Bantawala
ನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
ನಾಗ ಬನ ನಾಶ ! ಯಾರೋ ಅನ್ಯಧರ್ಮಿಯರಿಂದ ನಡೆಯುತ್ತಿದ್ದರೆ ಧರ್ಮ ಜಾಗೃತಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿತ್ತು. ಖಂಡನೆಗಳು, ಹೋರಾಟಗಳು ಸಾಲುಸಾಲಾಗಿ ನಡೆದೇ ಹೋಗುತ್ತಿತ್ತು. ನಮ್ಮ ಧರ್ಮದ ಮೇಲೆ ದಾಳಿ ಆರಂಭವಾಗಿದೆ ಎಚ್ಚೆತ್ತು ಕೊಳ್ಳಿ ಹಿಂದೂ ಧರ್ಮಕ್ಕೆ ಅಪಾಯ ಎದುರಾಗಿದೆ ಎಂಬೆಲ್ಲ ಸ್ಲೋಗನ್‌ಗಳು ವೈರಲ್ ಆಗುತ್ತಿತ್ತು.

ದೈವಗಳ ನೆಲೆವೀಡು ಕರಾವಳಿಯಲ್ಲಿ ಶತಶತಮಾನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಮೂಲ ನಾಗದೇವರ ಬನ ಮತ್ತು ಕೆರೆಯನ್ನು ಸರ್ವನಾಶಮಾಡಿ ಭಕ್ತಾದಿಗಳ ಮನಸ್ಸನ್ನು ಘಾಸಿಗೊಳಿಸಿದ ಘಟನೆಯೊಂದಕ್ಕೆ ದೈವಭಕ್ತರಿಂದಾಗಲಿ, ಧರ್ಮಪಾಲಕರಿಂದಾಗಲಿ ಯಾವುದೇ ವಿರೋಧಗಳು ಬಾರದೆ ಇದ್ದ ಅತ್ಯಂತ ನೋವಿನ ವಿಚಾರವೊಂದು ಇದೀಗ ಬೊಂಡಾಲ ಎಂಬ ಕರಾವಳಿ ಭಾಗದಿಂದ ಸದ್ದಿಲ್ಲದೆ ಬೆಳಕಿಗೆ ಬಂದಿದೆ.

ಬoಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ಬೊಂಡಾಳ ಸೇನೆರೆಬೈಲು ಎಂಬಲ್ಲಿ ಅನಾದಿ ಕಾಲದಿಂದಲೂ ಹಲವಾರು ಕುಟುಂಬಗಳಿಗೆ ಮೂಲನಾಗದೇವರಾಗಿ ಆರಾಧನೆಯಾಗುತ್ತಿದ್ದ ಪವಿತ್ರ ನಾಗಬನವನ್ನು ಭೂಮಿ ಖರೀದಿದಾರ ಸಂಪೂರ್ಣವಾಗಿ ದ್ವಂಸ ಗೊಳಿಸಿ ಅದರ ಪ್ರಾಕೃತಿಕ ರಚನೆಯನ್ನೇ ನೆಲಸಮ ಮಾಡಿ ಭಕ್ತಾದಿಗಳ ಭಾವನೆಗಳನ್ನು ಜೀವಂತ ಸುಟ್ಟು ಹಾಕಿದ ಘಟನೆಯ ಸುತ್ತು ಭಕ್ತರು ಆಕ್ರೋಶಿತರಾಗಿರುವುದು ಕಂಡುಬoದಿದೆ.

ನಮ್ಮ ಪೂರ್ವಜರ ಲಗಾಯಿತು ನೂರಾರು ವರ್ಷಗಳಿಂದ ಆರಾಧನೆಯಾಗುತ್ತಿದ್ದ ನಾಗದೇವರು ನಾಗಬ್ರಹ್ಮ, ನಾಗರಾಜ, ಮತ್ತು ನಾಗಕನ್ನಿಕೆ ಸೇರಿದಂತೆ ಅಷ್ಟಕುಲ ನಾಗದೇವರ ಸಾನಿಧ್ಯವನ್ನು ದ್ವಂಸಗೊಳಿಸಿರುವ ವಿಚಾರವನ್ನು ಬೊಂಡಾಲ ಬೊಳ್ಳೆಮಾರ್ ಬಿಲ್ಲವ ಕಿರೋಡಿಯನ್ ಕುಟುಂಬಸ್ತರು ಅವರ ಕ್ಷೇತ್ರದ ದೈವಜ್ಞರಲ್ಲಿ ಪ್ರಶ್ನಾಚಿಂತನೆಯನ್ನು ಇಟ್ಟು ಕೇಳಿದಾಗ ನಿಮ್ಮ ಮೂಲ ನಾಗದೇವರ ಸಂಕಷ್ಟ ಸಂದರ್ಭ ನೀವು ಅದನ್ನು ಉಳಿಸಿಕೊಳ್ಳುವಲ್ಲಿ ಪ್ರಯತ್ನಿಸಿದಲ್ಲಿ ನಾಗದೇವರು ಇನ್ನಷ್ಟು ಸಾನಿಧ್ಯಶಕ್ತಿಯಾಗಿ ಬೆಳಗಲಿದ್ದಾರೆ ಎಂದು ತಿಳಿಸಿದರೆನ್ನಲಾಗಿದೆ.
ಅವರ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದoತೆ ಕಣಿಯೂರು ಕ್ಷೇತ್ರದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕ್ಷೇತ್ರದ ತಂತ್ರಿಗಳಾದ ಶಂಕರನಾರಾಯಣ ಪುರೋಹಿತರ ದಿವ್ಯ ಉಪಸ್ಥಿತಿಯಲ್ಲಿ ಜನವರಿ 9ರಂದು ಕುಟುಂಬಸ್ತರು ಸಾನಿಧ್ಯದಲ್ಲಿ ಸೇರಿಕೊಂಡು ದೈವಗಳ ಪವಿತ್ರವಾದ ಬನ ಕಟ್ಟೆಗಳನ್ನು ದ್ವಂಸಗೊಳಿಸಲಾದ ಅದೇ ಜಾಗದಲ್ಲಿ ನಾಗದೇವರು ಮತ್ತು ರಕ್ತೇಶ್ವರಿ ಸಾನಿಧ್ಯದ ಸಂಕಲ್ಪವನ್ನು ದೀಪದಲ್ಲಿ ಲಯನ ಮಾಡಿಕೊಂಡು ಕುಟುಂಬಸ್ತರು ಸಾಮೂಹಿಕ ಪ್ರಾರ್ಥನೆ ನಡೆಸಿದರು.

