Connect with us

Bantawala

ವಿಟ್ಲ ಪಂಚಲಿಂಗೇಶ್ವರನ ಜಾತ್ರೋತ್ಸವ..ಸಂತೆ ವ್ಯಾಪಾರಕ್ಕಾಗಿ ಜಾತ್ರೆಯೋ.? ಜಾತ್ರೋತ್ಸವಕ್ಕಾಗಿ ಸಂತೆಯೋ.? ಪ.ಪಂ.ನ ಜಾಣ ಕುರುಡು.!

Published

on

ವಿಟ್ಲದಲ್ಲಿ ಜಾತ್ರೋತ್ಸವದ ಸಂಭ್ರಮ. ಮಹತೋಭಾರ ಶ್ರೀ ಪಂಚಲಿಂಗೇಶ್ವರನ ಕಾಲಾವಧಿ ಜಾತ್ರೋತ್ಸವ. ಸುಮಾರು 10 ದಿನಗಳ ಕಾಲ ನಡೆಯುವ ಅದ್ದೂರಿಯ ಜನಜಾತ್ರೆ. ಎಲ್ಲೆಂದರಲ್ಲಿ ಜನವೋ ಜನ. ಭರ್ಜರಿ ಪೈಪೋಟಿಗಳ ಮಧ್ಯೆ ನಡೆಯುವ ಸಂತೆ-ಸರಕು ವ್ಯಾಪಾರಗಳ ಕಾರುಬಾರು.

ಎಲ್ಲೆಲ್ಲಿ ಜಾಗವಿದೆಯೋ ಅಲ್ಲೆಲ್ಲಾ ಸಂತೆ ಸಾಮ್ರಾಜ್ಯ. ಜನಮರುಳೋ… ಜಾತ್ರೆ ಮರುಳೋ…. ಜನರಿಂದಲೇ ಜಾತ್ರೆಯೋ… ಜಾತ್ರೆಗಾಗಿಯೇ ಜನವೋ ಎಂಬಂತಾಗಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೂಡಾ ತಾತ್ಕಾಲಿಕ ಸಂತೆ ಅಂಗಡಿ ಮುಂಗಟ್ಟುಗಳಿಗಾಗಿಯೇ ಒಂದಷ್ಟು ಜಾಗವನ್ನು ಗುರುತಿಸಿಕೊಂಡು ಷರತ್ತು ಬದ್ಧ ನಿಬಂಧನೆಗಳ ಮೇಲೆ ಏಲಂನಲ್ಲಿ ಕೊಟ್ಟು ಬಿಡಲಾಗಿದೆ ಎಂಬ ಮಾಹಿತಿ ಇದೆ.


ಎಲ್ಲವೂ ಸರಿಯಾಗಿಯೇ ಇದೆ. ಆದರೆ ಜನ ಸಾಗುವ ಮಾರ್ಗದ ಇಕ್ಕೆಲಗಳಲ್ಲಿ ಸಂತೆ ಸ್ಥಾಪಿಸಿದರೆ ಜನ ನಡೆದಾಡುವುದು ಹೇಗೆ ಎಂಬುವುದು ಸಹಸ್ರಾರು ಭಕ್ತಾದಿಗಳ ಪ್ರಶ್ನೆ ? ವಿಟ್ಲದ ಹೃದಯ ಭಾಗದ ನಾಲ್ಕು ಮಾರ್ಗದಿಂದ ದೇವಸ್ಥಾನದವರೆಗೆ ಮಾರ್ಗದ ಒಂದು ಬದಿಗೆ ಸಂತೆ ಇಡಲು ಅವಕಾಶ ಕೊಡುತ್ತಿದ್ದರೆ ಸುಧಾರಿಸಿಕೊಳ್ಳಬಹುದಿತ್ತು ಎಂಬುವುದು ಹಲವರ ಅನ್ನಿಸಿಕೆ ! ಈ ಅನ್ನಿಸಿಕೆ ಸರಿಯಾಗಿಯೇ ಇದೆ.

