national
ಬಳ್ಳಾರಿ ಬ್ಯಾನರ್ ವಿಚಾರದಲ್ಲಿ ಗುಂಪು ಘರ್ಷಣೆ, ಕಾಂಗ್ರೆಸ್ ಕಾರ್ಯಕರ್ತ ಸಾವು ಪ್ರಕರಣ.ವೈಯಕ್ತಿಕ ನೆಲೆಯಲ್ಲಿ ಮೃತ ರಾಜಶೇಖರ ಕುಟುಂಬಕ್ಕೆ 25ಲಕ್ಷ ಪರಿಹಾರ ನೀಡಿ ಮನೆ ಕಟ್ಟಿ ಕೊಡುವ ಭರವಸೆ ನೀಡಿದ ಸಚಿವ ಜಮೀರ್ ಅಹಮದ್..
ಬಳ್ಳಾರಿ: ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಬ್ಯಾನರ್ ವಿಚಾರವಾಗಿ ನಡೆದ ಗುಂಪು ಘರ್ಷಣೆ, ಗುಂಡು ತಗುಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಗೆ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ನೀಡಿ ಸಾಂತ್ವನ ಹೇಳಿದ್ದಲ್ಲದೇ ವೈಯಕ್ತಿಕವಾಗಿ 25 ಲಕ್ಷ ರೂ. ಪರಿಹಾರ ನೀಡಿದರು.

ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮದ್ ”ಮೊನ್ನೆ ದಿನ ಘಟನೆಯಲ್ಲಿ ನಮ್ಮ ಕಾರ್ಯಕರ್ತ ರಾಜಶೇಖರ ಮೃತಪಟ್ಟಿದ್ದಾರೆ. ಅವರ ಮನೆ ನೋಡಿ ಮನಸ್ಸಿಗೆ ತುಂಬಾ ನೋವಾಗಿದೆ, ಮನೆಯ ಹಿರಿಯ ಮಗನಾಗಿ ಪೋಷಕರಿಗೆ ಆಸರೆಯಾಗಿದ್ದನು. ತಂದೆ ಪುಟ್ಟದೊಂದು ಹೋಟೆಲ್ ಇಟ್ಟು ಕೊಂಡಿದ್ದಾರೆ. ನಾನು ಭರತ್, ಗಣೇಶ್ ಸೇರಿ ಸಹಾಯ ಮಾಡಿದ್ದೇವೆ. ಹೋದ ಪ್ರಾಣ ತರಲು ಯಾರಿಂದಲೂ ಸಾಧ್ಯವಿಲ್ಲ. ಹಣದ ಬೆಲೆ ಹೇಳೋದು ಬೇಡ. ಪಕ್ಷದಿಂದ ಸಹಾಯ ಮಾಡುತ್ತೇವೆ. ಪಕ್ಷದ ಅಧ್ಯಕ್ಷರು ಕೂಡ ಸಹಾಯ ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. ಮನೆ ಕಟ್ಟಿ ಕೊಡಿ ಎಂದು ಹೇಳಿದ್ದೇವೆ. ಸ್ಲಂ ಬೋರ್ಡ್ ನಿಂದ ಮನೆ ಕಟ್ಟಿ ಕೊಡುತ್ತೇವೆ”ಎಂದು ಹೇಳಿದರು. ಬ್ಯಾನರ್ ವಿಚಾರದಲ್ಲಿ ಗಲಾಟೆ ನಡೆದಿದ್ದು, ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಬೇಕಿತ್ತು. ಬಹಳ ದಿನಗಳ ಕನಸು, ನನಸು ಮಾಡೋಕೆ ಹೊರಟಿದ್ದೆವು. ಸಮಾರಂಭಗಳ ಬಗ್ಗೆ ಎಲ್ಲಾ ಕಡೆಗಳಲ್ಲೂ ಬ್ಯಾನರ್ ಕಟ್ಟೋದು ಸಹಜ, ಜನಾರ್ದನ ರೆಡ್ಡಿ ದೊಡ್ಡ ಮನಸ್ಸು ಮಾಡಬೇಕಿತ್ತು. ಒಳ್ಳೆಯ ಕಾರ್ಯಕ್ರಮ ಮಾಡಬೇಕಾಗಿದ್ದ ಅವರು ಇಂತಾ ಸಂದರ್ಭದಲ್ಲಿ ಸಣ್ಣತನ ತೋರಿಸಿದ್ದಾರೆ. ಮಾಜಿ ಮಂತ್ರಿಗಳಾಗಿದ್ದವರು ಇಂತಹ ಚಿಲ್ಲರೆ ಬುದ್ಧಿ ತೋರಿಸುವುದು ಅವರ ಘನತೆ ತಕ್ಕುದಾದ ಕ್ರಮವಲ್ಲ. ಭರತ್ ರೆಡ್ಡಿಗೆ ಫೋನ್ ಮಾಡಿ ಬ್ಯಾನರ್ ತೆಗಿಸಬೇಕು ಅಂದಿದ್ದರೆ ವಿರೋಧ ಮಾತಾಡದೇ ಅದನ್ನು ಭರತ್ ತೆಗೆಸುತ್ತಿದ್ದರು. ಎಂದು ಸಚಿವ ಜಮೀರ್ ಅಹಮದ್ ನೋವು ವ್ಯಕ್ತಪಡಿಸಿದರು.

ಇದೇ ಸಂದರ್ಭ ಬಳ್ಳಾರಿ ಎಸ್.ಪಿ. ಪವನ್ ನೆಜ್ಜೂರ್ ಅಮಾನತು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹಮದ್ ”ಅವರ ಜವಾಬ್ದಾರಿ ಹೆಚ್ಚಾಗಿರುತ್ತದೆ. ಒಂದು ಸಲ ಚಾರ್ಜ್ ತಗೊಂಡು ಮೇಲೆ ಮುಗಿಯಿತು. ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ವಿಚಾರ ಶುದ್ಧ ಸುಳ್ಳು” ಎಂದು ಸರಕಾರದ ಕ್ರಮವನ್ನು ಸಚಿವರು ಸಮರ್ಥಿಸಿಕೊಂಡರು.
Agriculture
ಪುತ್ತೂರಿನ 1,000 ಮಂದಿಗೆ ಉದ್ಯೋಗ ನೀಡಿದರೆ ಕ್ಯಾಂಪ್ಕೋಗೆ 20 ಎಕರೆ ನಿವೇಶನ ಮಂಜೂರು: ಶಾಸಕ ಅಶೋಕ್ ರೈ ಭರವಸೆ
ವಿಟ್ಲ: ಕ್ಯಾಂಪ್ಕೋ ಸಂಸ್ಥೆಯು ಪುತ್ತೂರು ಭಾಗದ ಸುಮಾರು ಒಂದು ಸಾವಿರ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಟ್ಟಲ್ಲಿ, ಸಂಸ್ಥೆಯ ಅಭಿವೃದ್ಧಿಗಾಗಿ 20 ಎಕರೆ ನಿವೇಶನವನ್ನು ಮಂಜೂರು ಮಾಡಿಸಿಕೊಡುವುದಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಘೋಷಿಸಿದ್ದಾರೆ.
ವಿಟ್ಲದಲ್ಲಿ ಕ್ಯಾಂಪ್ಕೋ ಶಾಖೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಕ್ಯಾಂಪ್ಕೋ ಇಂದು ಬೃಹತ್ ಸಂಸ್ಥೆಯಾಗಿ ಬೆಳೆದು ನಿಂತಿದ್ದು, ಜಿಲ್ಲೆಯ ನೂರಾರು ಜನರಿಗೆ ಉದ್ಯೋಗ ನೀಡುವುದರ ಜೊತೆಗೆ ಕರಾವಳಿಯ ಕೀರ್ತಿಯನ್ನು ದೇಶ-ವಿದೇಶಗಳಲ್ಲಿ ಪಸರಿಸಿದೆ. ಜಿಲ್ಲೆಯ ಕೃಷಿಕರ ಹಿತರಕ್ಷಣೆಗಾಗಿ ಸಂಸ್ಥೆ ಇನ್ನಷ್ಟು ಬಲಗೊಳ್ಳಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು.
