Connect with us

Dakshina Kannada

ಸ್ಪೆಷಲ್ ಕ್ಲಾಸ್ ನೆಪದಲ್ಲಿ ಬಾಲಕನ ಬರಮಾಡಿ ಲೈಂಗಿಕ ದೌರ್ಜನ್ಯ..ಮೂಡಬಿದ್ರೆ ಶಾಲಾ ಶಿಕ್ಷಕ ಅಲ್ತಾಫ್ ಅಂದರ್..

Published

on

ಗಣಿತ ವಿಷಯದ ಸ್ಪೆಷಲ್ ಕ್ಲಾಸ್ ನೀಡುವ ನೆಪದಲ್ಲಿ ವಿದ್ಯಾರ್ಥಿಯೊಬ್ಬನ ಬರಮಾಡಿಕೊಂಡ ಶಿಕ್ಷಕನೊಬ್ಬ ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮೂಡಬಿದಿರೆ ಶಾಲೆಯೊಂದರ ಅನಾಗರಿಕ ಸಂಸ್ಕೃತಿಯ ಶಿಕ್ಷಕನೊಬ್ಬನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಶಿಕ್ಷಕ ಅಲ್ತಾಫ್ ಬಂಧಿತ ಆರೋಪಿ. ಇಲ್ಲಿನ ಶಾಲೆಯೊಂದರಲ್ಲಿ ಸಂತ್ರಸ್ತ ಬಾಲಕನಿಗೆ ಗಣಿತ ವಿಷಯದಲ್ಲಿ ಹೆಚ್ಚು ಅಂಕ ಕೊಡಿಸುವುದಾಗಿ ನಂಬಿಸಿದ ಶಿಕ್ಷಕ ಅಲ್ತಾಫ್, ಬಾಲಕನನ್ನು ತನ್ನ ಕೊಠಡಿಗೆ ಬರಮಾಡಿಕೊಂಡು ಆತನ ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ತಿಳಿದುಬಂದಿದೆ.
ವಿಷಯ ಯಾರಿಗಾದರೂ ತಿಳಿಸಿದರೆ ಪರೀಕ್ಷೆ ಬರೆಯಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದನೆನ್ನಲಾಗಿದೆ. ಬಾಲಕನ ಮೇಲೆ ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದು, ವಿರೋಧಿಸಿದಾಗ ಆತನ ಮೇಲೆ ಹಲ್ಲೆ ಕೂಡಾ ನಡೆಸಿದ್ದನೆಂದು ತಿಳಿದುಬಂದಿದೆ.

ಕೆಲವು ದಿನಗಳಿಂದ ಬಾಲಕನ ಮಾನಸಿಕ ಹಾಗೂ ದೈಹಿಕ ಆರೋಗ್ಯದಲ್ಲಿ ಏರುಪೇರಾದಾಗ ಅನುಮಾನಗೊಂಡ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಮತ್ತು ಪೋಷಕರು ಬಾಲಕನಲ್ಲಿ ವಿಚಾರಿಸಿದಾಗ ಆತ ತನ್ನ ಮೇಲೆ ನಡೆದ ದೌರ್ಜನ್ಯಗಳನ್ನು ಎಳೆಎಳೆಯಾಗಿ ಬಾಯಿಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸರು ಆರೋಪಿ ಶಿಕ್ಷಕನ ವಿರುದ್ಧ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ದಕ್ಷಿಣ ಕನ್ನಡ ಕಾಂಗ್ರೆಸ್‌ಗೆ ಹೊಸ ಚೈತನ್ಯದ ಸಾರಥಿ: ಜಿಲ್ಲಾ ಅಧ್ಯಕ್ಷ ಗಾದಿಗೆ ‘ಚಂದ್ರಪ್ರಕಾಶ್ ಶೆಟ್ಟಿ ತುಂಬೆ’ ಪ್ರಬಲ ಸ್ಪರ್ಧಿ!

