Connect with us

crime

ಡೆತ್ ನೋಟ್ ಬರೆದಿಟ್ಟು ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ (Head Constable)ಮುಖ್ಯ ಪೇದೆ..

Published

on

ಶಿವಮೊಗ್ಗ ದೊಡ್ಡಪೇಟೆ ಠಾಣೆಯ ಪಕ್ಕದ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್‌ ಹೆಡ್‌ ಕಾನ್‌ಸ್ಟೇಬಲ್‌ ಆಗಿದ್ದ ಮೊಹಮ್ಮದ್ ಝಕ್ರಿಯ(55) ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ.
ಕಳೆದ ಕೆಲವು ದಿನಗಳಿಂದ ಮೊಹಮದ್‌ ಝಕ್ರಿಯ ಅವರು ರಜೆ ಪಡೆದುಕೊಂಡಿದ್ದರು. ಮೂರು ದಿನದ ಹಿಂದಷ್ಟೆ ಕರ್ತವ್ಯಕ್ಕೆ ಬಂದಿದ್ದ ಝಕ್ರಿಯ ಬುಧವಾರ ರಾತ್ರಿ ಶಿವಮೊಗ್ಗ ಬಸ್‌ ನಿಲ್ದಾಣದ ಬಳಿ ಕರ್ತವ್ಯ ನಿರ್ವಹಿಸಿ ಠಾಣೆಗೆ ವಾಪಸಾಗಿದ್ದರು.

ರಾತ್ರಿ ಠಾಣೆಯಲ್ಲೇ ಡೆತ್ ನೋಟ್ ಬರೆದಿಟ್ಟು ಮೊಹಮದ್‌ ಝಕ್ರಿಯ ಅವರು ನೇಣಿಗೆ ಕೊರಳೊಡ್ಡಿದ್ದಾರೆ. ಠಾಣೆಯ ಹಿಂಬದಿಯ ಸೆಲ್‌ಗಳಿರುವ ಜಾಗದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್‌ ಸೇರಿದಂತೆ ಇನ್ನಿತರ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ‘ಮೃತ ಝಕ್ರಿಯ ಅವರಿಗೆ ಅರೋಗ್ಯ ಸಮಸ್ಯೆಯೂ ಇತ್ತು. ವಾಟ್ಸಪ್ ಗ್ರೂಪ್ ನಲ್ಲಿ ಡೆತ್ ನೋಟ್ ಫಾರ್ವರ್ಡ್ ಮಾಡಿದ್ದಾರೆ. ಅದರಲ್ಲಿ ಠಾಣೆಯ ಸಿಬ್ಬಂದಿ ಕಿರುಕುಳವನ್ನೂ ನೀಡುತ್ತಿದ್ದರು ಎಂದು ಉಲ್ಲೇಖವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅವರ ಕುಟುಂಬದವರ ಗಮನಕ್ಕೆ ತಂದಿದ್ದೇವೆ.ಅವರ ಕುಟುಂಬದವರು ದೂರು ಕೊಟ್ಟ ಬಳಿಕ ವಿಚಾರಣೆ ನಡೆಸುತ್ತೇವೆ’ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Continue Reading
Advertisement

Bantawala

ಐಟಿಐ ವಿದ್ಯಾರ್ಥಿಗಳ ಬಡಿದಾಟ; ಇಬ್ಬರಿಗೆ ಚೂರಿ ಇರಿತ; ವಿಟ್ಲ ಪೊಲೀಸರ ವಶದಲ್ಲಿ ಆರೋಪಿ ವಿದ್ಯಾರ್ಥಿ..

Published

on

ವಿಟ್ಲದ ಖಾಸಗಿ ಐಟಿಐ ವಿದ್ಯಾಸಂಸ್ಥೆಯಲ್ಲಿ ಒಂದೇ ತರಗತಿಯ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಬಡಿದಾಟ ನಡೆದಿದ್ದು ಮುಂದುವರಿದ ಭಾಗವಾಗಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ.


