯ ಪ್ರಾಬಲ್ಯ ; ಹಲವು ಪಟ್ಟಣ ಪಂಚಾಯತ್‌ಗಳಲ್ಲಿ ಬಿಜೆಪಿ ಭರ್ಜರಿ ಜಯ

Published

on

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ರಾಜ್ಯದಲ್ಲಿ ಆಡಳಿತಾರೂಡ
ಕಾಂಗ್ರೆಸ್ಸಿಗೆ ಭಾರಿ ಮುಖಭಂಗವಾಗಿದೆ. ದಕ್ಷಿಣಕನ್ನಡ , ಉತ್ತರಕನ್ನಡ ಹಾಗೂ ಬೆಂಗಳೂರು
ಗ್ರಾಮಾoತರ ಜಿಲೆಗಳ ಹಲವು ಪಟ್ಟಣ ಪಂಚಾಯತ್‌ಗಳಲ್ಲಿ ಬಿಜೆಪಿ ಭರ್ಜರಿ ಜಯ
ಸಾದಿಸಿದ್ದು ರಾಜ್ಯ ರಾಜಕೀಯದಲ್ಲಿ ಕೇಸರಿ ಪಡೆಯ ಪ್ರಾಬಲ್ಯ ಮತೊಮ್ಮೆ ಸಾಬೀತಾಗಿದೆ


ದಕ್ಷಿಣಕನ್ನಡ ಜಿಲ್ಲೆಯ ಬಜಪೆ ಮತ್ತು ಕಿನಿಗೋಳಿ ಪಟ್ಟಣ ಪಂಚಾಯತ್‌ಗಳು, ಉತ್ತರ
ಕನ್ನಡ ಜಿಲ್ಲೆಯ ಮಂಕಿ ಪಟ್ಟಣ ಪಂಚಾಯತ್ ಹಾಗೂ ಬೆಂಗಳೂರು ಗಾಮಾಂತರ ಜಿಲ್ಲೆಯ
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್‌ಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಇದಲ್ಲದೆ, ಬೆಂಗಳೂರು
ಗ್ರಾಮಾoತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಬೆ ಹಾಗೂ ರಾಯಚೂರು ಜಿಲ್ಲೆಯ ತುರವಿಹಾಳ
ಪಟ್ಟಣ ಪಂಚಾಯತ್‌ನ ತಲಾ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿಯೂ ಬಿಜೆಪಿ
ಗೆಲುವು ಸಾಧಿಸಿದೆ.

ಬಜಪೆ ಪಟ್ಟಣ ಪಂಚಾಯತ್‌ನ ಒಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದಿದ್ದ್ದು ಕಾಂಗ್ರೆಸ್ ನಾಲ್ಕು ಸ್ಥಾನಗಳಿಗೆ ಸೀಮಿತವಾಗಿದೆ. ಎಸ್‌ಡಿಪಿಐ ಮೂರು ಸ್ಥಾನಗಳನ್ನು ಪಡೆದರೆ, ಒಂದು ಸ್ಥಾನ
ಸ್ವತಂತ್ರ ಅಭ್ಯರ್ಥಿಗೆ ಸೇರಿದೆ. ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನಲ್ಲಿ ಬಿಜೆಪಿ 10 ಸ್ಥಾನಗಳನ್ನು
ಗೆದ್ದಿದ್ದು ಕಾಂಗ್ರೆಸ್ ಎಂಟು ಸ್ಥಾನಗಳನ್ನು ಪಡೆದುಕೊಂಡಿದೆ. ಈ ಚುನಾವಣೆಯಲ್ಲಿ ಒಟ್ಟು
42 ಅಭ್ಯರ್ಥಿಗಳು ಕಣದಲ್ಲಿದ್ದರು.

ಮಂಕಿ ಪಟ್ಟಣ ಪಂಚಾಯತ್ ರೂಪುಗೊಂಡ ನಂತರ ನಡೆದ ಮೊದಲ
ಚುನಾವಣೆಯಲ್ಲೇ ಬಿಜೆಪಿ ಅಧಿಕಾರ ಹಿಡಿದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ
ತೀವ್ರ ಪೈಪೋಟಿ ಕಂಡುಬoದರೂ, ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗೆ
ಮಾಡಿದ್ದು, ಬಿಜೆಪಿ ಹನ್ನೆರಡು ಸ್ಥಾನಗಳನ್ನು ಗೆದ್ದರೆ ಕಾಂಗ್ರೆಸ್ ಎಂಟು ಸ್ಥಾನಗಳಿಗೆ
ಸೀಮಿತವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿ ಹಳ್ಳಿ
ಪಟ್ಟಣ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 19
ಸ್ಥಾನಗಳ ಪೈಕಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಕೇಸರಿ ಪಡೆ ಪ್ರಾಬಲ್ಯ ಮೆರೆದಿದೆ. ಹನ್ನೊಂದು
ವರ್ಷಗಳ ಬಳಿಕ ನಡೆದ ಈ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ.


