Connect with us

Uncategorized

ನಾರ್ಶ ರಹ್ಮಾನಿಯ ಜುಮಾ‌ ಮಸೀದಿಯ ಖಾಝಿಯಾಗಿ, ಇಂಡಿಯನ್ ಗ್ರ್ಯಾಂಡ್ ಮುಫ್ತಿ, ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ನಾಳೆ ಅಧಿಕಾರ ಸ್ವೀಕಾರ.

Published

on

ಬಂಟ್ವಾಳ : ತಾಲೂಕಿನ ಕೊಳ್ನಾಡು ಗ್ರಾಮದ ರಹ್ಮಾನಿಯ ಜುಮಾ ಮಸೀದಿ ನಾರ್ಶ ಇಲ್ಲಿನ 84 ಜಮಾಅತ್ ಸದಸ್ಯರನ್ನು ಹೊಂದಿರುವ ಮಹಲ್ಲಿಗೆ ಹಲವಾರು ಮಹಲ್ಲಿನ ಖಾಝಿ, 1000ಕ್ಕಿಂತಲೂ ಅಧಿಕ ಮಸೀದಿ ಮತ್ತು ವಿದ್ಯಾಭ್ಯಾಸ ಕೇಂದ್ರದ ರೂವಾರಿಗಳೂ, ಕೇರಳದ ಕೋಝಿಕೋಡಲ್ಲಿ 125 ಎಕ್ರೆ ಜಾಗದಲ್ಲಿ ನಾಲೇಜ್ ಸಿಟಿ, ಶರಿಯ ಸಿಟಿ, ಯೂನಿಯನ್ ಮೆಡಿಕಲ್ ಕಾಲೇಜು ಸ್ಥಾಪಿಸುತ್ತಿರುವ ರೂವಾರಿಗಳೂ, ಅನಾಥ ಮಕ್ಕಳನ್ನು ದತ್ತು ಪಡೆದು ಅವರಿಗೆ ಆಶ್ರಯ ನೀಡಿ ಅವರಿಗೆ ಉತ್ತಮ ವಿದ್ಯಾಭ್ಯಾಸ ನೀಡುತ್ತಿರುವ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ನಾರ್ಶ ರಹ್ಮಾನಿಯ ಜುಮಾ ಮಸೀದಿಯ ಖಾಝಿಯಾಗಿ ದಿನಾಂಕ:30/12/2025ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ,

ಜಮಾಅತ್ ಸಮಿತಿಯ ಅಧ್ಯಕ್ಷರಾದ ಹಮೀದ್ ನಾರ್ಶ ರವರ ನೇತೃತ್ವದಲ್ಲಿ ನಾಳೆ ಮರ್ಕಝ್ಗೆ ತೆರಳಿ ಅಂಗೀಕಾರ ಪಡೆಯುವ ಕಾರ್ಯಕ್ರಮ ನಡೆಯಲಿದೆ, ನಾಳಿನ ಖಾಝಿ ಅಂಗೀಕಾರ ಕಾರ್ಯಕ್ರಮದಲ್ಲಿ ಜಮಾಅತ್ ಖತೀಬ್ ಅಲ್ ಹಾಜ್ ಸುಲೈಮಾನ್ ಮುಸ್ಲಿಯಾರ್ ಮತ್ತು ಜಮಾಅತ್ ಆಡಳಿತ ಸಮಿತಿಯ ಪದಾಧಿಕಾರಿಗಳು, ಜಮಾಅತ್ ಸದಸ್ಯರು ಭಾಗವಹಿಲಿದ್ದಾರೆ ಎಂದು ಜಮಾಅತ್ ಆಡಳಿತ ಸಮಿತಿ ಕಾರ್ಯದರ್ಶಿ ಖಾದರ್ ನಾರ್ಶ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Mangaluru

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ‘ಬ್ಯಾರಿಸ್ಟರ್‌ ಅತ್ತಾವರ ಎಲ್ಲಪ್ಪ’ ಹೆಸರಿಡಲು ಮನವಿ