ಪ್ರಥಮ ವರ್ಷದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಹಾನ್(18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜ್ಞೇಶ್ (18) ಎಂಬಿಬ್ಬರ ಮೇಲೆ ಅದೇ ತರಗತಿಯ ವಿಟ್ಲ ನಿವಾಸಿ ಹೇಮಂತ್ (18) ಎಂಬಾತ ಚೂರಿಯಿಂದ ಇರಿದು ಘಾಸಿಗೊಳಿಸಿದ್ದಾನೆ.


ಫುಲ್ ಶೇವ್ ಮಾಡಿಕೊಂಡು ತರಗತಿ ಬರುತ್ತಿದ್ದ ಮಹಮ್ಮದ್ ರಿಹಾನ್ ನನ್ನು ಕೆಲದಿನಗಳಿಂದ ಹೇಮಂತ್ ತಮಾಷೆ ಮಾಡುತ್ತಾ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದನೆನ್ನಲಾಗಿದೆ.

ಈ ಬಗ್ಗೆ ಎರಡು, ಮೂರು ದಿನಗಳಿಂದ ಮೊಹಮ್ಮದ್ ರಿಹಾನ್ ಹೇಮಂತ್ ನಲ್ಲಿ ತನ್ನನ್ನು ಗೇಲಿ ಮಾಡದಂತೆ ವಿನಂತಿಸುತ್ತಿದ್ದ. ಆದರೂ ಆತ ಮುಂದುವರಿಸಿದ್ದು ಇಂದು ಬೆಳಗ್ಗೆ ಮತ್ತೆ ಗೇಲಿ ಮಾಡಿದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತೆನ್ನಲಾಗಿದೆ.

ಇದೇ ಮತ್ತಷ್ಟು ಮುಂದುವರಿದು ತರಗತಿಯೊಳಗೆ ಪರಸ್ಪರ ನೂಕಾಟ, ತಳ್ಳಾಟ ನಡೆದು ಆಕ್ರೋಶಗೊಂಡ ಹೇಮಂತ್ ತನ್ನಲ್ಲಿದ್ದ ಚೂರಿಯಿಂದ ಮಹಮ್ಮದ್ ರಿಹಾನ್ ಹೊಟ್ಟೆಯ ಹಿಂಭಾಗಕ್ಕೆ ಇರಿದಿದ್ದಾನೆ. ತಡೆಯಲು ಹೋದ ಅದೇ ತರಗತಿಯ ವಿದ್ಯಾರ್ಥಿ ದೈಗೋಳಿ ನಿವಾಸಿ ಯಜ್ಞೇಶ್ ಎಂಬಾತನ ತೊಡೆಗೂ ಚೂರಿ ಇರಿದಿದ್ದಾನೆ.

ಗಾಯಾಳುಗಳಿಬ್ಬರನ್ನೂ ವಿಟ್ಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಿಹಾನ್ ಗೆ ಹನ್ನೊಂದು ಹೊಲಿಗೆ ಹಾಕಲಾಗಿದ್ದು, ಮತ್ತೋರ್ವ ಗಾಯಾಳು ಯಜ್ಞೇಶ್ ಗೆ ನಾಲ್ಕು ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