ಬಿಜೆಪಿ ಪ್ರತಿಕ್ರಿಯೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಸಿಕ್ಕ ಗೆಲುವಿನ ಹಿನ್ನೆಲೆಯಲ್ಲಿ ಪಕ್ಷದ
ರಾಷ್ರ‍್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಸಾಮಾಜಿಕ ಜಾಲತಾಣದಲ್ಲಿ
ಪೋಸ್ ್ಟ ಮಾಡಿ ಸಂತಸ ವ್ಯಕ್ತ ಪಡಿಸಿದ್ದಾರೆ. ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ
ಬಿಜೆಪಿ ಗೆಲುವಿನ ಓಟ ಮುಂದುವರಿದಿದ್ದು, ಕಾಂಗ್ರೇಸ್ ಆಡಳಿತವಿರುವ ಕರ್ನಾಟಕದಲ್ಲಿಯೂ
ಮತಪತ್ರದ ಮೂಲಕ ನಡೆದ ಚುನಾವಣೆಯಲ್ಲಿ ಬಿಜೆಪಿ ವಿಜಯ ಸಾಧಿಸಿರುವುದು ಗಮನಾರ್ಹ
ಎಂದಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿ, ದಕ್ಷಿಣ ಕನ್ನಡ, ಉತ್ತರ ಕನ್ನಡ
ಹಾಗೂ ಬೆಂಗಳೂರು ಸೇರಿದಂತೆ ವಿವಿಧೆಡೆ ಬಿಜೆಪಿ ಭರ್ಜರಿ ಜಯ ಸಾಧಿಸಿರುವುದು ಪ್ರಧಾನಿ
ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವಕ್ಕೆ ಸಿಕ್ಕ ಜನಾದೇಶ ಎಂದು ಅಭಿಪ್ರಾಯಪಟ್ಟಿದ್ದಾರೆ. ಬ್ಯಾಲೆಟ್ ಪೇಪರ್ ಆಗಲಿ ಅಥವಾ ಇವಿಎಂ ಆಗಲಿ, ಫಲಿತಾಂಶ ಒಂದೇ ಆಗಿರುತ್ತದೆ; ಜನಾದೇಶ ಬಿಜೆಪಿ
ಪರವಾಗಿಯೇ ಇರುತ್ತದೆ ಎಂದು ಅವರು ಕಾಂಗ್ರೆಸ್ ವಿರುದ್ಧ ಟೀಕಿಸಿದ್ದಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

court

ವಕೀಲರ ರಕ್ಷಣೆಗಾಗಿ ಆಗ್ರಹ: ನಾಳೆ (ನವೆಂಬರ್ 3) ರಾಜ್ಯಾದ್ಯಂತ ನ್ಯಾಯಾಲಯ ಕಲಾಪಗಳಿಂದ ವಕೀಲರು ದೂರ ಉಳಿಯಲು ಕರೆ.

Published

on

​ಬೆಂಗಳೂರು: ವಕೀಲರ ಮೇಲೆ ನಡೆಯುತ್ತಿರುವ ಸರಣಿ ಹಲ್ಲೆಗಳು ಮತ್ತು ಕೊಲೆಗಳನ್ನು ಖಂಡಿಸಿ ಹಾಗೂ ಕಟ್ಟುನಿಟ್ಟಿನ ‘ವಕೀಲರ ರಕ್ಷಣಾ ಕಾಯ್ದೆ’ (Advocates Protection Act) ಜಾರಿಗೆ ಒತ್ತಾಯಿಸಿ, ದಿ ವಕೀಲರ ಅಸೋಸಿಯೇಷನ್ ಬೆಂಗಳೂರು (The Advocates’ Association, Bengaluru) ವತಿಯಿಂದ ನಾಳೆ ಅಂದರೆ ನವೆಂಬರ್ 3, 2026ರ ಮಂಗಳವಾರ ರಾಜ್ಯಾದ್ಯಂತ ನ್ಯಾಯಾಲಯ ಕಲಾಪಗಳಿಂದ ವಕೀಲರು ಸಂಪೂರ್ಣವಾಗಿ ದೂರ ಉಳಿದು (Abstain from work) ಪ್ರತಿಭಟಿಸಲು ಕರೆ ನೀಡಲಾಗಿದೆ.


