Connect with us

Bantawala

ಸರ್ಕಾರಿ ಶಾಲಾ ಆವರಣದಲ್ಲಿದ್ದ ಬೆಲೆಬಾಳುವ ಮರಗಳ ಮಾರಣಹೋಮ..ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮತ್ತವನ ಬೆಂಬಲಿಗರ ವಿರುದ್ಧ ಅರಣ್ಯ ಇಲಾಖೆಗೆ, ಶಿಕ್ಷಣ ಇಲಾಖೆಗೆ ದೂರು.

Published

on

ವಿಟ್ಲ : ಸರ್ಕಾರಿ ಶಾಲಾ ಆವರಣದಲ್ಲಿದ್ದ ಬೆಲೆಬಾಳುವ ಎರಡು ಹಲಸು ಜಾತಿಯ ಮರಗಳನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮತ್ತಿತರರೇ ಅಕ್ರಮವಾಗಿ ಕಡಿದು ಮಾರಾಟ ಮಾಡಿದ ಆಘಾತಕಾರಿ ಪ್ರಕರಣವೊಂದು ಬಯಲಾಗಿದೆ.

ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಡುಮಠ. ಇಲ್ಲಿನ ಶಾಲಾ ಮೈದಾನದ ಬದಿಯಲ್ಲಿ ಸುಮಾರು ಎಂಭತ್ತು ವರ್ಷಗಳಿಂದ ನೆರಳು ನೀಡುತ್ತಿದ್ದ ಹಲಸು ಜಾತಿಯ ಎರಡು ಮರಗಳು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮತ್ತಾತನ ಪಟಾಲಂನ ರಾಕ್ಷಸೀ ಕೃತ್ಯಕ್ಕೆ ಬಲಿಯಾಗಿದೆ.


ಸರ್ಕಾರದ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡದ ನೆಪದಲ್ಲಿ ಎರಡು ಅಮಾಯಕ ಮರಗಳನ್ನು ನಾಶ ಮಾಡಿರುವುದು ವಿದ್ಯಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆರಿಫ್ ಕರಾಯಿ ಮತ್ತಾತನ ಬೆಂಬಲಿಗರು ಎರಡು ಮರಗಳನ್ನು ಕಡಿಸಿ ಸಮಿತಿಯ ಸದಸ್ಯನೇ ಆಗಿರುವ ಸಾಲೆತ್ತೂರು ಹಮೀದ್ ಎಂಬವಾತಗೆ ಮಾರಾಟ ಮಾಡಿದ್ದಾರೆಂದು ದೂರುದಾರರು ಆರೋಪಿಸಿದ್ದಾರೆ. ಅಕ್ರಮವಾಗಿ ಕಡಿದ ಮರಗಳನ್ನು ಮಿನಿ ಲಾರಿಯಲ್ಲಿ ಸಾಗಾಟ ಮಾಡಿದ ಫೊಟೋ ಗಳು ಇದೀಗ ಸಾಮಾಜಿಕ ತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿದೆ.

ಸಮಿತಿಯ ಇತರ ಸದಸ್ಯರು ಮತ್ತು ಹಳೆ ವಿದ್ಯಾರ್ಥಿಗಳು ನೆರಳು ನೀಡುತ್ತಿದ್ದ ಹಳೆಯ ಮರಗಳನ್ನು ತೆರವು ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಅಧ್ಯಕ್ಷ ಮತ್ತು ಆತನ ಹಿಂಬಾಲಕರು, ಮುಖ್ಯ ಶಿಕ್ಷಕಿ ತಮ್ಮ ಅಕ್ರಮ ಮುಂದುವರಿಸಿದ್ದಾರೆಂದು ದೂರಿನಲ್ಲಿ ವಿವರಿಸಿದ್ದಾರೆ.

