Article
ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ರಾಶಿಗಟ್ಟಲೆ ತ್ಯಾಜ್ಯಗಳ ರಾಶಿ..ಕಣ್ಮುಚ್ಚಿ ಕುಳಿತ ಕನ್ಯಾನ ಗ್ರಾಮ ಪಂಚಾಯತ್..ಪರಿಸರ ನಾಶಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶ..
ಕನ್ಯಾನ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ಬೇಕಾಬಿಟ್ಟಿ ತ್ಯಾಜ್ಯಗಳ ರಾಶಿ ಬಿದ್ದಿವೆ. ಇದೇನು ರಕ್ಷಿತಾರಣ್ಯ ಎಂಬುದು ತ್ಯಾಜ್ಯಗಳ ರಾಶಿ ಹಾಕುವ ತಿಪ್ಪೆಗುಂಡಿಯೇ ಎಂಬುದು ಅರ್ಥವಾಗುತ್ತಿಲ್ಲ. ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದುಹೋಗುವ ಕಾಂಕ್ರೀಟ್ ರಸ್ತೆಯು ಕನ್ಯಾನದಿಂದ ಕೊಳ್ನಾಡು ಗ್ರಾಮವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ.

ಕುಡ್ತಮುಗೇರು ಮತ್ತು ಸಾಲೆತ್ತೂರಿನಿಂದ ಕನ್ಯಾನ, ಕರೋಪಾಡಿ, ಕೇರಳದ ಬಾಯಾರು, ಉಪ್ಪಳವನ್ನು ಸಂಪರ್ಕಿಸಬೇಕಾದರೆ ವಿಟ್ಲ ಮೂಲಕ ಸುತ್ತು ಬಳಸಿ ಇಪ್ಪತೈದು ಕಿಲೋ ಮೀಟರ್ ದೂರ ಕ್ರಮಿಸಬೇಕಾಗಿತ್ತು.

ಜನರ ಸಂಕಷ್ಟಗಳನ್ನು ಮನಗಂಡ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು ಸ್ಥಳೀಯ ಸಂಘ-ಸಂಸ್ಥೆಗಳ ಒಟ್ಟುಗೂಡಿಸಿ ಮೂವತ್ತು ವರ್ಷಗಳ ಹಿಂದೆ ಮುನ್ನೂರಕ್ಕೂ ಹೆಚ್ಚು ಸಾರ್ವಜನಿಕರು ಕಳೆಂಜಿಮಲೆ ರಕ್ಷಿತಾರಣ್ಯದ ಮೂಲಕ ಒಂದು ವಾರಗಳ ಕಾಲ ಶ್ರಮದಾನ ನಡೆಸುವ ಮೂಲಕ ವಾಹನ ಸಂಚಾರಕ್ಕೆ ಅನುಕೂಲ ಆಗುವಂತೆ ರಸ್ತೆ ಅಭಿವೃದ್ಧಿ ಮಾಡಿದ್ದರು.

ಆ ಬಳಿಕ ಶಾಸಕ ಬಿ.ರಮಾನಾಥ ರೈಯವರು ರಾಜ್ಯ ಅರಣ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಕೊಳ್ನಾಡು ಗ್ರಾಮವನ್ನು ಅಭಿವೃದ್ಧಿ ಮಾಡುವ ಉದ್ದೇಶದಿಂದ ದತ್ತು ಪಡೆದಿದ್ದರು.
ಕಳೆಂಜಿಮಲೆ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಸಂಪರ್ಕ ರಸ್ತೆಯ ಮತ್ತಷ್ಟು ಅಭಿವೃದ್ಧಿ ಮಾಡುವ ಸಲುವಾಗಿ ಅರಣ್ಯ ಇಲಾಖೆಯ ಒಪ್ಪಿಗೆ ಬೇಕಾಗಿತ್ತು. ಅದಕ್ಕಾಗಿ ವಿಧಾನಸಭೆಯಲ್ಲಿ ಅರಣ್ಯ ಸಚಿವ ರಮಾನಾಥ ರೈಯವರು ವಿಚಾರ ಮಂಡಿಸಿ ಅನುಮತಿ ಕೊಡಿಸುವಲ್ಲಿ ಯಶಸ್ವಿಯಾದರು.

ಬಳಿಕ ಸುದ್ದಿ ರಸ್ತೆಗೆ ಮೂವತ್ತು ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿ ಕಾಂಕ್ರಿಟೀಕರಣ ಮಾಡಿಸುವಲ್ಲಿ ಸಚಿವ ರೈಯವರು ಯಶಸ್ವಿಯಾದರು.

ತಿಪ್ಪೆಗುಂಡಿಯಾದ ರಕ್ಷಿತಾರಣ್ಯ.
ಇದೀಗ ಕೆಲ ತಿಂಗಳಿಂದ ಕಳೆಂಜಿಮಲೆ ರಕ್ಷಿತಾರಣ್ಯ ಎಂಬ ಹಸಿರು ಸಿರಿಯ ಪ್ರಕೃತಿ ಸೌಂದರ್ಯವು ಪ್ಯಾಂಪರ್ಸ್, ಮಾಂಸದ ತ್ಯಾಜ್ಯಗಳು, ಪ್ಲ್ಯಾಸ್ಟಿಕ್ ಚೀಲಗಳು ಹಾಗೂ ತ್ಯಾಜ್ಯಗಳ ರಾಶಿಗಳಿಂದಾಗಿ ಕೊಳೆತು ನಾರುತ್ತಿದೆ. ಐವತ್ತಕ್ಕೂ ಹೆಚ್ಚು ಬೀದಿನಾಯಿಗಳ ವಾಸಸ್ಥಾನವಾಗಿದ್ದು ದುರ್ನಾತದಿಂದಾಗಿ ವಾಹನ ಸವಾರರು ಸಂಚರಿಸುದೇ ಅಸಾಧ್ಯವಾಗಿದೆ.

