Connect with us

crime

ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಬ್ಯಾನರ್ ಗಲಾಟೆ ಪ್ರಕರಣ..ಶಾಸಕ ಗಾಲಿ ಜನಾರ್ದನ ರೆಡ್ಡಿ, ಶ್ರೀರಾಮುಲು ಸಹಿತ 11ಜನರ ವಿರುದ್ಧ ಪ್ರಕರಣ ದಾಖಲು..

Published

on

ಬಳ್ಳಾರಿ : ವಾಲ್ಮೀಕಿ ಪುತ್ಥಳಿ ಅನಾವರಣ ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ಗುರುವಾರ ರಾತ್ರಿ ನಡೆದ ಗುಂಪು ಘರ್ಷಣೆಗೆ ಸಂಬoಧಿಸಿದoತೆ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಚಾನಾಳ್ ಶೇಖರ್ ನೀಡಿರುವ ದೂರಿಗೆ ಸಂಬoಧಿಸಿದoತೆ ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಗಂಗಾವತಿ ಶಾಸಕ ಜಿ.ಜನಾರ್ದನರೆಡ್ಡಿ, ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು, ಪಾಲಿಕೆ ಸದಸ್ಯ ಮೋತ್ಕರ್ ಶ್ರೀನಿವಾಸ್ ಸಹಿತ ಒಟ್ಟು 11ಜನರ ವಿರುದ್ಧ ಪ್ರಕರಣ ದಾಖಲಾಗಿದೆ.


ಬಳ್ಳಾರಿ ನಗರದ ಎಸ್.ಪಿ. ವೃತ್ತದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಅದ್ಧೂರಿಯಾಗಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು.
ಹವಂಬಾವಿ ಪ್ರದೇಶದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯವರ ನಿವಾಸದ ಸಮೀಪ ಜನವರಿ 1ರಂದು ಸಂಜೆ ಹೊತ್ತಿಗೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ರೆಡ್ಡಿಯವರ ನಿವಾಸದ ಮುಂದೆ ಬ್ಯಾನರ್ ಅಳವಡಿಕೆ ವಿಚಾರಕ್ಕೆ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿದೆ. ಈ ವೇಳೆ ಇಬ್ಬರು ಶಾಸಕರ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗುತ್ತಿದ್ದು, ಈ ವೇಳೆ ಮಿಸ್ ಫೈರಿಂಗ್ ಆಗಿ ಯುವಕ ಸಾವನ್ನಪ್ಪಿದ್ದಾನೆ


ಗುಂಡಿಗೆ ಬಲಿಯಾದ ಯುವಕ ಕಾಂಗ್ರೇಸ್ ಕಾರ್ಯಕರ್ತ.
ಬಳ್ಳಾರಿಯ ಹುಸೇನ್ ನಗರ ನಿವಾಸಿ ರಾಜಶೇಖರ್(30) ಗುಂಡೇಟಿನಿoದ ಮೃತಪಟ್ಟವರು.
ನಗರ ಶಾಸಕ ಭರತ್ ರೆಡ್ಡಿ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು-ಶಾಸಕ ಜನಾರ್ದನ ರೆಡ್ಡಿ ಬೆಂಬಲಿಗರ ನಡುವಿನ ಈ ಘರ್ಷಣೆಯಲ್ಲಿ ಎರಡೂ ಗುಂಪುಗಳ ಕೆಲವರು ಗಾಯಗೊಂಡಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಂಗಾವತಿ ಶಾಸಕ ಜಿ.ಜನಾರ್ದನರೆಡ್ಡಿ, ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಸೇರಿ ಇತರರು, ಜ.1 ರಂದು ಗುರುವಾರ ಸಂಜೆ 6.30 ರಿಂದ7.30 ಗಂಟೆ ಸುಮಾರಿಗೆ ಜನಾರ್ದನರೆಡ್ಡಿ ಮನೆ ಬಳಿಯ ಸಿರುಗುಪ್ಪ ರಸ್ತೆ ಪಕ್ಕದಲ್ಲಿ ಅಳವಡಿಸಿದ್ದ ಬ್ಯಾನರ್ ಗಳನ್ನು ಶಾಸಕ ಜನಾರ್ದನರೆಡ್ಡಿ ಮತ್ತು ಇತರರು ಕಿತ್ತು ಹಾಕಿದ್ದಾರೆ. ಇದನ್ನು ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಆಕ್ಷೇಪಿಸಿದ್ದಕ್ಕೆ ಜನಾರ್ದನರೆಡ್ಡಿ, ಸೋಮಶೇಖರ ರೆಡ್ಡಿ ಮತ್ತು ಇತರರು ಉದ್ದೇಶ ಪೂರ್ವಕವಾಗಿ ಬ್ಯಾನರ್ ಗಳನ್ನು ಹರಿದು ಹಾಕಿ, ಸತೀಶ್ ರೆಡ್ಡಿ ಮತ್ತವರ ಗನ್ ಮ್ಯಾನ್ ಬಸವರಾಜ ಅವರೊಂದಿಗೆ ಮಾತಿನ ಚಕಮಕಿ ನಡೆಸಿ ಮಾರಣಾಂತಿಕವಾಗಿ ಹಲ್ಲೆಸಿದ್ದಾರೆ.