ಇಂದು ಅಡಿಕೆಗೆ ಮಾರುಕಟ್ಟೆಯಲ್ಲಿ ಉತ್ತಮ ಧಾರಣೆ ಸಿಗುತ್ತಿರುವುದಕ್ಕೆ ಕ್ಯಾಂಪ್ಕೋ ಸಂಸ್ಥೆಯೇ ಮುಖ್ಯ ಕಾರಣವಾಗಿದ್ದು, ಒಂದು ವೇಳೆ ಈ ಸಂಸ್ಥೆ ಇಲ್ಲದಿದ್ದರೆ ಅಡಿಕೆ ಮಾರುಕಟ್ಟೆಯ ಪರಿಸ್ಥಿತಿ ಊಹಿಸಲೂ ಸಾಧ್ಯವಿರಲಿಲ್ಲ. ಸರ್ಕಾರಿ ನಿಬಂಧನೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುವುದರಿಂದ ದರದಲ್ಲಿ ಅಲ್ಪ ವ್ಯತ್ಯಾಸವಿರಬಹುದಾದರೂ, ರೈತರ ಪಾಲಿಗೆ ಕ್ಯಾಂಪ್ಕೋ ಭದ್ರ ಬುನಾದಿಯಾಗಿದೆ.

ಜಿಲ್ಲೆಯಲ್ಲಿ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಿದ್ದು, ನಮ್ಮ ಯುವಜನತೆಗೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗಬೇಕಿದೆ. ಈ ನಿಟ್ಟಿನಲ್ಲಿ ಸಂಸ್ಥೆಯು ಮನಸ್ಸು ಮಾಡಿದರೆ ದೊಡ್ಡ ಮಟ್ಟದ ಬದಲಾವಣೆ ಸಾಧ್ಯವಿದ್ದು, ಇದಕ್ಕೆ ಅಗತ್ಯವಿರುವ ಭೂಮಿ ಹಾಗೂ ಎಲ್ಲಾ ಸಹಕಾರವನ್ನು ನೀಡಲು ತಾನು ಸಿದ್ಧ ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು.
drugs
ಭಾರತಕ್ಕೂ ಎಂಟ್ರಿ ಕೊಟ್ಟಿತೇ ‘ಜಾಂಬಿ ಡ್ರಗ್’? ಚಂಡೀಗಢದಲ್ಲಿ ಡೆಲಿವರಿ ಬಾಯ್ ವಿಲಕ್ಷಣ ವರ್ತನೆ; ವಿಡಿಯೋ ವೈರಲ್!
ಅಮೆರಿಕದಂತಹ ದೇಶಗಳನ್ನು ನಡುಗಿಸಿರುವ ಭೀಕರ ‘ಜಾಂಬಿ ಡ್ರಗ್’ (Zombie Drug) ಈಗ ಭಾರತಕ್ಕೂ ಕಾಲಿಟ್ಟಿದೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ. ಇದಕ್ಕೆ ಪೂರಕವೆಂಬಂತೆ ಚಂಡೀಗಢದಲ್ಲಿ ನಡೆದ ವಿಲಕ್ಷಣ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಚಂಡೀಗಢದ ಸೆಕ್ಟರ್ 33B ವಸತಿ ಪ್ರದೇಶದಲ್ಲಿ ಬ್ಲಿಂಕಿಟ್ (Blinkit) ಸಂಸ್ಥೆಯ ಡೆಲಿವರಿ ಬಾಯ್ ಒಬ್ಬರು ಸುಮಾರು 2 ರಿಂದ 2.5 ಗಂಟೆಗಳ ಕಾಲ ರಸ್ತೆಯಲ್ಲೇ ಯಾವುದೇ ಚಲನೆಯಿಲ್ಲದೆ, ಅರೆಪ್ರಜ್ಞಾವಸ್ಥೆಯಲ್ಲಿ ನಿಂತಿದ್ದ ಘಟನೆ ನಡೆದಿದೆ. ಬೆನ್ನಿನ ಮೇಲೆ ಡೆಲಿವರಿ ಬ್ಯಾಗ್ ಹೊತ್ತು, ಬಾಯಲ್ಲಿ ಬೀಡಿ ಇಟ್ಟುಕೊಂಡಿದ್ದ ಈ ಯುವಕ, ಸುತ್ತಮುತ್ತಲಿನ ಯಾವುದೇ ಅರಿವಿಲ್ಲದೆ ಕಲ್ಲಿನಂತೆ ಜಡವಾಗಿ ನಿಂತಿದ್ದನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಈ ಘಟನೆಯ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅನೇಕ ಬಳಕೆದಾರರು ಇದನ್ನು ಅಮೆರಿಕದಲ್ಲಿ ಜನಜೀವನವನ್ನು ನಾಶಪಡಿಸುತ್ತಿರುವ ಫೆಂಟನಿಲ್ (Fentanyl) ಅಥವಾ ಜಾಂಬಿ ಡ್ರಗ್‌ನ ಪರಿಣಾಮ ಎಂದು ಬಣ್ಣಿಸಿದ್ದಾರೆ. “ಭಾರತಕ್ಕೂ ಈ ಮಾರಕ ಡ್ರಗ್ ಎಂಟ್ರಿ ಕೊಟ್ಟಿದೆಯೇ? ಇದು ನಿಜಕ್ಕೂ ಅಪಾಯಕಾರಿ ಮುನ್ಸೂಚನೆ” ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಯುವಕನನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಏನಿದು ‘ಜಾಂಬಿ ಡ್ರಗ್’?
ಸಾಮಾನ್ಯವಾಗಿ ಪ್ರಾಣಿಗಳಿಗೆ ನೋವು ನಿವಾರಕವಾಗಿ ಬಳಸುವ ಕ್ಸೈಲಜಿನ್ (Xylazine) ಎಂಬ ಟ್ರ್ಯಾಂಕ್ವಿಲೈಜರ್ ಅನ್ನು ‘ಜಾಂಬಿ ಡ್ರಗ್’ ಎಂದು ಕರೆಯಲಾಗುತ್ತದೆ. ಇದನ್ನು ಫೆಂಟನಿಲ್, ಮಾರ್ಫಿನ್ ಅಥವಾ ಹೆರಾಯಿನ್‌ನಂತಹ ಮಾದಕ ವಸ್ತುಗಳೊಂದಿಗೆ ಬೆರೆಸಿ ಸೇವಿಸಿದಾಗ ಮನುಷ್ಯರು ತಮ್ಮ ಪ್ರಜ್ಞೆ ಕಳೆದುಕೊಂಡು, ದೇಹದ ಮೇಲೆ ಹತೋಟಿಯಿಲ್ಲದೆ ವಿಚಿತ್ರವಾಗಿ ವರ್ತಿಸುತ್ತಾರೆ. ಅಮೆರಿಕದಲ್ಲಿ ಈ ಡ್ರಗ್‌ನಿಂದಾಗಿ ಸಾವಿರಾರು ಯುವಕರು ಬೀದಿಗಳಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವುದು ವರದಿಯಾಗಿದೆ. ಚಂಡೀಗಢದ ಈ ಘಟನೆ ಮಾದಕ ವ್ಯಸನದ ಪರಿಣಾಮವೋ ಅಥವಾ ಆರೋಗ್ಯ ಸಮಸ್ಯೆಯೋ ಎಂಬುದು ವೈದ್ಯಕೀಯ ವರದಿ ಬಂದ ನಂತರವಷ್ಟೇ ತಿಳಿದುಬರಬೇಕಿದೆ. ಆದರೆ, ಈ ವಿಡಿಯೋ ಮಾತ್ರ ಭಾರತೀಯರಲ್ಲಿ ಹೊಸ ಆತಂಕವನ್ನಂತೂ ಸೃಷ್ಟಿಸಿದೆ.