ನೆರಳು ನೀಡುತ್ತಿದ್ದ ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ತೆರವು ಮಾಡುವ ಮೂಲಕ ತುಘಲಕ್ ದರ್ಬಾರ್ ನಡೆಸಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಬಗ್ಗೆ ಮಾಹಿತಿ ತಿಳಿದಿದ್ದರೂ ಅಕ್ರಮಕ್ಕೆ ಕಣ್ಮುಚ್ಚಿ ಕುಳಿತ ಶಾಲಾ ಮುಖ್ಯ ಶಿಕ್ಷಕಿ, ಸಿ.ಆರ್.ಪಿ.ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಬಂಟ್ವಾಳ ವಲಯ ಅರಣ್ಯಾಧಿಕಾರಿಗಳಿಗೆ ಸಮಿತಿ ಸದಸ್ಯ ಇಕ್ಬಾಲ್ ಮತ್ತಿತರರು ದೂರು ನೀಡಿದ್ದಾರೆ.
ದೂರಿಗೆ ಸಂಬಂಧಿಸಿದಂತೆ ಸೋಮವಾರ ಸಂಜೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

75 ವರ್ಷಗಳ ರಸ್ತೆ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು – ಉಕ್ಕುಡ ಕಲ್ಲಜರಿಯಲ್ಲಿ ಅಕ್ರಮ ಗೇಟ್ ತೆರವು.

Published

on

​ವಿಟ್ಲ : ಕಸಬಾ ಗ್ರಾಮದ ಉಕ್ಕುಡ ಕಲ್ಲಜರಿ ಪ್ರದೇಶದಲ್ಲಿ ಕಳೆದ 75 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಮೂರು ಬಡ ಕುಟುಂಬಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

ಸರ್ಕಾರಿ ಜಮೀನಿನಲ್ಲಿ ಹಾದುಹೋಗುತ್ತಿದ್ದ ರಸ್ತೆಗೆ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಗೇಟ್ ಅಳವಡಿಸಿ ತಡೆಯೊಡ್ಡಿದ್ದ ಗೇಟನ್ನು ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ. ​ದೂರಿನ ಹಿನ್ನೆಲೆ:​ಸ್ಥಳೀಯ ನಿವಾಸಿ ಶ್ರೀಮತಿ ಜಯಂತಿ ಎಂಬುವರು ಈ ಅಕ್ರಮ ತಡೆಯ ತೆರವಿಗಾಗಿ ವಿಟ್ಲ ಪಟ್ಟಣ ಪಂಚಾಯತಿಗೆ ಅಗತ್ಯ ದಾಖಲೆಗಳ ಸಹಿತ ದೂರು ನೀಡಿದ್ದರು. ದೂರಿನ ಗಂಭೀರತೆಯನ್ನು ಪರಿಗಣಿಸಿದ ಪಟ್ಟಣ ಪಂಚಾಯತ್ ಆಡಳಿತವು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ವಿನಂತಿಸಿತ್ತು.

​ತಹಶೀಲ್ದಾರ್ ಆದೇಶ ಮತ್ತು ಪರಿಶೀಲನೆ:​ಮನವಿಗೆ ತಕ್ಷಣ ಸ್ಪಂದಿಸಿದ ಬಂಟ್ವಾಳ ತಹಶೀಲ್ದಾರರು, ಸ್ಥಳ ತನಿಖೆ ನಡೆಸಿ ಅಕ್ರಮ ಗೇಟ್ ತೆರವುಗೊಳಿಸುವಂತೆ ವಿಟ್ಲ ಕಂದಾಯ ನಿರೀಕ್ಷಕರಿಗೆ ಹಾಗೂ ಭೂ ಮಾಪಕರಿಗೆ ಅಧಿಕೃತ ಆದೇಶ ನೀಡಿದ್ದರು. ​ಅಧಿಕಾರಿಗಳು ನಡೆಸಿದ ಸಮೀಕ್ಷೆ ಹಾಗೂ ಕಂದಾಯ ನಿರೀಕ್ಷಕರ ವರದಿಯ ಪ್ರಕಾರ, ಸರ್ವೇ ನಂ. 727/1ರಲ್ಲಿ ಬರುವ ರಸ್ತೆಯು ಸರ್ಕಾರಿ ಜಮೀನಿನಲ್ಲಿದೆ ಎಂಬುದು ದೃಢಪಟ್ಟಿದೆ. ​ರಸ್ತೆ ಅಭಿವೃದ್ಧಿಗೆ ಮಾತ್ರ ಅವಕಾಶ:​ಈ ಜಮೀನನ್ನು ರಸ್ತೆಯನ್ನು ಅಭಿವೃದ್ಧಿಪಡಿಸಲು ಮತ್ತು ಸಾರ್ವಜನಿಕರ ರಸ್ತೆ ಸಂಪರ್ಕಕ್ಕಾಗಿ ಮಾತ್ರ ಬಳಸಿಕೊಳ್ಳಲು ತಹಶೀಲ್ದಾರ್ ಕಚೇರಿಯಿಂದ ಸ್ಪಷ್ಟ ಆದೇಶ ನೀಡಲಾಗಿದೆ. ಬೇರೆ ಯಾವುದೇ ಉದ್ದೇಶಕ್ಕಾಗಿ ಈ ಸರ್ಕಾರಿ ಜಮೀನನ್ನು ಬಳಸಲು ಅವಕಾಶವಿರುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ​