ಗಾಢ ನಿದ್ರೆಯಲ್ಲಿ ಕನ್ಯಾನ ಗ್ರಾಮ ಪಂಚಾಯತ್..
ರಕ್ಷಿತಾರಣ್ಯದೊಳಗೆ ತ್ಯಾಜ್ಯ ಎಸೆಯುವುದನ್ನು ತಡೆಯುವಂತೆ ಸಿಸಿ ಕ್ಯಾಮೆರಾ ಅಳವಡಿಸಬೇಕು. ರಾಶಿ ಬಿದ್ದಿರುವ ತ್ಯಾಜ್ಯಗಳನ್ನು ತೆರವುಗೊಳಿಸಬೇಕು ಹಾಗೂ ರಕ್ಷಿತಾರಣ್ಯದ ಬಗ್ಗೆ ನಿಗಾವಹಿಸಬೇಕೆಂದು ಕನ್ಯಾನ ಗ್ರಾಮ ಪಂಚಾಯತ್ ಗೆ ಸಾರ್ವಜನಿಕರು, ವಾಹನ ಸವಾರರು ಅದೆಷ್ಟೋ ಬಾರಿ ಮನವಿ ಮಾಡುತ್ತಿದ್ದರೂ ಈವರೆಗೂ ಅಧಿಕಾರಿಗಳು, ಪಂಚಾಯತ್ ಸದಸ್ಯರುಗಳು ಸ್ಪಂದಿಸಿಲ್ಲವಾಗಿದೆ. ರಾಶಿ ಬಿದ್ದಿರುವ ತ್ಯಾಜ್ಯಗಳ ಮುಂದೆ ಕೇವಲ ಒಂದು ಬ್ಯಾನರ್ ತೂಗು ಹಾಕುವ ಮೂಲಕ ಗ್ರಾಮ ಪಂಚಾಯತ್ ತನ್ನ ಅತಿ ಬುದ್ಧಿವಂತಿಕೆ ಪ್ರದರ್ಶಿಸಿದೆ.
ಹೋರಾಟಕ್ಕೆ ಸಜ್ಜಾದ ರಕ್ಷಿತಾರಣ್ಯ ರಕ್ಷಣಾ ಸಮಿತಿ..
ಕಾಡು ಬೆಳೆಸಿ-ನಾಡು ಉಳಿಸಿ, ಪ್ರಕೃತಿಯೇ ನಮ್ಮ ಉಸಿರು..ಇದೆಲ್ಲಾ ಕೇವಲ ಮೈಕ್ ಹಿಡಿದು ಭಾಷಣ ಬಿಗಿಯಲು ಮಾತ್ರ ಹೇಳಿ ಮಾಡಿಸಿದಂತಾಗಿದೆ. ತಕ್ಷಣವೇ ರಕ್ಷಿತಾರಣ್ಯದ ಒಳಭಾಗದಲ್ಲಿ ರಾಶಿ ಬಿದ್ದಿರುವ ತ್ಯಾಜ್ಯಗಳನ್ನು ತೆರವು ಮಾಡಿ ಸಿಸಿ ಕ್ಯಾಮೆರಾ ಅಳವಡಿಸದಿದ್ದಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಅಧಿಕಾರಿಗಳ ಮತ್ತು ಸದಸ್ಯರ ವಿರುದ್ಧ ಕಾನೂನು ಸಮರ ನಡೆಸಲು ರಕ್ಷಿತಾರಣ್ಯ ರಕ್ಷಣಾ ಸಮಿತಿ ಸಿದ್ಧತೆ ನಡೆಸಿದೆ.