​ಇತ್ತೀಚೆಗೆ ವೈಟ್‌ಫೀಲ್ಡ್‌ನ ವಕೀಲರಾದ ಮಂಜುನಾಥ್ ಮತ್ತು ಅನ್ನಪೂರ್ಣೇಶ್ವರಿ ನಗರದ ಶ್ರೀರಾಮ್ ಅವರ ಬರ್ಬರ ಕೊಲೆ ಹಾಗೂ ಗೌರಿಬಿದನೂರಿನ ವಕೀಲ ವೆಂಕಟರಮಣ ಸನ್ನಕಿ ಅವರ ಮೇಲಿನ ಹತ್ಯೆ ಯತ್ನದ ಘಟನೆಗಳನ್ನು ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ. ವಕೀಲರಿಗೆ ವೃತ್ತಿಯಲ್ಲಿ ಸೂಕ್ತ ಭದ್ರತೆ ಇಲ್ಲದಿರುವುದನ್ನು ವಿರೋಧಿಸಿ ಮತ್ತು ವಕೀಲರ ರಕ್ಷಣಾ ಕಾಯ್ದೆಯನ್ನು ಬಲಪಡಿಸುವಂತೆ ಒತ್ತಾಯಿಸಿ ಅಕ್ಟೋಬರ್ 29ರಂದು ನಡೆದ ಸರ್ವಸಭೆಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
​ಈ ಹಿನ್ನೆಲೆಯಲ್ಲಿ, ನವೆಂಬರ್ 3ರಂದು ಮಂಗಳವಾರದಂದು ಕರ್ತವ್ಯದಿಂದ ದೂರ ಉಳಿಯುವಂತೆ ನಿರ್ಧರಿಸಲಾಗಿದ್ದು, ರಾಜ್ಯದ ಎಲ್ಲಾ ವಕೀಲರ ಸಂಘಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಸಹಕರಿಸುವಂತೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಪ್ರವೀಣ್ ಗೌಡ, ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್. ಹಾಗೂ ಖಚಾಂಚಿ ಶ್ವೇತಾ ರವಿಶಂಕರ್ ಮನವಿ ಮಾಡಿದ್ದಾರೆ

Continue Reading

Bantawala

ವಿಟ್ಲದ ಖ್ಯಾತ ವೈದ್ಯ ಡಾ. ವಿ.ಕೆ. ಹೆಗ್ಡೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Published

on

ವಿಟ್ಲದ ಖ್ಯಾತ ವೈದ್ಯ, ಪುಷ್ಪಾಕ್ ಹೆಲ್ತ್ ಸೆಂಟರ್ ಸಂಸ್ಥಾಪಕ *ಡಾ. ವಿ.ಕೆ. ಹೆಗ್ಡೆ* ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.1987 ರಿಂದ ವಿಟ್ಲದಲ್ಲಿ ನಿರಂತರವಾಗಿ ವೈದ್ಯಕೀಯ ಸೇವೆ ಸಲ್ಲಿಸುತ್ತಾ ಬಂದಿರುವ ಡಾ. ವಿ.ಕೆ. ಹೆಗ್ಡೆ ಅವರ ವೃತ್ತಿಪರ ಪಯಣವು ಗ್ರಾಮೀಣ ಪ್ರದೇಶದಲ್ಲಿ ದೀರ್ಘಕಾಲದ ಪ್ರಾಥಮಿಕ ಆರೋಗ್ಯ ಸೇವೆಯ ನಿರಂತರ ಅಧ್ಯಾಯವಾಗಿದೆ.ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಪರಿಗಣಿಸದೆ, ಜನರ ಆರೋಗ್ಯದ ಅಗತ್ಯಗಳಿಗೆ ಸ್ಪಂದಿಸುವ ಮಾನವೀಯ ಸೇವೆಯಾಗಿ ಅವರು ಅಳವಡಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ಅರೆನಗರ ಪ್ರದೇಶದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ, ವೈಯಕ್ತಿಕ ವೈದ್ಯಕೀಯ ಕಾಳಜಿ ಮತ್ತು ಮಾನವೀಯ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ.ವೈದ್ಯಕೀಯ ವೃತ್ತಿಯ ಜೊತೆಗೆ ರೋಟರಿ ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿಯೂ ದೀರ್ಘಕಾಲದ ಕೊಡುಗೆ ನೀಡಿದ್ದಾರೆ.ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಸಂಕಷ್ಟದ ಅವಧಿಯಲ್ಲಿ ವೈದ್ಯಕೀಯ ಸೇವೆಯ ನಿರಂತರತೆಯನ್ನು ಕಾಪಾಡಿ, ಅಗತ್ಯವಿರುವ ರೋಗಿಗಳಿಗೆ ಸಲಹೆ, ಚಿಕಿತ್ಸೆ, ಮಾರ್ಗದರ್ಶನ ಮತ್ತು ಸೂಕ್ತ ರೆಫರಲ್ ನೆರವು ನೀಡಿದ ಅವರ ಸೇವಾ ಬದ್ಧತೆಯು ಈ ನಾಮನಿರ್ದೇಶನದ ಪ್ರಮುಖ ಅಂಶವಾಗಿದೆ.

