Bantawala
ಶತಮಾನದ ಹೊಸ್ತಿಲಲ್ಲಿರುವ ಕುಳಾಲು,ಕೊಳ್ನಾಡು ಸರ್ಕಾರಿ ಶಾಲೆಯಲ್ಲಿ ಮರುಕಳಿಸಿದ ಗತವೈಭವ.
ಕೊಳ್ನಾಡು: ವಿಧಾನ ಪರಿಷತ್ ಶಾಸಕರಾದ ಶ್ರೀಯುತ ಮಂಜುನಾಥ ಭಂಡಾರಿಯವರ ಶಿಫಾರಸ್ಸಿನಿಂದಾಗಿ ಎಂ.ಆರ್.ಪಿ.ಎಲ್. ಸಿ.ಎಸ್.ಆರ್.ನಿಧಿಯಡಿ ಕೃಷ್ಣ ಹೆಗ್ಡೆಯವರ ಸಹಕಾರದಿಂದ ನಲ್ವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.

ಸುಸಜ್ಜಿತ ನೂತನ ಕಟ್ಟಡವನ್ನು ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರೂ, ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ಅಶ್ರಫ್ ಕೆ. ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕುಳಾಲು ಸರ್ಕಾರಿ ಶಾಲೆಯ ಹಿರಿಯ ಹಳೆ ವಿದ್ಯಾರ್ಥಿ ಹಾಗೂ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು ಮಾತನಾಡುತ್ತಾ..ದ.ಕ.ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಕೊಳ್ನಾಡು ಕುಳಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಯಶಸ್ವಿಯಾಗಿ ಶತಮಾನದ ಹೊಸ್ತಿಲಲ್ಲಿ ನಿಂತಿದ್ದು ಶಾಲೆಯ ಗತವೈಭವ ಈ ಮೂಲಕ ಮರುಕಳಿಸುವಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ನೂತನ ಕಟ್ಟಡದ ಬಗ್ಗೆ ಮಾತನಾಡುತ್ತಾ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರ ಶಿಫಾರಸ್ಸಿನಿಂದಾಗಿ ಎಂ.ಆರ್.ಪಿ.ಎಲ್ ತನ್ನ ಸಿ.ಎಸ್.ಆರ್.ನಿಧಿಯಡಿ ಕೃಷ್ಣ ಹೆಗ್ಡೆಯವರ ಸಹಕಾರದಲ್ಲಿ ನಲ್ವತ್ತು ಲಕ್ಷದ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಿದೆ ಎಂದು ಸಹಕಾರ ನೀಡಿದ ವಿದ್ಯಾಭಿಮಾನಿಗಳ ಸಹಕಾರ ಸ್ಮರಿಸಿದರು.

ಕಳೆದ ಐದಾರು ವರ್ಷಗಳ ಹಿಂದೆ ಖಾಸಗಿ ಶಾಲೆಗಳ ಪ್ರಭಾವದಿಂದಾಗಿ ಮುಚ್ಚುವ ಹಂತಕ್ಕೆ ತಲುಪಿದ್ದ ಕುಳಾಲು ಸರ್ಕಾರಿ ಶಾಲೆಯನ್ನು ಉಳಿಸಲು-ಮತ್ತಷ್ಟು ಬೆಳೆಸಲು ಹಳೆ ವಿದ್ಯಾರ್ಥಿಗಳು, ಊರ-ಪರವೂರ ಸ್ನೇಹಿತರು, ವಿದ್ಯಾಭಿಮಾನಿಗಳು ಸಾಕಷ್ಟು ಸಹಕಾರ, ಬೆಂಬಲ ನೀಡಿದ್ದಾರೆ. ನಿಂತು ಹೋಗಿದ್ದ ಶಾಲಾ ವಾರ್ಷಿಕೋತ್ಸವವನ್ನು ಪುನರಾರಂಭಿಸುವ ಮೂಲಕ ಶಾಲೆಯ ಮೂಲಭೂತ ಸೌಕರ್ಯ, ಸುಸಜ್ಜಿತ ಕಟ್ಟಡ, ಶಾಲಾ ಮಕ್ಕಳಿಗೆ ಬಸ್ ವ್ಯವಸ್ಥೆ ಸೇರಿದಂತೆ ಖಾಸಗಿ ಶಾಲೆಗಳಿಗೆ ಸಮಾನವಾದ ಸೌಲಭ್ಯಗಳನ್ನು ಕುಳಾಲು ಸರ್ಕಾರಿ ಶಾಲೆಯಲ್ಲೂ ಕಲ್ಪಿಸಲಾಗಿದೆ. ಇದರಿಂದಾಗಿ ಸರ್ಕಾರಿ ಶಾಲೆಯೊಂದು ಹೇಗಿರಬೇಕೆಂಬ ಕನಸು ನನಸಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

