education
ಅಪ್ರಾಪ್ತರಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ ಆಗುತ್ತದೆಯೇ ? ಮಕ್ಕಳ ಸುರಕ್ಷತೆಗಾಗಿ ಪರಿಶೀಲಿಸಲು ಕೇಂದ್ರಕ್ಕೆ ನ್ಯಾಯಾಲಯ ಸೂಚನೆ
ಚೆನ್ನೈ: ಇಂದಿನ ಡಿಜಿಟಲ್ ಯುಗದಲ್ಲಿ ಅಪ್ರಾಪ್ತ ವಯಸ್ಕರು ಸ್ಮಾರ್ಟ್ಫೋನ್ ಮತ್ತು ಸೋಶಿಯಲ್ ಮೀಡಿಯಾ ಬಳಕೆಯನ್ನು ಅಪರಿಮಿತವಾಗಿ ಮಾಡುತ್ತಿದ್ದಾರೆ. ಅವರನ್ನು ಸಾಮಾಜಿಕ ಜಾಲತಾಣಗಳಿಂದ ದೂರ ಮಾಡಲು ಪೋಷಕರಿಗೂ ಸಾಧ್ಯವಾಗುತ್ತಿಲ್ಲ. ಅವರಿಗೆ ಮೊಬೈಲ್ ಅನಿವಾರ್ಯ ಎಂಬoತಾಗಿದೆ. ಆದರೆ, ಇದು ಅಪ್ರಾಪ್ತ ವಯಸ್ಕರ ಮೇಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ, ಮತ್ತು ಅದರಿಂದ ಮಕ್ಕಳ ಭವಷ್ಯವೇ ಇಲ್ಲದಂತಾಗಿ ಅದೆಷ್ಟೋ ಕುಟುಂಬಗಳು ಆತಂಕದಲ್ಲಿದ್ದಾರೆ.
ಸೋಶಿಯಲ್ ಮೀಡಿಯಾ ಬಳಕೆಯಿಂದ ಅಪ್ರಾಪ್ತರ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳ ಬಗ್ಗೆ ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಆಸ್ಟ್ರೇಲಿಯಾದಲ್ಲಿ ಜಾರಿಗೆ ಬಂದಿರುವAತೆ, ಭಾರತದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಿಸುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ನ್ಯಾಯಾಲಯದ ಈ ಸಲಹೆಯು ಡಿಜಿಟಲ್ ಜಗತ್ತಿನಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಹೊಸ ಸಂಚಲನ ಮೂಡಿಸಿರುವುದಂತೂ ಸುಳ್ಳಲ್ಲ.
ಆಸ್ಟ್ರೇಲಿಯಾ ಸರ್ಕಾರವು ಇತ್ತೀಚೆಗಷ್ಟೇ (ಡಿಸೆಂಬರ್ 10 ರಿಂದ ಜಾರಿಗೆ ಬರುವಂತೆ) ಜಗತ್ತಿನಲ್ಲೇ ಅತ್ಯಂತ ಕಠಿಣವಾದ ಕಾನೂನನ್ನು ಜಾರಿಗೆ ತಂದಿದೆ. ಇದರ ಅನ್ವಯ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಎಕ್ಸ್ (ಟ್ವಿಟರ್) ನಂತಹ ವೇದಿಕೆಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸೈಬರ್ ಸುರಕ್ಷತೆಯನ್ನು ಕಾಪಾಡುವುದು ಈ ಕಾನೂನಿನ ಮುಖ್ಯ ಉದ್ದೇಶವಾಗಿದೆ.
