crime
ಕೋವಿಡ್ ಕಾಲದ ಬಹುಕೋಟಿ ಹಗರಣ: ಸರ್ಕಾರಕ್ಕೆ ನ್ಯಾ. ಡಿ ಕುನ್ಹಾ ‘ಅಂತಿಮ ವರದಿ’ ಸಲ್ಲಿಕೆ; ಮಾಜಿ ಸಿಎಂ ಬಿಎಸ್‌ವೈ, ಶ್ರೀರಾಮುಲುಗೆ ಸಂಕಷ್ಟ?
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/01/covid-deevatige.jpg&description= ಕೋವಿಡ್ ಕಾಲದ ಬಹುಕೋಟಿ ಹಗರಣ: ಸರ್ಕಾರಕ್ಕೆ ನ್ಯಾ. ಡಿ ಕುನ್ಹಾ ‘ಅಂತಿಮ ವರದಿ’ ಸಲ್ಲಿಕೆ; ಮಾಜಿ ಸಿಎಂ ಬಿಎಸ್‌ವೈ, ಶ್ರೀರಾಮುಲುಗೆ ಸಂಕಷ್ಟ?', 'pinterestShare', 'width=750,height=350'); return false;" title="Pin This Post">
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್-19 ಉಪಕರಣಗಳು ಮತ್ತು ಔಷಧಿ ಖರೀದಿಯ ಭಾರೀ ಅಕ್ರಮಕ್ಕೆ ಸಂಬಂಧಿಸಿದಂತೆ, ನ್ಯಾ. ಮೈಕೆಲ್ ಡಿ ಕುನ್ಹಾ ನೇತೃತ್ವದ ತನಿಖಾ ಆಯೋಗವು ತನ್ನ ಅಂತಿಮ ವರದಿಯನ್ನು (Final Report) ಬುಧವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ, ಆಯೋಗದ ಮುಖ್ಯಸ್ಥರಾದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಈ ಮಹತ್ವದ ವರದಿಯನ್ನು ಹಸ್ತಾಂತರಿಸಿದರು.

ವರದಿಯ ಪ್ರಮುಖ ಅಂಶಗಳು:
769 ಕೋಟಿ ರೂ. ಅವ್ಯವಹಾರ?: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಪಿಇ ಕಿಟ್ (PPE Kit) ಮತ್ತು ಇತರೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಬರೋಬ್ಬರಿ 769 ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎಂದು ಆಯೋಗ ಅಂದಾಜಿಸಿದೆ.

ಚೀನಾ ಕಂಪನಿಗಳ ಜತೆ ಡೀಲ್: ಚೀನಾ ಮೂಲದ ಕಂಪನಿಗಳಿಂದ ಪಿಪಿಇ ಕಿಟ್ ಖರೀದಿಸುವಾಗ ದರದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದಲೇ ಈ ಅಕ್ರಮ ಎಸಗಲಾಗಿದ್ದು, ಇದರಿಂದ ಪೂರೈಕೆದಾರರಿಗೆ ಸುಮಾರು 14.21 ಕೋಟಿ ರೂ. ಲಾಭವಾಗಿದೆ ಎಂಬ ಸ್ಫೋಟಕ ಮಾಹಿತಿ ವರದಿಯಲ್ಲಿದೆ.
ಬಿಎಸ್‌ವೈ, ಶ್ರೀರಾಮುಲುಗೆ ಸಂಕಷ್ಟ: ಖರೀದಿಯಲ್ಲಿ ನಡೆದಿರುವ ಅಕ್ರಮ ದೃಢಪಟ್ಟ ಹಿನ್ನೆಲೆಯಲ್ಲಿ, ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ (ಕಾನೂನು ಕ್ರಮಕ್ಕೆ) ಶಿಫಾರಸು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹಿನ್ನೆಲೆ ಏನು?
ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರದ ತನಿಖೆಗಾಗಿ ಸಿದ್ದರಾಮಯ್ಯ ಸರ್ಕಾರವು 2023ರ ಆಗಸ್ಟ್‌ನಲ್ಲಿ ಈ ಆಯೋಗವನ್ನು ರಚಿಸಿತ್ತು. ಆಯೋಗವು ಈಗಾಗಲೇ 2025ರ ಏಪ್ರಿಲ್‌ನಲ್ಲಿ 1,808 ಪುಟಗಳ ಬೃಹತ್ ಎರಡನೇ ಮಧ್ಯಂತರ ವರದಿಯನ್ನು ಸಲ್ಲಿಸಿತ್ತು.

