Connect with us

Bantawala

ಮತದಾರ ಪಟ್ಟಿ ಮ್ಯಾಪಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿ: ಸಹಾಯಕ ಕಮಿಷನರ್‌ಗೆ ಶಾಸಕ ಅಶೋಕ್ ರೈ ಸೂಚನೆ

Published

on

ಸರ್ವ ಪಕ್ಷಗಳ ಸಭೆ ಕರೆದು ಆ ಬಳಿಕ ಪ್ರಕ್ರಿಯೆ ಮುಂದುವರೆಸುವಂತೆ ಕೇಸ್‌ವರ್ಕರ್‌ಗೂ ಸೂಚನೆ

ಪುತ್ತೂರು: ಕರ್ನಾಟಕದಲ್ಲಿ ಎಸ್‌ಐಆರ್ ಗೆ ಇನ್ನೂ ಅಧಿಕೃತ ಆದೇಶವಾಗಿಲ್ಲ ಆದರೂ ಕೆಲವು ಕಡೆಗಳಲ್ಲಿ ಬಿಎಲ್‌ಒಗಳಿಗೆ ಮತದಾರ ಪಟ್ಟಿ ಪರಿಷ್ಕರಣೆ ( ಮ್ಯಾಪಿಂಗ್) ನಡೆಸು ಆದೇಶ ನೀಡಿದ್ದೀರಿ, ಯಾವ ಆಧಾರದಲ್ಲಿ ಈ ಮ್ಯಾಪಿಂಗ್ ಪ್ರಕ್ರಿಯೆ ನನಡೆಸುತ್ತಿದ್ದೀರಿ, ನಿಮ್ಮ ಮ್ಯಾಪಿಂಗ್ ಪ್ರಕ್ರಿಯೆ ಬಗ್ಗೆ ಅನೇಕ ದೂರುಗಳು ಬಂದಿದೆ. ನೀವು ಮಾಡುತ್ತಿರುವ ಮ್ಯಾಪಿಂಗ್ ಪಕ್ರಿಯೆಯನ್ನು ತಕ್ಷಣ ನಿಲ್ಲಿಸಿ, ಈ ವಿಚಾರದಲ್ಲಿ ಎ ಸಿ, ತಹಶಿಲ್ದಾರ್ ಸೇರಿದಂಂತೆ ಚುನಾವಣಾ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳನ್ನು ಸೇರಿಸಿ ಸರ್ವ ಪಕ್ಷಗಳ ಸಭೆ ಕರೆಯುತ್ತೇನೆ ಆ ಬಳಿಕ ಮ್ಯಾಪಿಂಗ್ ಕಾರ್ಯ ಮುಂದುವರೆಸಿ ಎಂದು ಜಿಲ್ಲಾ ಮ್ಯಾಪಿಂಗ್ ಪರಿಷಕರಣೆಯ ಕೇಸ್ ವರ್ಕರ್ ಶಿವಾನಂದ ವೆಂಕಟೇಶ್ ಅವರಿಗೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.