Published

on

ಮಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದ ಹಾಗೂ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದ ನಿರ್ಮಾಣಕ್ಕೆ ಸ್ವಂತ ಜಾಗವನ್ನು ದಾನವಾಗಿ ನೀಡಿದ ಮಹಾನ್ ದೇಶಪ್ರೇಮಿ ಬ್ಯಾರಿಸ್ಟರ್‌ ಅತ್ತಾವರ ಎಲ್ಲಪ್ಪ ಅವರ ಹೆಸರನ್ನು ಮಂಗಳೂರು ಸೆಂಟ್ರಲ್‌ ರೈಲ್ವೇ ಸ್ಟೇಷನ್‌ಗೆ ಮರುನಾಮಕರಣ ಮಾಡಬೇಕು ಹಾಗೂ ನಿಲ್ದಾಣದ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಕರ್ನಾಟಕ ಸರಕಾರದ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಮೇಯರ್ ಅನಂತ್‌ ಮೈಸೂರು ಆಗ್ರಹಿಸಿದ್ದಾರೆ.

ಆಗಸ್ಟ್ 2ರಂದು ಸಂಜೆ ಮಂಗಳೂರು ಸೆಂಟ್ರಲ್‌ ರೈಲ್ವೇ ಸ್ಟೇಷನ್‌ಗೆ ಭೇಟಿ ನೀಡಿದ ಅವರು, ಗಾಣಿಗ ಸಮಾಜದ ಪ್ರಮುಖ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ರೈಲ್ವೇ ಕ್ಷೇತ್ರಾಧಿಕಾರಿ ರಾಕೇಶ್‌ ಕುಮಾರ್‌ ಪಾರಕ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅನಂತ್‌ ಮೈಸೂರು, “ಬ್ಯಾರಿಸ್ಟರ್‌ ಅತ್ತಾವರ ಎಲ್ಲಪ್ಪನವರು ಗಾಣಿಗ (ಸಫಲಿಗ) ಸಮಾಜಕ್ಕೆ ಸೇರಿದವರಾಗಿದ್ದು, ದೇಶಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡವರು. ನಿಲ್ದಾಣ ನಿರ್ಮಾಣಕ್ಕೆ ತಮ್ಮದೇ ಜಾಗವನ್ನು ಕೊಡುಗೆಯಾಗಿ ನೀಡಿದ ಅವರ ಸ್ಮರಣಾರ್ಥ ನಿಲ್ದಾಣಕ್ಕೆ ಅವರ ಹೆಸರನ್ನಿಟ್ಟು, ಪ್ರತಿಮೆ ನಿರ್ಮಿಸುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವ,” ಎಂದರು.

