Educational
ಟಾಪರ್ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಬದಲಿಗೆ 50,000 ನಗದು
ಟಾಪರ್ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದು ಬಂದಿದೆ. ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸಲು ಸರ್ಕಾರವು ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವ ಬದಲಿಗೆ 50,000 ರೂಪಾಯಿಗಳ ನಗದು ಬಹುಮಾನವನ್ನು ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತು ಈಗಾಗಲೇ ಅಧಿಕೃತ ಆದೇಶ ಹೊರಬಿದ್ದಿದ್ದು, ಪ್ರತಿ ಜಿಲ್ಲೆಯಲ್ಲಿ ಮೊದಲ ಮೂರು ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ದೊರೆಯಲಿದೆ. ತಮಗೆ ದೊರೆತ ಬಹುಮಾನದ ಮೊತ್ತವನ್ನು ಯಾವ ರೀತಿ ಬಳಸಿಕೊಳ್ಳಬೇಕು ಎಂಬ ಸ್ವಾತಂತ್ರ್ಯವನ್ನು ವಿದ್ಯಾರ್ಥಿಗಳಿಗೇ ನೀಡುವ ಉದ್ದೇಶದಿಂದ ಈ ಹೊಸ ಕ್ರಮವನ್ನು ಜಾರಿಗೆ ತರಲಾಗಿದೆ.
ಈ ಯೋಜನೆಯಡಿ 2024-25ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯಾದ್ಯಂತ ಒಟ್ಟು 758 ವಿದ್ಯಾರ್ಥಿಗಳು ನಗದು ಬಹುಮಾನ ಪಡೆಯಲು ಅರ್ಹರಾಗಿದ್ದಾರೆ. ‘ಗುಣಮಟ್ಟದ ಭರವಸೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಉಪಕ್ರಮ’ ಯೋಜನೆಯ ಅಡಿಯಲ್ಲಿ ಸರ್ಕಾರವು ಸುಮಾರು 325 ಲಕ್ಷ ರೂಪಾಯಿಗಳನ್ನು ಈ ಉದ್ದೇಶಕ್ಕಾಗಿ ಮೀಸಲಿಟ್ಟಿದೆ. ಅರ್ಹ ವಿದ್ಯಾರ್ಥಿಗಳ ವಿವರಗಳನ್ನು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಪಡೆದುಕೊಳ್ಳಲಾಗುತ್ತಿದ್ದು, ಅವರ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಆಃಖಿ) ಮೂಲಕ ಹಣವನ್ನು ಜಮಾ ಮಾಡಲಾಗುತ್ತದೆ.
ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಭರವಸೆಯಂತೆ ಈ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸರ್ಕಾರವೇ ಲ್ಯಾಪ್ಟಾಪ್ಗಳನ್ನು ವಿತರಿಸುತ್ತಿತ್ತು, ಆದರೆ ಈಗ ನಗದು ನೀಡುವುದರಿಂದ ವಿದ್ಯಾರ್ಥಿಗಳು ತಮ್ಮ ಇಚ್ಛೆಯ ಕಂಪನಿಯ ಲ್ಯಾಪ್ಟಾಪ್ ಖರೀದಿಸಲು ಅಥವಾ ಉನ್ನತ ಶಿಕ್ಷಣದ ಇತರ ವೆಚ್ಚಗಳಿಗೆ ಬಳಸಿಕೊಳ್ಳಲು ಅನುಕೂಲವಾಗುತ್ತದೆ. ಸರ್ಕಾರದ ಈ ನಿರ್ಧಾರವು ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸಲಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
Educational
SSLC ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!- ಸರಕಾರದ ಸುತ್ತೋಲೆ
ಬೆಂಗಳೂರು: ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ ಸ್ವಿಚ್ ಆಫ್ ಮಾಡುವಂತೆ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ.