ಇದೇ ಜಾಗದಲ್ಲಿ ನಮಗೆ ನಾಗಸಾನಿಧ್ಯ ಮತ್ತೆ ಉದಯಿಸಿ ಬರುವಂತೆ ಸಾಮೂಹಿಕ ಪ್ರಾರ್ಥನೆಯನ್ನು ಮಾಡಿದ ಸ್ವಾಮೀಜಿಯವರು. ಸಮಾಜದಲ್ಲಿ ದೈವಬಲ ಇಲ್ಲವಾದರೆ ಆತನಿಂದ ಏನೂ ಸಾಧಿಸುವುದಕ್ಕೆ ಸಾಧ್ಯವಿಲ್ಲ. ಎಲ್ಲಿ ಕಳೆದುಕೊಂಡಿದ್ದೇವೆಯೋ ಅಲ್ಲಿಯೇ ಹುಡುಕುವ ಕೆಲಸ ಮಾಡಿದಾಗ ದೈವೀ ಅನುಗ್ರಹದ ಮೂಲಕ ಮತ್ತೇ ನಾಗಬನದ ನಿರ್ಮಾಣ ಇದೇ ಜಾಗದಲ್ಲಿ ಆಗಿಯೇ ಆಗುತ್ತದೆ ಎಂದು ಆಶೀರ್ವಚನ ಮಾಡಿದರು.
ತಲೆ ತಲಾಂತರಗಳಿOದ ಕ್ಷೇತ್ರದ ತಂತ್ರಿಗಳಾಗಿ ನಾಗದೇವರು ಸೇರಿದಂತೆ ದೈವದೇವರ ಸೇವೆಯನ್ನು ಮಾಡಿಕೊಂಡು ಬಂದಿರುವ ಶಂಕರನಾರಾಯಣ ತಂತ್ರಿಗಳವರು ಈ ಕ್ಷೇತ್ರ ನಮ್ಮವರಿಂದಲೇ ದ್ವಂಸವಾಗಿರುವ ದುಖಃದ ವಾರ್ತೆಯನ್ನು ಕೇಳಿ ಸಾನಿಧ್ಯಕ್ಕೆ ಆಗಮಿಸಿ ನೋಡಿ ಆತಂಕಗೊoಡು ನಾಗದೇವರಿಗೆ ಬಂದಿರುವ ಸಂಕಷ್ಟವನ್ನು ನೆನೆದು ಅದೇ ಸ್ಥಳದಲ್ಲಿ ಕಣ್ಣೀರು ಹಾಕಿ ಹೋಗಿದ್ದರು. ತನ್ನ ಹೃದಯಂತರಾಳದಿOದ ಸಾನಿಧ್ಯದಲ್ಲಿ ಪ್ರಾರ್ಥಿಸಿ ತೆರಳಿದವರು ಇಂದು ಮತ್ತೆ ಈ ಸಾನಿಧ್ಯಕ್ಕೆ ಆಗಮಿಸಿ ಭಕ್ತಾದಿಗಳ ನೋವಿನೊಂದಿಗೆ ಜೊತೆಯಾಗಿ ಮಾತನಾಡುತ್ತಾ ದೈವತಾ ಕಾರ್ಯವನ್ನು ನಾವು ಯಾವ ರೀತಿಯಲ್ಲಿ ಈ ಕ್ಷೇತದಲ್ಲಿ ಮಾಡಿಕೊಂಡು ಬಂದಿದ್ದೇವೆಯೋ ಅದೇ ರೀತಿಯಲ್ಲಿ ಇನ್ನು ಮುಂದೆಯೂ ಮಾಡಲು ಆ ದೈವಶಕ್ತಿಗಳು ಅನುಗ್ರಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಈ ಭೂಮಿಯ ಹಕ್ಕುದಾರ್ತಿಯಾಗಿರುವ ಗಿರಿಜ ಅವರ ಮಗಳು ಗಂಗಮ್ಮ ಮತ್ತು ಮಕ್ಕಳು ಉಪಸ್ಥಿತರಿದ್ದು, ನ್ಯಾಯಾಲಯದಲ್ಲಿ ದಾವೆಯಲ್ಲಿರುವ ಜಾಗವನ್ನು ಪರಬಾರೆ ಅಥವಾ ಮಾರಾಟ ಮಾಡಬಾರದೆಂಬ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ದೈವದೇವರ ಸ್ವತ್ತು ಎಂಬ ಭಯಭಕ್ತಿಯೂ ತೋರದೆ ಸಾನಿಧ್ಯವನ್ನು ಸಂಪೂರ್ಣವಾಗಿ ದ್ವಂಸ ಮಾಡಿರುವ ಬಗ್ಗೆ ಕಣ್ಣೀರು ಹಾಕಿದ ಘಟನೆಯೂ ನಡೆಯಿತು.

ಏನಿದು ದಾವೆ ?