ವಿಟ್ಲದಲ್ಲಿ ಇಂದು ನಡೆದ ಬಿಎಲ್‌ಎ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವೇಳೆ ಬಿಎಲ್‌ಎ ಗಳಿಂದ ಮತದಾರ ಪಟ್ಟಿ ಪರಿಷ್ಕರಣೆ ಮ್ಯಾಪಿಂಗ್ ಬಗ್ಗೆ ಹಲವಾರು ದೂರುಗಳು ಬಂದವು. ಬಿಎಲ್‌ಒಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ. ಬೇಕಾಬಿಟ್ಟಿ ಮ್ಯಾಪಿಂಗ್ ಮಾಡುತ್ತಿದ್ದಾರೆ. ಅವರಿಗೂ ಇಲಾಖೆಯಿಂದ ಹೇಗೆ ಮ್ಯಾಪಿಂಗ್ ಮಾಡಬೇಕು ಎಂಬ ತರಬೇತಿಯನ್ನೂ ನೀಡಿಲ್ಲ. ಎಸ್‌ಐಆರ್ ಬಗ್ಗೆ ಬಿಎಲ್‌ಒಗಳಿಗೆ ಯಾವುದೇ ಮಾಹಿತಿ ಇಲ್ಲ. ಸರಕಾರದಿಂದ ಅಧಿಕೃತ ಆದೇಶವೂ ಬಂದಿಲ್ಲ ಅದು ಹೇಗೆ ಇವರು ಮ್ಯಾಪಿಂಗ್ ಮಾಡುತ್ತಿದ್ದಾರೆ. ಖಾಲಿ ಪತ್ರಕ್ಕೆ ಸಹಿ ಹಾಕಿ ತೆಗೆದುಕೊಳ್ಳುತ್ತಿದ್ದು ಅದು ಯಾಕೆ ಎಂದು ಕೇಳಿದರೆ ಅವರ ಬಳಿ ಅಮರ್ಪಕ ಉತ್ತರವಿಲ್ಲ. ಮ್ಯಾಪಿಂಗ್ ಸರಿ ಹೊಂದದ ಹೆಸರುಗಳನ್ನು ಅಳಿಸಿ ಹಾಕಿದರೆ ಅದಕ್ಕೆ ಯಾರು ಜವಾಬ್ದಾರರು? ಈಗಾಗಲೇ ಬಿಹಾರದಲ್ಲಿ ೫೦ ಲಕ್ಷ ಮತದಾರರನ್ನು ಕೈ ಬಿಟ್ಟಿದ್ದಾರೆ. ಚುನಾವಣಾ ಆಯೋಗ ಅಥವಾ ಜಿಲ್ಲಾ ಚುನಾವಣಾ ಅಧಿಕಾರಿಗಳು ಈ ಬಗ್ಗೆ ಜನತೆಗೆ ಸ್ಪಷ್ಟನೆ ನೀಡದೇ ಇರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂಬ ಆರೋಪಗಳು ಕೇಳಿ ಬಂದವು.

ಕೇಸ್‌ವರ್ಕರ್‌ಗೆ ಕರೆ ಮಾಡಿದ ಶಾಸಕರು

ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾ ಇಲಾಖೆಯ ಮ್ಯಾಪಿಂಗ್ ಕೇಸ್ ವರ್ಕರ್ ಶಿವಾನಂದ ವಂಕಟೇಶ್ ಅವರಿಗೆ ಕರೆ ಮಾಡಿ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆ ಹೇಗೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಸರಕಾರದಿಂದ ಅಧಿಕೃತ ಆದೇಶ ಬಂದಿರುವ ಬಗ್ಗೆ ಪ್ರಶ್ನಿಸಿದ ಶಾಸಕರು ನಿಮ್ಮಿಷ್ಟಕ್ಕೆ ಈ ಕೆಲಸವನ್ನು ಮಾಡುವುದು ಬೇಡ. ಈ ಬಗ್ಗೆ ಪುತ್ತೂರು ಸಹಾಯಕ ಕಮಿಷನರ್, ತಹಶಿಲ್ದಾರ್, ಚುನಾವಣಾ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸರ್ವ ಪಕ್ಷಗಳ ಸಭೆ ಕರೆದು ಈ ಬಗ್ಗೆ ಪೂರ್ಣ ಮಾಹಿತಿ ಜನತೆಗೆ ನೀಡಬೇಕು. ಜನರಲ್ಲಿರುವ ಗೊಂದಲವನ್ನು ಪರಿಹಾರ ಮಾಡಿದ ಬಳಿಕ ನಿಮ್ಮ ಪ್ರಕ್ರಿಯೆ ಮುಂದುವರೆಸಬೇಕು ಅಲ್ಲಿಯತನಕ ಯಾವುದೇ ಪ್ರಕ್ರಿಯೆಯನ್ನು ನಡೆಸದಂತೆ ಶಾಸಕರು ಸಊಚನೆ ನೀಡಿದರು. ಅದರಂತೆ ಶೀಘ್ರ ಸಭೆ ಕರೆಯುವುದಾಗಿಯೂ ಶಾಸಕರು ತಿಳಿಸಿದರು.

