crime
ಪುತ್ತೂರು ಅತ್ಯಾಚಾರ ವಂಚನೆ ಪ್ರಕರಣ; ಹಿಂದೂ ಸಂಘಟನೆಗಳ ಮೌನವೇಕೆ ? ಪ್ರತಿಭಾ ಕುಳಾಯಿ
ಸಂಧಾನದ ಬಾಗಿಲು ಮುಚ್ಚಿದೆ; ಆರೋಪಿ ಕೃಷ್ಣ ಜೆ.ರಾವ್ ( KRISHNA J. RAO)ಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ; ನಾಮಕರಣ ಶಾಸ್ತçದ ಮೂಲಕ ಕಲ್ಲಡ್ಕದಿಂದಲೇ ಪ್ರತಿಭಟನೆ, ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ – ಪ್ರತಿಭಾ ಕುಳಾಯಿ ಸವಾಲು
ಮಂಗಳೂರು : ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್‌ಗೆ ಕೋರ್ಟ್ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದ್ದು, ಜ. 24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ.

50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ
ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜತೆ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಡಿಎನ್‌ಎ ಪರೀಕ್ಷೆಯಲ್ಲಿ ಸಂತ್ರಸ್ತೆ ಪೂಜಾಳ ಮಗುವಿನ ತಂದೆ ಕೃಷ್ಣ ಜೆ.ರಾವ್ ಎಂಬುದು ಸಾಬೀತಾದರೂ ಅವರು ಈಕೆಯನ್ನು ಮದುವೆಯಾಗಲು ಒಪ್ಪುತ್ತಿಲ್ಲ. ಬದಲಾಗಿ 50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ. ಇದಕ್ಕೆ ಯುವತಿಯಾಗಲಿ ಆಕೆಯ ಕುಟುಂಬವಾಗಲಿ ಒಪ್ಪುವುದಿಲ್ಲ. ಅವರಿಗೆ ಬೆಂಬಲವಾಗಿ ಸಮಾಜದ ಎಲ್ಲಾ ವರ್ಗದ ಜನ ಅವರ ಜತೆಗಿದೆ ಎಂದರು. ಕೃಷ್ಣ ಜೆ. ರಾವ್ ಯುವತಿ ಜತೆ ವಿವಾಹ ಆಗಿ ಆ ಮಗುವಿಗೆ ತಂದೆಯ ಸ್ಥಾನಮಾನ ನೀಡುವ ಆಶಾಭಾವನೆಯೊಂದಿಗೆ ಆತನಿಗೆ ಜಾಮೀನು ದೊರಕಿ ಆತ ಆರಾಮವಾಗಿ ಓಡಾಡಿಕೊಂಡಿದ್ದರೂ, ನಾವು ಈವರೆಗೆ ಸುಮ್ಮನಿದ್ದೆವು. ಆತನ ತಾಯಿ ನನ್ನ ಮೇಲೆ ಹಾಗೂ ಯುವತಿಯ ತಾಯಿ ಮೇಲೆ ಮಾನ ಹರಾಜು ಪ್ರಕರಣ ದಾಖಲಿಸಿದ್ದಾರೆ. ಆದರೆ ವಾಸ್ತವದಲ್ಲಿ ಇಲ್ಲಿ ಓರ್ವ ಯುವತಿ ಮತ್ತು ಆಕೆಯ ಕುಟುಂಬದವರ ಮಾನ ಹರಾಜು ಹಾಕಲಾಗಿದೆ ಎಂದವರು ಹೇಳಿದರು.

ಜ.24 ರಂದು ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಶಾಸ್ತ್ರ
ಕರಾವಳಿಯಲ್ಲಿ ಹಿಂದು ಸಮಾಜದ ಬಗ್ಗೆ ಮುಖಂಡರು, ರಾಜಕೀಯ ನೇತಾರರು ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾರೆಯೇ ವಿನಃ ಇಂತಹ ಸನ್ನಿವೇಶದಲ್ಲಿ ಸಿಲುಕಿದವರನ್ನು ಪಾರು ಮಾಡುವ ಬಗ್ಗೆ ನೆರವಿಗೆ ಧಾವಿಸುತ್ತಿಲ್ಲ. ಹಾಗಾಗಿ ನಾವು ಬೇರೆ ಸಮುದಾಯದವರನ್ನೂ ಧ್ವನಿ ಎತ್ತಲು ಆಹ್ವಾನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಸಂಘಟನಾತ್ಮಕವಾಗಿ ಶಕ್ತಿ ಕೇಂದ್ರ ಆಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಊರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇನೆ. ಇದೇ ಕಾರಣಕ್ಕೆ ಜ.24 ರಂದು ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸುವುದಾಗಿ ಪ್ರತಿಭಾ ಕುಳಾಯಿ ಹೇಳಿದರು.