ಅಕ್ರಮ ಗೇಟ್ ತೆರವು – ಕುಟುಂಬಗಳ ಕೃತಜ್ಞತೆ:​ತಹಶೀಲ್ದಾರ್ ಆದೇಶದಂತೆ ಇಂದು ಕಂದಾಯ ಅಧಿಕಾರಿಗಳು ಹಾಗೂ ವಿಟ್ಲ ಪಟ್ಟಣ ಪಂಚಾಯತ್ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮವಾಗಿ ಹಾಕಲಾಗಿದ್ದ ಗೇಟನ್ನು ತೆರವುಗೊಳಿಸಿ, ಅರ್ಜಿದಾರರಿಗೆ ರಸ್ತೆ ಸಂಪರ್ಕ ಕಲ್ಪಿಸಿಕೊಟ್ಟಿದ್ದಾರೆ. ​ದಶಕಗಳಿಂದ ಅನುಭವಿಸುತ್ತಿದ್ದ ನರಕಯಾತನೆಗೆ ಮುಕ್ತಿ ದೊರೆತಿದ್ದರಿಂದ ಹರ್ಷ ವ್ಯಕ್ತಪಡಿಸಿರುವ ಬಡ ಕುಟುಂಬಗಳು, ಸಕಾಲದಲ್ಲಿ ಸ್ಪಂದಿಸಿ ನ್ಯಾಯ ಒದಗಿಸಿದ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಆಡಳಿತಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿವೆ.

Continue Reading

Bantawala

ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿ: ವಾರದೊಳಗೆ ಇಬ್ಬರು ಮುಖ್ಯಶಿಕ್ಷಕಿಯರ ಸಾವು!

Published

on

ಬಂಟ್ವಾಳ: ಶಿಕ್ಷಣ ಕ್ಷೇತ್ರಕ್ಕೆ ಆಘಾತಕಾರಿ ಸುದ್ದಿ. ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತದಿಂದ ನ.2ರಂದು ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಶೇಷವೆಂದರೆ, ವಾರದ ಹಿಂದಷ್ಟೇ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದು, ಇದೀಗ ಮತ್ತೋರ್ವ ಮುಖ್ಯಶಿಕ್ಷಕಿಯ ಸಾವು ಶಿಕ್ಷಣ ವಲಯದಲ್ಲಿ ತೀವ್ರ ಶೋಕ ಮೂಡಿಸಿದೆ.

ಗುರುಪುರ ಕೈಕಂಬದ ಕಂದಾವರ ಬೈಲು ನಿವಾಸಿಯಾಗಿದ್ದ ವನಿತಾ ಶೆಟ್ಟಿಗಾರ್ ಅವರು ನ.2ರಂದು ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡು, ಬಳಿಕ ವಾಂತಿಯಾಗಿದ್ದು, ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

