Connect with us

Bantawala

ಬ್ರಹ್ಮರಕೂಟ್ಲು ಟೋಲ್ ಪ್ಲಾಜಾಗೆ ಹಾನಿ ಸಿಬ್ಬಂದಿ ಮೇಲೆ ಹಲ್ಲೆ..ಲಾರಿ ಚಾಲಕ, ಕ್ಲೀನರ್ ಬಂಧನ.

Published

on


ಟೋಲ್ ಹಣ ಕೇಳಿದ್ದಕ್ಕೆ ಗೇಟಿಗೆ ಹಾನಿ ಮಾಡಿ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಚಾಲಕ ಮತ್ತು ಕ್ಲೀನರ್ ನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.‌
ಚಿಕ್ಕಮಗಳೂರು ಮೂಲದ ಭರತ್(23) ಮತ್ತು ತೇಜಸ್ (26)ಬಂಧಿತ ಆರೋಪಿಗಳು.


ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭ ಕೆಎ 18 ಸಿ 3048ಸಂಖ್ಯೆಯ ಲಾರಿಯೊಂದು ವಿರುದ್ಧ ದಿಕ್ಕಿನಿಂದ ಬಂದಾಗ ಸ್ಥಳದಲ್ಲಿದ್ದ ಸಿಬ್ಬಂದಿಗಳು ಟೋಲ್ ನೀಡುವಂತೆ ಕೇಳಿದ್ದರು. ಹಣ ನೀಡಲು ನಿರಾಕರಿಸಿದ ಚಾಲಕ ಲಾರಿಯನ್ನು ಮುಂದಕ್ಕೆ ಚಲಾಯಿಸಿ ಗೇಟಿಗೆ ಹಾನಿ ಮಾಡಿದ್ದಾರೆ. ತಡೆಯಲು ಬಂದ ಸಿಬ್ಬಂದಿಗಳಾದ ಅಂಕಿತ್ ಮತ್ತು ರೋಹಿತ್ ಎಂಬಿಬ್ಬರಿಗೆ ಅವಾಚ್ಯವಾಗಿ ನಿಂದಿಸಿದ ಚಾಲಕ ಮತ್ತು ಕ್ಲೀನರ್ ಮನಬಂದಂತೆ ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ವಿವರಿಸಿದ್ದಾರೆ. ಅದೇ ಸಂದರ್ಭ ಇನ್ನೊಂದು ಪಿಕಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದುಕೊಂಡು ಬಂದ ಆರೋಪಿಗಳು ಟೋಲ್ ಬೂತ್ ಒಳಗಡೆ ಪ್ರವೇಶಿಸಿ ಇಬ್ಬರು ಟೋಲ್ ಸಿಬ್ಬಂದಿಗಳ ಮೇಲೆ ಪುನಃ ಹಲ್ಲೆ ನಡೆಸಿದ್ದಾರೆಂದು ಗಾಯಾಳುಗಳು ವಿವರಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ ಕ್ರ : 154/2925 ಕಲಂ: 329(3), 351(2), 352, 115(2), 118(1), 324(2), r/w 3(5) BNS-2923ರಂತೆ ಮತ್ತು ಕಲಂ: 184(ಈ) ಐಎಂವಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

Continue Reading
Advertisement

Bantawala

ಐಟಿಐ ವಿದ್ಯಾರ್ಥಿಗಳ ಬಡಿದಾಟ; ಇಬ್ಬರಿಗೆ ಚೂರಿ ಇರಿತ; ವಿಟ್ಲ ಪೊಲೀಸರ ವಶದಲ್ಲಿ ಆರೋಪಿ ವಿದ್ಯಾರ್ಥಿ..

Published

on

ವಿಟ್ಲದ ಖಾಸಗಿ ಐಟಿಐ ವಿದ್ಯಾಸಂಸ್ಥೆಯಲ್ಲಿ ಒಂದೇ ತರಗತಿಯ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಬಡಿದಾಟ ನಡೆದಿದ್ದು ಮುಂದುವರಿದ ಭಾಗವಾಗಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ.


ಪ್ರಥಮ ವರ್ಷದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಹಾನ್(18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜ್ಞೇಶ್ (18) ಎಂಬಿಬ್ಬರ ಮೇಲೆ ಅದೇ ತರಗತಿಯ ವಿಟ್ಲ ನಿವಾಸಿ ಹೇಮಂತ್ (18) ಎಂಬಾತ ಚೂರಿಯಿಂದ ಇರಿದು ಘಾಸಿಗೊಳಿಸಿದ್ದಾನೆ.


ಫುಲ್ ಶೇವ್ ಮಾಡಿಕೊಂಡು ತರಗತಿ ಬರುತ್ತಿದ್ದ ಮಹಮ್ಮದ್ ರಿಹಾನ್ ನನ್ನು ಕೆಲದಿನಗಳಿಂದ ಹೇಮಂತ್ ತಮಾಷೆ ಮಾಡುತ್ತಾ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದನೆನ್ನಲಾಗಿದೆ.

ಈ ಬಗ್ಗೆ ಎರಡು, ಮೂರು ದಿನಗಳಿಂದ ಮೊಹಮ್ಮದ್ ರಿಹಾನ್ ಹೇಮಂತ್ ನಲ್ಲಿ ತನ್ನನ್ನು ಗೇಲಿ ಮಾಡದಂತೆ ವಿನಂತಿಸುತ್ತಿದ್ದ. ಆದರೂ ಆತ ಮುಂದುವರಿಸಿದ್ದು ಇಂದು ಬೆಳಗ್ಗೆ ಮತ್ತೆ ಗೇಲಿ ಮಾಡಿದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತೆನ್ನಲಾಗಿದೆ.

ಇದೇ ಮತ್ತಷ್ಟು ಮುಂದುವರಿದು ತರಗತಿಯೊಳಗೆ ಪರಸ್ಪರ ನೂಕಾಟ, ತಳ್ಳಾಟ ನಡೆದು ಆಕ್ರೋಶಗೊಂಡ ಹೇಮಂತ್ ತನ್ನಲ್ಲಿದ್ದ ಚೂರಿಯಿಂದ ಮಹಮ್ಮದ್ ರಿಹಾನ್ ಹೊಟ್ಟೆಯ ಹಿಂಭಾಗಕ್ಕೆ ಇರಿದಿದ್ದಾನೆ. ತಡೆಯಲು ಹೋದ ಅದೇ ತರಗತಿಯ ವಿದ್ಯಾರ್ಥಿ ದೈಗೋಳಿ ನಿವಾಸಿ ಯಜ್ಞೇಶ್ ಎಂಬಾತನ ತೊಡೆಗೂ ಚೂರಿ ಇರಿದಿದ್ದಾನೆ.

ಗಾಯಾಳುಗಳಿಬ್ಬರನ್ನೂ ವಿಟ್ಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಿಹಾನ್ ಗೆ ಹನ್ನೊಂದು ಹೊಲಿಗೆ ಹಾಕಲಾಗಿದ್ದು, ಮತ್ತೋರ್ವ ಗಾಯಾಳು ಯಜ್ಞೇಶ್ ಗೆ ನಾಲ್ಕು ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

Bantawala

ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ

Published

on

ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.


ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಬಡ ಕಾರ್ಮಿಕೆ ಗಾರ್ಬಲ್‌ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

Continue Reading

accident

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..

Published

on

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.


ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.

Continue Reading

Trending

Copyright © 2025 Deevatige