ಬೊಂಡಾಳ ಸೇನೆರ ಬೈಲು ಎಂಬಲ್ಲಿ ಗಿರಿಜ ಎಂಬವರಿಗೆ ಸುಮಾರು 5.5 ಎಕ್ರೆ ಜಮೀನಿದ್ದು, ಸುಮಾರು 10 ವರ್ಷಗಳ ಹಿಂದೆ ಸಮಾನ ಹಕ್ಕುದಾರರಾಗಿರುವ 4 ಗಂಡು ಮತ್ತು 5 ಹೆಣ್ಣು ಮಕ್ಕಳಿರುವ ಸಂಸಾರದಲ್ಲಿ ಹೆಣ್ಣು ಮಕ್ಕಳ ಸಹಿಯನ್ನು ಪೋರ್ಜರಿ ಮಾಡಿ 4 ಗಂಡು ಮಕ್ಕಳು ಜಾಗವನ್ನು ಕಬಳಿಸಿರುವುದು ಮತ್ತು ಈ ಬಗ್ಗೆ ಗಿರಿಜ ಅವರ ಮಗಳು ಗಂಗಮ್ಮ ಗಂಡು ಮಕ್ಕಳು ಪಡೆದಿರುವ ಆಸ್ತಿ ಹಕ್ಕು ಅಕ್ರಮವಾಗಿ ಪಡೆದಿರುವುದಾಗಿದೆ, ಹಾಗೂ ತನ್ನ ಪಾಲಿನ ಆಸ್ತಿಯ ಹಕ್ಕನ್ನು ಪಡೆಯಲು ಮುಂದಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಶ್ರೀಮತಿ ಗಂಗಮ್ಮ,ಇತರರು ಮತ್ತು ಎದುರುವಾದಿಗಳ ಮದ್ಯೆ ಒ ಎಸ್ ನಂ.80/2018 ಎಂಬ ಮೂಲದಾವೆ ಮಾನ್ಯ ಪ್ರದಾನ ಸಿವಿಲ್ ನ್ಯಾಯಾಲಯದಲ್ಲಿ ಬಾಕಿಯಿರುತ್ತದೆ.ಅದಾಗ್ಯೂ ಬಿ ಶೆಡ್ಯೂಲ್ ಆಸ್ತಿಗೆ ಸಂಬOಧಪಟ್ಟOತೆ ಮಾನ್ಯ ನ್ಯಾಯಾಲಯವು 2018ರ ಪೆ.17.ರಂದು ತಾತ್ಕಾಲಿಕ ತಡೆಯಾಜ್ಞೆಯನ್ನು ನೀಡಿದ ನಂತರ ,2018ರ ಫೆ. 24ರಂದು ತಡೆಯಾಜ್ಞೆ ಆದೇಶವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿದ್ದು, ಈ ತಡೆ ಆದೇಶದಲ್ಲಿ ದಾವಾ ಆಸ್ತಿಯ ಮಾರಾಟ ಅಥವಾ ಹಸ್ತಾಂತರವನ್ನು ನಿರ್ಬಂಧಿಸಿರುವುದು ಈಗಲೂ ಚಾಲ್ತಿಯಲ್ಲಿರುದನ್ನು ಎದ್ರಿಯವರು ಮನಗಂಡಿದ್ದರೂ ಸಾನಿಧ್ಯವಿರುವ ಜಾಗದ ಹಕ್ಕುದಾರ್ತಿ ಎಂದಿರುವ ಗಿರಿಜ ಅವರ ಮಗ ಶೇಖರ ಸಾಲ್ಯಾನ್‌ರವರ ಪತ್ನಿ ವಿಜಯ ಮತ್ತು ಮಗ ರಾಹುಲ್ ಅವರು ಬಿಸಿರೋಡಿನ ಅಮರ್ ಸತೀಶ್ ಕುಮಾರ್ ಎಂಬವರಿಗೆ ವಿಕ್ರಯಿಸಿರುವುದು ಮತ್ತು ಅವರು ಕಮರ್ಷಿಯಲ್ ಆಗಿ ಸಾನಿಧ್ಯ ಅಗೆದು ದ್ವಂಸ ಮಾಡಿರುವುದಾಗಿ.. ಇದರಿಂದ ಅನೇಕ ಭಕ್ತರ ಮನಸ್ಸಿಗೆ ಆಘಾತವಾಗಿರುವುದಾಗಿ ಗಂಗಮ್ಮ ಅವರ ಮಗ ಜಯಶಂಕರ್ ಮಾದ್ಯಮಕ್ಕೆ ತಿಳಿಸಿದ್ದಾರೆ.

ಈ ಕಾನೂನು ಪ್ರಕ್ರಿಯೆಗಳನ್ನು ತಿಳಿದುಕೊಂಡ ಜಮೀನುದಾರರು ವ್ಯಕ್ತಿಯೊಬ್ಬರಿಗೆ ಮಾರಾಟ ಹೆಸರಿನಲ್ಲಿ ಜಾಗವನ್ನು ಹಸ್ತಾಂತರಿಸಿರುವುದು ಮೊದಲನೇಯ ಅಪರಾಧವಾದರೆ. ಆ ಜಾಗವನ್ನು ಪಡೆದು ಕಮರ್ಶಿಯಲ್ ಯೋಚನೆಯಲ್ಲಿ ಅದರಲ್ಲಿದ್ದ ನಾಗಬನ ಮತ್ತು ಅದಕ್ಕೆ ಸಂಬAದಿಸಿದ ಕೆರೆಯನ್ನು ನಾಶಮಾಡಿರುವುದು ದೈವದ್ರೋಹವಾಗಿರುವುದಾಗಿ ಭಕ್ತರು ಆರೋಪಿಸಿದ್ದಾರೆ. ಅತೀ ಪುರಾತನವಾದ ನಾಗ ಬನದೊಳಗೆ ಭವ್ಯವಾದ ಕಟ್ಟೆಯನ್ನು ನಿರ್ಮಾಣ ಮಾಡಿ ಸಂಬAಧಿಸಿದ ಕೆರೆಗೂ ಕಲ್ಲಿನ ಕಟ್ಟೆಯನ್ನು ಕಟ್ಟಿ ರಕ್ತೇಶ್ವರಿ ದೈವಕ್ಕೂ ಪವಿತ್ರವದ ಕಟ್ಟೆಯನ್ನು ಕಟ್ಟಿ, ಹೀಗೆ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಐತಿಹ್ಯವನ್ನು ದ್ವಂಸಗೊಳಿಸಿದಾಗ ಅದನ್ನು ವೀಕ್ಷಿಸಲು ಬಂದ ಭಕ್ತರ ಮೇಲೆಯೇ ಕೇಸು ದಾಖಲಿಸುವುದೆಂದರೆ ನಾವು ಪಾಕಿಸ್ತಾನದಲ್ಲಿದ್ದೇವೆಯೋ ಎಂಬ ಭಯ ಬಂದಿದೆ. ಮೇಲಾಗಿ ನಾಗಬನದಲ್ಲಿ ಬೆಳೆದಿದ್ದ ಬೃಹದಾಕಾರದ ಮರಗಳನ್ನು ಅರಣ್ಯ ಇಲಾಖೆಯ ಕೃಪಾ ಕಟಾಕ್ಷದಲ್ಲಿ ಕಡಿದು ಸಾಗಾಟ ಮಾಡುವಾಗ ಯಾವುದೇ ಅಡೆತಡೆಗಳು ಬಂದಿಲ್ಲ, ಯಾವ ಇಲಾಖೆಗಳೂ ಇತ್ತ ಸುಳಿಯಲೇ ಇಲ್ಲ ಎಂದರೆ ಎಲ್ಲವೂ ನಾಗದೇವರಿಗೆ ಅರ್ಪಿತವಾಗಲಿ ಎಂದು ನಾವು ಸುಮ್ಮನೆ ಬಿಡುವುದಿಲ್ಲ. ಮರ ಸಾಗಾಟದ ಹಿಂದೆ ಇಲಾಖೆಯ ಅನುಮತಿ ಪತ್ರವನ್ನು ಪ್ರಶ್ನಿಸುತ್ತೇವೆ ಎಂದು ರಾಜೇಶ್ ಬಾಕಿಲ ತಿಳಿಸಿದ್ದಾರೆ.

