Connect with us

Bantawala

ವಿಟ್ಲ-ಕಬಕ ಚತುಷ್ಪಥ ರಸ್ತೆಗೆ 10ಕೋಟಿ ಅನುದಾನ, ವಿಟ್ಲಕ್ಕೆ ಅಗ್ನಿಶಾಮಕ ವಾಹನ ಮಂಜೂರು..ಶೀಘ್ರದಲ್ಲೇ ಸ್ಥಳ ಗುರುತಿಸುವಿಕೆ ಕಾರ್ಯ ನಡೆಯಲಿದೆ:-ಸುದ್ಧಿಗೋಷ್ಟಿಯಲ್ಲಿ ಶಾಸಕ ಅಶೋಕ್ ರೈ.

Published

on

ವಿಟ್ಲ: ಪ. ಪಂ ವ್ಯಾಪ್ತಿಯಲ್ಲಿ ವಸತಿ ರಹಿತರು ಮನೆ ಕಟ್ಟಲು ಅರ್ಜಿ ಸಲ್ಲಿಸಿದವರಿಗೆ 2.75 ಸೆಂಟ್ಸ್ ಜಾಗ ರಾಜ್ಯ ಸರಕಾರ ಮಂಜೂರು ಮಾಡಲಿದೆ. ವಿಟ್ಲ-ಕಬಕ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ಹತ್ತು ಕೋಟಿ ಅನುದಾನ ಮತ್ತು ವಿಟ್ಲಕ್ಕೆ ಅಗ್ನಿಶಾಮಕ ವಾಹನ ಮಂಜೂರಾಗಿದೆ ಎಂದು ವಿಟ್ಲದ ನಿರೀಕ್ಷಣಾ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅಶೋಕ್ ರೈ ವಿವರಿಸಿದರು.
ಈ ಹಿಂದೆ ಅರ್ಜಿ ಸಲ್ಲಿಸಿದ ವಸತಿ ರಹಿತ ಕುಟುಂಬಗಳಿಗೆ ಹಿಂದಿನ ರಾಜ್ಯ ಸರಕಾರ 1.38 ಸೆಂಟ್ಸ್ ಸ್ಥಳ ಮಂಜೂರು ಮಾಡಿತ್ತು. ಆದರೆ ಅದರಲ್ಲಿ ವಾಸಕ್ಕೆ ಯೋಗ್ಯವಾದ ಮನೆ ಕಟ್ಟಲು ಅಸಾಧ್ಯವಾದ ಕಾರಣ ಮತ್ತು ಆ ಸ್ಥಳಗಳಿಗೆ ಬ್ಯಾಂಕುಗಳಿಂದ ಸಾಲ ಮಂಜೂರಾಗದ ಕಾರಣ ಅರ್ಜಿದಾರರು ಅದನ್ನು ಕೈಬಿಟ್ಟಿದ್ದರು.


ಈ ಬಗ್ಗೆ ಬಡ ಕುಟುಂಬಗಳ ಕಷ್ಟ ಅರ್ಥೈಸಿಕೊಂಡು ಹಿಂದೆಯೂ ಹಲವಾರು ಬಾರಿ ಧ್ವನಿ ಎತ್ತಿದ್ದೆನು ಎಂದು ಶಾಸಕ ರೈ ಹೇಳಿದರು.
ನಾನು ಶಾಸಕನಾದ ಬಳಿಕ ಕಂದಾಯ ಸಚಿವರಿಗೆ ನಿರಂತರವಾಗಿ ಒತ್ತಡ ಹೇರುತ್ತಾ 94 ಸಿ ಮತ್ತು 94 ಸಿ ಸಿ ಅಡಿ 2.75 ಸೆಂಟ್ಸ್ ಸ್ಥಳ ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ರೈ ಹೇಳಿದರು. ಈ ಹಿಂದೆ ಇಲಾಖೆಯಿಂದ ತಿರಸ್ಕೃತಗೊಂಡಿದ್ದ 4,800 ರಷ್ಟು ಅರ್ಜಿಗಳ ಮರುಪರಿಶೀಲನೆಗೆ ಒತ್ತಾಯಿಸಿದ್ದೇನೆ ಎಂದು ಶಾಸಕರು ಹೇಳಿದರು.
2015ರ ಮೊದಲು ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿದ ಮೂವರಿಗೆ ಸಕ್ರಮವಾಗದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೆಟ್ಟಲೇರಿದ್ದರು. ಇದೀಗ ನ್ಯಾಯಾಲಯದಲ್ಲಿ ಅವರಿಗೆ ಗೆಲುವು ದೊರಕಿದೆ. ಅವರಿಗೆ ಮತ್ತು ಅರ್ಜಿ ಸಲ್ಲಿಸಿದ/ಇನ್ನು ಮುಂದೆ ಸಲ್ಲಿಸುವ ಎಲ್ಲರಿಗೂ ಜಾಗ ಸಕ್ರಮವಾಗಲಿದ್ದು ಶಾಸಕನ ನೆಲೆಯಲ್ಲಿ ಅಂತವರಿಗೆ ಸಹಕಾರ ನೀಡುತ್ತೇನೆಂದು ರೈ ಹೇಳಿದರು.
ರಾಜ್ಯ ಹೆದ್ದಾರಿಯ ವಿಟ್ಲ-ಕಬಕ ಚತುಷ್ಪಥ ರಸ್ತೆ ಅಭಿವೃದ್ಧಿಗೆ ಮೊದಲ ಹಂತದಲ್ಲಿ ಹತ್ತು ಕೋಟಿ ರೂ. ಅನುದಾನ ಮಂಜೂರಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ. ಹೆದ್ದಾರಿ ಇಲಾಖೆಯು ಅದರ ನಿರ್ವಹಣೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಶಾಸಕ ರೈ ಹೇಳಿದರು.