1930ರಲ್ಲಿ ಈ ಶಾಲೆಯನ್ನು ಸ್ಥಾಪಿಸಲು ಕಾರಣಕರ್ತರಾದ ಸ್ವಾತಂತ್ರ್ಯ ಹೋರಾಟಗಾರ ಕುಳಾಲು ಮನೆತನದ ಅಣ್ಣಪ್ಪ ಭಂಡಾರಿಯವರ ಅಕ್ಷಯ ಶ್ರಮವನ್ನು ಅವರು ಸ್ಮರಿಸಿದರು.ಸ್ವಾತಂತ್ರ್ಯ ಹೋರಾಟದ ಜತೆಗೆ ಶಿಕ್ಷಣದ ಮಹತ್ವವನ್ನು ಅರಿತು, ಗ್ರಾಮಕ್ಕೆ ವಿದ್ಯೆಯ ಬೆಳಕು ನೀಡಿದ ಮಹನೀಯರಲ್ಲಿ ಅಣ್ಣಪ್ಪ ಭಂಡಾರಿಯವರು ಪ್ರಮುಖರಾಗಿದ್ದಾರೆ ಎಂದು ಹೇಳಿದರು.ಅವರ ದೃಷ್ಟಿ ಮತ್ತು ತ್ಯಾಗದ ಫಲವಾಗಿ ಈ ಶಾಲೆ ಅನೇಕ ಪೀಳಿಗೆಗಳಿಗೆ ಜ್ಞಾನ ದೀಪವಾಗಿ ಬೆಳಗುತ್ತಿದೆ ಎಂದು ಸುಭಾಶ್ಚಂದ್ರ ಶೆಟ್ಟಿ ಅಭಿಪ್ರಾಯಪಟ್ಟರು.

ಶಿಕ್ಷಣವೇ ಉತ್ತಮ ಸಮಾಜದ ಪರಿವರ್ತನೆಯ ಮೂಲ ಎಂಬ ನಂಬಿಕೆಯಿಂದ ಅವರು ಈ ಸಂಸ್ಥೆಗೆ ಭದ್ರ ನೆಲೆ ಕಲ್ಪಿಸಿದ್ದರೆಂದು ಹೇಳಿದರು. ಈ ಶಾಲೆ 2030ರಲ್ಲಿ ಶತಮಾನೋತ್ಸವವನ್ನು ಆಚರಿಸಲಿದೆ ಎಂಬ ಸಂಗತಿಯನ್ನು ಅವರು ಹೆಮ್ಮೆಯಿಂದ ತಿಳಿಸಿದರು.

ಕಟ್ಟಡ ನಿರ್ಮಾಣಕ್ಕೆ ನೆರವು ಕೋರಿದಾಗ ಸಂಘ ಸಂಸ್ಥೆಗಳು ಸ್ಪಂದಿಸಿದ ಘಟನೆಯನ್ನು ಸ್ಮರಿಸಿದ ಸುಭಾಶ್ಚಂದ್ರ ಶೆಟ್ಟಿಯವರು ಮಾತನಾಡುತ್ತಾ…ಪತ್ರಕರ್ತ ವಿ.ಟಿ. ಪ್ರಸಾದ್ ಅವರ ಸಹೋದರರಾಗಿರುವ ಕರ್ನಾಟಕ ಬ್ಯಾಂಕ್‌ನ ಉನ್ನತ ಸ್ಥಾನದಲ್ಲಿರುವ ಅಧಿಕಾರಿ ಬಿ.ಎಸ್.ರಾಜ ಅವರು ತಾವು ಕಲಿತ ಶಾಲೆಯಲ್ಲದಿದ್ದರೂ ತಮ್ಮ ಗ್ರಾಮದ ಶಾಲೆ ಎಂಬ ನೆಲೆಯಲ್ಲಿ ನನ್ನ ಕೋರಿಕೆಗೆ ಸ್ಪಂದಿಸಿ ಶಾಲಾ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಿರುವುದನ್ನು ಪ್ರಶಂಸಿಸಿದರು.