ನೂರಾರು ವರ್ಷಗಳಿಂದ ನಮ್ಮ ಪಾಲಿನ ಮೂಲನಾಗದೇವರು ಎಂದು ಆರಾಧಿಸಿಕೊಂಡು ಬಂದಿರುವ ಕೆಲವು ಕುಟುಂಬಗಳು ತಮ್ಮ ನಂಬಿಕೆಯ ಆರಾಧನಾ ಶಕ್ತಿಗಳಾದ ದೈವದೇವರುಗಳ ಪ್ರಾಕೃತಿಕ ನಾಗಬನ ಮತ್ತು ಸಂಬoದಿಸಿದ ಕೆರೆಯನ್ನು ಜೆಸಿಬಿ ತಂದು ಸಂಪೂರ್ಣವಾಗಿ ನಾಶ ಮಾಡಿರುವ ಘಟನೆಯಿಂದ ನೊಂದು ಹೋಗಿದ್ದು, ಇದೀಗ ಆ ಜಮೀನಿಗೆ ಸಂಬoಧ ಪಟ್ಟಂತೆ ಏಕಮಾತ್ರ ಗಂಗಮ್ಮ ಕುಟುಂಬ ಮಾತ್ರ ಭಕ್ತರೊಂದಿಗೆ ಬೆಂಬಲವಾಗಿ ನಿಂತಿದ್ದು, ತಮ್ಮ ಪಾಲಿನ ಹಕ್ಕನ್ನು ಪಡೆದೇ ಪಡೆಯುತ್ತೇವೆ, ಮತ್ತು ಸದ್ರಿ ಜಾಗದಲ್ಲಿಯೇ ದೈವದೇವರ ಸಾನಿಧ್ಯಕ್ಕೆ ಶಕ್ತಿಯನ್ನು ನೀಡುವ ದೈವೀ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ನಾಗದೇವರು, ರಕ್ತೇಶ್ವರಿ ದೈವಗಳ ಸಂಕಲ್ಪದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಕುಟುಂಬದ ನೂರಾರು ಭಕ್ತರು ಪಾಲ್ಗೊಂಡರು. ಈ ಜಾಗದಲ್ಲಿದ್ದ ನಾಗಬನವನ್ನು ಜೀಣೋದ್ಧಾರ ಹೆಸರಿನಲ್ಲಿ ಎತ್ತಂಗಡಿ ಮಾಡಿ ಬೇರೆ ಜಾಗದಲ್ಲಿ ಮಾಡಲು ಬರುವುದಿಲ್ಲ. ಒಂದು ವೇಳೆ ಆ ರೀತಿ ಆಗುವುದಿದ್ದರೆ ನಾಗನಿಗೆ ತನು ಎರೆಯಲು ನೂರಾರು ಕಿ.ಮೀ. ಸಾಗುವುದು ಬೇಕಾಗಿರಲಿಲ್ಲ. ನಮ್ಮ ದೈವ ಕ್ಷೇತ್ರದ ಸಾನಿಧ್ಯ ಬಳಿಯಲ್ಲಿಯೇ ನಾಗನ ಪ್ರತಿಷ್ಠಾಪನೆ ಮಾಡಬಹುದಿತ್ತು ಮತ್ತು ನಾಗನ ತೆರವುಗೊಳಿಸಿದ ಪ್ರಕರಣಕ್ಕೆ ನಮ್ಮ ತಕರಾರು ಕೂಡಾ ಇರುತ್ತಿರಲಿಲ್ಲ ಎಂದು ಕುಟುಂಬಸ್ತರಾದ ಹರೀಶ್ ಪೂಜಾರಿ ಬಾಕಿಲ ತಿಳಿಸಿದ್ದಾರೆ.

ಕೊನೆಗೆ ಭಕ್ತರು ಸಾನಿಧ್ಯದ ಸಮೀಪದಲ್ಲಿರುವ ಪಂಜುರ್ಲಿ ಸಾನಿಧ್ಯಕ್ಕೆ ತೆರಳಿ ಅಲ್ಲಿ ದೈವಗಳಿಗೆ ದೀಪದೂಪ ಬೆಳಗಿ ಆರಾಧನೆಯನ್ನು ಮಾಡಿ ದೈವಗಳಲ್ಲಿ ತಮ್ಮ ಅಳಲನ್ನು ತೋಡಿಕೊಂಡು ಪ್ರಾರ್ಥನೆಯನ್ನು ಸಲ್ಲಿಸಿದರು. ಬೆಳಿಗ್ಗೆ ಬೊಳ್ಳೆಮಾರ್ ಕುಟುಂಬಸ್ತರು ತಮ್ಮ ಧರ್ಮದೈವ ಧೂಮಾವತಿ ಸಪರಿವಾರ ದೈವಗಳಿಗೆ ಪ್ರಾರ್ಥಿಸಿ ಸಾನಿಧ್ಯಕ್ಕೆ ಆಗಮಿಸಿದರು ಮತ್ತು ಗ್ರಾಮದ ದೈವದೇವರಿಗೆ ಸಂಕಲ್ಪವನ್ನು ಮಾಡಿಕೊಂಡು ನಾಗ ಸಾನಿಧ್ಯವನ್ನು ಉಳಿಸಿಕೊಳ್ಳಲು ಪ್ರಾರ್ಥನೆಯನ್ನು ಮಾಡಿದರು.