ಈಗಾಗಲೇ ಎರಡು ಮಧ್ಯಂತರ ವರದಿಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಸಚಿವ ಸಂಪುಟವು ತೀರ್ಮಾನಿಸಿದ್ದು, ಪ್ರಸ್ತುತ ಈ ಪ್ರಕರಣದ ತನಿಖೆಯನ್ನು ಸಿಐಡಿ (CID) ಗೆ ವಹಿಸಲಾಗಿದೆ. ಇದೀಗ ಅಂತಿಮ ವರದಿ ಕೂಡ ಸಲ್ಲಿಕೆಯಾಗಿರುವುದರಿಂದ ಸರ್ಕಾರದ ಮುಂದಿನ ನಡೆ ಕುತೂಹಲ ಮೂಡಿಸಿದೆ.
arrest
ಪುಣಚದಲ್ಲಿ ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ, ಸೊತ್ತು ವಶ!
ವಿಟ್ಲ: ಕಾನೂನುಬಾಹಿರವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಪುಣಚ ನಿವಾಸಿಗಳಾದ ದಿವಾಕರ ಪೂಜಾರಿ (46) ಮತ್ತು ಯಶ್ವಂತ್ (34) ಬಂಧಿತ ಆರೋಪಿಗಳಾಗಿದ್ದಾರೆ.
ದಾಳಿಯ ವಿವರ:
ಮೇ 30ರಂದು ರಾತ್ರಿ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಕೋಳಿ ಅಂಕ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ರಾಮಕೃಷ್ಣ ರವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್ಐ ಮತ್ತು ಠಾಣಾ ಸಿಬ್ಬಂದಿಗಳ ತಂಡ ಸ್ಥಳಕ್ಕೆ ಜಂಟಿ ದಾಳಿ ನಡೆಸಿದೆ.
ದಾಳಿಯ ವೇಳೆ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖವಾಗಿ ಸ್ಥಳದಲ್ಲಿದ್ದ 4 ಅಂಕದ ಕೋಳಿಗಳು, ಜೂಜಾಟಕ್ಕೆ ಬಳಸುತ್ತಿದ್ದ ಕೋಳಿ ಕತ್ತಿ (ಬಾಳು), ಇತರೆ ಪರಿಕರಗಳು ಹಾಗೂ ರೂ. 4,145/- ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 119/2026 ರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ: 87, 93, ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ: 3, 11 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ: 112 ರ ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.