Published

on

ಕಾರ್ಯಕರ್ತರ ಪಡೆಗೆ ಹೊಸ ಶಕ್ತಿ, ತಳಮಟ್ಟದ ಸಂಘಟನೆಗೆ ಹೊಸ ಹುರುಪು – ಚಂದ್ರಪ್ರಕಾಶ್ ಶೆಟ್ಟಿ ಸಾರಥ್ಯಕ್ಕೆ ಹೈಕಮಾಂಡ್‌ಗೆ ಕಾರ್ಯಕರ್ತರ ಜೈಕಾರ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಅಖಾಡದಲ್ಲಿ ಈಗ ಕಾಂಗ್ರೆಸ್ ಅಧ್ಯಕ್ಷ ಗಾದಿಯ ಕೌತುಕ ಮುಗಿಲುಮುಟ್ಟಿದೆ. ಜುಲೈ 28ರಿಂದ ಆರಂಭಗೊಂಡಿರುವ ಹೊಸ ಅಧ್ಯಕ್ಷರ ಆಯ್ಕೆಯ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ಜಿಲ್ಲಾದ್ಯಂತ ಕಾವೇರಿದ ವಾತಾವರಣ ಸೃಷ್ಟಿಸಿದೆ. ಪ್ರಮುಖ ನಾಯಕರು ಪಟ್ಟಕ್ಕೇರಲು ತೀವ್ರ ಪೈಪೋಟಿ ನಡೆಸುತ್ತಿರುವ ಈ ಹೊತ್ತಿನಲ್ಲಿ, ಪಕ್ಷದ ನಿಷ್ಠಾವಂತ ನಾಯಕ, ಸಂಘಟನಾ ಚತುರ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ಹೆಸರು ಕರಾವಳಿ ರಾಜಕೀಯದಲ್ಲಿ ಸಿಂಹಪಾಲು ಪಡೆದುಕೊಂಡಿದೆ!

ಕಷ್ಟಕಾಲದ ನಿಷ್ಠಾವಂತ ಕಾಂಗ್ರೆಸ್ಸಿಗ‌ : ಹೋರಾಟದ ಹಾದಿಯಲ್ಲಿ ಗೆದ್ದು ಬಂದ ಸರದಾರ!

ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಎಂದರೆ ಕೇವಲ ಒಬ್ಬ ರಾಜಕಾರಣಿಯಲ್ಲ, ಬದಲಿಗೆ ಹೋರಾಟ, ತ್ಯಾಗ ಮತ್ತು ಸದಾ ಜನಸೇವೆಯಲ್ಲಿ ನಿರತರಾಗಿರುವ ನಿಷ್ಠಾವಂತ ಕಾಂಗ್ರೆಸ್ಸಿಗ. ಪಕ್ಷದ ಪರಿಸ್ಥಿತಿ ಸವಾಲಿನಿಂದ ಕೂಡಿದ್ದಾಗಲೂ ಕಾಂಗ್ರೆಸ್ ಧ್ವಜವನ್ನು ಎತ್ತಿಹಿಡಿದು, ತಳಮಟ್ಟದ ಕಾರ್ಯಕರ್ತನಲ್ಲಿ ಹೊಸ ಆತ್ಮವಿಶ್ವಾಸ ಮತ್ತು ಭರವಸೆಯ ಕಿಚ್ಚು ಹೊತ್ತಿಸಿದ ಧೀರ ನಾಯಕ ಇವರು.