accident
ಬ್ರೇಕಿಂಗ್ ನ್ಯೂಸ್: ಕಾರ್ಕಳ – ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರು
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ (KA 70 A 0099) ನಡುವೆ ಮುಖಾಮುಖಿ ಭೀಕರ ಡಿಕ್ಕಿ ಸಂಭವಿಸಿದೆ.

ಘಟನೆಯ ವಿವರ ಹಾಗೂ ರಕ್ಷಣಾ ಕಾರ್ಯ: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್ಬ್ಯಾಗ್ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ತೀವ್ರತೆಯಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಅತ್ಯಂತ ಪ್ರಯಾಸಪಟ್ಟು ಅವರನ್ನ ಕಾರಿನಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ ಗಾಯಗೊಂಡಿರುವ ರಮಾನಾಥ ರೈ ಹಾಗೂ ಕಾರು ಚಾಲಕರನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಹಾಗೂ ಕಾರಿನಲ್ಲಿದ್ದ ಇತರೆ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.
ರಮಾನಾಥ ರೈಯವರು ಒಡಿಯೂರಿನಲ್ಲಿ ನಡೆದ ಒಡಿಯೂರು ಶ್ರೀ ವಿಕಾಸವಾಹಿನಿ ಸಂಭ್ರಮ ಹಾಗೂ ನೇರಳಕಟ್ಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Bantawala
ಪುಣಚದಲ್ಲಿ ಇನ್ಸ್ಟಾಗ್ರಾಂ ಪರಿಚಯ, ನಗ್ನ ಫೋಟೋ ಬ್ಲ್ಯಾಕ್ಮೇಲ್ ಜಾಲ; 10 ಪವನ್ ಚಿನ್ನ ದೋಚಿ ಯುವತಿಗೆ ವಂಚನೆ!
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ನಡೆದ ಈ ಘಟನೆಯು ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಎಷ್ಟು ಅಪಾಯಕಾರಿಯಾಗಬಹುದು ಎಂಬುದಕ್ಕೆ ಒಂದು ಕಣ್ಣಾಡಿಸುವ ಉದಾಹರಣೆಯಾಗಿದೆ. ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ವಂಚಕನೊಬ್ಬ, ಯುವತಿಯೊಬ್ಬಳ ನಗ್ನ ಫೋಟೋಗಳನ್ನು ಬಳಸಿ ಬ್ಲ್ಯಾಕ್ಮೇಲ್ ಮಾಡಿ 10 ಪವನ್ಗೂ ಅಧಿಕ ಚಿನ್ನಾಭರಣವನ್ನು ದೋಚಿರುವ ಕೃತ್ಯ ಆತಂಕಕಾರಿಯಾಗಿದೆ. ಅಪರಿಚಿತರೊಂದಿಗೆ ಜಾಲತಾಣಗಳಲ್ಲಿ ಸ್ನೇಹ ಬೆಳೆಸುವ ಮುನ್ನ ಯುವಜನತೆ, ವಿಶೇಷವಾಗಿ ಯುವತಿಯರು ಎಷ್ಟು ಎಚ್ಚರಿಕೆಯಿಂದ ಇರಬೇಕು ಎಂಬುದನ್ನು ಈ ಘಟನೆ ನಮಗೆ ಕಲಿಸುತ್ತದೆ.
ಕಳೆದ ಜುಲೈ ತಿಂಗಳಲ್ಲಿ ಯುವತಿಯ ಇನ್ಸ್ಟಾಗ್ರಾಂ ಖಾತೆಗೆ ಸುಪ್ರೀತ ಗೌಡ ಎಂಬ ಹೆಸರಿನ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಅದನ್ನು ಸ್ವೀಕರಿಸಿದ ಯುವತಿಯಿಂದ ಆರೋಪಿಯು ವಾಟ್ಸಾಪ್ ನಂಬರ್ ಪಡೆದುಕೊಂಡು ಮೆಸೇಜ್ ಮಾಡಲು ಪ್ರಾರಂಭಿಸಿದ್ದ ಎನ್ನಲಾಗಿದೆ. ಮೆಸೇಜ್ ಮಾಡುತ್ತಲೇ ನಂತರ ಹೇಗೋ ಮಾಡಿ ಯುವತಿಯ ನಗ್ನ ಪೋಟೋವನ್ನು ತನ್ನಲ್ಲಿಟ್ಟುಕೊಂಡು ಆಕೆಯನ್ನು ಬೆದರಿಸಲು ಆರಂಭಿಸಿದ್ದಾನೆ.
ಇದನ್ನೇ ಬಂಡವಾಳ ಮಾಡಿಕೊಂಡ ಆರೋಪಿ ಸುಪ್ರೀತ್ ಗೌಡ, ತನ್ನ ಇನ್ನೊಬ್ಬ ಗೆಳೆಯನೊಂದಿಗೆ ಸೇರಿಕೊಂಡು ಯುವತಿಯಿಂದ ಹಣ ಪೀಕಿಸಲು ಯುವತಿಯನ್ನು ಬ್ಲಾಕ್ ಮೈಲ್ ಮಾಡಲು ಆರಂಭಿಸಿದ್ದಾನೆ. ನನ್ನಲ್ಲಿ ಹಣ ಇಲ್ಲ ಎಂದಾಗ ಆಕೆಯ ಬಳಿ ಇರುವ ಚಿನ್ನಾಭರಣವನ್ನು ನೀಡುವಂತೆ “ನಿನ್ನ ಬಳಿ ಇರುವ ಚಿನ್ನವನ್ನು ಕೊಡಬೇಕು, ಇಲ್ಲವಾದಲ್ಲಿ ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಮಾನ ತೆಗೆಯುತ್ತೇನೆ” ಎಂದು ಬೆದರಿಕೆ ಹಾಕಿದ್ದನೆನ್ನಲಾಗಿದೆ.