ಪೂಜಾ ಆತ್ಮಹತ್ಯೆಗೂ ಯೋಚಿಸಿದ್ದಾಳೆ
ಮಗುವಿನ ತಂದೆ ಕೃಷ್ಣ ಜೆ.ರಾವ್ ಯಾವ ಕಾರಣಕ್ಕೆ ಪೂಜಾಳನ್ನು ತಿರಸ್ಕರಿಸುತ್ತಿದ್ದಾನೆ ಎಂದು ಅರ್ಥವಾಗುತ್ತಿಲ್ಲ. ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ ಅರ್ಥಮಾಡಿಕೊಂಡಿದ್ದ ಇವರಿಬ್ಬರ ಸರಸದಲ್ಲಿ ಮಗು ಜನಿಸಿದ ಬಳಿಕ ಮತ್ತೆ ಆಕೆಯನ್ನು ದೂರ ಮಾಡುವುದರಲ್ಲಿ ಅರ್ಥ ಇಲ್ಲ. ಆಕೆ ಯಾವುದೇ ಕಾರಣಕ್ಕೂ ಅಬಲೆ ಅಲ್ಲ, ಆಕೆಯೂ ನಿತ್ಯವೂ ನೊಂದುಕೊಳ್ಳುತ್ತಿದ್ದು, ಆತ್ಮಹತ್ಯೆಗೂ ಯೋಚಿಸಿದ್ದಾಳೆ. ಅವಳ ಬದುಕಿಗೆ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತಿದ್ದು, ಮುಂದೆ ಕೋರ್ಟ್ ತೀರ್ಮಾನಕ್ಕೆ ಬದ್ಧವಾಗಿ ಮುಂದುವರಿಯುತ್ತೇವೆ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಶ್ರೀನಿವಾಸ ದೇವರಿಗೆ ಯಾವಾಗಲೋ ಕಲ್ಯಾಣ ಆಗಿದೆ
ಪುತ್ತೂರಿನ ಅರುಣ್ ಕುಮಾರ್ ಪುತ್ತಿಲರ ಬಗ್ಗೆ ನನಗೆ ತುಂಬಾ ಗೌರವ ಇದೆ. ಅವರು ಶ್ರೀನಿವಾಸ ದೇವರಿಗೆ ಕಲ್ಯಾಣ ಅದ್ದೂರಿಯಾಗಿ ನೆರವೇರಿಸಿದ್ದಾರೆ. ಶ್ರೀನಿವಾಸ ದೇವರಿಗೆ ಯಾವಾಗಲೋ ಕಲ್ಯಾಣ ಆಗಿದೆ. ಈಗ ಆಗಬೇಕಾಗಿರುವುದು ಪೂಜಾಳಿಗೆ. ಅವಳಿಗೆ ಕೃಷ್ಣ ಜೆ.ರಾವ್ ಜೊತೆ ಕಲ್ಯಾಣ ಮಾಡಿಸುವ ಬಗ್ಗೆ ಪುತ್ತಿಲ ಮನಸ್ಸು ಮಾಡಲಿ. ಮದುವೆ ವಿಚಾರದಲ್ಲಿ ಸಂಧಾನ ಮಾತುಕತೆ ವೇಳೆ ಆತನ ಪೋಷಕರು ಈಡೇರಿಸಲಾಗದ ಷರತ್ತು ಇಟ್ಟಿದ್ದಾರೆ. ಮಗುವನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಬೇಕು. ಹಾಗಾದರೆ ಮಾತ್ರ ಪೂಜಾಳವನ್ನು ಆತ ವಿವಾಹವಾಗಿ ವಿಚ್ಛೇದನ ನೀಡಲಾಗುವುದು. ಅಲ್ಲದೆ ಈ ವೇಳೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು. ಇದಕ್ಕಾಗಿ ಮೊದಲು ಆತನ ವಿರುದ್ಧದ ಎಲ್ಲಾ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದೆಲ್ಲಾ ಷರತ್ತುಗಳನ್ನು ವಿಧಿಸಲಾಗಿದೆ. ನಮಗೆ ಹಣ ಬೇಡ, ಸಾಮಾಜಿಕ ನ್ಯಾಯ ಬೇಕು. ಆತ ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ ಎಂದು ಪ್ರತಿಭಾ ಕುಳಾಯಿ ಸವಾಲು ಹಾಕಿದರು.
ಪತ್ರಿಕಾ ಗೋಷ್ಠಿಯಲ್ಲಿ ಸಂತೃಸ್ತೆ ಪೂಜಾ ಮಾತಾಡಿ ತನ್ನ ನೋವನ್ನು ಹೇಳಿಕೊಂಡು ಗಳಗಳನೆ ಅತ್ತು ಕಣ್ನೀರು ಸುರಿಸಿದ ಘಟನೆಯೂ ನಡೆಯಿತು.