crime

ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು

Published

on

ಆನ್‌ ಲೈನ್‌ ಪ್ಲಾಟ್‌ ಫಾರಂ ಮ್ಯಾಟ್ರಮೋನಿ ಮೂಲಕ ಹಲವಾರು ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು. ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಇಬ್ಬರನ್ನು ಮದುವೇಯಾಗಿ ವಂಚಿಸಿ ಪರಾರಿಯಾಗಿದ್ದರೆ, 5 ಜನ ಮಹಿಳೆಯರನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಮೋಸ ಮಾಡಿರುವುದಾಗಿ ತನಿಖೆಯಲ್ಲಿ ಬೇಳಕಿಗೆ ಬಂದಿದೆ. ಈತನ ವಂಚನಾ ಮದುವೆ ವ್ಯವಹಾರಕ್ಕೆ ಮುಲ್ಕಿ ನಿವಾಸಿ ಭಾಸ್ಕರ್‌ ಎಂಬಾತನೂ ಸಹಕರಿಸುತ್ತಿದ್ದು, ಸದ್ರಿ ಆರೋಪಿತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.
ಆರೋಪಿತ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಊರ್ವಾ ಪೊಲೀಸ್ ಠಾಣಾಅ.ಕ್ರ: 202/2017 ಕಲಂ: 406, 420 ಐಪಿಸಿ, ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಅ.ಕ್ರ: 132/2022 ಕಲಂ: 379 ಐಪಿಸಿ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣಾ ಅ.ಕ್ರ:354/2022 ಕಲಂ:336(ಎ), 370, 370(4), 376(2),(ಎನ್) 342, ಜೊತೆಗೆ 34 ಐಪಿಸಿ ಕಲಂ:3,4,5 ಇಮ್ಮೋರಲ್ ಟ್ರಾಫಿಕಿಂಗ್ ಆ್ಯಕ್ಟ್, ಕಲಂ:4,8,12 ಪೋಕ್ಸೋ ಕಾಯ್ದೆ ರಂತೆ ಪ್ರಕರಣಗಳು ದಾಖಲಾಗಿರುತ್ತದೆ.
ನೊಂದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿಯು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 02/02/2025 ರಲ್ಲಿ ಮದುವೆಯಾಗಿದ್ದಲ್ಲದೆ ನಂಬಿಸಿ ಹಂತ ಹಂತವಾಗಿ 6,60,000/- ಹಣವನ್ನು ಪಡೆದುಕೊಂಡು ಮೋಸ ಮಾಡುವ ಉದ್ದೇಶದಿಂದ ದಿನಾಂಕ 15/11/2025 ರಂದು ನಾಪತ್ತೆ ಯಾಗಿರುತ್ತಾನೆ. ನಂತರದ ದಿನಗಳಲ್ಲಿ ಪಿರ್ಯಾದುದಾರರು ಅನುಮಾನಗೊಂಡ ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿದ ಮೇರೆಗೆ ಪಿ ನೊಂದ ಮಹಿಳೆಯು ಕಾವೂರು ಪೊಲೀಸು ಠಾಣಾ ಅಕ್ರ: 184/2025 ಕಲಂ: 318(4), 316(2), 316(1), 336(3), 340(1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿ ಕೊಂಡಿರುತ್ತಾರೆ.
ಸದ್ರಿ ಪ್ರಕರಣದಲ್ಲಿನ ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಈ ಮೊದಲು 2021 ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿರುತ್ತಾನೆ. ಹಾಗೂ ಉಡುಪಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿರುತ್ತಾನೆ, ಮುಂಬೈನ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುತ್ತಾನೆ. ಬೆಂಗಳೂರಿನಲ್ಲಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುತ್ತಾನೆ ಕಾರ್ಕಳದ ಒಂದು ಹುಡುಗಿಗೆ ಮದುವೆ ಆಗುವುದಾಗಿ ನಂಬಿಸಿ ಮೊಸ ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾನೆ. ನಂತರ ಸದ್ರಿ ಪ್ರಕರಣದಲ್ಲಿ ಆರೋಪಿತ ಸುಶಾಂತ್ ಪೂಜಾರಿ ಯವನೊಂದಿಗೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನು ಪಿರ್ಯಾದಿದಾರರಿಗೆ ಮತ್ತು ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿತ ಸುಶಾಂತ್ ನನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಆರೋಪಿತ ಸುಶಾಂತ್ ಪೂಜಾರಿಯ ಕುಟುಂಬಸ್ಥರ ಪರವಾಗಿ ಮುಂಬೈನಲ್ಲಿ ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡು ಮದುವೆ ನಡೆಸಿದವರಾಗಿರುತ್ತಾನೆ.