ಘಟನೆಯ ಸಂಪೂರ್ಣ ವಿವರ:
ಪರಿಚಯ ಮತ್ತು ಸ್ನೇಹ: ಪುಣಚ ಗ್ರಾಮದ 20 ವರ್ಷದ ಯುವತಿಯೊಬ್ಬರ ಇನ್ಸ್ಟಾಗ್ರಾಂ ಖಾತೆಗೆ ಕಳೆದ ಜುಲೈ ತಿಂಗಳಲ್ಲಿ ‘ಸುಪ್ರೀತ್ ಗೌಡ’ ಎಂಬ ಹೆಸರಿನ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಇದನ್ನು ಸ್ವೀಕರಿಸಿದ ಬಳಿಕ, ಆರೋಪಿಯು ಆಕೆಯ ವಾಟ್ಸಾಪ್ ನಂಬರ್ ಪಡೆದುಕೊಂಡು ನಿರಂತರವಾಗಿ ಚಾಟ್ ಮಾಡಲು ಆರಂಭಿಸಿದ್ದಾನೆ. ಹೀಗೆ ಚಾಟಿಂಗ್ ಮುಂದುವರಿಸಿದ ಆರೋಪಿ, ಹೇಗೋ ಮಾಡಿ ಯುವತಿಯ ನಗ್ನ (ಖಾಸಗಿ) ಫೋಟೋವನ್ನು ತನ್ನ ಮೊಬೈಲ್ನಲ್ಲಿ ಸಂಗ್ರಹಿಸಿಕೊಂಡಿದ್ದಾನೆ. ಬಳಿಕ ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಂಡು ಆಕೆಗೆ ಬ್ಲ್ಯಾಕ್ಮೇಲ್ ಮಾಡಲು ಶುರು ಮಾಡಿದ್ದಾನೆ.
ಚಿನ್ನಾಭರಣ ದೋಚಿದ ಕೃತ್ಯ: “ನಿನ್ನ ಬಳಿ ಇರುವ ಚಿನ್ನವನ್ನು ಕೊಡಬೇಕು, ಇಲ್ಲವಾದಲ್ಲಿ ನಿನ್ನ ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ಮಾನ ತೆಗೆಯುತ್ತೇನೆ” ಎಂದು ಆರೋಪಿ ಬೆದರಿಕೆ ಹಾಕಿದ್ದಾನೆ. ಆರೋಪಿಯ ಬೆದರಿಕೆಗೆ ತೀವ್ರವಾಗಿ ಭಯಭೀತರಾದ ಯುವತಿ, ಆತ ಹೇಳಿದಂತೆ ಮಾಡಲು ಮುಂದಾಗಿದ್ದಾರೆ.
ಮನೆ ಸಮೀಪವೇ ನಡೆದ ಕೃತ್ಯ: ಕಳೆದ ಆಗಸ್ಟ್ 18ರಂದು ಸುಪ್ರೀತ್ ಗೌಡ ತನ್ನ ಗೆಳೆಯನನ್ನು ಪುಣಚ ಗ್ರಾಮದಲ್ಲಿರುವ ಯುವತಿಯ ಮನೆ ಸಮೀಪಕ್ಕೆ ಬೈಕಿನಲ್ಲಿ ಕಳುಹಿಸಿದ್ದನು. ಯುವತಿಯು ಅನಿವಾರ್ಯವಾಗಿ ತನ್ನಲ್ಲಿದ್ದ 10 ಪವನ್ಗೂ ಅಧಿಕ (80 ಗ್ರಾಂ ಗೂ ಹೆಚ್ಚು) ಚಿನ್ನಾಭರಣಗಳನ್ನು ಆತನ ಗೆಳೆಯನಿಗೆ ಹಸ್ತಾಂತರಿಸಿದ್ದಾಳೆ. ಅಲ್ಲದೆ, ತನ್ನ ಫೋಟೋಗಳನ್ನು ವೈರಲ್ ಮಾಡದಂತೆ ಕಣ್ಣೀರಿನಿಂದ ವಿನಂತಿಸಿಕೊಂಡಿದ್ದಾಳೆ.
ಮನೆಮಂದಿಗೆ ಮಾಹಿತಿ ಮತ್ತು ವಂಚನೆ ಬಯಲು:
ಆರೋಪಿಯ ಅತಿಯಾಸೆಗೆ ಅಂತ್ಯವಿರಲಿಲ್ಲ. ಚಿನ್ನ ಕೊಟ್ಟ ಬಳಿಕವೂ ಮತ್ತೆ ಮತ್ತೆ ಚಿನ್ನ ನೀಡುವಂತೆ ಆತ ಯುವತಿಗೆ ಪೀಡಿಸಲು ಪ್ರಾರಂಭಿಸಿದನು. ಇದರಿಂದ ಮಾನಸಿಕವಾಗಿ ನೊಂದ ಯುವತಿಯು ಕೊನೆಗೆ ಧೈರ್ಯ ಮಾಡಿ ಮನೆಯವರ ಬಳಿ ಸಂಪೂರ್ಣ ವಿಷಯವನ್ನು ತಿಳಿಸಿಬಿಟ್ಟಿದ್ದಾಳೆ.