ಪಠ್ಯಪುಸ್ತಕದಲ್ಲೂ ವಿಷಯ ಸೇರ್ಪಡೆಯಾಗಲಿ: ಮೋಹಿತ್‌

ಅಜೇಯ ಭಾರತ ಸಂಸ್ಥಾಪಕ ಮೋಹಿತ್‌ ಬೆಂಗಳೂರು ಮಾತನಾಡಿ, “ಅತ್ತಾವರ ಎಲ್ಲಪ್ಪನವರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ, ಇಡೀ ದೇಶ ಹೆಮ್ಮೆ ಪಡುವ ವ್ಯಕ್ತಿತ್ವ. ನಿಲ್ದಾಣಕ್ಕೆ ಹೆಸರಿಡುವ ಜತೆಗೆ ಶಾಲಾ ಪಠ್ಯಪುಸ್ತಕಗಳಲ್ಲೂ ಅವರ ಹೋರಾಟದ ಹಾದಿಯ ವಿಷಯಗಳನ್ನು ಸೇರ್ಪಡೆಗೊಳಿಸಬೇಕು. ಈ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರೊಂದಿಗೆ ಚರ್ಚಿಸಲಾಗಿದ್ದು, ಶೀಘ್ರವೇ ಕೇಂದ್ರ ರೈಲ್ವೇ ಸಚಿವ ವಿ. ಸೋಮಣ್ಣ ಅವರ ಗಮನಕ್ಕೂ ತರಲಾಗುವುದು,” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ಯಾರಿಸ್ಟರ್‌ ಎಲ್ಲಪ್ಪ ಅವರ ಸೋದರಳಿಯ ಪ್ರಭಾಕರ್‌ ದಾಸ್‌, ದ.ಕ. ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷ ವಿಶ್ವಾಸ್‌ ಕುಮಾರ್‌ ದಾಸ್‌, ಪುತ್ತೂರು ಗಾಣಿಗ ಯಾನೆ ಸಫಲಿಗರ ಸೇವಾ ಸಂಘದ ಲಕ್ಷ್ಮೀ ಪ್ರಸಾದ್‌ ಬೆಟ್ಟ, ಪ್ರೊ| ಸುರೇಶ್‌ ಕಟೀಲು,‌ ಕಮಲಾಕ್ಷ ಉಳ್ಳಾಲ್‌, ರವೀಂದ್ರ ಟಿ. ಮಂಗಳೂರು, ಭರತ್‌ ಕುಮಾರ್‌ ಅತ್ತಾವರ, ಹರೀಶ್‌ ಮಂಜೇಶ್ವರ, ತಾರನಾಥ ಸುವರ್ಣ, ಪದ್ಮನಾಭ, ಕಾರ್ತಿಕ್‌ ಕಬಕ, ಪ್ರವನ್‌ ಮೆಲ್ಕಾರ್‌ ಉಪಸ್ಥಿತರಿದ್ದರು.

Continue Reading

CONGRESS

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಕಾಂಗ್ರೆಸ್ ಹೈಕಮಾಂಡ್‌ನಿಂದ ಅಂತಿಮ ಪಟ್ಟಿ ಬಿಡುಗಡೆ!

Published

on

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಂತಿಮ ಅನುಮೋದಿತ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿರುವ ಈ ಪಟ್ಟಿಯಲ್ಲಿ 20 ನೂತನ ಸಚಿವರ ಹೆಸರುಗಳು ಹಾಗೂ ಶಾಸಕಾಂಗದ ಪ್ರಮುಖ ಹುದ್ದೆಗಳ ಹೆಸರುಗಳನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

ಸಂಪುಟ ಸೇರಲಿರುವ 20 ನೂತನ ಸಚಿವರ ಅಧಿಕೃತ ಪಟ್ಟಿ:

  1. ಪಿ. ಎಂ. ನರೇಂದ್ರಸ್ವಾಮಿ
  2. ಶಿವರಾಜ್ ತಂಗಡಗಿ
  3. ರುದ್ರಪ್ಪ ಲಮಾಣಿ
  4. ಕೆ. ಎಸ್. ಬಸವಂತಪ್ಪ
  5. ಬಿ. ನಾಗೇಂದ್ರ
  6. ಟಿ. ರಘುಮೂರ್ತಿ
  7. ಬಿ. ಝಡ್. ಝಮೀರ್ ಅಹ್ಮದ್ ಖಾನ್
  8. ರಿಜ್ವಾನ್ ಅರ್ಷದ್
  9. ಸಂತೋಷ್ ಲಾಡ್
  10. ಮಧು ಬಂಗಾರಪ್ಪ
  11. ಪುಟ್ಟರಂಗಶೆಟ್ಟಿ
  12. ಎಸ್‌ ಎಸ್‌ ಮಲ್ಲಿಕಾರ್ಜುನ
  13. ಡಾ. ಅಜಯ್ ಸಿಂಗ್
  14. ಎನ್. ಚೆಲುವರಾಯಸ್ವಾಮಿ
  15. ಕೆ. ಎಂ. ಶಿವಲಿಂಗೇಗೌಡ
  16. ಹೆಚ್. ಸಿ. ಬಾಲಕೃಷ್ಣ
  17. ಗಾಯತ್ರಿ ಶಾಂತೇಗೌಡ
  18. ಬಸವರಾಜ ರಾಯರೆಡ್ಡಿ
  19. ವಿಜಯಾನಂದ ಕಾಶಪ್ಪನವರ್
  20. ಲಕ್ಷ್ಮಣ ಸವದಿ