ಹೈಕೋರ್ಟ್ ವ್ಯಕ್ತಪಡಿಸಿದ ಆತಂಕಗಳು:
ನ್ಯಾಯಮೂರ್ತಿಗಳಾದ ಜಿ. ಜಯಚಂದ್ರನ್ ಮತ್ತು ಕೆ.ಕೆ. ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸುವಾಗ ಈ ಕೆಳಗಿನ ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಿದೆ:
ಅಶ್ಲೀಲತೆಯ ಆತಂಕ: ಅಪ್ರಾಪ್ತರು ಸೋಷಿಯಲ್ ಮೀಡಿಯಾದಲ್ಲಿ ಸುಲಭವಾಗಿ ಅಶ್ಲೀಲ ಕಂಟೆAಟ್ಗಳನ್ನ ನೋಡುತ್ತಾರೆ ಇದರಿಂದ ಅವರ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಇಂಟರ್ನೆಟ್ ಸೇವೆ ಒದಗಿಸುವ ಕಂಪನಿಗಳು ಪೋಷಕ ನಿಯಂತ್ರಣ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬೇಕು. ಆದರೆ, ತಂತ್ರಜ್ಞಾನದಷ್ಟೇ ಪೋಷಕರ ಜವಾಬ್ದಾರಿಯೂ ಇಲ್ಲಿ ಮುಖ್ಯವಾಗಿದೆ ಎಂದು ಕೋರ್ಟ್ ಹೇಳಿದೆ.
ಕಾನೂನಿನ ಅಗತ್ಯತೆ: ಇಂದಿನ ಪರಿಸ್ಥಿತಿಯಲ್ಲಿ ಕೇವಲ ಸಲಹೆಗಳು ಸಾಲದು, ಬದಲಿಗೆ ಬಲವಾದ ಕಾನೂನಿನ ಚೌಕಟ್ಟು ಅಗತ್ಯವಿದೆ ಎಂಬ ಅಭಿಪ್ರಾಯವನ್ನು ಪೀಠ ವ್ಯಕ್ತಪಡಿಸಿದೆ.

ಭಾರತದಲ್ಲಿ ಜಾರಿಯಾಗುವ ಸಾಧ್ಯತೆ:
ಭಾರತವು ವಿಶ್ವದ ಅತಿ ದೊಡ್ಡ ಸೋಷಿಯಲ್ ಮೀಡಿಯಾ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಇಲ್ಲಿ ಇಂತಹ ಕಾನೂನು ಜಾರಿಗೆ ತರುವುದು ತಾಂತ್ರಿಕವಾಗಿ ಸವಾಲಿನ ಕೆಲಸವಾದರೂ, ಮಕ್ಕಳ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಗಂಭೀರ ಆಲೋಚನೆ ನಡೆಸಬೇಕಿದೆ. ವಯಸ್ಸಿನ ದೃಢೀಕರಣ ಪ್ರಕ್ರಿಯೆಯನ್ನು ಕಟ್ಟುನಿಟ್ಟುಗೊಳಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಮಕ್ಕಳ ಸುರಕ್ಷತೆಯ ಹಿತದೃಷ್ಠಿಯಿಂದ ಆಸ್ಟ್ರೇಲಿಯಾ ಸರ್ಕಾರವು ಇತ್ತೀಚೆಗಷ್ಟೇ ಜಾರಿಗೊಳಿಸಿದ ಅತ್ಯಂತ ಕಠಿಣವಾದ ಕಾನೂನು ಭಾರತದಲ್ಲಿ ಜಾರಿಯಾಗುವ ಸಾಧ್ಯತೆ ಇದೆ,
ಮಕ್ಕಳ ಕೈಗೆ ಮೊಬೈಲ್ ನೀಡುವ ಪೋಷಕರು, ಮಕ್ಕಳು ಏನು ನೋಡುತ್ತಿದ್ದಾರೆ ಮತ್ತು ಎಷ್ಟು ಸಮಯ ಮೊಬೈಲ್ನಲ್ಲಿ ಕಳೆಯುತ್ತಿದ್ದಾರೆ ಎಂಬುದರ ಮೇಲೆ ನಿಗಾ ಇಡುವುದು ಕೂಡಾ ಅನಿವಾರ್ಯವಾಗಿದೆ. ನ್ಯಾಯಾಲಯದ ಈ ಸಲಹೆಯು ಡಿಜಿಟಲ್ ಜಗತ್ತಿನಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಹೊಸ ಸಂಚಲನ ಮೂಡಿಸಿದೆ. ಕೊನೆಗೂ ಮಕ್ಕಳ ಕೈಯಿಂದ ಮೊಬೈಲ್ ಕಿತ್ತುಕೊಳ್ಳಲು ಯಾರಿಗೆ ಸಾಧ್ಯ ? ಎಂಬುವುದಕ್ಕೆ ಕಾನೂನೇ ಉತ್ತರ ನೀಡಬೇಕಾಗಿದೆ.