Continue Reading

CONGRESS

ಕಸ್ತೂರಿ ರಂಗನ್ ವರದಿ: ಜನರ ಆತಂಕ ಸಂಸದರ ಗಮನಕ್ಕೆ ತರದಿರುವುದು ಕಳವಳಕಾರಿ – ಎಂ. ವೆಂಕಪ್ಪ ಗೌಡ

Published

on

ಸುಳ್ಯ: ಕಸ್ತೂರಿ ರಂಗನ್ ವರದಿಯಿಂದ ಸುಳ್ಯ ತಾಲೂಕಿನ ಹಲವು ಗ್ರಾಮಗಳ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದು, ಜನರ ಬದುಕಿನ ಅಳಿವು-ಉಳಿವಿನ ಈ ಗಂಭೀರ ವಿಚಾರವನ್ನು ಸಂಬಂಧಪಟ್ಟ ಸಂಸದರ ಗಮನಕ್ಕೆ ಪರಿಣಾಮಕಾರಿಯಾಗಿ ತಲುಪಿಸದಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಹೇಳಿದ್ದಾರೆ.

ವರದಿಯಿಂದ ಬಾಧಿತವಾಗಿರುವ ಪ್ರದೇಶಗಳ ಜನರು ಹಲವು ವರ್ಷಗಳಿಂದ ಭಯದಲ್ಲೇ ಜೀವನ ನಡೆಸುತ್ತಿದ್ದು, ಇದರ ವಿರುದ್ಧ ಈಗಾಗಲೇ ಹಲವು ಹಂತದ ಹೋರಾಟಗಳು ನಡೆದಿವೆ. ಜನರ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಕರಡು ಅಧಿಸೂಚನೆಯನ್ನು ಏಳು ಬಾರಿ ತಿರಸ್ಕರಿಸಿ ವಾಪಸ್ ಕಳುಹಿಸಿದೆ. ಆದರೆ, ಈ ವಿಷಯದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರ ಕೇಂದ್ರ ಸರ್ಕಾರದ ಬಳಿಯೇ ಇರುವುದರಿಂದ, ಬಾಧಿತ ಗ್ರಾಮಗಳ ಜನರ ಭವಿಷ್ಯ ಕೇಂದ್ರದ ನಿರ್ಧಾರದ ಮೇಲೆ ನಿಂತಿದೆ. ಆದ್ದರಿಂದ, ಸ್ಥಳೀಯ ಸಂಸದರು ಮತ್ತು ಕೇಂದ್ರ ಸಚಿವರು ಈ ವಿಚಾರದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.

ಇತ್ತೀಚೆಗೆ ಸುಳ್ಯ ತಾಲೂಕಿಗೆ ಆಗಮಿಸಿದ್ದ ಸಂಸದರು ವರದಿ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೂ, ಸ್ಥಳದಲ್ಲಿದ್ದ ಹೋರಾಟಗಾರರು ಅವರಿಗೆ ಜನರ ಸಮಸ್ಯೆಗಳನ್ನು ವಿವರಿಸುವ ಮನವಿ ಸಲ್ಲಿಸದಿರುವುದು ಮತ್ತು ಒತ್ತಡ ಹೇರದಿರುವುದು ಬೇಸರದ ಸಂಗತಿ. ಈ ಹೋರಾಟ ಕೇವಲ ರಾಜ್ಯ ಸರ್ಕಾರಕ್ಕೆ ಮಾತ್ರ ಸೀಮಿತವಾಗಿದೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುತ್ತಿದೆ.

ಕಸ್ತೂರಿ ರಂಗನ್ ವರದಿಯ ವಿಷಯವು ಕೇಂದ್ರ ప్రభుత్వದ ನಿರ್ಧಾರಕ್ಕೆ ಸಂಬಂಧಿಸಿದ ಮಹತ್ವದ ವಿಚಾರವಾಗಿರುವುದರಿಂದ, ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಕೇಂದ್ರದ ಮೇಲೆಯೂ ಒತ್ತಡ ತರಬೇಕು. ಜನಸಾಮಾನ್ಯರ ನೈಜ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಲುಪಿಸುವ ಜವಾಬ್ದಾರಿಯನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ವೆಂಕಪ್ಪ ಗೌಡ ಅವರು ತಿಳಿಸಿದ್ದಾರೆ

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!