Dakshina Kannada
ಶ್ರೀ ಸಾಯಿ ಸೇವಾ ಪ್ರತಿಷ್ಠಾನ ರಿ. ದೈಗೋಳಿ, ಮಂಜೇಶ್ವರಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಾಬ್ದಿ ಸಂದರ್ಭದಲ್ಲಿ ನೂತನ ಅಡುಗೆ ಮನೆ ಉದ್ಘಾಟನೆ
ಶ್ರೀ ಸಾಯಿ ಸೇವಾ ಪ್ರತಿಷ್ಠಾನ ರಿ. ದೈಗೋಳಿ, ಮಂಜೇಶ್ವರ ತಾಲೂಕು, ಕಾಸರಗೋಡು ಇದರ ವತಿಯಿಂದ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಾಬ್ದಿ ಸಂದರ್ಭದಲ್ಲಿ ನೂತನ ಅಡುಗೆ ಮನೆ ಉದ್ಘಾಟನೆ ಕಾರ್ಯಕ್ರಮವು ಡಿಸೆಂಬರ್ 28ರಂದು ಭಾನುವಾರ ಬೆಳಿಗ್ಗೆ 8.15ಕ್ಕೆ ಸರಿಯಾಗಿ ಸಾಯಿನಿಕೇತನ ಸೇವಾಶ್ರಮದ ನೂತನ ವಠಾರದಲ್ಲಿ ಜರುಗಲಿದೆ .

ಈ ಭವ್ಯವಾದ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಸರಗೋಡು ಶ್ರೀ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಗಳು ನೆರವೇರಿಸಲಿದ್ದಾರೆ. ಉಪ್ಪಳ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮಿಗಳು ದಿವ್ಯ ಉಪಸ್ಥಿತಿ ಮತ್ತು ಆಶೀರ್ವಚನ ಮಾಡಲಿದ್ದಾರೆ.
ಈ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಕೇರಳ ಗಡಿನಾಡು ಘಟಕ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ಇವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಸತ್ಯ ಸಾಯಿ ಲೋಕಸೇವಾ ಸಂಸ್ಥೆಗಳು, ಸತ್ಯಸಾಯಿ ವಿಹಾರ ಅಳಿಕೆ ಇದರ ಕಾರ್ಯದರ್ಶಿಗಳಾದಂತಹ ಶ್ರೀ ಚಂದ್ರಶೇಖರ್ ಭಟ್ , ಶ್ರೀ ಸತ್ಯಸಾಯಿ ಸೇವಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಸನ್ನ ಭಟ್ ಬಲ್ನಾಡು, ಮತ್ತು ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಮಂಜೇಶ್ವರ ಇದರ ಯೋಜನಾಧಿಕಾರಿಗಳಾದ ಶ್ರೀಮತಿ ಶಶಿಕಲಾ ಸುವರ್ಣ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಆಶ್ರಮ ಕಟ್ಟಡದ ದಾನಿಗಳಿಗೆ ಪುರಸ್ಕಾರ ಕಾರ್ಯಕ್ರಮವು ನಡೆಯಲಿದ್ದು, ಈ ವೇದಿಕೆಯಲ್ಲಿ ಕರ್ನಾಟಕ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಬಿ. ಎಸ್. ರಾಜ, ಶ್ರೀಮತಿ ಸಾಧನ ಮತ್ತು ಶ್ರೀ ಮಹಾಬಲೇಶ್ವರ ಭಟ್ ಎಡಕ್ಕಾನ, ಡಾ. ಪವಿತ್ರ ಮತ್ತು ಡಾ. ಗಣೇಶ್ ಎಚ್. ಕೆ. ಮಂಗಳೂರು, ಶ್ರೀಮತಿ ಪದ್ಮನಯನ ಮತ್ತು ಶ್ರೀ ಶಂಕರನಾರಾಯಣ ಉಡುಪ ವಾಣಿ ನಗರ, ಡಾ. ಪ್ರಸನ್ನ ಲಕ್ಷಿ ಮತ್ತು ಡಾ. ಶ್ರೀ ಕೃಷ್ಣ ಭಟ್ ಉತ್ತರಕೊಡಂಗೆ, ಶ್ರೀಮತಿ ಸಾವಿತ್ರಿ ಮತ್ತು ಶ್ರೀ ಶಂಕರ ಭಟ್ ಬೀಡುಬೈಲು ಮಂಗಳೂರು, ಶ್ರೀಮತಿ ಸರಸ್ವತಿ, ನವಚೇತನ ಹಿರಿಯ ನಾಗರಿಕ ಬಡಾವಣೆ ಪುತ್ತೂರು, ಶ್ರೀಮತಿ ನಾಗವೇಣಿ ಮತ್ತು ಶ್ರೀ ವೆಂಕಟೇಶ್ವರ ಭಟ್ ಬಜೆ ದೈಗೋಳಿ ಇವರನ್ನು ಪುರಸ್ಕರಿಸುವ ಕಾರ್ಯಕ್ರಮ ನಡೆಯಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಮಾರಿ ಸಾನ್ವಿ ಜಿ. ಮತ್ತು ಸಮನ್ವಿ.