award
ಪ್ರಬಂಧ ಸ್ಪರ್ಧೆಯಲ್ಲಿ ಪುತ್ತೂರಿನ ಮಹಿಮಾ ಆರ್. ಕೆ.ಗೆ ರಾಷ್ಟ್ರಮಟ್ಟದ ಪ್ರಥಮ ಬಹುಮಾನ
ಧಾರವಾಡ: ಇಲ್ಲಿನ ಸೆಂಟರ್ ಫಾರ್ ಮಲ್ಟಿ-ಡಿಸಿಪ್ಲಿನರಿ ಡೆವಲಪ್ಮೆಂಟ್ ರಿಸರ್ಚ್ (CMDR) ಸಂಸ್ಥೆಯು ಭಾರತ ಮತ್ತು ವಿದೇಶಗಳ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಇಂದಿನ ಬದುಕಿಗೆ ಭಾರತೀಯ ಜ್ಞಾನ ಪರಂಪರೆ’ (IKS 2.0) ಪ್ರಬಂಧ ಸ್ಪರ್ಧೆಯಲ್ಲಿ ಪುತ್ತೂರಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿನಿ ಮಹಿಮಾ ಆರ್. ಕೆ. ಪ್ರಥಮ ಸ್ಥಾನ ಗಳಿಸಿದ್ದಾರೆ.
‘ಭಾರತೀಯ ಜ್ಞಾನ ಪರಂಪರೆ ಎಂಬ ಬೆಳಕ ದೀವಟಿಗೆ: ಅವಲೋಕನ’ ಎಂಬ ಶೀರ್ಷಿಕೆಯಡಿ ಮಹಿಮಾ ಅವರು ಮಂಡಿಸಿದ ಪ್ರಬಂಧವು ಒಟ್ಟು 71.33 ಅಂಕಗಳನ್ನು ಪಡೆಯುವ ಮೂಲಕ 10,000 ರೂ. ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಈ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಏಕೈಕ ಕನ್ನಡ ಪ್ರಬಂಧ ಎಂಬ ಹೆಗ್ಗಳಿಕೆಗೆ ಈ ಬರಹ ಪಾತ್ರವಾಗಿರುವುದು ವಿಶೇಷ. ಭಾರತೀಯ ಪರಂಪರೆಯ ಜ್ಞಾನವು ಇಂದಿನ ಆಧುನಿಕ ಬದುಕಿಗೆ ಹೇಗೆ ದೀವಟಿಗೆಯಂತೆ ದಾರಿದೀಪವಾಗಿದೆ ಎಂಬುದನ್ನು ಇವರು ತಮ್ಮ ಪ್ರಬಂಧದಲ್ಲಿ ಸವಿವರವಾಗಿ ವಿಶ್ಲೇಷಿಸಿದ್ದಾರೆ. ಭಾರತೀಯ ಜ್ಞಾನ ಪರಂಪರೆಯ ಮಹತ್ವವನ್ನು ಇಂದಿನ ಕಾಲಘಟ್ಟಕ್ಕೆ ಅನುಗುಣವಾಗಿ ವಿಶ್ಲೇಷಿಸಿದ ಇವರ ಬರಹವು ತೀರ್ಪುಗಾರರ ವಿಶೇಷ ಮೆಚ್ಚುಗೆಗೆ ಪಾತ್ರವಾಗಿದೆ.

ವಿಟ್ಲದ ರವಿಶಂಕರ ಕುಳಮರ್ವ ಹಾಗೂ ಇತ್ತಿಚೆಗೆ ಸಾಹಿತ್ಯ ಕ್ಷೇತ್ರದ ಗಣನೀಯ ಸಾಧನೆಗಾಗಿ ಪ್ರತಿಷ್ಠಿತ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ಪಡೆದ ಡಾ. ಮೈತ್ರಿ ಭಟ್ ದಂಪತಿಯ ಪುತ್ರಿಯಾಗಿರುವ ಮಹಿಮಾ, ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