ಯುವತಿಯ ಮನೆಯವರು ಆರೋಪಿಯ ಮೊಬೈಲ್ ನಂಬರ್ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಾಗ, ಆತ “ನಾನು ನಿಮ್ಮಿಂದ ಪಡೆದ ಚಿನ್ನವನ್ನು ವಾಪಸ್ ಕೊಡುತ್ತೇನೆ, ಗಡಿಬಿಡಿ ಮಾಡಬೇಡಿ” ಎಂದು ನಂಬಿಸಿದ್ದಾನೆ. ಮನೆಯವರೂ ಸಹ ಚಿನ್ನ ವಾಪಸ್ ಸಿಕ್ಕರೆ ಸಾಕು ಎಂದು ಸುಮ್ಮನಾಗಿದ್ದರು. ಆದರೆ, ಕೆಲ ದಿನಗಳ ಬಳಿಕ ಆರೋಪಿ ತನ್ನ ಮೊಬೈಲ್ ನಂಬರ್ ಅನ್ನು ಸ್ವಿಚ್ ಆಫ್ ಮಾಡಿಕೊಂಡು ಸಂಪೂರ್ಣವಾಗಿ ತಲೆಮರೆಸಿಕೊಂಡಿದ್ದಾನೆ. ಕೊನೆಗೆ ಮೋಸಹೋಗಿರುವುದನ್ನು ಅರಿತ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಆತಂಕಗಳು:
ಈ ಕೃತ್ಯದ ಹಿಂದೆ ಸುಪ್ರೀತ್ ಗೌಡನಲ್ಲದೆ ಒಂದು ದೊಡ್ಡ ವಂಚಕರ ಜಾಲವೇ (Cyber Gang) ಕೆಲಸ ಮಾಡುತ್ತಿರುವಂತೆ ಮೇಲ್ನೋಟಕ್ಕೆ ಕಾಣಿಸುತ್ತಿದೆ. ಈ ಜಾಲವು ಇಂತಹದೇ ನೂರಾರು ಅಮಾಯಕ ಯುವತಿಯರ ಬದುಕನ್ನು ನರಕ ಸದೃಶ್ಯವನ್ನಾಗಿ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆರೋಪಿ ಅಥವಾ ಆತನ ಗೆಳೆಯ ಚಿನ್ನಾಭರಣಗಳನ್ನು ಪಡೆಯಲು ನೇರವಾಗಿ ಮನೆ ಸಮೀಪವೇ ಬಂದಿದ್ದರಿಂದ, ಆತನನ್ನು ಸುಲಭವಾಗಿ ಖೆಡ್ಡಾಕ್ಕೆ ಬೀಳಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಯುವಜನತೆ ಎಷ್ಟು ಜಾಗರೂಕರಾಗಿರಬೇಕು ಎಂಬುದಕ್ಕೆ ಈ ಘಟನೆಯೇ ಕನ್ನಡಿಯಾಗಿದೆ.
ಯುವಜನತೆ ಮತ್ತು ಪೋಷಕರಿಗೆ ಪ್ರಮುಖ ಜಾಗೃತಿ ಸಂದೇಶ ಹಾಗೂ ಎಚ್ಚರಿಕೆಗಳು:
ಅಪರಿಚಿತರ ಸ್ನೇಹಕ್ಕೆ ಮುಕ್ತ ಆಹ್ವಾನ ಬೇಡ: ಇನ್ಸ್ಟಾಗ್ರಾಂ, ಫೇಸ್ಬುಕ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವೇ ಇಲ್ಲದ ವ್ಯಕ್ತಿಗಳು ಕಳುಹಿಸುವ ‘ಫ್ರೆಂಡ್ ರಿಕ್ವೆಸ್ಟ್’ಗಳನ್ನು ಯಾವುದೇ ಕಾರಣಕ್ಕೂ ಕುರುಡಾಗಿ ಸ್ವೀಕರಿಸಬೇಡಿ. ಸುಂದರ ಪ್ರೊಫೈಲ್ ಚಿತ್ರಗಳು ಅಥವಾ ನಕಲಿ ಖಾತೆಗಳ ಹಿಂದೆ ವಂಚಕರೇ ಇರುತ್ತಾರೆ ಎಂಬುದನ್ನು ಮರೆಯದಿರಿ.
ವೈಯಕ್ತಿಕ ಫೋಟೋ/ಮಾಹಿತಿಗಳನ್ನು ಹಂಚಿಕೊಳ್ಳಬೇಡಿ: ವಾಟ್ಸಾಪ್ ಅಥವಾ ಇತರೆ ಚಾಟಿಂಗ್ ಆಪ್ಗಳಿಗೆ ಬಂದ ಕೂಡಲೇ ನಿಮ್ಮ ವೈಯಕ್ತಿಕ ಫೋಟೋಗಳು, ನಂಬರ್ಗಳು ಅಥವಾ ಖಾಸಗಿ ಮಾಹಿತಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಸೈಬರ್ ವಂಚಕರು ಇಂತಹವುಗಳನ್ನೇ ಬಂಡವಾಳ ಮಾಡಿಕೊಳ್ಳುತ್ತಾರೆ.
ಬೆದರಿಕೆಗೆ ಹೆದರಿ ಕುಳಿತುಕೊಳ್ಳಬೇಡಿ (ಬ್ಲ್ಯಾಕ್ಮೇಲ್ಗೆ ಮಣಿಯಬೇಡಿ): ಯಾರಾದರೂ ನಿಮ್ಮ ಫೋಟೋಗಳನ್ನು ಬಳಸಿ ಬ್ಲ್ಯಾಕ್ಮೇಲ್ ಮಾಡಿದರೆ, ಹಣ ಅಥವಾ ಒಡವೆಗಳನ್ನು ಕೇಳಿದರೆ, ಭಯಪಟ್ಟುಕೊಂಡು ಅವರ ಮಾತುಗಳಿಗೆ ತಲೆಬಾಗಬೇಡಿ. ವಂಚಕರು ಹಣ ನೀಡಿದರೂ ಪದೇ ಪದೇ ಹಣಕ್ಕಾಗಿ ಪೀಡಿಸುತ್ತಲೇ ಇರುತ್ತಾರೆ.
ಕುಟುಂಬದವರೊಂದಿಗೆ ಮುಕ್ತವಾಗಿ ಮಾತನಾಡಿ: ಯಾವುದೇ ಸಮಸ್ಯೆಯುಂಟಾದರೂ ಮುಚ್ಚಿಡದೆ ತಕ್ಷಣವೇ ತಂದೆ-ತಾಯಿ ಅಥವಾ ವಿಶ್ವಾಸಾರ್ಹ ಹಿರಿಯರ ಬಳಿ ವಿಷಯವನ್ನು ಹಂಚಿಕೊಳ್ಳಿ. ನಿಮ್ಮ ಮಾನ-ಮರ್ಯಾದೆಗೆ ಹೆದರಿಕೊಂಡು ಮೌನವಾಗಿರುವುದು ವಂಚಕರಿಗೆ ಮತ್ತಷ್ಟು ಧೈರ್ಯ ತುಂಬುತ್ತದೆ.