ಪ್ರಕರಣದ ಹಿನ್ನೆಲೆ
ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ತನ್ನ ಸಹಪಾಠಿಯಾಗಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿತ್ತು. ಯುವತಿ ಗರ್ಭವತಿಯಾದಾಗ ಆತ ಮದುವೆಗೆ ನಿರಾಕರಿಸಿ ತಲೆಮರೆಸಿಕೊಂಡಿದ್ದ. ಸಂತ್ರಸ್ತ ಯುವತಿಯು ಜೂನ್ 2024ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. 2024ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಬಂದ ಡಿಎನ್ಎ ಪರೀಕ್ಷಾ ವರದಿಯು, ಕೃಷ್ಣ ಜೆ. ರಾವ್ ಅವರೇ ಆ ಮಗುವಿನ ತಂದೆ ಎಂಬುದನ್ನು ಸಾಬೀತುಪಡಿಸಿದೆ. ಇದು ಪ್ರಕರಣಕ್ಕೆ ದೊಡ್ಡ ತಿರುವು ನೀಡಿತು. ಕೃಷ್ಣ ಜೆ. ರಾವ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು. ಆತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸೆಪ್ಟೆಂಬರ್ ತಿಂಗಳಿನಲ್ಲಿ ಹೈಕೋರ್ಟ್ ಆತನಿಗೆ ಜಾಮೀನು ನೀಡಿತು.

ರಾಜಕೀಯ ಮತ್ತು ಸಾಮಾಜಿಕ ಪರಿಣಾಮ
ಈ ಪ್ರಕರಣ ಪುತ್ತೂರಿನಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಕಾಂಗ್ರೆಸ್ ಮತ್ತು ಇತರ ಸಂಘಟನೆಗಳು ಬಿಜೆಪಿ ಮುಖಂಡನ ಪುತ್ರನ ಬಂಧನಕ್ಕೆ ಒತ್ತಾಯಿಸಿ ಬೀದಿಗಿಳಿದಿದ್ದವು. ಸಂತ್ರಸ್ತ ಯುವತಿಯ ಪರವಾಗಿ ಮಹಿಳಾ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಮತ್ತು ವಿಶ್ವಕರ್ಮ ಸಮಾಜದ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಪಿ. ನಂಜುoಡಿ ನ್ಯಾಯ ಒದಗಿಸಲು ಧ್ವನಿ ಎತ್ತಿದ್ದರು ಮತ್ತು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಹಿಂದೂ ಸಂಘಟನೆಗಳೂ ಸಹ ಸಂತ್ರಸ್ತ ಯುವತಿಗೆ ಅನ್ಯಾಯವಾಗಬಾರದು ಎಂದು ಒತ್ತಾಯಿಸಿ ಜಗನ್ನಿವಾಸ ರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.
ಒಟ್ಟಾರೆಯಾಗಿ ಈ ಪ್ರಕರಣವು ವೈಯಕ್ತಿಕ ವಂಚನೆಯಿoದ ಆರಂಭವಾಗಿ, ರಾಜಕೀಯ ಮುಜುಗರಕ್ಕೆ ಕಾರಣವಾಗಿ, ಅಂತಿಮವಾಗಿ ಡಿಎನ್ಎ ವರದಿಯ ಮೂಲಕ ಸತ್ಯ ಸಾಬೀತಾದ ನಂತರ ಜಗನ್ನಿವಾಸ ರಾವ್ ಅವರ ರಾಜಕೀಯ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬಿದ್ದರೂ ಮಗ ಮಾಡುತ್ತಿರುವ ವಂಚನೆಗೆ ತಂದೆ ಉತ್ತರಿಸಲಾರದೆ ಹೋದರು.

ಶೀಘ್ರದಲ್ಲೇ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಾಧ್ಯತೆ
ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್‌ಗೆ ಕೆಲವು ಷರತ್ತುಗಳ ಅನ್ವಯ ಹೈಕೋರ್ಟಿನಿಂದ ಜಾಮೀನು ಮಂಜೂರಾಗಿದೆ. ಇದೀಗ ಮಗುವಿನ ಡಿಎನ್ಎ ವರದಿಯು ಆರೋಪಿಯ ವಿರುದ್ಧವಾಗಿ ಬಂದಿರುವುದರಿoದ, ಇದು ನ್ಯಾಯಾಲಯದಲ್ಲಿ ಪ್ರಬಲ ಸಾಕ್ಷ್ಯವಾಗಿ ಪರಿಣಮಿಸಲಿದೆ. ಸಂತ್ರಸ್ತ ಯುವತಿಗೆ ಪರಿಹಾರ ಕೊಡಿಸಲು ಮತ್ತು ಮಗುವಿನ ಹಕ್ಕುಗಳನ್ನು ರಕ್ಷಿಸಲು ಈ ವರದಿ ಪ್ರಮುಖ ಪಾತ್ರ ವಹಿಸುತ್ತದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಈ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (Chargesheet) ಸಲ್ಲಿಕೆಯಾಗುವ ಸಾಧ್ಯತೆಯಿದೆ.