ಎಸ್ಎಸ್ಎಲ್ಸಿ (SSLC) ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು ಮಹತ್ವದ ಉಪಕ್ರಮ ಕೈಗೊಂಡಿದೆ. ಇದಕ್ಕಾಗಿ ಮನೆಗೆ ತೆರಳಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ ಅಭಿಯಾನದಡಿ, ಶಿಕ್ಷಕರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಈ ಅವಧಿಯಲ್ಲಿ ಮಕ್ಕಳು ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡಲು ಪ್ರೇರೇಪಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಗಳಿಸಲು ಇದು ಸಹಾಯಕವಾಗಲಿದೆ ಎಂದು ಇಲಾಖೆ ತಿಳಿಸಿದೆ. ಸರ್ಕಾರದ ಈ ಆದೇಶವನ್ನು ಕೆಲವು ವಿದ್ಯಾರ್ಥಿಗಳು ಸ್ವಾಗತಿಸಿದ್ದು, ಇದು ಓದಿಗೆ ಸಹಾಯಕವಾಗಲಿದೆ ಎಂದಿದ್ದಾರೆ. ಆದರೆ, ಪೋಷಕರು ಈ ನಿಯಮವನ್ನು ಎಷ್ಟು ಪಾಲಿಸುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ (SSLC Result) ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ ಸ್ವಿಚ್ ಆಫ್ ಮಾಡಿಸುವಂತೆ ಸೂಚಿಸಿದೆ. PDOಗಳ ಹಂತದಲ್ಲಿಯೂ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಡಂಗೂರು ಬಾರಿಸಿ ಪೋಷಕರಿಗೆ ಜಾಗೃತಿ ಮಾಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.
award
“ಗಿರಿಜಾ ರತ್ನ” ರಾಜ್ಯ ಪ್ರಶಸ್ತಿಗೆ ವೀರಕಂಭ ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮಾ ಪಿ.ಜಿ. ಆಯ್ಕೆ.. ವಾಸ್ತಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯಿಂದ ಆಯ್ಕೆ..
ಬಂಟ್ವಾಳ: ವಾಸ್ತಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ(ರಿ.) ಬಾಳ್ತಿಲ, ಬಂಟ್ವಾಳ ತಾಲೂಕು ಇದರಿಂದ ಸಾಧಕ ಮಹಿಳೆಯರಿಗೆ ನೀಡುವ “ಗಿರಿಜಾ ರತ್ನ” ರಾಜ್ಯ ಪ್ರಶಸ್ತಿಗೆ ವೀರಕಂಭ ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆಯಾಗಿದ್ದಾರೆ.

ಸಂಗೀತ ಶರ್ಮ ಪಿ.ಜಿ. ಅವರು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದು, ಶಾಲಾ ಶಿಕ್ಷಣ ಹಾಗೂ ಶಾಲಾ ಭೌತಿಕ ಅಭಿವೃದ್ಧಿಯಲ್ಲಿ ವಿಶೇಷ ಸಾಧನೆಯನ್ನು ಗುರುತಿಸಿ ಈಗಾಗಲೇ “ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ” ಪ್ರಶಸ್ತಿ, ರಾಜ್ಯಮಟ್ಟದ “ಶಿಕ್ಷಕ ರತ್ನ” ಪ್ರಶಸ್ತಿ, ಹಾಗೂ ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಜೆ ಸಿ ಐ ಸೇರಿದಂತೆ ಇನ್ನಿತರ ಹಲವಾರು ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಿದ್ದಾರೆ.
ಸಂಗೀತ ಶರ್ಮಾ ಅವರ ವಿಶಿಷ್ಟ ಸೇವೆಯನ್ನು ಗುರುತಿಸಿ ವಾಸ್ತಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ(ರಿ.) ಬಾಳ್ತಿಲ ಈ ವರ್ಷದ ಸಾಧಕ ಮಹಿಳೆಯರಿಗೆ ನೀಡುವ “ಗಿರಿಜಾ ರತ್ನ ರಾಜ್ಯ ಪ್ರಶಸ್ತಿಗೆ” ಆಯ್ಕೆ ಮಾಡಿರುತ್ತಾರೆ.