ಕೂಡಲೇ ಸೈಬರ್ ಕ್ರೈಮ್ ಅಥವಾ ಪೊಲೀಸರನ್ನು ಸಂಪರ್ಕಿಸಿ: ಅಪರಿಚಿತರಿಂದ ಯಾವುದೇ ರೀತಿಯ ಬೆದರಿಕೆ, ಕಿರುಕುಳ ಅಥವಾ ವಂಚನೆ ಎದುರಾದ ತಕ್ಷಣವೇ ಯಾವುದೇಂಜಿಕೆಗೆ ಒಳಗಾಗದೆ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಸೈಬರ್ ಕ್ರೈಮ್ಗೆ ದೂರು ನೀಡಿ.
ಸಾಮಾಜಿಕ ಜಾಲತಾಣಗಳು ಮನರಂಜನೆಗೆ ಇರಬೇಕೇ ಹೊರತು, ನಮ್ಮ ಬದುಕನ್ನು ನರಕ ಮಾಡಿಕೊಳ್ಳಲು ಅಲ್ಲ. ಸ್ವಲ್ಪ ಎಚ್ಚರಿಕೆ ವಹಿಸಿದರೆ ಇಂತಹ ಸೈಬರ್ ಕಳ್ಳರ ಬಲೆಗೆ ಬೀಳುವುದನ್ನು ಸಂಪೂರ್ಣವಾಗಿ ತಪ್ಪಿಸಬಹುದು. ಜಾಗರೂಕರಾಗಿರಿ, ಸುರಕ್ಷಿತವಾಗಿರಿ!
Bantawala
ಬಂಟ್ವಾಳ: ಪೋಕ್ಸೋ ಪ್ರಕರಣ ಸಾಬೀತು – ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ವಾಸ ಹಾಗೂ ದಂಡ ವಿಧಿಸಿ ನ್ಯಾಯಾಲಯ ಆದೇಶ
ಮಂಗಳೂರು: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಂಭೀರ ಸ್ವರೂಪದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯ ಮೇಲಿನ ಅಪರಾಧ ಸಾಬೀತಾಗಿದ್ದು, ಮಂಗಳೂರಿನ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (FTSC-2) ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಶಿಕ್ಷೆಗೊಳಗಾದ ಅಪರಾಧಿ. ಈ ಪ್ರಕರಣದಲ್ಲಿ ಒಟ್ಟು ಮೂವರ ವಿರುದ್ಧ ಆರೋಪವಿದ್ದು, ಪ್ರಮುಖ ಆರೋಪಿಯ ದೋಷವು ನ್ಯಾಯಾಲಯದಲ್ಲಿ ಸಾಬೀತಾಗಿದೆ.
ಪ್ರಕರಣದ ಹಿನ್ನೆಲೆ ಮತ್ತು ತನಿಖೆ:
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಧಿಸೂಚನೆ ಸಂಖ್ಯೆ 141/2025 ರ ಅಡಿಯಲ್ಲಿ ಪೋಕ್ಸೋ ಕಾಯ್ದೆ-2012ರ ಕಲಂ: 4, 6, 8, 12, 19(1)(b), 21 ಹಾಗೂ BNS-2023ರ ಕಲಂ: 64(2)(f), 75 r/w 3(5) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಗಂಭೀರತೆಯನ್ನು ಅರಿತುಕೊಂಡ ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಹಾಗೂ ತನಿಖಾಧಿಕಾರಿ ಅನಂತ ಪದ್ಮನಾಭ ಅವರು ಕೂಲಂಕಷವಾಗಿ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸಿದ್ದರು.
ನ್ಯಾಯಾಲಯದ ತೀರ್ಪು:
ಮಂಗಳೂರಿನ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ (FTSC-2) ನಡೆದ ವಿಚಾರಣೆಯ ಸಂದರ್ಭದಲ್ಲಿ, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಸಹನಾದೇವಿ ಬೋಳೂರು ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ, ಸಾಕ್ಷಿಗಳನ್ನು ಸಾಬೀತುಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಮಾನ್ಯ ನ್ಯಾಯಾಧೀಶರಾದ ಶ್ರೀ ಮಾನು ಕೆ.ಎಸ್. ಅವರು, ಆರೋಪಿ ಅಬ್ದುಲ್ ಲತಿಫ್ನ ಕೃತ್ಯವು ಸಾಬೀತಾಗಿರುವ ಹಿನ್ನೆಲೆಯಲ್ಲಿ ದಿನಾಂಕ 19.09.2026 ರಂದು ಈ ಕೆಳಗಿನ ಶಿಕ್ಷೆಯನ್ನು ಪ್ರಕಟಿಸಿ ಆದೇಶಿಸಿದ್ದಾರೆ:
- ಕಾರಾಗೃಹ ವಾಸ: 20 ವರ್ಷಗಳ ಕಠಿಣ ಕಾರಾಗೃಹ ವಾಸ.
- ದಂಡದ ಮೊತ್ತ: ರೂ. 80,000/- (ಎಂಭತ್ತು ಸಾವಿರ ರೂಪಾಯಿಗಳು).
ತ್ವರಿತ ತನಿಖೆ ಮತ್ತು ಸಮರ್ಥ ವಾದ ಮಂಡನೆಯ ಮೂಲಕ ಅಪರಾಧಿಗೆ ತಕ್ಕ ಶಿಕ್ಷೆ ದೊರೆಯುವಂತೆ ಮಾಡಿದ ತನಿಖಾಧಿಕಾರಿಗಳು ಹಾಗೂ ಸರ್ಕಾರಿ ಅಭಿಯೋಜಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
-
accident1 month agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala3 months agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