ಇತಿಹಾಸ ಸೃಷ್ಟಿಸಿದ ಐತಿಹಾಸಿಕ ವಿಜಯಗಳು:

ಇವರ ನಾಯಕತ್ವದ ಕಸುವಿಗೆ, ಸಂಘಟನಾ ಶಕ್ತಿಗೆ ಇತಿಹಾಸವೇ ಸಾಕ್ಷಿ ನೀಡುತ್ತದೆ:

ದಿಗ್ಗಜರನ್ನು ಪತನಗೊಳಿಸಿದ ಸಜಿಪ ಮುನ್ನೂರು ಜಯ: ಸಜಿಪ ಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಮಾಜಿ ಶಾಸಕರಂತಹ ಪ್ರಭಾವಿ ಎದುರಾಳಿಯನ್ನೇ ನೆಲಕಚ್ಚಿಸಿ ಐತಿಹಾಸಿಕ ಗೆಲುವು ಸಾಧಿಸಿದ ಹೆಗ್ಗಳಿಕೆ ಇವರದ್ದು.

35 ವರ್ಷಗಳ ಕೋಟೆಯನ್ನು ಪುಡಿಗಟ್ಟಿದ ಗೋಲ್ತಮಜಲು ಕ್ರಾಂತಿ: ಬದ್ಧ ವೈರಿ ಬಿಜೆಪಿಯ ಉಕ್ಕಿನ ಕೋಟೆಯಂತಿದ್ದ ಗೋಲ್ತಮಜಲು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬರೋಬ್ಬರಿ 35 ವರ್ಷಗಳ ಬಳಿಕ ಕಮಲ ಕಲಿಗಳನ್ನು ಸೋಲಿಸಿ, ಕಾಂಗ್ರೆಸ್‌ನ ವಿಜಯ ಪತಾಕೆ ಹಾರಿಸಿದ ಅಪರೂಪದ ಸಾಧನೆ ಇವರದ್ದು!

ಕಾರ್ಯಕರ್ತರೇ ಆಸ್ತಿ, ಹಿರಿಯ-ಕಿರಿಯರ ಸಮನ್ವಯವೇ ಶಕ್ತಿ!

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಕಟ್ಟಿಬೆಳೆಸಲು ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸುವ ಶಕ್ತಿ ಬೇಕಿದೆ. ಯುವಕರಲ್ಲಿ ಹೊಸ ಹುರುಪು ತುಂಬಿ, ಹಿರಿಯ ನಾಯಕರ ಸುದೀರ್ಘ ಅನುಭವವನ್ನು ಮಾರ್ಗದರ್ಶನವಾಗಿ ಪಡೆದುಕೊಂಡು ಪಕ್ಷವನ್ನು ಮುನ್ನಡೆಸಬಲ್ಲ ಏಕೈಕ ಸಮರ್ಥ ನಾಯಕ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಎಂಬ ಮಾತುಗಳು ಜಿಲ್ಲೆಯ ಮೂಲೆ ಮೂಲೆಯಿಂದ ಕೇಳಿಬರುತ್ತಿವೆ.

“ಸಂಘಟನೆಗೆ ಶಕ್ತಿ – ಕಾರ್ಯಕರ್ತರಿಗೆ ಗೌರವ – ಕಾಂಗ್ರೆಸ್‌ಗೆ ವಿಜಯ!”

ಈ ಧ್ಯೇಯಮಂತ್ರದೊಂದಿಗೆ ನಿರಂತರವಾಗಿ ಶ್ರಮಿಸುತ್ತಿರುವ ಚಂದ್ರಪ್ರಕಾಶ್ ಶೆಟ್ಟಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಗಾದಿ ಒಲಿಯಲೇಬೇಕು ಎಂದು ಸಾವಿರಾರು ಅಭಿಮಾನಿಗಳು ಹಾಗೂ ಬ್ಲಾಕ್ ಮಟ್ಟದ ಕಾರ್ಯಕರ್ತರು ಕಾಂಗ್ರೆಸ್ ಹೈಕಮಾಂಡ್‌ಗೆ ಬಿನ್ನವಿಸಿಕೊಂಡಿದ್ದಾರೆ.