ಈ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯದಂತೆ ಸ್ಥಳೀಯ ಸಂಘಟನೆಗಳು ಮತ್ತು ಮಹಿಳಾ ಸಂಘಟನೆಗಳು ನಿರಂತರವಾಗಿ ನಿಗಾ ಇಟ್ಟಿವೆ. ಸಂತ್ರಸ್ತ ಯುವತಿಯು ತನಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಹಿಂದೂ ಸಂಘಟನೆಗಳು ಹಿಂದೂ ಸಮಾಜಕ್ಕೆ ನ್ಯಾಯ ಒದಗಿಸುವ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ ಎಂದು ವೇದಿಕೆಯಲ್ಲಿ ಹೇಳುತ್ತಾ ಬಂದರೂ ನಮ್ಮ ಸಮಾಜದಿಂದಲೇ ಅನ್ಯಾಯಗಳು ನಡೆದಾಗ ಬಹುತೇಕ ಮೌನವಾಗಿರುವುದು ಮತ್ತು ಅನ್ಯಧರ್ಮಿಯರಿಂದ ಆಗುವ ಆಗಬಹುದಾದ ಅನ್ಯಾಯಗಳಿಗೆ ಮಾತ್ರ ಹಿಂದೂ ಸಂಘಟನೆಗಳು ಸೀಮಿತವಾಗಿರುವಂತೆ ಕಾಣುತ್ತಿದೆ ಎಂದು ಸಾರ್ವಜನಿಕವಾಗಿ ಕೇಳಿಬರುತ್ತಿದೆ.
Belthangady
ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ
ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.
ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.
ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 25ರಂದು ವೇಣೂರು ಪೊಲೀಸ್ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್ಪಿ ನೇತೃತ್ವದ ತಂಡವು ಮಾರ್ಚ್ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.
accident
ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು
ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:
ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
crime
ಪೊಲೀಸ್ ಭೇಟೆ: ದೇವಸ್ಥಾನದ ಕಳ್ಳ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಮತ್ತು ಉರ್ವಾ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಅಂತರರಾಜ್ಯ ಕಳ್ಳ ಹಾಗೂ ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಂಜಾರು ದೇವಸ್ಥಾನದ ಹುಂಡಿ ಕಳವು: ತಮಿಳುನಾಡು ಮೂಲದ ಆರೋಪಿ ಅರೆಸ್ಟ್
ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ಮೂರು ಕಾಣಿಕೆ ಹುಂಡಿಗಳಿಂದ ಸುಮಾರು ರೂ. 25,000/- ಹಣವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಬಜಪೆ ಪೊಲೀಸರು ಮಾರ್ಚ್ 31ರಂದು ಅಂತರರಾಜ್ಯ ಕಳ್ಳ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂಬಾತನನ್ನು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿಯಾದ ಈತ, ರೈಲಿನಲ್ಲಿ ಬಂದು ಕಳ್ಳತನ ನಡೆಸಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದ. ಈತ ಉಡುಪಿಯ ಬ್ರಹ್ಮಾವರ ಠಾಣೆಯ ಕಳವು ಪ್ರಕರಣ ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಬಜಪೆ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.
9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮುಂಬೈನಲ್ಲಿ ಸೆರೆ
ಮತ್ತೊಂದು ಪ್ರಕರಣದಲ್ಲಿ, ದರೋಡೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ (LPC) ವಾರಂಟ್ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಶೋಕ ನಗರದ ನಿವಾಸಿ ಸುಹಾನ್ @ ಸೋನು (33) ಬಂಧಿತ ಆರೋಪಿ.
ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಮಾರ್ಚ್ 29ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಬೀಡುಬಿಟ್ಟಿದ್ದ ಆರೋಪಿಯನ್ನು ಉರ್ವಾ ಎಎಸ್ಐ ಲಕ್ಷ್ಮಣ್ ಮತ್ತು ತಂಡ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಈತನ ಮೇಲೆ ಉರ್ವಾ ಮತ್ತು ಮಂಗಳೂರು ಉತ್ತರ ಠಾಣೆಗಳಲ್ಲಿ ದರೋಡೆ ಸಂಚು ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಪ್ರಕರಣಗಳು ದಾಖಲಾಗಿವೆ.
ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