ವಿಟ್ಲ ಸಮುದಾಯ ಆಸ್ಪತ್ರೆ ಹಿಂಬಡ್ತಿ ಹೊಂದಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ ರೈಯವರು..ಈ ಸಾಧ್ಯತೆಯನ್ನು ಸ್ಪಷ್ಟವಾಗಿ ನಿರಾಕರಿಸಿದರು. ಮತ್ತು ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಸಂಖ್ಯೆ ಮತ್ತು ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುವುದು. ಡಯಾಲಿಸಿಸ್ ಘಟಕವನ್ನು ವಿಟ್ಲದಲ್ಲಿ‌ ಶೀಘ್ರವಾಗಿ ಆರಂಭಿಸಲಾಗುವುದು ಎಂದು ಹೇಳಿದ ಶಾಸಕ ರೈಯವರು ವಿಟ್ಲದ ಜನರ ಬಹುಕಾಲದ ಪ್ರಮುಖ ಬೇಡಿಕೆಯಾಗಿದ ಅಗ್ನಿಶಾಮಕ ವಾಹನ ಈಗಾಗಲೇ ಮಂಜೂರಾಗಿದ್ದು ಕೇಂದ್ರ ಸ್ಥಾಪಿಸಲು ಸ್ಥಳ ಗುರುತಿಸುವಿಕೆ ಕಾರ್ಯ ನಡೆಯಲಿದೆ. ಆ ಬಳಿಕ ತುರ್ತು ಸಂದರ್ಭಗಳ ಪರಿಹಾರ ಕಾರ್ಯಗಳಿಗಾಗಿ ವಿಟ್ಲದಲ್ಲಿ‌ ಅಗ್ನಿಶಾಮಕ ವಾಹನ ಕಾರ್ಯಾರಂಭ ಮಾಡಲಿದೆ ಎಂದು ಶಾಸಕ ರೈ ಹೇಳಿದರು.


ಪತ್ರಿಕಾಗೋಷ್ಠಿಯಲ್ಲಿ ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ರಾಮಣ್ಣ ಪಿಲಿಂಜ, ರೂಪಲೇಖಾ ಆಳ್ವ, ಪುತ್ತೂರು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ರೈ ಪೆರ್ನೆ, ವಿಟ್ಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

Continue Reading
Advertisement

Bantawala

ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ

Published

on

ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.


ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಬಡ ಕಾರ್ಮಿಕೆ ಗಾರ್ಬಲ್‌ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

Continue Reading

accident

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..

Published

on

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.


ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.

Continue Reading

Bantawala

ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನಾ ಸಭೆ

Published

on

ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನೆಯ ಸಭೆ ನಡೆಯಿತು.

ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು. ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ ಎಂ ಶೆಟ್ಟಿ ಅಳಕೆಮಜಲು, ಉಪಾಧ್ಯಕ್ಷರಾಗಿ ರೋಹಿಣಿ ರೈ ನೇರಳಕಟ್ಟೆ, ಹಾಗೂ ಚಂದ್ರಹಾಸ ರೈ ಮುಲ್ಕಾಜೆ ಮಾ ಡ, ಕಾರ್ಯದರ್ಶಿಯಾಗಿ ಗಣೇಶ್‌ ರೈ, ಕೋಶಾಧಿಕಾರಿಯಾಗಿ ಧನಂಜಯ ಶೆಟ್ಟಿ ಮುತ್ತೂರು, ಇವರನ್ನು ಟ್ರಸ್ಟಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರನ್ನು ಕುಟುಂಬಿಕರ ಮತ್ತು ಟ್ರಸ್ಟಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Continue Reading

Trending

Copyright © 2025 Deevatige