Belthangady
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಆದಿವಾಸಿಗಳ ಒಕ್ಕಲೆಬ್ಬಿಸುವ ನಿರ್ಧಾರ ಕೈಬಿಡಿ ;ಸರ್ಕಾರಕ್ಕೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ..
ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ವಾಸಿಸುವ ಆದಿವಾಸಿಗಳನ್ನು ಒಕ್ಕಲೆಬ್ಬಿಸುವ ಸರ್ಕಾರದ ನಿರ್ಧಾರ ಮೂರ್ಖತನದಿಂದ ಕೂಡಿದೆ. ಸರ್ಕಾರ ತಕ್ಷಣವೇ ತನ್ನ ದುಡುಕು ನಿರ್ಧಾರ ಕೈಬಿಡದಿದ್ದರೆ ಆದಿವಾಸಿಗಳು ಬದುಕುವ ಹಕ್ಕುಗಳ ರಕ್ಷಣೆಗಾಗಿ ಎರಡನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ ಕಟುಶಬ್ದಗಳಲ್ಲಿ ಎಚ್ಚರಿಕೆ ನೀಡಿದೆ.

ಶತಮಾನಗಳಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಆದಿವಾಸಿಗಳನ್ನು ಅಲ್ಲಿಂದ ಸ್ಥಳಾಂತರ ಮಾಡುವುದು ಮೀನನ್ನು ನೀರಿನಿಂದ ಮೇಲಕ್ಕೆ ತೆಗೆದಂತೆ. ಮಾನವ- ಕಾಡುಪ್ರಾಣಿ ಸಂಘರ್ಷ ತಪ್ಪಿಸಲು ಇಂತಹ ಮೂರ್ಖತನದ ನಿರ್ಧಾರ ಕೈಗೊಳ್ಳುವ ಬಗ್ಗೆ ತಿಳಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದ್ದು. ಅರಣ್ಯದ ಮಕ್ಕಳನ್ನು ಒಕ್ಕಲೆಬ್ಬಿಸುವ ಬದಲಾಗಿ ಅವರಿಗೆ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿರ್ಧಾರ ತೆಗೆದುಕೊಳ್ಳಬೇಕು. ಅಮಾಯಕ ಆದಿವಾಸಿಗಳನ್ನು ಒಕ್ಕಲೆಬ್ಬಿಸಲು ಮೀಸಲಿಟ್ಟ 300 ಕೋಟಿ ರೂಪಾಯಿಗಳನ್ನು ಮೂಲಭೂತ ಸೌಕರ್ಯಗಳಿಗೆ ಮೀಸಲಿಟ್ಟು ವಿದ್ಯುತ್, ಕುಡಿಯುವ ನೀರು ಮತ್ತು ರಸ್ತೆಯಂತಹ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳನ್ನು ಒದಗಿಸಲಿ ಎಂದು ಸಂಚಾಲಕ ಶೇಖರ್ ಲಾಯಿಲ ಒತ್ತಾಯಿಸಿದ್ದಾರೆ.

ಸ್ವಾತಂತ್ರ್ಯ ದೊರಕಿ 79 ವರ್ಷಗಳಾದರೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ಬಡ ಆದಿವಾಸಿಗಳ ಮೇಲೆ ಅಧಿಕಾರದ ದರ್ಪದಿಂದ ನಿರ್ದಾಕ್ಷಿಣ್ಯವಾಗಿ , ಬಲವಂತವಾಗಿ , ದಬ್ಬಾಳಿಕೆಯ ಮೂಲಕ ಅವರನ್ನು ಒಕ್ಕಲೆಬ್ಬಿಸಲು ಮುಂದಾದರೆ ಮುಂದಿನ ದಿನಗಳಲ್ಲಿ ಮಾಡು ಇಲ್ಲವೇ ಮಡಿ ಹೋರಾಟ ಕೈಗೊಳ್ಳುವುದು ಅನಿವಾರ್ಯವಾದೀತು.

ಮುಂದೆ ಇದರಿಂದಾಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆಯಾಗಬೇಕಾಗುತ್ತದೆ. ಹಿಂದೊಮ್ಮೆ ಒಕ್ಕಲೆಬ್ಬಿಸಲು ಹೊರಟು ನಕ್ಸಲ್ ಚಟುವಟಿಕೆಗಳನ್ನು ತಾನಾಗಿಯೇ ಆಹ್ವಾನಿಸಿಕೊಂಡ ಸರ್ಕಾರಗಳು ಈಗ ಮತ್ತೆ ಒಕ್ಕಲೆಬ್ಬಿಸಲು ಹೊರಟು ಯಾವ ಸಂದೇಶ ನೀಡುತ್ತಿದೆ ಎಂದು ಪ್ರಶ್ನಿಸಿರುವ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ ಅವರು “ಬೆಂಕಿಯೊಂದಿಗೆ ಯಾವತ್ತೂ ಸರಸ-ಸಲ್ಲಾಪ ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.