Article
ಹೊಸ ಭರವಸೆಯ ಹೊಸ ವರ್ಷ: ‘ದೀವಟಿಗೆ ನ್ಯೂಸ್’ ಕಡೆಯಿಂದ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು
ಚೈತ್ರ ಮಾಸದ ಆಗಮನ, ಪ್ರಕೃತಿಯಲ್ಲಿ ಹೊಸ ಚಿಗುರು, ಕೋಗಿಲೆಯ ಗಾಯನ… ಇವೆಲ್ಲವೂ ಹೊತ್ತು ತರುವುದು ಸೌರಮಾನ ಯುಗಾದಿಯ ಸಂಭ್ರಮವನ್ನು. ಈ ಶುಭ ಸಂದರ್ಭದಲ್ಲಿ ‘ದೀವಟಿಗೆ ನ್ಯೂಸ್’ ತನ್ನೆಲ್ಲಾ ಪ್ರೀತಿಯ ಓದುಗರಿಗೆ ಹಾಗೂ ಜಾಹೀರಾತುದಾರರಿಗೆ ಕ್ರೋಧಿ ನಾಮ ಸಂವತ್ಸರದ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತದ
ಬೆಳಕಿನ ಹಾದಿಯಲ್ಲಿ ‘ದೀವಟಿಗೆ’ಯ ಪಯಣ
ಹೆಸರೇ ಸೂಚಿಸುವಂತೆ, ಕತ್ತಲೆಯನ್ನು ದೂರಮಾಡಿ ಸತ್ಯದ ಬೆಳಕನ್ನು ಪಸರಿಸುವ ಉದ್ದೇಶದೊಂದಿಗೆ ಆರಂಭವಾದ ನಮ್ಮ ‘ದೀವಟಿಗೆ ನ್ಯೂಸ್’ ಇಂದು ಓದುಗರ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆದು ನಿಂತಿರುವುದು ನಮ್ಮ ಹೆಮ್ಮೆ. ವೇಗವಾಗಿ ಸುದ್ದಿ ನೀಡುವುದರ ಜೊತೆಗೆ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ ನಿಮಗೆ ತಲುಪಿಸುತ್ತಿದ್ದೇವೆ. ಜನರ ಸಮಸ್ಯೆಗಳಿಗೆ ಧ್ವನಿಯಾಗಿ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸದಲ್ಲಿ ನಾವು ಸದಾ ಮುಂದು. ಅಲ್ಪ ಅವಧಿಯಲ್ಲಿಯೇ ಸಾವಿರಾರು ಓದುಗರನ್ನು ತಲುಪಿರುವ ನಮ್ಮ ಈ ಬೆಳವಣಿಗೆಗೆ ನಿಮ್ಮ ಪ್ರೋತ್ಸಾಹವೇ ಅಡಿಪಾಯ.
“ಬೆಲ್ಲದ ಸಿಹಿ, ಬೇವಿನ ಕಹಿ ಎರಡನ್ನೂ ಸಮನಾಗಿ ಸ್ವೀಕರಿಸುವಂತೆ ಪ್ರೇರೇಪಿಸುವ ಯುಗಾದಿಯು, ನಿಮ್ಮ ಜೀವನದಲ್ಲಿ ಬರೀ ಸುಖ-ಸಂತೋಷವನ್ನೇ ತುಂಬಲಿ.”

ಜೀವನವೆಂದರೆ ಸುಖ-ದುಃಖಗಳ ಸಮ್ಮಿಶ್ರಣ. ಈ ಯುಗಾದಿಯು ನಿಮ್ಮ ಬದುಕಿನ ಕಷ್ಟಗಳನ್ನೆಲ್ಲಾ ದೂರ ಮಾಡಿ, ಯಶಸ್ಸಿನ ಸಿಹಿಯನ್ನು ಉಣಿಸಲಿ. ಕೃಷಿ, ವ್ಯಾಪಾರ, ಶಿಕ್ಷಣ ಹಾಗೂ ಕಲೆ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿರುವ ನಮ್ಮ ಓದುಗರಿಗೆ ಈ ವರ್ಷ ಅದೃಷ್ಟದ ವರ್ಷವಾಗಲಿ ಎಂದು ಆಶಿಸುತ್ತೇವೆ.
ನಿಮ್ಮ ನೆಚ್ಚಿನ ದೀವಟಿಗೆ ನ್ಯೂಸ್, ಮುಂದಿನ ದಿನಗಳಲ್ಲಿ ಇನ್ನು ಹತ್ತು ಹಲವು ಹೊಸ ಬದಲಾವಣೆಗಳೊಂದಿಗೆ, ತಂತ್ರಜ್ಞಾನದ ಸುಧಾರಣೆಯೊಂದಿಗೆ ನಿಮ್ಮ ಮನೆಮನಗಳನ್ನು ತಲುಪಲು ಸಜ್ಜಾಗಿದೆ. ನಿಮ್ಮ ಪ್ರೀತಿ ಮತ್ತು ವಿಶ್ವಾಸ ಹೀಗೆಯೇ ಮುಂದುವರಿಯಲಿ ಮತ್ತೊಮ್ಮೆ ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು!
Article
ಸಂಚಾರ ನಿಯಮ ಉಲ್ಲಂಘನೆ: ಸುಳ್ಯದ ಯುವಕನಿಗೆ 15 ದಿನಗಳ ‘ಸಮುದಾಯ ಸೇವೆ’ಯ ವಿನೂತನ ಶಿಕ್ಷೆ!
ಸಂಚಾರ ನಿಯಮಗಳನ್ನು ಪದೇ ಪದೇ ಗಾಳಿಗೆ ತೂರುವವರಿಗೆ ಸುಳ್ಯದ ನ್ಯಾಯಾಲಯವು ಒಂದು ಕಠಿಣ ಹಾಗೂ ಸಮಾಜಮುಖಿ ಸಂದೇಶ ರವಾನಿಸಿದೆ. ಸಂಚಾರ ನಿಯಮ ಉಲ್ಲಂಘಿಸಿದ ಯುವಕನೊಬ್ಬನಿಗೆ ಕೇವಲ ದಂಡ ವಿಧಿಸುವುದಷ್ಟೇ ಅಲ್ಲದೆ, ಸಾರ್ವಜನಿಕವಾಗಿ ನಿಂತು ‘ಸಮುದಾಯ ಸೇವೆ’ ಮಾಡುವ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳುವಂತೆ ಐತಿಹಾಸಿಕ ತೀರ್ಪು ನೀಡಿದೆ.

ಘಟನೆಯ ಸಾರಾಂಶ
ಸುಳ್ಯದ ನಿವಾಸಿಯಾದ ರಕ್ಷಿತ್ ಜಿ. ಎಂಬಾತ ಕಳೆದ ಮಾರ್ಚ್ 12ರಂದು ಪಟ್ಟಣದ ರಸ್ತೆಯಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸುತ್ತಿದ್ದನು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂತೋಷ್ ಬಿಪಿ ಅವರು ಐ ಎಮ್ ವಿ ಆ್ಯಕ್ಟ್ ಅಡಿಯಲ್ಲಿ ಕಲಂ 119 R/w 177, 184, 194(C) ರಂತೆ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ, ಸುಳ್ಯದ ಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ನ್ಯಾಯಾಲಯದ ‘ಜಾಗೃತಿ’ಯ ಪಾಠ!
ಪ್ರಕರಣದ ವಿಚಾರಣೆ ನಡೆಸಿದ ಸುಳ್ಯದ ಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು, ಆರೋಪಿತನ ನಡವಳಿಕೆಯಲ್ಲಿ ಬದಲಾವಣೆ ತರಲು ಒಟ್ಟು 3,000 ರೂಪಾಯಿ ನಗದು ದಂಡ ವಿಧಿಸಿದೆ. ಚಾಲನಾ ಪರವಾನಿಗೆಯನ್ನು (Driving License) ಮೂರು ತಿಂಗಳ ಕಾಲ ರದ್ದುಗೊಳಿಸಿದೆ. ಮಾತ್ರವಲ್ಲದೆ ಮಾರ್ಚ್ 15 ರಿಂದ 29 ರವರೆಗೆ ಒಟ್ಟು 15 ದಿನಗಳ ಕಾಲ ಸುಳ್ಯ ಪಟ್ಟಣದ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ಜಾಗೃತಿಯ ಫಲಕ ಹಿಡಿದು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂಬ ಸಮುದಾಯ ಸೇವೆ (ವಿಶಿಷ್ಟ ಶಿಕ್ಷೆ)ಯನ್ನು ವಿಧಿಸಿದೆ.

ಇದೇ ಮೊದಲಲ್ಲ ! ರಾಜ್ಯದ ಇತರ ಜಿಲ್ಲೆಗಳಲ್ಲೂ ಇಂತಹ ಮಾದರಿ ಶಿಕ್ಷೆ!
ಸುಳ್ಯದಲ್ಲಿ ನಡೆದ ಈ ಘಟನೆಯು ಅಪರೂಪದ್ದಾಗಿದ್ದರೂ, ಕರ್ನಾಟಕದ ಇತರ ನ್ಯಾಯಾಲಯಗಳು ಈ ಹಿಂದೆ ಇಂತಹದ್ದೇ ‘ಸಮುದಾಯ ಸೇವೆ’ಯ ತೀರ್ಪುಗಳನ್ನು ನೀಡಿ ಸಾರ್ವಜನಿಕರ ಗಮನ ಸೆಳೆದಿವೆ: ಕಳೆದ ವರ್ಷ ಮಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ, ನ್ಯಾಯಾಲಯವು ಒಂದು ವಾರ ಕಾಲ ನಗರದ ಪ್ರಮುಖ ವೃತ್ತದಲ್ಲಿ ಸಂಚಾರ ನಿಯಂತ್ರಣಕ್ಕೆ ಪೊಲೀಸರಿಗೆ ಸಹಕರಿಸುವಂತೆ ಆದೇಶ ನೀಡಿತ್ತು. ಬೆಂಗಳೂರು ಟ್ರಾಫಿಕ್ ಪೊಲೀಸರ ಮೇಲೆ ಹಲ್ಲೆ ಅಥವಾ ತೀವ್ರ ನಿಯಮ ಉಲ್ಲಂಘನೆ ಮಾಡಿದ ಪ್ರಕರಣಗಳಲ್ಲಿ, ನಗರದ ಸಂಚಾರ ನಿರ್ವಹಣಾ ಕೇಂದ್ರದಲ್ಲಿ (TMC) ಕುಳಿತು ಸಂಚಾರ ನಿಯಮಗಳ ಕುರಿತ ವಿಡಿಯೋಗಳನ್ನು ವೀಕ್ಷಿಸುವ ಅಥವಾ ಪಾರ್ಕ್‌ಗಳಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಶಿಕ್ಷೆಯನ್ನು ವಿಧಿಸಿದ ಉದಾಹರಣೆಗಳಿವೆ. ಮೈಸೂರುನಲ್ಲಿ ಹೆಲ್ಮೆಟ್ ರಹಿತ ಚಾಲನೆ ಮತ್ತು ಅತೀ ವೇಗದ ಚಾಲನೆಗೆ ಸಂಬಂಧಿಸಿದಂತೆ, ಯುವಕರಿಗೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ (Trauma Center) ಅಪಘಾತಕ್ಕೊಳಗಾದವರಿಗೆ ನೆರವಾಗುವ ಮೂಲಕ ‘ರಸ್ತೆ ಸುರಕ್ಷತೆಯ ಬೆಲೆ’ ಏನೆಂದು ತಿಳಿಯುವಂತೆ ಆದೇಶಿಸಿದ ನಿದರ್ಶನಗಳಿವೆ.

