crime
ಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿತುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಘಟನೆಯ ವಿವರ:
ಎಲಿಯಾಸ್ ಪಿಂಟೋ, ತಂದೆ: ದಿ।। ಆಂಟೋನಿ ಪಿಂಟೋ, ಪ್ರಾಯ 55 ವರ್ಷ, ಏಂಜಲ್ಸ್ ಮನೆ, ಎಸ್.ಎಮ್. ಐ.ಟಿ.ಐ ಕಾಲೇಜು ಹತ್ತಿರ, ಕೊಂಬೆಟ್ಟು, ಪುತ್ತೂರು ಕಸಬಾ ಗ್ರಾಮ, ಪುತ್ತೂರು ತಾಲೂಕು ಇವರು ದಿನಾಂಕ:23.10.2021 ರಂದು ಪುತ್ತೂರಿನ ಕಾಲೇಜೊಂದರ ದೈಹಿಕ ಶಿಕ್ಷಕನಾಗಿದ್ದು ಅದೇ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಸಂತ್ರಸ್ತೆ ಅಪ್ರಾಪ್ತ ಬಾಲಕಿಯು ಸ್ಪೋರ್ಟ್ಸ್ ಪ್ರಾಕ್ಟಿಸ್‌ಗೆ ಬಂದು ಒಂದು ರೌಂಡ್ ಓಡಿ ಜಿಮ್ ಕೊಠಡಿಯ ವರಾಂಡದಲ್ಲಿ ನಿಂತುಕೊಂಡಿದ್ದ ಸಮಯ ಬಾಲಕಿಯಲ್ಲಿ ನೀನು ಯಾಕೆ ಪ್ರಾಕ್ಟಿಸ್‌ಗೆ ಹೋಗಿಲ್ಲಾ ಎಂದು ಕೇಳಿದಾಗ ಬಾಲಕಿಯು ನನಗೆ ಸೊಂಟ ನೋವು ಇದ್ದುದರಿಂದ ಪ್ರಾಕ್ಟಿಸ್ ಮಾಡುವುದಿಲ್ಲ ಎಂದು ಹೇಳಿದ್ದರು. ಆರೋಪಿ ಎಲಿಯಾಸ್ ಪಿಂಟೋ ಬಾಲಕಿಯನ್ನು ಮಾತನಾಡಿಸಿಕೊಂಡು ಕೊಠಡಿಗೆ ಕರೆದುಕೊಂಡು ಹೋಗಿ ಬಾಲಕಿಯಲ್ಲಿ ಸೊಂಟ ನೋವು ಎಲ್ಲಿ ಆಗುತ್ತದೆ ಎಂದು ಕೇಳಿದ್ದು, ತಾನು ಮಸಾಜ್ ಮಾಡುವುದಾಗಿ ಹೇಳಿದ್ದು, ಬಾಲಕಿಯು ಪ್ರತಿರೋಧಿಸಿದರೂ ಒತ್ತಾಯಪಡಿಸಿ ಬಾಲಕಿಯನ್ನು ಕೊಠಡಿಯಲ್ಲಿನ ಕ್ಯಾಬಿನ್‌ಗೆ ಕರೆದುಕೊಂಡು ಹೋಗಿ ತನ್ನ ಕಾಮತೃಷೆಯನ್ನು ತೀರಿಸುವ ಉದ್ದೇಶದಿಂದ ಬಾಲಕಿಯ ಸೊಂಟವನ್ನು ಕೈಗಳಿಂದ ಒತ್ತಿ ಮಸಾಜ್ ಮಾಡಿ, ಪ್ಯಾಂಟ್ ಜಾರಿಸಿದಾಗ ಬಾಲಕಿಯು ಗಟ್ಟಿಯಾಗಿ ಹಿಡಿದುಕೊಂಡಿದ್ದು, ನಂತರ ಬಾಲಕಿಯು ಧರಿಸಿದ್ದ ಟೀ ಶರ್ಟ್‌ನ್ನು ಮೇಲೆತ್ತಿ ಹೊಟ್ಟೆಯನ್ನು ಅದುಮಿ, ಎದೆಭಾಗದವರೆಗೆ ಮೈಯನ್ನು ಮುಟ್ಟಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಬಾಲಕಿಗೆ ಮಾನಭಂಗವನ್ನುಂಟು ಮಾಡಿದ್ದಾರೆ. ಬಾಲಕಿಯು ನೀಡಿದ ದೂರಿನ ಮೇರೆಗೆ ದ.ಕ. ಮಹಿಳಾ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ ಒಟ್ಟು 19 ಸಾಕ್ಷಿಗಳನ್ನು ವಿಚಾರಿಸಿದೆ. ಬಾಲಕಿ ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ಸವಿವರವಾದ ಹೇಳಿಕೆ ನೀಡಿರುತ್ತಾರೆ. ದ.ಕ.