34 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದ ವನಿತಾ ಶೆಟ್ಟಿಗಾರ್ ಅವರು ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಅವರ ನಿಧನದಿಂದ ಶಿಕ್ಷಕ ವಲಯದಲ್ಲಿ ಶೋಕ ಆವರಿಸಿದೆ. ಸಹೋದ್ಯೋಗಿ ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಇದಕ್ಕೂ ಮೊದಲು ಅಕ್ಟೋಬರ್ 27ರಂದು ಕೆಲಿಂಜ ಶಾಲೆಯ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ನಿಧನರಾಗಿದ್ದರು. ಈ ಘಟನೆ ನಡೆದು ವಾರ ಕಳೆಯುವ ಮುನ್ನವೇ ಮತ್ತೊಂದು ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಅವರು ಹೃದಯಾಘಾತಕ್ಕೆ ಬಲಿಯಾಗಿರುವುದು ಸ್ಥಳೀಯ ಶಿಕ್ಷಣ ಸಮುದಾಯಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.

ವಾರದ ಅಂತರದಲ್ಲಿ ಇಬ್ಬರು ಶಾಲಾ ಮುಖ್ಯಸ್ಥೆಯರನ್ನು ಕಳೆದುಕೊಂಡಿರುವುದು ಶಿಕ್ಷಕ ಸಮುದಾಯದಲ್ಲಿ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ.

Continue Reading

Bantawala

ವಿಟ್ಲದ ಖ್ಯಾತ ವೈದ್ಯ ಡಾ. ವಿ.ಕೆ. ಹೆಗ್ಡೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Published

on

ವಿಟ್ಲದ ಖ್ಯಾತ ವೈದ್ಯ, ಪುಷ್ಪಾಕ್ ಹೆಲ್ತ್ ಸೆಂಟರ್ ಸಂಸ್ಥಾಪಕ *ಡಾ. ವಿ.ಕೆ. ಹೆಗ್ಡೆ* ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.1987 ರಿಂದ ವಿಟ್ಲದಲ್ಲಿ ನಿರಂತರವಾಗಿ ವೈದ್ಯಕೀಯ ಸೇವೆ ಸಲ್ಲಿಸುತ್ತಾ ಬಂದಿರುವ ಡಾ. ವಿ.ಕೆ. ಹೆಗ್ಡೆ ಅವರ ವೃತ್ತಿಪರ ಪಯಣವು ಗ್ರಾಮೀಣ ಪ್ರದೇಶದಲ್ಲಿ ದೀರ್ಘಕಾಲದ ಪ್ರಾಥಮಿಕ ಆರೋಗ್ಯ ಸೇವೆಯ ನಿರಂತರ ಅಧ್ಯಾಯವಾಗಿದೆ.ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಪರಿಗಣಿಸದೆ, ಜನರ ಆರೋಗ್ಯದ ಅಗತ್ಯಗಳಿಗೆ ಸ್ಪಂದಿಸುವ ಮಾನವೀಯ ಸೇವೆಯಾಗಿ ಅವರು ಅಳವಡಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ಅರೆನಗರ ಪ್ರದೇಶದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ, ವೈಯಕ್ತಿಕ ವೈದ್ಯಕೀಯ ಕಾಳಜಿ ಮತ್ತು ಮಾನವೀಯ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ.ವೈದ್ಯಕೀಯ ವೃತ್ತಿಯ ಜೊತೆಗೆ ರೋಟರಿ ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿಯೂ ದೀರ್ಘಕಾಲದ ಕೊಡುಗೆ ನೀಡಿದ್ದಾರೆ.ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಸಂಕಷ್ಟದ ಅವಧಿಯಲ್ಲಿ ವೈದ್ಯಕೀಯ ಸೇವೆಯ ನಿರಂತರತೆಯನ್ನು ಕಾಪಾಡಿ, ಅಗತ್ಯವಿರುವ ರೋಗಿಗಳಿಗೆ ಸಲಹೆ, ಚಿಕಿತ್ಸೆ, ಮಾರ್ಗದರ್ಶನ ಮತ್ತು ಸೂಕ್ತ ರೆಫರಲ್ ನೆರವು ನೀಡಿದ ಅವರ ಸೇವಾ ಬದ್ಧತೆಯು ಈ ನಾಮನಿರ್ದೇಶನದ ಪ್ರಮುಖ ಅಂಶವಾಗಿದೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!