ಸಾರ್ವಜನಿಕ ವಲಯದಲ್ಲಿ ಶ್ಲಾಘನೆ
ಸಾಮಾನ್ಯವಾಗಿ ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ಕಟ್ಟಿ ಕೈತೊಳೆದುಕೊಳ್ಳುವವರೇ ಹೆಚ್ಚು. ಆದರೆ, “ದುಡ್ಡಿನ ದಂಡಕ್ಕಿಂತ ನೈತಿಕ ದಂಡ ದೊಡ್ಡದು” ಎಂಬ ತತ್ವದಡಿ ನ್ಯಾಯಾಲಯ ನೀಡುವ ಇಂತಹ ಶಿಕ್ಷೆಗಳು ತಪ್ಪಿತಸ್ಥರಲ್ಲಿ ಪಶ್ಚಾತ್ತಾಪ ಮೂಡಿಸುತ್ತವೆ. ಪೊಲೀಸ್ ಇಲಾಖೆಯ ಚುರುಕಾದ ಕ್ರಮ ಮತ್ತು ನ್ಯಾಯಾಲಯದ ಈ ಸಮಾಜಮುಖಿ ತೀರ್ಪು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ರಸ್ತೆ ಸುರಕ್ಷತೆ ಎಂಬುದು ಕೇವಲ ಕಾನೂನಲ್ಲ, ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಸುಳ್ಯದ ಈ ಘಟನೆಯು ಇಡೀ ರಾಜ್ಯಕ್ಕೆ ‘ಸಂಸ್ಕಾರಯುತ ಸಂಚಾರ’ದ ಸಂದೇಶ ರವಾನಿಸಿದೆ. “ಕೇವಲ ದಂಡ ವಿಧಿಸುವುದಲ್ಲದೆ, ಸಮಾಜದಲ್ಲಿ ಜವಾಬ್ದಾರಿಯುತ ನಡವಳಿಕೆಯನ್ನು ಬೆಳೆಸುವ ನಿಟ್ಟಿನಲ್ಲಿ ನ್ಯಾಯಾಲಯವು ಈ ‘ಸಮುದಾಯ ಸೇವೆ’ಯ ಆದೇಶ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.”

Article
ಕಟುಕರ ಕೈಸೇರಿ ಬಚಾವಾದ ಹಾಲು ಕೊಡುವ ಹಸುಗಳು..ವಿಟ್ಲ ಪೊಲೀಸರ ಸಹಕಾರದಲ್ಲಿ ದೈಗೋಳಿ ಕಾಮಧೇನು ಗೋಶಾಲೆಯಲ್ಲಿ ಮರು ಜನ್ಮ ಪಡೆದ ಗೋವುಗಳು.
ಕರಾವಳಿಯಲ್ಲಂತೂ ಅಕ್ರಮ ಗೋಸಾಗಾಟ ರಾಜಕೀಯ ಬೆಳವಣಿಗೆಗೆ ಪೌಷ್ಟಿಕಾಂಶವೆಂದೇ ಹೇಳಬೇಕು. ಅಕ್ರಮ ದನ ಸಾಗಾಟವನ್ನು ತಡೆಹಿಡಿದು ಕಾನೂನಾತ್ಮಕವಾಗಿ ಅಕ್ರಮ ಸಾಗಾಟಗಾರನ್ನು ಪೊಲೀಸರಿಗೊಪ್ಪಿಸುವ ಮಂದಿ ಕೆಲವರಾದರೆ, ಅಕ್ರಮ ಗೋಸಾಗಾಟವನ್ನು ತಡೆಹಿಡಿದು ಸಾಗಾಟಗಾರರೊಡನೆ ಡೀಲು ಕುದುರಿಸಿ ಹಣ ಪಡೆದು ಗೋವು ಸಾಗಾಟಕ್ಕೆ ದಾರಿ ಮಾಡಿಕೊಡುವ ಗೋಪ್ರೇಮಿಗಳು ಕತ್ತಲಿನಲ್ಲಿ ಅಗಾಗ ಸಿಕ್ಕಿ ಬೀಳುತ್ತಲೇ ಇರುತ್ತಾರೆ. ಅಕ್ರಮ ಗೋ ಸಾಗಾಟವನ್ನು ತಡೆಹಿಡಿದು ಯಾವಾಗ ಪೊಲೀಸರ ವಶಕ್ಕೆ ಸಿಕ್ಕಿತೋ ಈ ಗೋವುಗಳನ್ನು ಏನು ಮಾಡುವುದು ಎಂಬಲ್ಲಿಗೆ ಪೊಲೀಸರು ತಲೆಕೆರೆದು ಕೊಂಡಾಗ ಗೋಪ್ರೇಮಿಗಳ ಫೋನುಗಳು ಪೊಲೀಸರ ಕಿವಿ ತಟ್ಟುತ್ತದೆ. ನಮಗೆ ಗೋವುಗಳನ್ನು ಕೊಡಿ ನಾವು ಮನೆಯಲ್ಲಿ ಆರಾಮವಾಗಿ ಸಾಕುತ್ತೇವೆ ಎಂದು..ಮತ್ತೆ ಅದು ಹೋಗುವುದು ಕಟುಕರ ಕೈಗೆ ಎಂಬುವುದು ಪೊಲೀಸರಿಗೂ ಗೊತ್ತು.! ಅದಕ್ಕಾಗಿ ಅಧಿಕೃತ ಗೋಶಾಲೆಗಳ ಕದ ಬಡಿಯುವುದು ಪೊಲೀಸರ ಸಾಹಸವೇ ಸರಿ. ಚುನಾವಣಾ ಸಂದರ್ಭದಲ್ಲಿ ಗೋ ರಕ್ಷಣೆಯ ಹೆಸರಲ್ಲಿ ಮತ ಬೇಡುವ ಬಿಜೆಪಿ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಗ್ರಾಮಕ್ಕೊಂದು ಗೋಶಾಲೆ ನಿರ್ಮಾಣ ಮಾಡುವ ವಾಗ್ದಾನ ನೀಡಿತ್ತು. ಆದರೆ ಅಧಿಕಾರ ದಕ್ಕಿದ ಹನ್ನೆರಡು ವರ್ಷಗಳಲ್ಲಿ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಭರವಸೆ ಕಸದ ತೊಟ್ಟಿ ಸೇರಿಕೊಂಡಿದೆ. ಗೋವುಗಳು ಭಕ್ಷಕರ ಹೊಟ್ಟೆ ಸೇರಲು ದಾರಿ ಸುಗಮವಾಗಿದೆ.