ಜಿ.ಯವರಿಂದ ನೃತ್ಯ ಕಾರ್ಯಕ್ರಮ ಮತ್ತು ಶ್ರೀಮತಿ ನಯನ ಗೌರಿ ಸೇರಾಜೆ ಮತ್ತು ಬಳಗದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಸಾಯಿ ಸೇವಾ ಪ್ರತಿಷ್ಠಾನ ಸರ್ವರಿಗೂ ಆತ್ಮೀಯ ಸ್ವಾಗತವನ್ನು ಬಯಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
award
ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕೆ. ಮತ್ತು ಎಸಿಪಿ ನಜ್ಮಾ ಫಾರೂಕಿ ಸೇರಿದಂತೆ ಜಿಲ್ಲೆಯ ಹಲವು ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕದ ಗೌರವ
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ (SP) ಡಾ. ಅರುಣ್ ಕೆ. ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ. ಅವರೊಂದಿಗೆ ಮಂಗಳೂರು ನಗರದ ಸಂಚಾರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ (ACP) ನಜ್ಮಾ ಫಾರೂಕಿ ಅವರಿಗೂ ಚಿನ್ನದ ಪದಕ ಪ್ರಕಟಗೊಂಡಿದೆ.

ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕದ ಗರಿ ಪ್ರಕಟಗೊಂಡಿದ್ದು, ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವವನ್ನು ಘೋಷಿಸಿದೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸ್ಪೆಷಲ್ ಎಆರ್‌ಎಸ್‌ಐ, 7ನೇ ಪಡೆ ಕೆಎಸ್‌ಆರ್‌ಪಿಯ ಕೆ.ಎಂ. ಶಿವಶೇಖರ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಡಿಎಆರ್ ವಿಭಾಗದ ಎಎಸ್‌ಐ ತಿಲಕ್ ರಾಜ್ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರಲ್ಲದೆ, ಬಂಟ್ವಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಇರ್ಷಾದ್ ಪಿ. , ಮಂಗಳೂರು ನಗರದ ಊರ್ವ ಪೊಲೀಸ್ ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಲಲಿತಾಲಕ್ಷ್ಮಿ , ಬೆಳ್ತಂಗಡಿ ಗ್ರಾಮಾಂತರ ಠಾಣೆಯ ವಿಜಯ ಕುಮಾರ್ ರೈ , ಕಂಕನಾಡಿ ನಗರ ಠಾಣೆಯ ಜಯಾನಂದ ಎನ್., ಮತ್ತು ಮಂಗಳೂರು ಸೈಬರ್ ಕ್ರೈಂ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ಗಳಾದ ಮಣಿ ಎಂ.ಎನ್. ಹಾಗೂ ಸತೀಶ್ ಅವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಈ ಪದಕ ಪ್ರದಾನ ಸಮಾರಂಭವು ಏಪ್ರಿಲ್ 02, 2026 ರಂದು ಬೆಂಗಳೂರಿನಲ್ಲಿ ಜರುಗಲಿದೆ. ಈ ಹಿನ್ನೆಲೆಯಲ್ಲಿ ಪದಕ ವಿಜೇತ ಅಧಿಕಾರಿಗಳು ಮಾರ್ಚ್ 29 ರಿಂದಲೇ ಬೆಂಗಳೂರಿನ ಕೆಎಸ್‌ಆರ್‌ಪಿ 3ನೇ ಪಡೆಯಲ್ಲಿ ನಡೆಯುವ ಪೂರ್ವಾಭ್ಯಾಸದಲ್ಲಿ ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರ ಕಚೇರಿ ತಿಳಿಸಿದೆ.