ಮಹಿಳಾ ಪೊಲೀಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕರವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಬಗ್ಗೆ ವಿವರವಾದ ಸಾಕ್ಷ್ಯ, ನೀಡಿರುತ್ತಾರೆ. ನ್ಯಾಯಾಧೀಶೆ ಸರಿತಾ ಡಿ. ಅವರು ಇತ್ತಂಡಗಳ ವಾದ ಆಲಿಸಿ ಆರೋಪಿಗೆ ಪೋಕ್ಸೋ ಕಾಯ್ದೆ ಕಲಂ 10ರಡಿ ಅಪರಾಧಕ್ಕೆ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.20,000/- ದಂಡ, ದಂಡ ತೆರಲು ತಪ್ಪಿದ್ದಲ್ಲಿ 6 ತಿಂಗಳ ಸಾದಾ ಶಿಕ್ಷೆ. ಭಾ.ದಂ.ಸಂ. ಕಲಂ 354(ಎ) ರಡಿ ಅಪರಾಧಕ್ಕೆ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.10,000/- ದಂಡ, ದಂಡ ತೆರಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಶಿಕ್ಷೆ ವಿಧಿಸಿರುತ್ತಾರೆ. ದಂಡದ ಮೊತ್ತದಲ್ಲಿ ರೂ. 20,000/- ವನ್ನು ನೊಂದ ಬಾಲಕಿಗೆ ನೀಡಲು ಆದೇಶಿಸಲಾಗಿದೆ. ನೊಂದ ಬಾಲಕಿಯಾದ ಪ್ರಾ.ಸಾ.1 ರವರಿಗೆ ದಂಡ ಪ್ರಕ್ರಿಯಾ ಸಂಹಿತೆ ಕಲಂ 357A ಯಡಿಯಲ್ಲಿ ರೂ. 20,000/- ವನ್ನು ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಮಾನ್ಯ ನ್ಯಾಯಾಲಯ ಆದೇಶಿಸಿದೆ.
ಸರಕಾರದ ಪರ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಕುದ್ರಿಯ ಪುಷ್ಪರಾಜ ಅಡ್ಯಂತಾಯರವರು ವಾದಿಸಿದ್ದರು.
crime
ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು
ಆನ್ ಲೈನ್ ಪ್ಲಾಟ್ ಫಾರಂ ಮ್ಯಾಟ್ರಮೋನಿ ಮೂಲಕ ಹಲವಾರು ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು. ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಇಬ್ಬರನ್ನು ಮದುವೇಯಾಗಿ ವಂಚಿಸಿ ಪರಾರಿಯಾಗಿದ್ದರೆ, 5 ಜನ ಮಹಿಳೆಯರನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಮೋಸ ಮಾಡಿರುವುದಾಗಿ ತನಿಖೆಯಲ್ಲಿ ಬೇಳಕಿಗೆ ಬಂದಿದೆ. ಈತನ ವಂಚನಾ ಮದುವೆ ವ್ಯವಹಾರಕ್ಕೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನೂ ಸಹಕರಿಸುತ್ತಿದ್ದು, ಸದ್ರಿ ಆರೋಪಿತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.