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಮಂಡ್ಯ ಮೂಲದ ಹಿಂದೂ ಯುವಕರಿಬ್ಬರು ಸಾಲೆತ್ತೂರಿನ ಶಾಫಿ ಎಂಬಾತನಿಗೆ ನಕಲಿ ದಾಖಲೆ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಗೋವುಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಗೋಸಾಗಾಟ ತಡೆಯಲು ಸಂಘಟನೆಗಳ ಕಾರ್ಯಕರ್ತರು ರೆಡಿಯಾಗಿದ್ದಾರೆಯೇ ವಿನಹ ಆ ಬಳಿಕ ಗೋವುಗಳಿಗೆ ಯಾರು ಗತಿ ಎಂಬುದನ್ನು ಈವರೆಗೂ ಯಾವುದೇ ಸಂಘಟನೆಗಳಾಗಲೀ.. ಗೋರಕ್ಷಣೆ ಬಗ್ಗೆ ವೇದಿಕೆಯಲ್ಲಿ ಮೈಕ್ ಹಿಡಿದು ಬೊಬ್ಬೆ ಹೊಡೆಯುವ ರಾಜಕೀಯ ಪಕ್ಷದ ಮುಖಂಡರಾಗಲೀ ಯೋಚಿಸುತ್ತೂ ಇಲ್ಲ..ಸಹಕಾರ ನೀಡುತ್ತಲೂ ಇಲ್ಲ ಎಂಬುದು ನೂರರಷ್ಟು ಸತ್ಯ.

ನೋಡಲಾಗುತ್ತಿಲ್ಲ ಮೂಕ ಪ್ರಾಣಿಗಳ ವೇದನೆ.
ಮೂರು ದಿನಗಳ ಹಿಂದೆ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ರಸ್ತೆಯ ಕರೈ ಎಂಬಲ್ಲಿ ಪತ್ತೆ ಹಚ್ಚಿದ ಗೋವುಗಳ ಪರಿಸ್ಥಿತಿಯೂ ಇದೇ ಆಗಿದೆ. ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಎರಡು ಗೋವುಗಳು ಸಾಕಷ್ಟು ಪ್ರಮಾಣದಲ್ಲಿ ದೈಹಿಕವಾಗಿ ಗಾಯಗೊಂಡಿತ್ತು. ಪೊಲೀಸರು ವಶಕ್ಕೆ ಪಡೆದ ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲು ಸಾಕಷ್ಟು ಸಮಯಾವಕಾಶ ಬೇಕಾಗುತ್ತಿದೆ.
ರಸ್ತೆಯಲ್ಲಿ ತಡೆಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಬಳಿಕ ಗೋಪ್ರೇಮಿ ಕಾರ್ಯಕರ್ತರ ಜವಾಬ್ದಾರಿ ಮುಗಿಯಿತೇ.? ಗೋವುಗಳಿಗೆ ನೀರು, ಆಹಾರ ನೀಡುವುದು ಪೊಲೀಸರ ಜವಾಬ್ದಾರಿಯೇ.? ಪೊಲೀಸ್ ಠಾಣೆಗಳಲ್ಲಿ ಹುಲ್ಲು, ಹಿಂಡಿ ಸೇರಿದಂತೆ ಇನ್ನಿತರ ಪಶುಗಳ ಆಹಾರ ದಾಸ್ತಾನು ಇದೆಯೇ.? ಕಾನೂನು ಪ್ರಕ್ರಿಯೆ ಮುಗಿಯುವ ತನಕ ಗೋವುಗಳನ್ನು ಕಟ್ಟಿಹಾಕಲು ಪೊಲೀಸ್ ಠಾಣೆಯಲ್ಲಿ ಹಟ್ಟಿ ವ್ಯವಸ್ಥೆ ಇದೆಯೇ.? ಇದೆಲ್ಲವನ್ನೂ ಮಾಡಬೇಕಾದವರು ಯಾರು ಎಂಬ ಬಗ್ಗೆ ಈವರೆಗೂ ಯಾರೊಬ್ಬರೂ ಚಿಂತಿಸದಿರುವುದು ಗೋಪ್ರೇಮಿಗಳ ನಕಲಿ ಹಿಂದುತ್ವ ಎಂಬುದನ್ನು ಬಿಡಿಸಿ ಹೇಳಬೇಕೇ.?