ಫೆಬ್ರವರಿ 3 ರಂದು ಬಿ.ಸಿ.ರೋಡ್ ಸ್ಪರ್ಶಕಲಾ ಮಂದಿರದಲ್ಲಿ ನಡೆಯುವ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಉಪಸ್ಥಿತಿಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಪ್ರಶಸ್ತಿ ಪ್ರಧಾನ ಮಾಡಲಿರುವರು ಎಂದು ವಾಸ್ತಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕಿ, ನ್ಯಾಯವಾದಿ ಶೈಲಜಾ ರಾಜೇಶ್ ತಿಳಿಸಿರುತ್ತಾರೆ.
crime
ವಿದ್ಯಾರ್ಥಿಯೊಬ್ಬನ ತಂದೆಯಿಂದ ಸಹಪಾಠಿ ವಿದ್ಯಾರ್ಥಿ, ಶಿಕ್ಷಕ ಮತ್ತು ಪೋಷಕರಿಗೆ ಧಮ್ಕಿ, ಕಿರುಕುಳ..ಹಾರಾಡಿ ಸರ್ಕಾರಿ ಶಾಲಾ ವಿದ್ಯಾರ್ಥಿ ಪೋಷಕನ ವಿರುದ್ಧ ಕ್ರಮಕೈಗೊಳ್ಳಲು ಶಾಸಕ ಅಶೋಕ್ ರೈಗೆ ಮನವಿ.
ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲಾ ವಿದ್ಯಾರ್ಥಿಯೊಬ್ಬನ ತಂದೆ ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆಯೊಡ್ಡಿ ಧಮ್ಕಿ ಹಾಕುತ್ತಿರುವ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ಶಾಸಕ ಅಶೋಕ್ ರೈ ಬಳಿ ನ್ಯಾಯ ನೀಡುವಂತೆ ಮನವಿ ಮಾಡಿದ್ದಾರೆ.

“ನೀಲ್ ನಿಖಿಲ್ ಎಂಬ ವಿದ್ಯಾರ್ಥಿಯಾದ ನಾನು ಸ.ಮಾ.ಉ.ಹಿ.ಪ್ರ. ಶಾಲೆ ಹಾರಾಡಿ ಶಾಲೆಯ 7ನೇ ಬಿ ತರಗತಿಯಲ್ಲಿ ಕಲಿಯುತ್ತಿದ್ದೇನೆ. ನನ್ನ ತರಗತಿಯ ವಿದ್ಯಾರ್ಥಿಯಾದ ಯಶಸ್ ಎಂಬಾತ ಕಾರಣವಿಲ್ಲದೆ ನನ್ನ ಜೊತೆ ಜಗಳ ತೆಗೆಯುತ್ತಿದ್ದಾನೆ. ನಾನು ಅವನ ಜೊತೆ ಯಾವುದೇ ರೀತಿಯ ಜಗಳ ಮಾಡಿರುವುದಿಲ್ಲ. ಹೀಗಿದ್ದರೂ ಆತನ ತಂದೆಯಾದ ಅಣ್ಣು ಎಂಬವರು ತರಗತಿ ಬಿಡುವ ಸಮಯದಲ್ಲಿ ಶಾಲಾ ಸಮೀಪ ಕಾದು ಕುಳಿತು ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ “ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ನಿನ್ನನ್ನು ಕೊಲೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಿರುತ್ತಾನೆ. ಇದರಿಂದ ನಾನು ಮಾನಸಿಕವಾಗಿ ಕುಗ್ಗಿದ್ದು ಶಾಲೆಯ ಕಡೆಗೆ ಹೋಗಲು ಮನಸ್ಸಿರುವುದಿಲ್ಲ. ನನ್ನ ಪೋಷಕರು ಇವನ ಚಿತ್ರಹಿಂಸೆ ತಾಳಲಾರದೆ ಮನೆಯನ್ನು ಕೂಡಾ ಬದಲಾಯಿಸಿರುತ್ತಾರೆ.