Continue Reading

Belthangady

ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ; ಬಯಲಾದ ನಿಜಾಂಶ

Published

on

ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಕೊನೆಗೂ ಬಯಲಾಗಿದೆ.
ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ CCTV ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ. ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿಕೊಂಡ ಗಾಯ (Self inflicted wound) ಎಂದು ತಿಳಿಸಲಾಗಿದ್ದು, ನಂತರ ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಲಾಗಿದ್ದು, ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ತಿಳಿಸಿರುವುದರ ಮೂಲಕ ಪ್ರಕರಣದ ನಿಜಾಂಶ ಬಯಲಾಗಿದೆ. ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಸದ್ರಿ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು ಎಂದು ಪೊಲೀಸ್‌ ವರಿಷ್ಠರು ಮಾಹಿತಿ ನೀಡಿದ್ದು, ಅಪ್ರಾಪ್ತೆಗೆ ಚಲಾಯಿಸಲು ವಾಹನ ನೀಡಿರುವ ಕುರುತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್‌ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ

ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ 16 ವರ್ಷದ ಶಾಲಾ ಬಾಲಕಿ ಕಾಲೇಜಿಗೆ ಸ್ಕೂಟಿಯಲ್ಲಿ ತೆರಳಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಒಮ್ನಿ ಬಂದಿದೆ. ಮಾರುತಿ ಒಮ್ನಿಯ ನಂಬರ್‌ ಪ್ಲೇಟ್‌ ಮುಚ್ಚಲಾಗಿತ್ತು, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ಮುಸುಕುದಾರಿ ವ್ಯಕ್ತಿಗಳು ಇದ್ದರು, ಸ್ಕೂಟಿಗೆ ಅಡ್ಡ ಇಟ್ಟು ಮೂವರು ಮುಸುಕುದಾರಿಗಳು ವಿದ್ಯಾರ್ಥಿನಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ, ಅವರು ಒಮ್ನಿಯಲ್ಲಿ ವಿದ್ಯಾರ್ಥಿನಿಯನ್ನು ಹಾಕಿಕೊಂಡು ಅಪಹರಿಸಲು ಯತ್ನಿಸಿದಾಗ ಅವಳು ಪ್ರತಿರೋಧಿಸಿ ಬೊಬ್ಬೆ ಹೊಡೆದಿದ್ದಾಳೆ. ಹಿಂದಿನಿಂದ ಒಂದು ದ್ವಿಚಕ್ರ ವಾಹನವೂ ಬಂದಿದೆ. ಇದರಿಂದ ಬೆದರಿದ ಅಪಹರಣಕಾರರು ತಮ್ಮಲ್ಲಿದ್ದ ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಅಪಹರಣಕಾರರು ಬೆದರಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಇದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರಣೆಯ ವಿದ್ಯಾರ್ಥಿನಿಯ ಹೇಳಿಕೆ.

ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಎಂಬ ಸುದ್ದಿಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ಸರಕಾರ ಮತ್ತು ಗೃಹ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಆಯ್ತು. ಮದ್ಯಾಹ್ನ ನಂತರ ಘಟನೆಯ ಸತ್ಯಾಂಶ ಒಂದೊಂದಾಗಿ ಹೊರಬರುತ್ತಲೇ ಆತಂಕದ ವಾತಾವರಣ ಕಡಿಮೆಯಾಗುತ್ತಾ ಬಂದಿದೆ. ಈವರೆಗೆ ಅಪಹರಣಕಾರರ ಪತ್ತೆಯಾಗಿಲ್ಲ, ಮಾರುತಿ ಒಮ್ನಿ ಯಾವ ಸಿಸಿ ಕ್ಯಾಮಾರದಲ್ಲೂ ಕಂಡುಬರಲೇ ಇಲ್ಲ. ಅಂದರೆ ವಿದ್ಯಾರ್ಥಿನಿಯ ಸುತ್ತಲೇ ಅಪಹರಣದ ಕಥೆ ಕಂಡುಬರುತ್ತಿತ್ತು.ಕೊನೆಗೂ ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಬಯಲಾಗಿದೆ.

Continue Reading

Trending

Copyright © 2025 Deevatige