ಗೋವುಗಳ ಪಡೆಯಲು ಗೋಶಾಲೆಗಳ ನಕಾರ..
ಪೊಲೀಸರು ವಶಕ್ಕೆ ಪಡೆದ ಗೋವುಗಳನ್ನು ಪಡೆಯಲು ಯಾವುದೇ ಖಾಸಗಿ ಗೋಶಾಲೆಗಳ ವ್ಯವಸ್ಥಾಪಕರು ಮುಂದೆ ಬರುತ್ತಿಲ್ಲ. ಗೋಶಾಲೆಗಳಿಗೆ ಯಾವುದೇ ಸರಕಾರ ಈವರೆಗೂ ಪುಡಿಗಾಸೂ ನೀಡುತ್ತಿಲ್ಲ. ಗೋಶಾಲೆ ನಡೆಸುವವರೂ ಅವುಗಳ ಪಾಲನೆ ಮಾಡಲು ಅನಿವಾರ್ಯವಾಗಿ ಭಿಕ್ಷೆ ಬೇಡುವ ಪರಿಸ್ಥಿತಿಗೆ ಬಂದಿದ್ದಾರೆ. ಅಕ್ರಮ ಗೋಸಾಗಾಟ ತಡೆಯುವ ಸಂಘಟನೆಗಳು, ಗೋಪ್ರೇಮಿ ರಾಜಕೀಯ ಪುಢಾರಿಗಳು ತಮ್ಮ ತಮ್ಮ ವ್ಯಾಪ್ತಿಯ ಗೋಶಾಲೆಗಳ ಬಗ್ಗೆ ಸ್ಪಂದಿಸುವುದು ಬಿಡಿ ಅತ್ತ ಕಡೆ ತಲೆ ಕೂಡ ಹಾಕುತ್ತಿಲ್ಲ ಎಂಬುದು ನೂರರಷ್ಟು ಸತ್ಯ. ಪ್ರತಿಯೊಂದು ಗೋಶಾಲೆಗಳಲ್ಲೂ ಸಾಕಷ್ಟು ಪ್ರಮಾಣದಲ್ಲಿ ಗೋವುಗಳು ತುಂಬಿಹೋಗಿದ್ದು ಅವುಗಳ ಪಾಲನೆಗಾಗಿ ಪ್ರತಿನಿತ್ಯ ಸಾವಿರಾರು ರೂಪಾಯಿ ಖರ್ಚಾಗುತ್ತಿದೆ. ಈ ಬಗ್ಗೆ ಯಾರೊಬ್ಬರೂ ಸಹಕಾರ ನೀಡುತ್ತಿಲ್ಲ ಎಂಬುದೇ ಗೋಶಾಲೆಗಳು ಗೋವುಗಳ ಪಡೆಯಲು ನಿರಾಕರಿಸಲು ಮುಖ್ಯ ಕಾರಣವಾಗಿದೆ.

ಗ್ರಾಮ ಪಂ, ಪ.ಪಂಚಾಯತ್ ಗೋಶಾಲೆ ನಿರ್ಮಿಸಲಿ..
ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳೀಯ ಆಡಳಿತ ಸಂಸ್ಥೆಗಳು ಇನ್ನಾದರೂ ತಮ್ಮ ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಿಸಲು ಜನಪ್ರತಿನಿಧಿಗಳು ಒತ್ತಾಯಿಸಬೇಕು. ತಮ್ಮ ತಮ್ಮ ವ್ಯಾಪ್ತಿಯಲ್ಲಿ ಇಂತಹ ಸಂದರ್ಭದಲ್ಲಿ ಸಿಕ್ಕಿದ ಗೋವುಗಳನ್ನು ಕಾನೂನು ಪ್ರಕ್ರಿಯೆ ಮುಗಿದ ಬಳಿಕ ತಮ್ಮ ಗೋಶಾಲೆಗಳಲ್ಲಿ ಸಲಹುವಂತಾಗಬೇಕು. ಇಲ್ಲವಾದರೆ ಗೋವುಗಳು ಪತ್ತೆಯಾದ ತಕ್ಷಣ ಖಾಸಗಿ ವ್ಯಕ್ತಿಗಳು ತಮಗೆ ಸಾಕಲು ನೀಡುವಂತೆ ದುಂಬಾಲು ಬೀಳುತ್ತಿದ್ದಾರೆ. ಸಾಕುವ ನೆಪದಲ್ಲಿ ಠಾಣೆಯಿಂದ ಪಡೆಯುವ ಖಾಸಗಿ ವ್ಯಕ್ತಿಗಳು ಒಂದೆರಡು ದಿನ ಮನೆಯಲ್ಲಿರಿಸಿ ಮತ್ತೆ ಕುಟುಕರಿಗೆ ಸಾವಿರಾರು ರೂಪಾಯಿಗಳಿಗೆ ನೀಡುವ ಮೂಲಕ ದಂಧೆ ನಡೆಸುತ್ತಿದ್ದಾರೆ.

ಅನಾಥವಾದ ಗೋವುಗಳು.
ಸಾಲೆತ್ತೂರು ಕರೈ ಬಳಿ ಅಕ್ರಮ ಗೋಸಾಗಾಟ ಪ್ರಕರಣದಲ್ಲಿ ವಶಕ್ಕೆ ಪಡೆದ ಎರಡು ದೊಡ್ಡ ಗಾತ್ರದ ಹಾಲು ಕರೆಯುವ ಹಸುಗಳು ಮೂರು ದಿನಗಳಿಂದ ವಿಟ್ಲ ಠಾಣೆಯಲ್ಲಿ ಆಶ್ರಯ ಪಡೆದಿತ್ತು. ವಿಟ್ಲ ಪರಿಸರದ ಗೋಶಾಲೆಗಳು ಸ್ಥಳಾವಕಾಶ ಮತ್ತು ಆರ್ಥಿಕ ಸಮಸ್ಯೆಯ ಕಾರಣದಿಂದಾಗಿ ಗೋವುಗಳ ಪಡೆಯಲು ನಿರಾಕರಿಸಿದ್ದವು. ಈ ಮಧ್ಯೆ ಮೂರ್ನಾಲ್ಕು ಖಾಸಗಿ ವ್ಯಕ್ತಿಗಳು ತಮಗೆ ಸಾಕಲು ಬೇಕೆಂದು ಹೇಳುತ್ತಾ ಗೋವುಗಳ ಪಡೆಯಲು ಕಸರತ್ತು ನಡೆಸಿದ್ದರು. ಆದರೆ ಕಾನೂನು ಚೌಕಟ್ಟಿನಲ್ಲಿ ಖಾಸಗಿ ವ್ಯಕ್ತಿಗಳಿಗೆ ಗೋವುಗಳನ್ನು ನೀಡುವಂತಿಲ್ಲ. ಅದರಿಂದಾಗಿ ನಕಲಿ ಗೋಪ್ರೇಮಿಗಳ ಕಸರತ್ತು ವಿಫಲವಾಗಿದೆ.