ಅವರ ಕಟ್ಟುಮಸ್ತಾದ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಮುಂಬರುವ ಸ್ಥಳೀಯ ಸಂಸ್ಥೆಗಳು ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ, ಕರಾವಳಿಯಲ್ಲಿ ಕಾಂಗ್ರೆಸ್ ಅಲೆ ಸೃಷ್ಟಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಜಿಲ್ಲೆಯ ಕಾರ್ಯಕರ್ತರ ದೃಢ ವಿಶ್ವಾಸ!

Continue Reading

Dakshina Kannada

ದಕ್ಷಿಣ ಕನ್ನಡ: ನಾಳೆ (ಆಗಸ್ಟ್ 4) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 04, 2026 (ಮಂಗಳವಾರ) ರಂದು ಜಿಲ್ಲೆಯ ಪ್ರಮುಖ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿದ್ದಾರೆ:

ರಜೆ ವಿವರ:

  1. ಮಂಗಳೂರು ಉಪವಿಭಾಗ: ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ (10 ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.
  2. ಪುತ್ತೂರು ಉಪವಿಭಾಗ: ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ (PUC), ITI ಹಾಗೂ ಡಿಪ್ಲೊಮಾ (12 ನೇ ತರಗತಿವರೆಗೆ) ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಲಾಗಿದೆ.

ಗಮನಿಸಿ: ಈ ನಿಯಮವನ್ನು ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ‘ವಿಪತ್ತು ನಿರ್ವಹಣಾ ಕಾಯ್ದೆ 2005’ ರ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಸಾರ್ವಜನಿಕರಿಗೆ ಹಾಗೂ ಪೋಷಕರಿಗೆ ಮುನ್ನೆಚ್ಚರಿಕೆ ಸೂಚನೆಗಳು:

  • ಪೋಷಕರ ಗಮನಕ್ಕೆ: ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಜಾಗ್ರತೆ ವಹಿಸಬೇಕು.
  • ಮೀನುಗಾರರಿಗೆ ಎಚ್ಚರಿಕೆ: ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
  • ಪ್ರವಾಸಿಗರಿಗೆ ಸೂಚನೆ: ಪ್ರವಾಸಿಗರು ಮತ್ತು ಸಾರ್ವಜನಿಕರು ನದಿತೀರ ಹಾಗೂ ಸಮುದ್ರತೀರಕ್ಕೆ ತೆರಳದಂತೆ ನಿರ್ಬಂಧಿಸಲಾಗಿದೆ.
  • ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ತುರ್ತು ನಿರ್ವಹಣೆಗೆ ಸದಾ ಸನ್ನದ್ಧರಾಗಿರಲು ಸೂಚಿಸಲಾಗಿದೆ.

ತುರ್ತು ಸಹಾಯವಾಣಿ (Helpline Numbers):

ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಅಥವಾ ಮಾಹಿತಿಗಾಗಿ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:

  • Toll Free No: 1077
  • ದೂರವಾಣಿ: 0824-2442590

Continue Reading

Bantawala

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್‌ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ

ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್‌ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.

ಸಂಸ್ಥಾಪನಾ ಹೆಜ್ಜೆಗಳು ಮತ್ತು ವಹಿಸಿದ ಜವಾಬ್ದಾರಿಗಳು

ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ:

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ: ಅಧ್ಯಕ್ಷರಾಗಿ 3 ವರ್ಷಗಳ ಕಾಲ ಯಶಸ್ವಿ ಸೇವೆ.

ಜಿಲ್ಲಾ ಕಾಂಗ್ರೆಸ್ ಸೇವಾದಳ: ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ.

ಕೆಪಿಸಿಸಿ (KPCC): ರಾಜ್ಯ ಮಟ್ಟದ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ.

ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿ: ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರ.

ಪ್ರಶಸ್ತಿ ಹಾಗೂ ಪುರಸ್ಕಾರ

ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

Continue Reading

Trending

Copyright © 2025 Deevatige

error: Content is protected !!