Belthangady
ಯೂಟ್ಯೂಬರ್ ಸಮೀರ್ ಗೆ ಹೈಕೋರ್ಟ್ ರಿಲೀಫ್: ಕ್ರಿಮಿನಲ್ ಪ್ರಕರಣಕ್ಕೆ ಮಧ್ಯಂತರ ತಡೆ
ಧರ್ಮಸ್ಥಳದ ಅಸಹಜ ಸಾವಿನ ಬಗ್ಗೆ ಕೃತಕ ಬುದ್ಧಿಮತ್ತೆ ಬಳಸಿ ಕಾಲ್ಪನಿಕ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಎಂ.ಡಿ.ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಮೀರ್ ಸಲ್ಲಿಸಿದ್ದರು.
ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಕುರಿತು ವಿಡಿಯೋ ಹಂಚಿಕೊಂಡಿದ್ದ ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮೇಲ್ನೋಟಕ್ಕೆ ಬಲವಾದ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ಶವಗಳನ್ನು ಹೂಳಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನು ಒಳಗೊಂಡ ವಿಡಿಯೋವೊಂದನ್ನು ಸಮೀರ್ ಮೊಹಮ್ಮದ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ದೇವಸ್ಥಾನದ ಘನತೆಗೆ ಧಕ್ಕೆ ತರುವಂತಿದೆ. ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವ ಪ್ರಯತ್ನ (ಸೆಕ್ಷನ್ 153A) ನಡೆಸಲಾಗಿದೆ. ಸಾರ್ವಜನಿಕ ಶಾಂತಿ ಕದಡುವ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.
ನ್ಯಾಯಾಲಯದಲ್ಲಿ ನಡೆದ ವಾದ-ಪ್ರತಿವಾದ
ಸಮೀರ್ ಮೊಹಮ್ಮದ್ ಪರ ವಕೀಲರು ನ್ಯಾಯಪೀಠದ ಮುಂದೆ ಅರ್ಜಿದಾರರು ಕೇವಲ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿರುವ ವಿಷಯದ ಬಗ್ಗೆ ವಿಡಿಯೋ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಮುದಾಯಗಳ ನಡುವೆ ದ್ವೇಷ ಉಂಟುಮಾಡುವ ಉದ್ದೇಶವಿಲ್ಲ. ಇದು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿದೆ ಎಂದು ಬಲವಾದ ವಾದ ಮಂಡಿಸಿದರು. ವಿಚಾರಣೆ ವೇಳೆ ಸಮೀರ್ ಪರ ವಕೀಲರು, “ಯೂಟ್ಯೂಬ್‌ನಲ್ಲಿ ವಿಡಿಯೋ ಹಾಕಿದ್ದಕ್ಕೆ ಪೊಲೀಸರು ಸಾರ್ವಜನಿಕ ಶಾಂತಿ ಭಂಗದ ನೆಪದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ” ಎಂದು ವಾದಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಮಾರ್ಮಿಕವಾಗಿ ಪ್ರತಿಕ್ರಿಯಿಸಿ, “ಯಾರ ನೆಮ್ಮದಿ ಹಾಳು ಮಾಡಿದ್ದೀರಿ ಎಂದು ನಮಗೆ ತಿಳಿದಿದೆ. ಅದು ಕೇವಲ ಸಾರ್ವಜನಿಕರ ನೆಮ್ಮದಿ ಮಾತ್ರವಲ್ಲ” ಎಂದು ನಗುತ್ತಲೇ ನುಡಿದರು.
ಹೈಕೋರ್ಟ್ ನೀಡಿದ ಮಹತ್ವದ ಆದೇಶ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಅರ್ಜಿದಾರರ ವಿರುದ್ಧ ಮೇಲ್ನೋಟಕ್ಕೆ ಯಾವುದೇ ಗಂಭೀರ ಪುರಾವೆಗಳಿಲ್ಲ. ಯಾವುದೇ ನಿರ್ದಿಷ್ಟ ಸಮುದಾಯಗಳ ನಡುವೆ ದ್ವೇಷ ಅಥವಾ ಸಂಘರ್ಷಕ್ಕೆ ಪ್ರಚೋದನೆ ನೀಡಿದ ಅಂಶಗಳು ಈ ವಿಡಿಯೋದಲ್ಲಿ ಕಂಡುಬರುತ್ತಿಲ್ಲ. ಎಂಬ ಅಂಶಗಳನ್ನು ಗಮನಿಸಿ ಅರ್ಜಿದಾರರ ವಿರುದ್ಧದ ಮುಂದಿನ ತನಿಖೆ ಮತ್ತು ಎಲ್ಲಾ ಕಾನೂನು ಕ್ರಮಗಳಿಗೆ ನ್ಯಾಯಾಲಯ ತಡೆ ನೀಡಿದೆ.
