Connect with us

Dakshina Kannada

ವಿಟ್ಲ ಜಾತ್ರೋತ್ಸವದ ಪ್ರಯುಕ್ತ ಜನವರಿ 20, ಹೂತೇರಿನಂದು ‘ವಿಟ್ಲೋತ್ಸವ-2026’

Published

on

ವರ್ಷಂಪ್ರತಿಯಂತೆ ಶ್ರೀ ಮಹಾತೋಭಾರ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ಜಾತ್ರೋತ್ಸವದ ಪ್ರಯುಕ್ತ ಹೂ ತೇರಿನಂದು ವರ್ಷಂಪ್ರತಿಯಂತೆ ವಿಆರ್‌ಸಿ ವಿಟ್ಲ ಇವರ ಆಶ್ರಯದಲ್ಲಿ ರಮಾನಾಥ್ ವಿಟ್ಲ ಇವರ ಸಾರಥ್ಯದಲ್ಲಿ 33ನೇ ವರ್ಷದ ಸಾಂಸ್ಕೃತಿಕ ಕಲಾ ಕಾಣಿಕೆ ‘ವಿಟ್ಲೋತ್ಸವ-2026’ ಸಾಂಸ್ಕೃತಿಕ ಕಾರ್ಯಕ್ರಮವು ಜನವರಿ 20ರಂದು ರಾತ್ರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ.


ಈ ಸಾಂಸ್ಕೃತಿಕ ಕಲಾ ವೈಭವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಮತ್ತು ವಿಟ್ಲದವರೇ ಆದ ಖ್ಯಾತ ಸಾಹಿತಿ ಹಾಗೂ ಸಂಗೀತ ನಿರ್ದೇಶಕರಾದ ವಿ. ಮನೋಹರ್ ಭಾಗವಹಿಸಲಿದ್ದಾರೆ


ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿಜಯಕುಮಾರ್ ಕೋಡಿಯಾಲ್ ಬೈಲ್ ನಿರ್ದೇಶನದಲ್ಲಿ ಕಲಾಸಂಗಮದ ಯಶಸ್ವೀ ಶಿವದೂತೇ ಗುಳಿಗೆ ನಾಟಕ ತಂಡದಿಂದ ಮತ್ತೊಂದು ಕಲಾಕಾಣಿಕೆ ಛತ್ರಪತಿ ಶಿವಾಜಿ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.


ವರ್ಷಂಪ್ರತಿಯಂತೆ ವಿಆರ್‌ಸಿ ವಿಟ್ಲ ಪ್ರತಿಭಾವಂತರನ್ನು ಗುರುತಿಸುವ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದು, ಈ ಬಾರಿ ಕೂಡಾ ಈಜು ಪಟುಗಳಾದ ಲಕ್ಷ್ಮಿ ಗಾಣಿಗ ಮತ್ತು ಚರಿತ ಅಮೀನ್ ಕೆ. ಅದೇ ರೀತಿ ಕಬಡ್ಡಿ ಪಟುಗಳಾದ ತೀರ್ಥೇಶ್, ತರುಣ ಕೃಷ್ಣ ಜಿ.ಎಸ್ ಮತ್ತು ಮಹಮ್ಮದ್ ಶಾಹಿದ್ ಅವರನ್ನು ಆಯ್ಕೆ ಮಾಡಿದ್ದು, ಪ್ರತಿಭಾವಂತರು ವೇದಿಕೆಯಲ್ಲಿ ಗಣ್ಯರಿಂದ ಪುರಸ್ಕೃತಗೊಳ್ಳಲಿರುವರು.
ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು, ಕಲಾಭಿಮಾನಿಗಳು, ಕಲಾಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವೀ 33ನೇ ವರ್ಷದ ವಿಟ್ಲೋತ್ಸವ-2026 ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಸಹಕರಿಸಬೇಕೆಂದು ವಿಆರ್ ಸಿ ವಿಟ್ಲ ಇದರ ಮುಖ್ಯಸ್ಥರಾದ ರಮಾನಾಥ್ ವಿಟ್ಲ ವಿನಂತಿಸಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

CONGRESS

ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ

Published

on

ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

award

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ

Published

on

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.

ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.

ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.

Continue Reading

CONGRESS

ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ

Published

on

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ‌ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Continue Reading

Trending

Copyright © 2025 Deevatige

error: Content is protected !!