ಆರೋಪಿತ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಊರ್ವಾ ಪೊಲೀಸ್ ಠಾಣಾಅ.ಕ್ರ: 202/2017 ಕಲಂ: 406, 420 ಐಪಿಸಿ, ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಅ.ಕ್ರ: 132/2022 ಕಲಂ: 379 ಐಪಿಸಿ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣಾ ಅ.ಕ್ರ:354/2022 ಕಲಂ:336(ಎ), 370, 370(4), 376(2),(ಎನ್) 342, ಜೊತೆಗೆ 34 ಐಪಿಸಿ ಕಲಂ:3,4,5 ಇಮ್ಮೋರಲ್ ಟ್ರಾಫಿಕಿಂಗ್ ಆ್ಯಕ್ಟ್, ಕಲಂ:4,8,12 ಪೋಕ್ಸೋ ಕಾಯ್ದೆ ರಂತೆ ಪ್ರಕರಣಗಳು ದಾಖಲಾಗಿರುತ್ತದೆ.
ನೊಂದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿಯು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 02/02/2025 ರಲ್ಲಿ ಮದುವೆಯಾಗಿದ್ದಲ್ಲದೆ ನಂಬಿಸಿ ಹಂತ ಹಂತವಾಗಿ 6,60,000/- ಹಣವನ್ನು ಪಡೆದುಕೊಂಡು ಮೋಸ ಮಾಡುವ ಉದ್ದೇಶದಿಂದ ದಿನಾಂಕ 15/11/2025 ರಂದು ನಾಪತ್ತೆ ಯಾಗಿರುತ್ತಾನೆ. ನಂತರದ ದಿನಗಳಲ್ಲಿ ಪಿರ್ಯಾದುದಾರರು ಅನುಮಾನಗೊಂಡ ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿದ ಮೇರೆಗೆ ಪಿ ನೊಂದ ಮಹಿಳೆಯು ಕಾವೂರು ಪೊಲೀಸು ಠಾಣಾ ಅಕ್ರ: 184/2025 ಕಲಂ: 318(4), 316(2), 316(1), 336(3), 340(1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿ ಕೊಂಡಿರುತ್ತಾರೆ.
ಸದ್ರಿ ಪ್ರಕರಣದಲ್ಲಿನ ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಈ ಮೊದಲು 2021 ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿರುತ್ತಾನೆ. ಹಾಗೂ ಉಡುಪಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿರುತ್ತಾನೆ, ಮುಂಬೈನ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುತ್ತಾನೆ. ಬೆಂಗಳೂರಿನಲ್ಲಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುತ್ತಾನೆ ಕಾರ್ಕಳದ ಒಂದು ಹುಡುಗಿಗೆ ಮದುವೆ ಆಗುವುದಾಗಿ ನಂಬಿಸಿ ಮೊಸ ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾನೆ. ನಂತರ ಸದ್ರಿ ಪ್ರಕರಣದಲ್ಲಿ ಆರೋಪಿತ ಸುಶಾಂತ್ ಪೂಜಾರಿ ಯವನೊಂದಿಗೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನು ಪಿರ್ಯಾದಿದಾರರಿಗೆ ಮತ್ತು ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿತ ಸುಶಾಂತ್ ನನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಆರೋಪಿತ ಸುಶಾಂತ್ ಪೂಜಾರಿಯ ಕುಟುಂಬಸ್ಥರ ಪರವಾಗಿ ಮುಂಬೈನಲ್ಲಿ ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡು ಮದುವೆ ನಡೆಸಿದವರಾಗಿರುತ್ತಾನೆ.
Belthangady
ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ; ಬಯಲಾದ ನಿಜಾಂಶ
ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಕೊನೆಗೂ ಬಯಲಾಗಿದೆ.
ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ CCTV ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ. ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿಕೊಂಡ ಗಾಯ (Self inflicted wound) ಎಂದು ತಿಳಿಸಲಾಗಿದ್ದು, ನಂತರ ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಲಾಗಿದ್ದು, ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ತಿಳಿಸಿರುವುದರ ಮೂಲಕ ಪ್ರಕರಣದ ನಿಜಾಂಶ ಬಯಲಾಗಿದೆ. ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಸದ್ರಿ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು ಎಂದು ಪೊಲೀಸ್ ವರಿಷ್ಠರು ಮಾಹಿತಿ ನೀಡಿದ್ದು, ಅಪ್ರಾಪ್ತೆಗೆ ಚಲಾಯಿಸಲು ವಾಹನ ನೀಡಿರುವ ಕುರುತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ

ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ 16 ವರ್ಷದ ಶಾಲಾ ಬಾಲಕಿ ಕಾಲೇಜಿಗೆ ಸ್ಕೂಟಿಯಲ್ಲಿ ತೆರಳಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಒಮ್ನಿ ಬಂದಿದೆ. ಮಾರುತಿ ಒಮ್ನಿಯ ನಂಬರ್ ಪ್ಲೇಟ್ ಮುಚ್ಚಲಾಗಿತ್ತು, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ಮುಸುಕುದಾರಿ ವ್ಯಕ್ತಿಗಳು ಇದ್ದರು, ಸ್ಕೂಟಿಗೆ ಅಡ್ಡ ಇಟ್ಟು ಮೂವರು ಮುಸುಕುದಾರಿಗಳು ವಿದ್ಯಾರ್ಥಿನಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ, ಅವರು ಒಮ್ನಿಯಲ್ಲಿ ವಿದ್ಯಾರ್ಥಿನಿಯನ್ನು ಹಾಕಿಕೊಂಡು ಅಪಹರಿಸಲು ಯತ್ನಿಸಿದಾಗ ಅವಳು ಪ್ರತಿರೋಧಿಸಿ ಬೊಬ್ಬೆ ಹೊಡೆದಿದ್ದಾಳೆ. ಹಿಂದಿನಿಂದ ಒಂದು ದ್ವಿಚಕ್ರ ವಾಹನವೂ ಬಂದಿದೆ. ಇದರಿಂದ ಬೆದರಿದ ಅಪಹರಣಕಾರರು ತಮ್ಮಲ್ಲಿದ್ದ ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಅಪಹರಣಕಾರರು ಬೆದರಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಇದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರಣೆಯ ವಿದ್ಯಾರ್ಥಿನಿಯ ಹೇಳಿಕೆ.
ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಎಂಬ ಸುದ್ದಿಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ಸರಕಾರ ಮತ್ತು ಗೃಹ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಆಯ್ತು. ಮದ್ಯಾಹ್ನ ನಂತರ ಘಟನೆಯ ಸತ್ಯಾಂಶ ಒಂದೊಂದಾಗಿ ಹೊರಬರುತ್ತಲೇ ಆತಂಕದ ವಾತಾವರಣ ಕಡಿಮೆಯಾಗುತ್ತಾ ಬಂದಿದೆ. ಈವರೆಗೆ ಅಪಹರಣಕಾರರ ಪತ್ತೆಯಾಗಿಲ್ಲ, ಮಾರುತಿ ಒಮ್ನಿ ಯಾವ ಸಿಸಿ ಕ್ಯಾಮಾರದಲ್ಲೂ ಕಂಡುಬರಲೇ ಇಲ್ಲ. ಅಂದರೆ ವಿದ್ಯಾರ್ಥಿನಿಯ ಸುತ್ತಲೇ ಅಪಹರಣದ ಕಥೆ ಕಂಡುಬರುತ್ತಿತ್ತು.ಕೊನೆಗೂ ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಬಯಲಾಗಿದೆ.
Belthangady
ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ಏನಾಗಿದೆ ?
ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರಂತೆ !

ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ 16 ವರ್ಷದ ಶಾಲಾ ಬಾಲಕಿ ಕಾಲೇಜಿಗೆ ಸ್ಕೂಟಿಯಲ್ಲಿ ತೆರಳಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಒಮ್ನಿ ಬಂದಿದೆ. ಮಾರುತಿ ಒಮ್ನಿಯ ನಂಬರ್ ಪ್ಲೇಟ್ ಮುಚ್ಚಲಾಗಿತ್ತು, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ಮುಸುಕುದಾರಿ ವ್ಯಕ್ತಿಗಳು ಇದ್ದರು, ಸ್ಕೂಟಿಗೆ ಅಡ್ಡ ಇಟ್ಟು ಮೂವರು ಮುಸುಕುದಾರಿಗಳು ವಿದ್ಯಾರ್ಥಿನಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ, ಅವರು ಒಮ್ನಿಯಲ್ಲಿ ವಿದ್ಯಾರ್ಥಿನಿಯನ್ನು ಹಾಕಿಕೊಂಡು ಅಪಹರಿಸಲು ಯತ್ನಿಸಿದಾಗ ಅವಳು ಪ್ರತಿರೋಧಿಸಿ ಬೊಬ್ಬೆ ಹೊಡೆದಿದ್ದಾಳೆ. ಹಿಂದಿನಿಂದ ಒಂದು ದ್ವಿಚಕ್ರ ವಾಹನವೂ ಬಂದಿದೆ. ಇದರಿಂದ ಬೆದರಿದ ಅಪಹರಣಕಾರರು ತಮ್ಮಲ್ಲಿದ್ದ ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಅಪಹರಣಕಾರರು ಬೆದರಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ.

ಇದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರಣೆಯ ವಿದ್ಯಾರ್ಥಿನಿಯ ಹೇಳಿಕೆ. ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಎಂಬ ಸುದ್ದಿಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ಸರಕಾರ ಮತ್ತು ಗೃಹ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಆಯ್ತು. ಮದ್ಯಾಹ್ನ ನಂತರ ಘಟನೆಯ ಸತ್ಯಾಂಶ ಒಂದೊಂದಾಗಿ ಹೊರಬರುತ್ತಲೇ ಆತಂಕದ ವಾತಾವರಣ ಕಡಿಮೆಯಾಗುತ್ತಾ ಬಂದಿದೆ. ಈವರೆಗೆ ಅಪಹರಣಕಾರರ ಪತ್ತೆಯಾಗಿಲ್ಲ, ಮಾರುತಿ ಒಮ್ನಿ ಯಾವ ಸಿಸಿ ಕ್ಯಾಮಾರದಲ್ಲೂ ಕಂಡುಬರಲೇ ಇಲ್ಲ. ಅಂದರೆ ವಿದ್ಯಾರ್ಥಿನಿಯ ಸುತ್ತಲೇ ಅಪಹರಣದ ಕಥೆ ಕಂಡುಬರುತ್ತಿದೆ.
ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಬೆನ್ನಲ್ಲೇ ಜನತೆಗೆ ಸತ್ಯಾಂಶ ತಿಳಿಸಿ ಆತಂಕ ದೂರ ಮಾಡುವ ಉದ್ದೇಶಕ್ಕಾಗಿ ಮಾಧ್ಯಮ ಪ್ರತಿನಿಧಿಗಳು ಜಿಲ್ಲಾ ಎಸ್ಪಿಯವರ ಅಧಿಕೃತ ಹೇಳಿಕೆಗಾಗಿ ಕಾಯುತ್ತಿದ್ದಾರೆ.