ನ್ಯಾಯಾಲಯವು ಈ ಕುರಿತು ರಾಜ್ಯ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಮುಂದೂಡಿದೆ. ಹೈಕೋರ್ಟ್‌ನ ಈ ತೀರ್ಪು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವವರು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರ ಧ್ವನಿ ಎತ್ತುವವರಿಗೆ ದೊಡ್ಡ ಸಮಾಧಾನ ತಂದಿದೆ.
Belthangady
ಶಿಕ್ಷಕಿ ಮೇಲೆ ಅತ್ಯಾಚಾರ ಆರೋಪ: ಕೇಸ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್; ಮೂಡುಬಿದಿರೆ ಮಾಜಿ ಇನ್ಸ್‌ಪೆಕ್ಟರ್‌ಗೆ ಬಂಧನದ ಭೀತಿ
ದೂರು ನೀಡಲು ಬಂದ ಮಹಿಳೆಗೆ ರಕ್ಷಣೆ ನೀಡಬೇಕಾದ ಅಧಿಕಾರಿಯೇ ಭಕ್ಷಕನಾದರೇ ಏನಾಗುತ್ತದೆ ಎಂಬುದಕ್ಕೆ ಮೂಡುಬಿದಿರೆಯ ಅಮಾನತುಗೊಂಡ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಪ್ರಕರಣವೇ ಸಾಕ್ಷಿ. ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ಈ ‘ಕಾಮಪುರಾಣ’ದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಆರೋಪಿ ಅಧಿಕಾರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಶಿಕ್ಷಕಿಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಂದೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಕಿಡಿಹೊತ್ತಿಸಿದೆ.
“ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು ಅಧಿಕಾರದ ದುರುಪಯೋಗವಲ್ಲವೇ? ಇಂತಹ ಸಂದರ್ಭದಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗದೆ ಇನ್ನೇನು ದಾಖಲಾಗಲು ಸಾಧ್ಯ?” ಎಂದು ನ್ಯಾಯಪೀಠವು ಖಾರವಾಗಿ ಪ್ರಶ್ನಿಸಿದೆ.
ವಿಚಾರಣೆ ವೇಳೆ ಸಂದೇಶ್ ಪರ ವಕೀಲರು ವಾದ ಮಂಡಿಸಿ, “ಇದು ಇಬ್ಬರ ನಡುವಿನ ಒಪ್ಪಿತ ಸಂಬಂಧವಾಗಿತ್ತು, ಅತ್ಯಾಚಾರ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ” ಎಂದು ಸಮರ್ಥಿಸಿಕೊಳ್ಳಲು ಯತ್ನಿಸಿದರು. ಆದರೆ, ಈ ವಾದವನ್ನು ಒಪ್ಪದ ನ್ಯಾಯಾಲಯವು ಮಧ್ಯಂತರ ತಡೆ ನೀಡಲು ಸಾರಾಸಗಟಾಗಿ ನಿರಾಕರಿಸಿತು.
ಹೈಕೋರ್ಟ್ ಬಂಧನದ ವಿರುದ್ಧ ಯಾವುದೇ ಮಧ್ಯಂತರ ರಕ್ಷಣೆ ನೀಡದ ಕಾರಣ, ಸಿಐಡಿ ಪೊಲೀಸರು ಯಾವುದೇ ಕ್ಷಣದಲ್ಲಿ ಸಂದೇಶ್‌ರನ್ನು ಬಂಧಿಸುವ ಸಾಧ್ಯತೆಯಿದೆ. ಈಗಾಗಲೇ ಸಿಐಡಿ ಈ ಪ್ರಕರಣದ ಆಳವಾದ ತನಿಖೆ ನಡೆಸುತ್ತಿದ್ದು, ದಿನಕ್ಕೊಂದು ಹೊಸ ಸ್ಫೋಟಕ ಮಾಹಿತಿ ಹೊರಬರುತ್ತಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಲಾಗಿದ್ದು, ಅಂದು ಇನ್ಸ್‌ಪೆಕ್ಟರ್ ಭವಿಷ್ಯ ನಿರ್ಧಾರವಾಗಲಿದೆ.
ರಕ್ಷಕನೇ ಭಕ್ಷಕನಾದ ಈ ಪ್ರಕರಣವು ಪೊಲೀಸ್ ಇಲಾಖೆಗೆ ಕಪ್ಪು ಚುಕ್ಕೆಯಾಗಿದ್ದು, ಹೈಕೋರ್ಟ್‌ನ ಇಂದಿನ ನಿಲುವು ಸಂತ್ರಸ್ತ ಮಹಿಳೆಗೆ ನ್ಯಾಯ ಸಿಗುವ ಭರವಸೆಯನ್ನು ಮೂಡಿಸಿದೆ.
Belthangady
ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ
ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.
ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.
ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 25ರಂದು ವೇಣೂರು ಪೊಲೀಸ್ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್‌ಪಿ ನೇತೃತ್ವದ ತಂಡವು ಮಾರ್ಚ್ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.
-
crime5 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 days agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