ಶಾಸಕಾಂಗ ಹಾಗೂ ಮೇಲ್ಮನೆಯ ಪ್ರಮುಖ ಹುದ್ದೆಗಳ ನೇಮಕಾತಿ:

ಸಚಿವರ ಪಟ್ಟಿಯ ಜೊತೆಗೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಪ್ರಮುಖ ಹುದ್ದೆಗಳಿಗೂ ಅಭ್ಯರ್ಥಿಗಳನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ:

  • ವಿಧಾನಸಭಾ ಸ್ಪೀಕರ್ (ಸಭಾಧ್ಯಕ್ಷರು): ಜಿ. ಎಸ್. ಪಾಟೀಲ್
  • ವಿಧಾನಸಭಾ ಡೆಪ್ಯೂಟಿ ಸ್ಪೀಕರ್ (ಉಪಸಭಾಧ್ಯಕ್ಷರು): ಎ. ಎಸ್. ಪೊನ್ನಣ್ಣ
  • ವಿಧಾನಪರಿಷತ್ ಸಭಾಪತಿ: ಸಲೀಂ ಅಹ್ಮದ್
  • ವಿಧಾನಪರಿಷತ್ ಉಪಸಭಾಪತಿ: ಉಮಾಶ್ರೀ

ಈ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಮುದ್ರೆ ಒತ್ತಿದ್ದು, ಶೀಘ್ರದಲ್ಲೇ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ

Continue Reading

crime

ರೆಖ್ಯದಲ್ಲಿ ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ

Published

on

  • ರೆಖ್ಯದ ಮುಚ್ಚಿರಡ್ಡ ಎಂಬಲ್ಲಿ ಘಟನೆ
  • ದಾರಿಯಲ್ಲಿ ರೈನ್‌ಕೋಟ್‌, ಆನೆ ಹೆಜ್ಜೆ ಪತ್ತೆ
  • ಕಣಿವೆಯಲ್ಲಿ ಸಿಕ್ಕ ಮೃತದೇಹ

ನೆಲ್ಯಾಡಿ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ದಿನಗೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ನಡೆದಿದೆ.

ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಮೃತಪಟ್ಟವರು.

ನೆಡೆಯದ್ದೇನು?: ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಾತ್ರಿಯಾದರೂ ಅವರು ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಅವರು ಧರಿಸಿದ್ದರೆನ್ನಲಾದ ಪ್ಲಾಸ್ಟಿಕ್ ರೈನ್‌ಕೋಟ್ ದಾರಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.

ಅಷ್ಟೇ ಅಲ್ಲದೆ, ಅದರ ಪಕ್ಕದಲ್ಲೇ ಕಾಡಾನೆಯ ಹೆಜ್ಜೆ ಗುರುತುಗಳೂ ಪತ್ತೆಯಾಗಿದ್ದರಿಂದ ಆನೆ ದಾಳಿ ನಡೆಸಿರುವ ಅನುಮಾನ ಬಲಗೊಂಡಿತ್ತು. ಬಳಿಕ ಸ್ಥಳೀಯರು ಅರಣ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಶೋಧ ಮುಂದುವರಿಸಿದಾಗ ಸಮೀಪದ ಕಣಿವೆಯಲ್ಲಿ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಗಿದೆ.

ಅಧಿಕಾರಿಗಳ ಭೇಟಿ: ವಿಷಯ ತಿಳಿಯುತ್ತಿದ್ದಂತೆ ಭಾನುವಾರ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ., ಉಪವಲಯ ಅರಣ್ಯಾಧಿಕಾರಿಗಳು, ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಗಾಣಿಗೇರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ಅರಸಿನಮಕ್ಕಿ-ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ ಹಾಗೂ ಸದಸ್ಯರು, ಸ್ಥಳೀಯ ಸಾರ್ವಜನಿಕರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.

ಸ್ಥಳದಲ್ಲೇ ಮೃತದೇಹದ ಮಹಜರು ನಡೆಸಿದ ಪೊಲೀಸರು, ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅರಣ್ಯ ಇಲಾಖೆ ಹಾಗೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Continue Reading

Trending

Copyright © 2025 Deevatige

error: Content is protected !!