ರಾಜಸ್ಥಾನದ ಘಟನೆ: ರಾಜಸ್ಥಾನದ ಬಿಕನೇರ್‌ನಲ್ಲಿ 10ನೇ ತರಗತಿಯ ಹುಡುಗಿಯೊಬ್ಬಳು ಶಾಲೆಗೆ ಹೋಗಲು ಇಷ್ಟವಿಲ್ಲದೆ ತನ್ನನ್ನು ಅಪಹರಿಸಲಾಗಿದೆ ಎಂದು ಸುಳ್ಳು ಕಥೆ ಸೃಷ್ಟಿಸಿದ್ದಳು. ಪೊಲೀಸರು ತನಿಖೆ ನಡೆಸಿದಾಗ ಆಕೆ ಸುಳ್ಳು ಹೇಳುತ್ತಿರುವುದು ಬಯಲಾಗಿತ್ತು.
ಬೆಂಗಳೂರು ಅಥವಾ ಇತರ ನಗರಗಳಲ್ಲಿ ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಮಕ್ಕಳು ತಮ್ಮ ಕೈ-ಕಾಲುಗಳನ್ನು ತಾವೇ ಕಟ್ಟಿಕೊಂಡು ಅಥವಾ ಬಾಯಿಗೆ ಪಟ್ಟಿ ಅಂಟಿಸಿಕೊಂಡು ಪೋಷಕರನ್ನು ಭಯಪಡಿಸುತ್ತಾರೆ.
ಇಂತಹ ಘಟನೆಗಳು ಬಹುತೇಕ ಪರೀಕ್ಷಾ ಸಮಯ ಹತ್ತಿರಕ್ಕೆ ಬರುವ ಸಂದರ್ಭಗಳಲ್ಲಿಯೇ ನಡೆಯುತ್ತಿದ್ದು, ಪರೀಕ್ಷೆ ಅಥವಾ ಹೋಮ್ ವರ್ಕ್ ಪೂರ್ಣಗೊಳಿಸದಿದ್ದಾಗ ಶಿಕ್ಷಕರಿಗೆ ಹೆದರಿ ಹೀಗೆ ಮಾಡುತ್ತಾರೆ. ಶಾಲೆಯಲ್ಲಿ ಕಿರುಕುಳ (Bullying): ಶಾಲೆಯಲ್ಲಿ ಬೇರೆ ವಿದ್ಯಾರ್ಥಿಗಳು ತೊಂದರೆ ನೀಡುತ್ತಿದ್ದರೆ ಅಲ್ಲಿಗೆ ಹೋಗದಿರಲು ಇಂತಹ ದಾರಿ ಹುಡುಕುತ್ತಾರೆ. ತಮ್ಮ ಮಕ್ಕಳು ಅತೀ ಹೆಚ್ಚು ಅಂಕಗಳನ್ನು ಪಡೆಯಬೇಕೆಂದು ಮಕ್ಕಳ ಮೇಲೆ ಪೋಷಕರು ನಿರಂತರವಾಗಿ ಒತ್ತಡ ಹೇರುತ್ತಿರುವಾಗ ಪೋಷಕರ ಅತಿಯಾದ ನಿರೀಕ್ಷೆಗಳು ಮಕ್ಕಳನ್ನು ಇಂತಹ ಹಂತಕ್ಕೆ ತಳ್ಳಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯ ತನಿಖೆ ನಡೆಯಬೇಕಾಗಿದೆ.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..
-
accident1 month agoಬಾಕ್ಸೈಟ್ ಲಾರಿಗಳ ಅಟ್ಟಹಾಸದಿಂದ ಎಕ್ಕುಟ್ಟಿ ಹೋದ ಅಂತರ್ರಾಜ್ಯ ಸಂಪರ್ಕ ರಸ್ತೆ..ಕನ್ಯಾನ-ಮುಗುಳಿ-ಉಪ್ಪಳ ರಸ್ತೆ ದುರವಸ್ಥೆ ಖಂಡಿಸಿ ಸಾರ್ವಜನಿಕರ ಪ್ರತಿಭಟನೆ.