ಗಲಾಟೆ ತಡೆಯಲು ಹೋಗಿದ್ದ ಪೊಲೀಸ್ ಶ್ರೀನಿವಾಸ್ ಎಂಬವರ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಚಾನಾಳ್ ಶೇಖರ್ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿಗೆ ಸಂಬoಧಿಸಿದoತೆ ಗಂಗಾವತಿ ಶಾಸಕ ಜಿ.ಜನಾರ್ದನರೆಡ್ಡಿ, ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು, ಪಾಲಿಕೆ ಸದಸ್ಯ ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲಣ್ಣ, ದಿವಾಕರ್, ಬುಡಾ ಮಾಜಿ ಅಧ್ಯಕ್ಷರಾದ ಮಾರುತಿ ಪ್ರಸಾದ್, ದಮ್ಮೂರು ಶೇಖರ್, ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ವಿರುದ್ಧ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Belthangady

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ

Published

on

ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.

ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.

ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಮಾರ್ಚ್‌ 25ರಂದು ವೇಣೂರು ಪೊಲೀಸ್‌ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್‌ಪಿ ನೇತೃತ್ವದ ತಂಡವು ಮಾರ್ಚ್‌ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.

Continue Reading

accident

ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು

Published

on

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್‌ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:

ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

crime

ಪೊಲೀಸ್ ಭೇಟೆ: ದೇವಸ್ಥಾನದ ಕಳ್ಳ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Published

on

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಮತ್ತು ಉರ್ವಾ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಅಂತರರಾಜ್ಯ ಕಳ್ಳ ಹಾಗೂ ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಂಜಾರು ದೇವಸ್ಥಾನದ ಹುಂಡಿ ಕಳವು: ತಮಿಳುನಾಡು ಮೂಲದ ಆರೋಪಿ ಅರೆಸ್ಟ್
ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ಮೂರು ಕಾಣಿಕೆ ಹುಂಡಿಗಳಿಂದ ಸುಮಾರು ರೂ. 25,000/- ಹಣವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಬಜಪೆ ಪೊಲೀಸರು ಮಾರ್ಚ್ 31ರಂದು ಅಂತರರಾಜ್ಯ ಕಳ್ಳ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂಬಾತನನ್ನು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿಯಾದ ಈತ, ರೈಲಿನಲ್ಲಿ ಬಂದು ಕಳ್ಳತನ ನಡೆಸಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದ. ಈತ ಉಡುಪಿಯ ಬ್ರಹ್ಮಾವರ ಠಾಣೆಯ ಕಳವು ಪ್ರಕರಣ ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಬಜಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮುಂಬೈನಲ್ಲಿ ಸೆರೆ
ಮತ್ತೊಂದು ಪ್ರಕರಣದಲ್ಲಿ, ದರೋಡೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ (LPC) ವಾರಂಟ್ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಶೋಕ ನಗರದ ನಿವಾಸಿ ಸುಹಾನ್ @ ಸೋನು (33) ಬಂಧಿತ ಆರೋಪಿ.
ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಮಾರ್ಚ್ 29ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಬೀಡುಬಿಟ್ಟಿದ್ದ ಆರೋಪಿಯನ್ನು ಉರ್ವಾ ಎಎಸ್ಐ ಲಕ್ಷ್ಮಣ್ ಮತ್ತು ತಂಡ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಈತನ ಮೇಲೆ ಉರ್ವಾ ಮತ್ತು ಮಂಗಳೂರು ಉತ್ತರ ಠಾಣೆಗಳಲ್ಲಿ ದರೋಡೆ ಸಂಚು ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಪ್ರಕರಣಗಳು ದಾಖಲಾಗಿವೆ.

ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Trending

Copyright © 2025 Deevatige