crime
ಬೆಳ್ಳಾರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸವಣೂರು ಬಳಿ ಅಕ್ರಮ ಗೋವಧೆ ಅಡ್ಡೆ ಪತ್ತೆ, ಮೂವರ ಬಂಧನ, ಪ್ರಮುಖ ಆರೋಪಿ ಪರಾರಿ!
ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಸಮೀಪದ ಮಾಂತೂರು ಎಂಬಲ್ಲಿ ಶುಕ್ರವಾರ ಸಂಜೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಗೋವಧೆ ಅಡ್ಡೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ತೋಟದ ಮಾಲೀಕ ತಲೆಮರೆಸಿಕೊಂಡಿದ್ದಾನೆ.
ಅಡಿಕೆ ತೋಟದಲ್ಲಿ ನಡೀತಿತ್ತು ಕೃತ್ಯ
ದಿನಾಂಕ 29.05.2026ರಂದು ಸಂಜೆ, ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ನಿವಾಸಿ ನಝೀರ್ ಎಂಬಾತನಿಗೆ ಸೇರಿದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋವಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ತೋಟವೊಂದರಲ್ಲಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿ ಒಂದು ಕೋಣ ಮತ್ತು ಎರಡು ದನಗಳು ಸೇರಿದಂತೆ ಒಟ್ಟು ಮೂರು ಮೂಕಪ್ರಾಣಿಗಳನ್ನು ವಧೆ ಮಾಡಿ, ಮಾಂಸ ಮಾಡಲು ಸಿದ್ಧಪಡಿಸುತ್ತಿದ್ದ ದೃಶ್ಯ ಕಂಡುಬಂದಿದ್ದು, ಮೂರು ಗೋವುಗಳ ಕಳೆಬರಹಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಮೂವರ ಬಂಧನ – ಪ್ರಮುಖ ಆರೋಪಿ ಪರಾರಿ
ಪೊಲೀಸರು ಧಾಳಿ ನಡೆಸಿದ ವೇಳೆ ಸ್ಥಳದಲ್ಲಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತರನ್ನು:
- ಕೆ. ಅಬ್ದುಲ್ ರಫೀಕ್ (37 ವರ್ಷ)
- ಅದ್ರಾಮ ಮಂತೂರು (41 ವರ್ಷ)
- ಅಬ್ದುಲ್ ಖಾದರ್ ಪಣೆಮಜಲು (57 ವರ್ಷ) ಎಂದು ಗುರುತಿಸಲಾಗಿದೆ.

ವಿಚಾರಣೆಯ ವೇಳೆ ಇವರು ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ಮಾಡುತ್ತಿರುವುದು ದೃಢಪಟ್ಟಿದೆ. ಆದರೆ, ಈ ಅಕ್ರಮ ಗೋವಧೆ ಅಡ್ಡೆಯ ಪ್ರಮುಖ ಆರೋಪಿ ಹಾಗೂ ಸ್ಥಳದ ಮಾಲೀಕನಾದ ನಝೀರ್ ಧಾಳಿಯ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಳ್ಳಾರೆ ಎಸ್‌ಐ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ
ಬೆಳ್ಳಾರೆ ಸಬ್ ಇನ್ಸ್‌ಪೆಕ್ಟರ್ ಸಂತೋಷ್ ಬಿ.ಪಿ. ಅವರ ನೇತೃತ್ವದಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಸತೀಶ್, ಶ್ರೀಧರ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಪ್ರಕರಣ ದಾಖಲು: ಸ್ಥಳದಲ್ಲಿದ್ದ ಜಾನುವಾರು ಮಾಂಸ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 36/2026, ಕಲಂ 4, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2023 ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.
ಸಾರ್ವಜನಿಕರಿಂದ ಮುಕ್ತ ಕಂಠದ ಶ್ಲಾಘನೆ: ಸವಣೂರು ಮತ್ತು ಮಾಂತೂರು ಪರಿಸರದಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋವಧೆ ದಂಧೆಕೋರರಿಗೆ ಈ ದಾಳಿಯ ಮೂಲಕ ಬೆಳ್ಳಾರೆ ಪೊಲೀಸರು ಸಿಂಹಸ್ವಪ್ನವಾಗಿದ್ದಾರೆ. ಪೊಲೀಸರ ಈ ಸಮಯಪ್ರಜ್ಞೆ ಮತ್ತು ತತ್‌ಕ್ಷಣದ ಭರ್ಜರಿ ಕಾರ್ಯಾಚರಣೆಯನ್ನು ಪರಿಸರದ ಸಾರ್ವಜನಿಕರು ಹಾಗೂ ನಾಗರಿಕರು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.
Bantawala
ಬಂಟ್ವಾಳ: ಅಕ್ರಮ ಜಾನುವಾರು ವಧೆ ಅಡ್ಡೆಗೆ ಪೊಲೀಸರ ದಿಢೀರ್ ದಾಳಿ; ಇಬ್ಬರು ಆರೋಪಿಗಳ ಬಂಧನ, 6 ದನಗಳ ರಕ್ಷಣೆ!
ಬಂಟ್ವಾಳ: ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಜಾನುವಾರು ವಧೆ ಅಡ್ಡೆಯೊಂದಕ್ಕೆ ಬಂಟ್ವಾಳ ನಗರ ಪೊಲೀಸರು ಬುಧವಾರ ತಡರಾತ್ರಿ ದಿಢೀರ್ ದಾಳಿ ನಡೆಸಿದ್ದಾರೆ. ಕೃತ್ಯದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ವಧೆಗಾಗಿ ಕಟ್ಟಿ ಹಾಕಲಾಗಿದ್ದ 6 ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್ ಸಾದೀಕ್ (30) ಎಂದು ಗುರುತಿಸಲಾಗಿದೆ.

ನಡೆದದ್ದೇನು?
ಮೇ 27ರ ಬುಧವಾರ ತಡರಾತ್ರಿ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿ ಮನೆಯೊಂದರ ಹಿಂಭಾಗದ ಕೊಟ್ಟಿಗೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿರವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್ಐ ಮತ್ತು ಸಿಬ್ಬಂದಿಗಳ ತಂಡ ಸ್ಥಳಕ್ಕೆ ಜಂಟಿ ದಾಳಿ ನಡೆಸಿದೆ.

ಪೊಲೀಸರು ಸ್ಥಳಕ್ಕೆ ತಲುಪಿದಾಗ ಆರೋಪಿಗಳು ಜಾನುವಾರೊಂದನ್ನು ವಧೆ ಮಾಡಿ ಮಾಂಸ ಕತ್ತರಿಸುತ್ತಿರುವುದು ಕಂಡುಬಂದಿದೆ. ಇನ್ನೂ ಹೆಚ್ಚಿನ ಸಂಖ್ಯೆಯ ದನಗಳನ್ನು ವಧೆ ಮಾಡುವ ಉದ್ದೇಶದಿಂದ ಅಲ್ಲಿ ಕಟ್ಟಿಹಾಕಲಾಗಿತ್ತು. ಆದರೆ ಅವುಗಳನ್ನು ಕೊಲ್ಲುವ ಮೊದಲೇ ಪೊಲೀಸರು ಎಂಟ್ರಿ ಕೊಟ್ಟು ಆರೋಪಿಗಳ ಸ್ಕೆಚ್ ಉಲ್ಟಾ ಮಾಡಿದ್ದಾರೆ.
ಸ್ವಾಧೀನಪಡಿಸಿಕೊಂಡ ಸೊತ್ತುಗಳು:
ಸ್ಥಳದಲ್ಲಿ ವಧೆ ಮಾಡಲಾಗಿದ್ದ ಒಂದು ಜಾನುವಾರಿನ ಮಾಂಸ
ವಧೆಯಿಂದ ಪಾರುಗಾಣಿಸಿ ರಕ್ಷಿಸಲಾದ 06 ಜೀವಂತ ಜಾನುವಾರುಗಳು
ಕೃತ್ಯಕ್ಕೆ ಬಳಸಲಾದ ಒಂದು ಕಾರು ಹಾಗೂ ಮಾರಕಾಸ್ತ್ರ/ಸಾಮಾಗ್ರಿಗಳು

ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಈ ದಂಧೆ ನಡೆಸುತ್ತಿರುವುದು ವಿಚಾರಣೆ ವೇಳೆ ದೃಢಪಟ್ಟಿದೆ. ಪೊಲೀಸರು ಕೃತ್ಯದ ಸ್ಥಳದಲ್ಲಿದ್ದ ಮಾಂಸ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ
ಪ್ರಕರಣ ದಾಖಲು:
ಬಂಧಿತ ಆರೋಪಿಗಳು, ರಕ್ಷಿಸಲಾದ ಜಾನುವಾರುಗಳು ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದಿರುವ ಬಂಟ್ವಾಳ ನಗರ ಠಾಣೆಯ ಪೊಲೀಸರು, ಅ crime ಸಂಖ್ಯೆ 68/2026 ರಂತೆ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020” ರ ಕಲಂ: 4, 7, 12 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.



-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