Continue Reading
Advertisement

accident

ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Published

on

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ನಡೆದಿದೆ.

ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ನಿವಾಸಿ ಭಾರತಿ (48) ಅಪಘಾತಕ್ಕೀಡಾದ ಮಹಿಳೆ. ಇವರು ತನ್ನ ಮಗಳು ದೀಪ್ತಿ ಅವರೊಂದಿಗೆ ಸಜಿಪಮುನ್ನೂರಿನ ಗುಳಿಗಜ್ಜನ ಕಟ್ಟೆಗೆ ಕಾಣಿಕೆ ಹಾಕಲು ಬಂದಿದ್ದರು. ಕಾಣಿಕೆ ಮುಗಿಸಿ ವಾಪಸ್ಸಾಗುವಾಗ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬಂದ ಬಿಳಿ ಬಣ್ಣದ ಕಾರು ಮಹಿಳೆಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ: ಡಿಕ್ಕಿಯ ರಭಸಕ್ಕೆ ಭಾರತಿ ಅವರು ಗಾಳಿಯಲ್ಲಿ ಹಾರಿ ರಸ್ತೆಯ ಬದಿಗೆ ಬಿದ್ದಿದ್ದಾರೆ. ಅಪಘಾತದ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಭಾರತಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

award

ಮಂಗಳೂರು ವಿಶ್ವವಿದ್ಯಾಲಯ: ಸುಶ್ಮಿತ ಸಿ.ಎಚ್. ಅವರಿಗೆ ಅನ್ವಯಿಕ ಸಸ್ಯಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ಪ್ರದಾನ

Published

on

ಮಂಗಳೂರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಶ್ಮಿತ ಸಿ.ಎಚ್. ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.

ಅವರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಕೃಷ್ಣಕುಮಾರ್ ಜಿ. ಅವರ ಮಾರ್ಗದರ್ಶನದಲ್ಲಿ “Antidiabetic activities of Syzygium hemisphericum (Wight) Alston and Syzygium kanarense (Talbot) Raizada” (ಸಿಜಿಜಿಯಂ ಹೆಮಿಸ್ಫೆರಿಕಂ ಮತ್ತು ಸಿಜಿಜಿಯಂ ಕೆನರೆನ್ಸ್ ಸಸ್ಯಗಳ ಮಧುಮೇಹ ವಿರೋಧಿ ಚಟುವಟಿಕೆಗಳು) ಎಂಬ ವಿಷಯದ ಬಗ್ಗೆ ಸಂಶೋಧನೆ ನಡೆಸಿದ್ದರು.

2025ರ ಅಕ್ಟೋಬರ್‌ನಲ್ಲಿ ತಮ್ಮ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದ ಇವರಿಗೆ, 2026ರ ಮಾರ್ಚ್ 28ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯದ 44ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭದಲ್ಲಿ ಅಧಿಕೃತವಾಗಿ ಪಿಎಚ್.ಡಿ ಪದವಿಯನ್ನು ಪ್ರದಾನ ಮಾಡಲಾಯಿತು.

ಡಾ. ಸುಶ್ಮಿತ ಅವರು ಪ್ರಸಿದ್ಧ ಯಕ್ಷಗಾನ ಭಾಗವತರಾದ ಶ್ರೀ ಕಣಿಯೂರು ಸೂರ್ಯನಾರಾಯಣ ಭಟ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲದ ಉದ್ಯೋಗಿ ಶ್ರೀಮತಿ ಆಶಾಪಾರ್ವತಿ ದಂಪತಿಯ ಪುತ್ರಿ. ಇವರು ಯುವ ಉದ್ಯಮಿ ಶ್ರೀ ಕೃಷ್ಣ ವಿಕಾಸ್ ಅವರ ಪತ್ನಿಯಾಗಿದ್ದಾರೆ.