2025 ರಲ್ಲಿ ಜಾಗತಿಕ ಪ್ರವೃತ್ತಿಗಳಂತೆ ಆಸ್ಟ್ರೇಲಿಯಾದ ಮಾದರಿಯನ್ನು ಅನುಸರಿಸಿ, ಇತರ ಹಲವಾರು ದೇಶಗಳು ಇದೇ ರೀತಿಯ ನಿಷೇಧಗಳು ಅಥವಾ ಕಠಿಣ ವಯಸ್ಸಿನ ಮಿತಿಗಳತ್ತ ಸಾಗಿವೆ. ನಾರ್ವೆ ದೇಶವು 15 ವರ್ಷದೊಳಗಿನವರನ್ನು ದೃಢೀಕರಿಸಿದ್ದು, ಒಪ್ಪಿಗೆಯ ವಯಸ್ಸನ್ನು 13 ರಿಂದ 15 ವರ್ಷಕ್ಕೆ ಏರಿಸುವುದು ಸಂಪೂರ್ಣ ನಿಷೇಧ ಪ್ರಗತಿಯಲ್ಲಿದೆ. ಡೆನ್ಮಾರ್ಕ್ ದೇಶವು 15 ವರ್ಷದೊಳಗಿನವರನ್ನು ಪ್ರಸ್ತಾಪಿಸಿದ್ದು, 13-14 ವರ್ಷ ವಯಸ್ಸಿನವರಿಗೆ ಸೀಮಿತ ಪೋಷಕರ ಆಯ್ಕೆಗಳೊಂದಿಗೆ ನಿಷೇಧಕ್ಕಾಗಿ ಯೋಜನೆಗಳು ಪ್ರಗತಿಯಲ್ಲಿದೆ. 15 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಒಪ್ಪಿಗೆ ಅಗತ್ಯವಿದೆ; ಫ್ರಾನ್ಸ್ ದೇಶ ಪ್ರಸ್ತುತ ಸಂಪೂರ್ಣ ನಿಷೇಧದ ಬಗ್ಗೆ ಚರ್ಚಿಸುತ್ತಿದ್ದು, 15 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಒಪ್ಪಿಗೆ ಅಗತ್ಯವಿದೆ ಮಲೇಷ್ಯಾ 16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮವನ್ನು ಪ್ರವೇಶಿಸಲು (ಡಿಜಿಟಲ್ ಗುರುತು) ಪರಿಶೀಲನೆಯ ಅಗತ್ಯವಿದೆ ಎಂಬ ಯೋಜನೆ ಪ್ರಗತಿಯಲ್ಲಿದೆ. ಯುನೈಟೆಡ್ ಸ್ಟೇಟ್ಸ್ 13–16 ವರ್ಷದೊಳಗಿನವರನ್ನು ನಿಷೇಧಿಸಲು ಮತ್ತು 17 ವರ್ಷದೊಳಗಿನವರಿಗೆ ಅಲ್ಗಾರಿದಮ್ಗಳನ್ನು ನಿಲ್ಲಿಸಲು ಕಿಡ್ಸ್ ಆಫ್ ಸೋಶಿಯಲ್ ಮೀಡಿಯಾ ಕಾಯ್ದೆಯನ್ನು ಫೆಡರಲ್ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ.