ಅಲ್ಲದೆ ಅನಿವಾಸಿ ಭಾರತೀಯರು ಸೇರಿದಂತೆ ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಹಾಗೂ ಊರ-ಪರವೂರ ನಾಗರಿಕರು ನೀಡಿದ ಸಮಗ್ರ ಸಹಕಾರದಿಂದ ಶಾಲೆಯ ಗತವೈಭವ ಮರುಕಳಿಸಲು ಸಾಧ್ಯವಾಗಿದೆ ಎಂದು ತಿಳಿಸಿ, ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಹಳೆವಿದ್ಯಾರ್ಥಿ, ನಿವೃತ್ತ ಬ್ಯಾಂಕ್ ಉದ್ಯೋಗಿ ಗಿರೀಶ್ ಭಂಡಾರಿ, ನಿವೃತ್ತ ಶಿಕ್ಷಕ ರಾಧಾಕೃಷ್ಣ ರೈ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸೈನಾರ್ ತಾಳಿತ್ತನೂಜಿ, ಸ್ಥಳೀಯ ಹಿರಿಯರಾದ ಅಬೂಬಕ್ಕರ್ ಕುಳಾಲು ಇವರುಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಅಲ್ಲದೇ ಸಮಾರೋಪ ಸಮಾರಂಭದಲ್ಲಿ ಶಾಲೆಯ ಎಳಿಗೆಗಾಗಿ ಶ್ರಮಿಸಿದ ಹಳೆವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.ಸುಸಜ್ಜಿತ ನೂತನ ಕಟ್ಟಡವನ್ನು ಕೊಳ್ನಾಡು ಗ್ರಾಮ ಪಂಚಾಯತ್ ಅದ್ಯಕ್ಷರೂ,ಶಾಲೆಯ ಹಳೆವಿದ್ಯಾರ್ಥಿ ಅಶ್ರಪ್ ಕೆ.ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶರೀಫ್ ಕೆ.ಎಚ್,ಉಪಾಧ್ಯಕ್ಷರಾದ ರಮೇಶ್ ಕಾಮತ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎಂ.ಎಸ್.ಮಹಮ್ಮದ್, ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕೆ.ಎ.ಅಸ್ಮ ಹಸೈನಾರ್ ತಾಳಿತ್ತನೂಜಿ, ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರತ್ನಾ, ಸಂಜೀವಿ, ಭಾಗೀರಥಿ ಸೇರಿದಂತೆ ಆರೋಗ್ಯ ಇಲಾಖೆಯ ವಿನ್ಸೆಂಟ್, ಉಪಸ್ಥಿತಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ತಿಮ್ಮು ಸ್ವಾಗತಿಸಿ, ಸಹ ಶಿಕ್ಷಕ ಹೇಮ ಎಂ.ಟಿ.ಧನ್ಯವಾದ ತಿಳಿಸಿದರು.
Bantawala
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ
ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್‌ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.
ಸಂಸ್ಥಾಪನಾ ಹೆಜ್ಜೆಗಳು ಮತ್ತು ವಹಿಸಿದ ಜವಾಬ್ದಾರಿಗಳು
ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ:
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ: ಅಧ್ಯಕ್ಷರಾಗಿ 3 ವರ್ಷಗಳ ಕಾಲ ಯಶಸ್ವಿ ಸೇವೆ.
ಜಿಲ್ಲಾ ಕಾಂಗ್ರೆಸ್ ಸೇವಾದಳ: ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ.
ಕೆಪಿಸಿಸಿ (KPCC): ರಾಜ್ಯ ಮಟ್ಟದ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ.
ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿ: ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರ.
ಪ್ರಶಸ್ತಿ ಹಾಗೂ ಪುರಸ್ಕಾರ
ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

Bantawala
ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ
ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.
ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
Bantawala
ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲು!
ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.
ಮಹಿಳೆಯ ಧೈರ್ಯ, ವೈರಲ್ ವೀಡಿಯೋ:
ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.
ಬಂಟ್ವಾಳ ಠಾಣೆಯಲ್ಲಿ ದೂರು:
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್‌ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