ತಮ್ಮ ಈ ಶೈಕ್ಷಣಿಕ ಸಾಧನೆಗೆ ಬೆನ್ನೆಲುಬಾಗಿ ನಿಂತ ತಂದೆ-ತಾಯಿ, ಸಹೋದರಿ ಹಾಗೂ ಪತಿಯವರ ನಿರಂತರ ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಡಾ. ಸುಶ್ಮಿತ ಅವರು ಈ ಸಂದರ್ಭದಲ್ಲಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಇವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದಲ್ಲೇ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Continue Reading

Bantawala

ಘನತ್ಯಾಜ್ಯ ವಿಲೇವಾರಿಯಲ್ಲಿ ಗೋಲ್ಮಾಲ್..ಸ್ಮಶಾನದಂತಾದ ವಿಟ್ಲದ ಘನತ್ಯಾಜ್ಯ ಘಟಕ..ಬೆಂಕಿ ಇಟ್ಟು ಸುಡುವ ಮೂಲಕ ಜನರ ಆರೋಗ್ಯದಲ್ಲಿ ಚೆಲ್ಲಾಟ..ಸಾಮಾಜಿಕ ಹೋರಾಟಗಾರನಿಂದ ಪೊಲೀಸ್ ಠಾಣೆಗೆ ದೂರು..

Published

on

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯವಸ್ಥಿತವಾಗಿ ಘನತ್ಯಾಜ್ಯ ವಿಲೇವಾರಿ ಮಾಡಬೇಕಾಗಿದ್ದ ಜವಾಬ್ದಾರಿಯುತ ಅಧಿಕಾರಿ, ಸಿಬ್ಬಂದಿಗಳು ತ್ಯಾಜ್ಯಗಳ ರಾಶಿಗೆ ಘಟಕದ ಆವರಣದಲ್ಲೇ ಬೆಂಕಿಹಾಕಿ ಸುಡುವ ಮೂಲಕ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದಾರೆ.

ವಿಟ್ಲದ ಬೊಬ್ಬೆಕೇರಿ ಎಂಬಲ್ಲಿ ಕಳೆದ ಮೂರು ತಿಂಗಳಿಂದ ಘನತ್ಯಾಜ್ಯ ವಿಲೇವಾರಿಯಲ್ಲಿ ಭಾರೀ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿ ಸಾಮಾಜಿಕ ಹೋರಾಟಗಾರ ಧನಂಜಯ ಎಂಬವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ಸೇರಿದಂತೆ ಇತರ ಘನತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕಾಗಿತ್ತು. ಅದಕ್ಕಾಗಿಯೇ ಅಂಗಡಿ ಮಾಲಿಕರಿಂದ, ಜನ ಸಾಮಾನ್ಯರಿಂದ ಹಣ ವಸೂಲಿ ಕೂಡಾ ಮಾಡುತ್ತಿದ್ದಾರೆ. ಆದರೆ ಮೂಟೆ ಮೂಟೆ ಘನತ್ಯಾಜ್ಯಗಳನ್ನು ವ್ಯವಸ್ಥಿತ ರೀತಿಯಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬದಲು ಘಟಕದ ಆವರಣದಲ್ಲೇ ಸ್ಮಶಾನದಲ್ಲಿ ಹೆಣಗಳನ್ನು ಸುಡುವ ರೀತಿಯಲ್ಲಿ ಸುಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರಿಂದ ಏಳುತ್ತಿರುವ ವಿಷಕಾರಿ ಹೊಗೆಯು ಪರಿಸರಕ್ಕೆ, ಪರಿಸರ ನಿವಾಸಿಗಳ ಆರೋಗ್ಯಕ್ಕೆ ಹಾನಿ ಮಾಡುವುದಲ್ಲದೇ, ಸುಮಾರು 30 ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಸಿಸುವ ಜನರ ಆರೋಗ್ಯದ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ ಎಂಬುದು ವೈಜ್ಞಾನಿಕವಾಗಿ ಸಂಶೋಧನೆಯಲ್ಲಿ ಸಾಬೀತಾಗಿದೆ.