Bantawala
ಕನ್ಯಾನ ಸರ್ಕಾರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ
ಕನ್ಯಾನ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ (IQAC) ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಅವಕಾಶಗಳು’ ಎಂಬ ವಿಷಯದ ಕುರಿತು ಇತ್ತೀಚೆಗೆ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಕಾಲೇಜಿನ ನಿಕಟಪೂರ್ವ ಉಪನ್ಯಾಸಕ ಕಿರಣ್ ಪ್ರಸಾದ್ ಅವರು, “ನಮ್ಮ ಬದುಕಿನ ಪಥವನ್ನು ರೂಪಿಸಿಕೊಳ್ಳಬೇಕಾದವರು ನಾವೇ. ಆದ್ದರಿಂದ ನಮಗೆ ಸಿಗುವ ಪ್ರತಿಯೊಂದು ಸಣ್ಣ ಅವಕಾಶವನ್ನೂ ಸದುಪಯೋಗ ಪಡಿಸಿಕೊಳ್ಳಬೇಕು,” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅಲ್ಲದೆ, ವಿವಿಧ ಉದ್ಯೋಗಾವಕಾಶಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಬಗ್ಗೆ ಉಪಯುಕ್ತ ಮಾಹಿತಿಯನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸವಿತಾ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಚೈತ್ರಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿಭಾಗದ ಉಪನ್ಯಾಸಕರು ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿದ್ಯಾರ್ಥಿ ಖಲೀಲ್ ಇಬ್ರಾಹಿಂ ಸ್ವಾಗತಿಸಿ, ಸ್ನೇಹಾ ಎನ್. ವಂದಿಸಿದರು. ಶರಣ್ಯ ಕಾರ್ಯಕ್ರಮ ನಿರೂಪಿಸಿದರೆ, ಇಶ್ಮಿತಾ ಮತ್ತು ಬಳಗದವರು ಪ್ರಾರ್ಥನೆ ನೆರವೇರಿಸಿದರು.
DEATH
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ; ಟ್ಯಾಂಕರ್ ಡಿಕ್ಕಿಯಾಗಿ ವೈದ್ಯಕೀಯ ವಿದ್ಯಾರ್ಥಿನಿ ಸಾವು
ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ಲಾವಣ್ಯ (25) ಮೃತಪಟ್ಟ ವಿದ್ಯಾರ್ಥಿನಿ. ಇವರು ಶಿವಮೊಗ್ಗದಲ್ಲಿ ಅಂತಿಮ ವರ್ಷದ ಎಂಡಿ (MD) ವ್ಯಾಸಂಗ ಮಾಡುತ್ತಿದ್ದರು. ಲಾವಣ್ಯ ಅವರು ತಮ್ಮ ಸಹಪಾಠಿ ಓವೇರಿಯಾ ಅವರೊಂದಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ನೀರು ಪೂರೈಸುತ್ತಿದ್ದ ಟ್ಯಾಂಕರ್ ಲಾರಿಯು ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಕೂಟರ್ನ ಹಿಂಬದಿ ಸವಾರಿಯಾಗಿದ್ದ ಲಾವಣ್ಯ ಅವರು ಕೆಳಕ್ಕೆ ಬಿದ್ದಿದ್ದು, ಟ್ಯಾಂಕರ್ ಚಕ್ರ ಅವರ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತ ಲಾವಣ್ಯ ಅವರು ಪೋಷಕರಿಗೆ ಒಬ್ಬಳೇ ಮಗಳಾಗಿದ್ದು, ವೈದ್ಯಕೀಯ ಶಿಕ್ಷಣ ಮುಗಿಸಿ ಉಜ್ವಲ ಭವಿಷ್ಯದ ಕನಸು ಕಂಡಿದ್ದ ಕುಟುಂಬಕ್ಕೆ ಆಘಾತ ಎದುರಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಓವೇರಿಯಾ ಅವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಲಾವಣ್ಯ ಅವರು ಉಡುಪಿ ಜಿಲ್ಲೆಯ ಕಾರ್ಕಳ ಮೂಲದವರಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ (ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ – SIMS) ಅಂತಿಮ ವರ್ಷದ MD (Post Graduation) ವ್ಯಾಸಂಗ ಮಾಡುತ್ತಿದ್ದರು. ಇವರು ತಮ್ಮ ಪೋಷಕರಿಗೆ ಒಬ್ಬಳೇ ಪುತ್ರಿಯಾಗಿದ್ದರು. ಈ ಘಟನೆ ರಸ್ತೆಯಲ್ಲಿ ನಡೆದಿರುವುದಲ್ಲ, ಬದಲಾಗಿ ನೂರಾರು ರೋಗಿಗಳ ಪ್ರಾಣ ರಕ್ಷಿಸುವ ಮೆಗ್ಗಾನ್ ಆಸ್ಪತ್ರೆಯ ಆವರಣದ ಒಳಗಡೆಯೇ ಸಂಭವಿಸಿದೆ. ಆಸ್ಪತ್ರೆಯಲ್ಲಿ ನಡೆಯುತ್ತಿರುವ ಹೊಸ ಕಟ್ಟಡದ ಕಾಮಗಾರಿಗೆ ನೀರು ಪೂರೈಸಲು ಬಂದಿದ್ದ ಟ್ಯಾಂಕರ್ ವೈದ್ಯಕೀಯ ವಿದ್ಯಾರ್ಥಿನಿಯನ್ನು ಬಲಿ ಪಡೆದಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಲಾವಣ್ಯ ಅವರ ಸ್ನೇಹಿತೆ ಓವೇರಿಯಾ ಕೂಡ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Bantawala
ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಮುಟ್ಟಿನ ನೈರ್ಮಲ್ಯ ಕುರಿತು ಮಾಹಿತಿ ಕಾರ್ಯಕ್ರಮ
ಕಾಲೇಜಿನ ವಿದ್ಯಾರ್ಥಿನಿಯರಲ್ಲಿ ಮುಟ್ಟಿನ ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ‘ಮುಟ್ಟಿನ ನೈರ್ಮಲ್ಯ, ಮಹಿಳೆಯರ ಆರೋಗ್ಯ ಮತ್ತು ಪೋಷಣೆ‘ ಕುರಿತು ಮಾಹಿತಿ ಕಾರ್ಯಕ್ರಮವನ್ನು ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಐಕ್ಯೂಎಸಿ ಮತ್ತು ವಿಮೆನ್ ಸೆಲ್ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿತ್ತು.

ಕನ್ಯಾನ ಪ್ರಾಥಮಿಕ ಅರೋಗ್ಯ ಕೇಂದ್ರದ ಅರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಸೌಮ್ಯ ಎಸ್ ಕೆ ಅವರು ಮುಟ್ಟಿನ ಸ್ವಚ್ಛತೆ, ಅರೋಗ್ಯ ರಕ್ಷಣೆ ಹಾಗೂ ಪೋಷಣೆ ಕುರಿತು ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳಲ್ಲಿ ಅರೋಗ್ಯ ಜಾಗೃತಿಯನ್ನು ಮೂಡಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸವಿತಾ, ಶ್ರೀಮತಿ ಚೈತ್ರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶರಣ್ಯ ಸ್ವಾಗತಿಸಿ, ಶ್ರಾವಣ್ಯ ವಂದಿಸಿ, ಇಶ್ಮಿತಾ ನಿರೂಪಿಸಿ, ಚೇತನಾ ಮತ್ತು ಬಳಗ ಪ್ರಾರ್ಥಿಸಿದರು.
-
crime5 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 days agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