ಗೋವುಗಳಿಗೆ ಮರು ಜನ್ಮ ನೀಡಿದ ದೈಗೋಳಿ ಸೇವಾಶ್ರಮ..
ಹಲವು ವರ್ಷಗಳಿಂದ ನೂರಾರು ಅನಾಥ ಬಡ ಜೀವಗಳಿಗೆ, ಮಾನಸಿಕ ಸ್ಥಿಮಿತ ಕಳೆದುಕೊಂಡು ಬೀದಿ ಬೀದಿ ಅಲೆದಾಡುತ್ತಿದ್ದ ಅದೆಷ್ಟೋ ಜೀವಗಳ ಪಾಲಿಗೆ ಮಂಜೇಶ್ವರ ತಾಲೂಕಿನ ದೈಗೋಳಿಯ ಡಾ.ಉದಯಕುಮಾರ್-ಶಾರದಮ್ಮ ದಂಪತಿಗಳ ನೇತೃತ್ವದ ಶ್ರೀಸಾಯಿ ನಿಕೇತನ ಸೇವಾಶ್ರಮ ಮರು ಜನ್ಮ ನೀಡುತ್ತಿದೆ. ಇದರ ಜೊತೆಗೆ ಅಲ್ಲಿನ ಕಾಮಧೇನು ಗೋಶಾಲೆಯಲ್ಲಿ ಈಗಾಗಲೇ ಐವತ್ತಕ್ಕೂ ಹೆಚ್ಚು ಗೋವುಗಳು ಆಶ್ರಯ ಪಡೆದಿವೆ. ಅಲ್ಲೂ ಸ್ಥಳಾವಕಾಶ ದ ಕೊರತೆ ಎದ್ದು ಕಾಣುತ್ತಿದೆ. ಆದರೆ ಗಾಯಗೊಂಡ ಗೋವುಗಳ ಅಸಹಾಯಕ ಪರಿಸ್ಥಿತಿಯನ್ನು ಮನಗಂಡು ಆಶ್ರಯ ನೀಡಲು ವೈದ್ಯ ದಂಪತಿಗಳು ಮುಂದೆ ಬಂದಿರುವುದು ತಮ್ಮ ಹೃದಯವಂತಿಕೆಗೆ ಸಾಕ್ಷಿಯಾಗಿದೆ. ಪತ್ರಕರ್ತ ವಿ.ಟಿ.ಪ್ರಸಾದ್ ಅವರ ಬೇಡಿಕೆಗೆ ಸ್ಪಂದಿಸಿದ ದೈಗೋಳಿ ಸೇವಾಶ್ರಮದ ವೈದ್ಯ ದಂಪತಿಗಳು ತಮ್ಮ ಕಾಮಧೇನು ಗೋಶಾಲೆಗೆ ವಿಟ್ಲ ಪೊಲೀಸರ ಸಹಕಾರದಲ್ಲಿ ಕರೆದೊಯ್ದ ಎರಡು ಗೋವುಗಳನ್ನು ದಾಖಲಿಸುವ ಮೂಲಕ ಮರು ಜನ್ಮ ನೀಡಿದ್ದಾರೆ.

ಇನ್ನಾದರೂ ಗೋಸಾಗಾಟ ತಡೆಯುವ ಗೋಪ್ರೇಮಿಗಳು ಆ ಬಳಿಕ ಗೋವುಗಳ ಮುಂದಿನ ಜೀವನದ ಬಗ್ಗೆ ಸ್ಪಂದಿಸುವ ಹೃದಯವಂತಿಕೆಯಲ್ಲಿ ಅಸಲಿ ಗೋಪ್ರೇಮಿಗಳಾಗಿ ಸಮಾಜದಲ್ಲಿ ಬದುಕಲಿ ಎಂಬುದು ಹಾರೈಕೆಯಾಗಿದೆ.
ವಿ.ಟಿ.ಪ್ರಸಾದ್ ಹಿರಿಯ ಪತ್ರಕರ್ತರು
ಈ ವೀಡಿಯೋ ನೋಡಿ Watch the video
ಕಟುಕರ ಕೈಯಿಂದ ಬಚಾವಾದ ಗೋವುಗಳಿಗೆ ದೈಗೋಳಿ ಕಾಮಧೇನು ಗೋಶಾಲೆಯಲ್ಲಿ ಮರುಜನ್ಮ
ಈ ನ್ಯೂಸನ್ನೂ ಓದಿ
-
crime5 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 days agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