ಈ ಅಕ್ರಮ ಚಟುವಟಿಕೆಯು ಪರಿಸರ ಸಂರಕ್ಷಣಾ ಕಾಯ್ದೆ 1986 (Environment Protection Act 1986), ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆ 1981 (Air Pollution Act 1981) ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ 2016 ರ (Plastic Waste Management Rules 2016) ನೇರ ಉಲ್ಲಂಘನೆಯಾಗಿದೆ. ಸರ್ಕಾರದ ಅನುದಾನವನ್ನು ಘನತ್ಯಾಜ್ಯ ವಿಲೇವಾರಿಗೆ ಬಳಸದೆ ದುರ್ಬಳಕೆ ಮಾಡಲಾಗುತ್ತಿದೆ ಪಟ್ಟಣ ಪಂಚಾಯತಿನಲ್ಲಿ ಪ್ಲಾಸ್ಟಿಕ್‌ ವಿಲೇವಾರಿಗೆ ಸಾಕಷ್ಟು ಅನುದಾನ ಮೀಸಲಿಟ್ಟಿದ್ದರೂ ಅದನ್ನು ಸರಿಯಾಗಿ ಬಳಕೆ ಮಾಡದೆ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ, ಆರೋಗ್ಯಾಧಿಕಾರಿ, ಸುಪರ್‌ವೈಸರ್‌ ಮತ್ತು ಕೌನ್ಸಿಲರ್‌ ಇವರೆಲ್ಲರೂ ಸೇರಿ ಸರಕಾರದಿಂದ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡು ಪ್ಲಾಸ್ಟಿಕನ್ನು ಸುಟ್ಟು ಶಿಕ್ಷಾರ್ಹ ಅಪರಾಧವನ್ನೆಸಗುತ್ತಿದ್ದಾರೆ ಎಂದು ದೂರುದಾರರು ಗಂಭೀರವಾಗಿ ಆರೋಪಿಸಿದ್ದಾರೆ.

ಈ ಅಕ್ರಮ ಹಾಗೂ ಅವೈಜ್ಞಾನಿಕ ವಿಲೇವಾರಿಯು ಪರಿಸರ ಸಂರಕ್ಷಣಾ ಕಾಯ್ದೆ ಹಾಗೂ ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆಗಳ ನೇರ ಉಲ್ಲಂಘನೆಯಾಗಿದೆ. ಸರ್ಕಾರದ ಅನುದಾನವನ್ನು ಸರಿಯಾಗಿ ಬಳಸದೆ ಗೋಲ್ಮಾಲ್ ನಡೆಸುವ ಮೂಲಕ ಸ್ಪಷ್ಟವಾಗಿ ದುರ್ಬಳಕೆ ಮಾಡಲಾಗುತ್ತಿದೆ ಮತ್ತು ಈ ಬಗ್ಗೆ ಪ್ರಶ್ನಿಸಿದರೆ ಸಂಬಂಧಿಸಿದ ಅಧಿಕಾರಿ ಚೇತನ್ ಎಂಬವರು ಬೇಜವಾಬ್ದಾರಿ ಹಾಗೂ ಹಾರಿಕೆಯ ಉತ್ತರ ನೀಡುತ್ತಿದ್ದಾರೆ ಎಂದು ದೂರುದಾರರು ವಿವರಿಸಿದ್ದಾರೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಸರ್ಕಾರದ ಹಣವನ್ನು ಲೂಟಿ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ. ಸದ್ಯ ವಿಟ್ಲ ಪೊಲೀಸರು ಈ ದೂರಿನ ಕುರಿತು ಎನ್‌ಸಿಆರ್ (NCR) ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Trending

Copyright © 2025 Deevatige