ಕಾನೂನು ಜಾರಿಗೆ ತಂದವರ ಜಾಣ ಕುರುಡು.?

ವಿಟ್ಲ ಪಟ್ಟಣ ಪಂಚಾಯತ್ ಒಂದೇ ಬದಿಯಲ್ಲಿ ಅಂದರೆ ನಾಲ್ಕು ಮಾರ್ಗದಿಂದ ಮುಂದುವರಿದು ಎಡಬದಿಯಲ್ಲಿ ಮಾತ್ರ ಸಂತೆ ಇಡಬೇಕು ಬಲಬದಿಯಲ್ಲಿ ಇಡಬಾರದೆಂದು ತನ್ನ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.


ಆದರೆ ಇದೀಗ ಗುತ್ತಿಗೆದಾರರು ಮತ್ತು ಪಂ.ಆಡಳಿತ ಜಂಟಿಯಾಗಿ ಸೇರಿಕೊಂಡು ತಾನೇ ಜಾರಿಗೆ ತಂದಿರುವ ನಿಯಮ-ನಿಬಂಧನೆಗಳನ್ನು ಗಾಳಿಗೆ ತೂರಿ ಜೇಬು ತುಂಬಿಸಿಕೊಳ್ಳುತ್ತಿದ್ದಾರೋ ? ಗೊತ್ತಿಲ್ಲ.

ಜನರಿಗೂ ಈ ಪಂಚಾಯತ್ ನಿಬಂಧನೆಗಳು ತಿಳಿಯುವ ಹೊತ್ತಿಗೆ ಜಾತ್ರೆ ಮುಗಿದಿರುತ್ತದೋ ಅದೂ ಗೊತ್ತಿಲ್ಲ. ಆದರೆ ಗುತ್ತಿಗೆದಾರನಿಗೆ ಹೇಳಿದ್ದು ಒಂದು… ಆತ ಮಾಡಿದ್ದು ಇನ್ನೊಂದು…! ಎಂಬುವುದು ಪಂಚಾಯತ್ ಆಡಳಿತಕ್ಕೆ ಸ್ಪಷ್ಠವಾಗಿ ಗೊತ್ತೇ ಇದೆ. ಆದರೆ ಆಡಳಿತ ವ್ಯವಸ್ಥೆ ಮೌನವಾಗಿರುವುದೇಕೆ ಎಂಬುವುದೇ ಮಿಲಿಯನ್ ಡಾಲರ್ ಪ್ರಶ್ನೆ !!!

Continue Reading
Advertisement

Bantawala

ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ

Published

on

ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.


ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಬಡ ಕಾರ್ಮಿಕೆ ಗಾರ್ಬಲ್‌ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

Continue Reading

accident

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..

Published

on

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.


ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.

Continue Reading

Bantawala

ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನಾ ಸಭೆ

Published

on

ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನೆಯ ಸಭೆ ನಡೆಯಿತು.

ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು. ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ ಎಂ ಶೆಟ್ಟಿ ಅಳಕೆಮಜಲು, ಉಪಾಧ್ಯಕ್ಷರಾಗಿ ರೋಹಿಣಿ ರೈ ನೇರಳಕಟ್ಟೆ, ಹಾಗೂ ಚಂದ್ರಹಾಸ ರೈ ಮುಲ್ಕಾಜೆ ಮಾ ಡ, ಕಾರ್ಯದರ್ಶಿಯಾಗಿ ಗಣೇಶ್‌ ರೈ, ಕೋಶಾಧಿಕಾರಿಯಾಗಿ ಧನಂಜಯ ಶೆಟ್ಟಿ ಮುತ್ತೂರು, ಇವರನ್ನು ಟ್ರಸ್ಟಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರನ್ನು ಕುಟುಂಬಿಕರ ಮತ್ತು ಟ್ರಸ್ಟಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Continue Reading

Trending

Copyright © 2025 Deevatige