accident
ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್ ಭೀಕರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಧಕ್ಕೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದ ಆರಿಫ್, ಪ್ರತಿದಿನದಂತೆ ಇಂದು ಮುಂಜಾನೆ ತನ್ನ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂದು ದುಷ್ಕರ್ಮಿಗಳು ಆರಿಫ್ ಗಾಗಿ ಫೈಓವರ್ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್‌ನಲ್ಲಿ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದಾಗ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅತಿ ವೇಗವಾಗಿ ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆರಿಫ್ ರಸ್ತೆಗೆ ಬೀಳುತ್ತಿದ್ದಂತೆ, ಕಾರಿನಿಂದ ಇಳಿದು ಬಂದ ತಂಡವು ತಲವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ತಲೆ ಮತ್ತು ದೇಹದ ಭಾಗಕ್ಕೆ ಮನಬಂದಂತೆ ಕಡಿದು ಸಿನಿಮೀಯ ರೀತಿಯಲ್ಲಿ ಕೊಲೆಗೈದು ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದಾಗಿ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ತೊಡಗಿಸಿ ಕೊಂಡಿದ್ದ ಆರಿಫ್ ನನ್ನು ವೈಯಕ್ತಿಕ ದ್ವೇಷ ದಿಂದ ಹತ್ಯೆ ಗೈದಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ.ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ.

2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆತನ ಮೇಲೆ ಒಮ್ಮೆ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣದಲ್ಲಿ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು. ಹಳೆಯ ವೈಯಕ್ತಿಕ ದ್ವೇಷವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.’ ಹತ್ಯೆಗೆ ಸ್ಪಷ್ಟ ಕಾರಣ ಏನೆಂಬುದು ಪೊಲೀಸರ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಸದ್ಯಕ್ಕೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

cyber crime
AI ತಂತ್ರಜ್ಞಾನ ಬಳಸಿ ಕೋಮುದ್ವೇಷ ಹರಡುವ ವಿಡಿಯೋ ಹಂಚಿಕೆ: ಮಂಗಳೂರಿನ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ
ಮಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಈತ ಫೇಸ್‌ಬುಕ್‌ನಲ್ಲಿ “ನಝೀರ ಮಂಗಳೂರು” ಎಂಬ ಹೆಸರಿನ ಖಾತೆಯ ಮೂಲಕ ವಿವಾದಾತ್ಮಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ.
2025ರ ಅಕ್ಟೋಬರ್‌ನಲ್ಲಿ ಆರೋಪಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ AI ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾದ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಇದು ಸಮಾಜದಲ್ಲಿ ಶಾಂತಿ ಕದಡುವ ಮತ್ತು ಕೋಮು ಸಂಘರ್ಷಕ್ಕೆ ಪ್ರಚೋದಿಸುವ ಉದ್ದೇಶ ಹೊಂದಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196, 353(1), ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.
ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 22, 2026 ರಂದು ಬೆಂಗಳೂರಿನಲ್ಲಿ ಆತನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆತನನ್ನು ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
-
crime1 day agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