ಆಗಸ್ಟ್ 15/2025ರಂದು ಸ್ವಾತಂತ್ರೋತ್ಸವ ಕಾರ್ಯಕ್ರಮದಂದು ನನ್ನ ತಾಯಿಯ ಬಳಿ ನಾನು ಯಾರಿಗೂ ಹೆದರುವುದಿಲ್ಲ, ನಿಮ್ಮ ಮಗನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರಿಗೂ ಕೂಡಾ ಶಾಲೆಯಲ್ಲಿಯೇ ಬೆದರಿಕೆ ಹಾಕಿರುತ್ತಾನೆ. ನನ್ನ ತಂದೆ ತಾಯಿ ಕೂಲಿ ಮಾಡಿ ಮಗನ ವಿದ್ಯೆಗೋಸ್ಕರ ಸರಕಾರಿ ಶಾಲೆಯನ್ನೇ ಆಶ್ರಯಿಸಬೇಕಾಗಿರುವುದು ಅನಿವಾರ್ಯವಾಗಿದೆ. ಆದ್ದರಿಂದ ನನ್ನ ಪೋಷಕರು ಹಾಗೂ ನನಗೂ ಶಾಲೆಗೆ ಬರಲು ತುಂಬಾ ಭಯವಾಗುತ್ತಿದೆ. ಬೇರೆ ವಿದ್ಯಾರ್ಥಿಗಳೊಡನೆ ಸುಮ್ಮನೆ ಜಗಳ ತೆಗೆದು ನನ್ನನ್ನೇ ಟಾರ್ಗೆಟ್ ಮಾಡಿ ಅವರಲ್ಲಿಯೂ “ಅವನನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಹೇಳಿರುತ್ತಾರೆ. ಹಾಗೆಯೇ ಶಾಲಾ ಇತರ ಮಕ್ಕಳಲ್ಲಿಯೂ ಟೀಚರ್ ಗಳ ಹೆಸರು, ವಿಳಾಸ, ಮೊಬೈಲ್ ನಂಬರುಗಳನ್ನು ಕೇಳುವುದು. ಎಲ್ಲರನ್ನು ದುರುಗುಟ್ಟಿಕೊಂಡು ನೋಡುವುದು, ಅಪ್ಪಣೆಯಿಲ್ಲದೆ ನೇರವಾಗಿ ತರಗತಿಗೆ ಬಂದು ಮಕ್ಕಳಲ್ಲಿ ಪ್ರಶ್ನಿಸುವುದು ಹೀಗೆಲ್ಲಾ ಮಾಡುವಾಗ ನನಗೆ ಹೆದರಿಕೆಯಾಗುತ್ತದೆ. ನಾನು ಒಳ್ಳೆಯ ರೀತಿಯಲ್ಲಿ ಕಲಿತು ನನ್ನ ಪೋಷಕರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಿದ್ದು ಇದೇ ರೀತಿ ಮುಂದುವರಿದರೆ ನನ್ನ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಬೇಕಾಗಬಹುದು ಎಂಬ ಆತಂಕ ಎದುರಾಗಿದೆ. ಇದರಿಂದಾಗಿ ನನ್ನ ಭವಿಷ್ಯವೇ ಹಾಳಾಗಬಹುದು. ನನಗೆ ಮತ್ತು ನನ್ನ ಮನೆಯವರ ಜೀವಕ್ಕೆ ತೊಂದರೆ ಏನಾದರೂ ಆದರೆ ಅದಕ್ಕೆ ನೇರ ಹೊಣೆ ಅಣ್ಣು ಅವರೇ ಆಗಿರುತ್ತಾರೆ. ಆದ್ದರಿಂದ ಅವರನ್ನು ಸಮಗ್ರವಾಗಿ ವಿಚಾರಿಸಿ ನನಗೆ ನ್ಯಾಯವನ್ನು, ಸೂಕ್ತ ಭದ್ರತೆಯನ್ನು ಹಾಗೂ ನನ್ನ ಶಿಕ್ಷಣವನ್ನು ಮುಂದುವರಿಸಲು ನನಗೆ ಶಾಲೆಯಲ್ಲಿ ಕಲಿಕೆಗೆ ಉತ್ತಮ ವಾತಾವರಣವನ್ನು ಕಲ್ಪಿಸಿ ಕೊಡಬೇಕಾಗಿ ತಮ್ಮಲ್ಲಿ ಕೈ ಮುಗಿದು ಬೇಡಿಕೊಳ್ಳುತ್ತೇನೆ ಎಂದು ಶಾಸಕರಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ.

ಕಾನೂನು ಕ್ರಮಕ್ಕೆ ಶಾಸಕರ ಸೂಚನೆ:
ಘಟನೆಯ ಬಗ್ಗೆ ಶಾಸಕರು ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ಸುನಿಲ್ ರವರಿಗೆ ಕರೆ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಬೆದರಿಕೆ ಹಾಕಿದವರು ಸರಕಾರಿ ಕಚೇರಿಯಲ್ಲಿ ನೌಕರನಾಗಿದ್ದಾನೆ ಎಂಬ ವಿಚಾರವನ್ನು ತಿಳಿಸಿದ್ದಾರೆ. ಆರೋಪಿ ವಿರುದ್ಧ ಏನು ಕಾನೂನು ಕ್ರಮಕೈಗೊಳ್ಳಲು ಸಾಧ್ಯವೋ ಅದನ್ನು ತಕ್ಷಣ ಕೈಗೊಳ್ಳಿ ಎಂದು ಶಾಸಕರು ಸೂಚನೆ ನೀಡಿದ್ದಾರೆ.
ಮಕ್ಕಳು ಶಾಲೆಗೆ ಬರಲು ಭಯ ಪಡುತ್ತಾರೆ:
ಎಸ್ ಡಿ ಎಂ ಸಿ ಅಧ್ಯಕ್ಷೆ.
ಘಟನೆಯ ಬಗ್ಗೆ ಅಧ್ಯಕ್ಷೆ ಸುಲೋಚಿನಿಯವರು ಮಾತನಾಡುತ್ತಾ, ಈ ವ್ಯಕ್ತಿ ಪದೇ ಪದೇ ಶಾಲೆಗೆ ಬಂದು ಮಕ್ಕಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಪುತ್ತೂರು ಲೋಕೋಪಯೋಗಿ ಇಲಾಖೆಯಲ್ಲಿ ನೌಕರನಾಗಿರುವ ಇವರು ನಮಗೆ ಹಿಂಸೆಯನ್ನು ನೀಡುತ್ತಿದ್ದಾರೆ. ದಾರಿಯಲ್ಲಿ ಓಡಾಡುವಾಗಲೂ ಅಡ್ಡ ನಿಂತು ಜೀವ ಬೆದರಿಕೆ ಹಾಕುತ್ತಿದ್ದಾರೆ. ಇವನ ಬಗ್ಗೆ ಪೊಲೀಸರಿಗೂ ದೂರು ನೀಡಿದ್ದೇವೆ. ಆದರೆ ಇದುವರೆಗೂ ಯಾವುದೇ ಕಾನೂನು ಕ್ರಮ ಜರಗಿಸಿಲ್ಲ ಎಂದು ಶಾಸಕರಲ್ಲಿ ಬಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಪೊಲೀಸರು ಕ್ರಮಕೈಗೊಳ್ಳಬೇಕು: ಮುಖ್ಯ ಶಿಕ್ಷಕ ಕೆ ಕೆ ಮಾಸ್ಟರ್
ಪೊಲೀಸರು ದೂರನ್ನು ಗಂಭೀರವಾಗಿ ಪರಿಗಣಿಸಿ ಆತನಿಂದ ಶಾಲೆಗೆ ಆಗುತ್ತಿರುವ ತೊಂದರೆಯನ್ನು ಪರಿಹರಿಸಬೇಕಿದೆ. ವಿನಾ ಕಾರಣ ಮಕ್ಕಳಲ್ಲಿ ಭಯ ಹುಟ್ಟಿಸುವ ಕೆಲಸ ಆತ ಮಾಡುತ್ತಿದ್ದು ನ್ಯಾಯಕ್ಕಾಗಿ ಶಾಸಕ ಅಶೋಕ್ ರೈ ಬಳಿ ಬಂದಿದ್ದೇವೆ ಎಂದು ತಿಳಿಸಿದ್ದಾರೆ.
-
crime6 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

