Connect with us

crime

ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಬೈಕ್‌ಗೆ ಎದುರಾದ ಆನೆ ; ಬೈಕ್ ಬಿಟ್ಟು ಪ್ರಾಣ ಉಳಿಸಿಕೊಂಡ ಸವಾರ

Published

on

ಕಡಬ: ಸುಬ್ರಹ್ಮಣ್ಯ ಅರಣ್ಯ ವಲಯ ವ್ಯಾಪ್ತಿಯ ರಸ್ತೆಯಲ್ಲಿ ಬೈಕ್ ಸವಾರರೊಬ್ಬರಿಗೆ ಕಾಡಾನೆ ಎದುರಾದ ಘಟನೆ ನಡೆದಿದ್ದು, ಸವಾರ ಬೈಕ್ ಬಿಟ್ಟು ಓಡಿಹೋಗಿ ಪ್ರಾಣಾಪಾಯದಿಂದ ಪಾರಾದ ಭಯಾನಕ ಘಟನೆಯೊಂದು ವಾಹನ ಸವಾರರನ್ನು ಭಯಭೀತಗೊಳಿಸಿದೆ.


ಆಗರಿ ನಿವಾಸಿ ವಿನಯ್ ಎಂಬವರು ಸುಬ್ರಹ್ಮಣ್ಯ ಅರಣ್ಯ ವಲಯ ವ್ಯಾಪ್ತಿಯ ಕೊಂಬಾರು ಗ್ರಾಮದ ಕಾಯರ್ತ-ಮಣಿಭಾಂಡ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ರಸ್ತೆಯ ಮಧ್ಯೆ ಏಕಾಏಕಿ ಕಾಡಾನೆ ಪ್ರತ್ಯಕ್ಷವಾಗಿದೆ. ಗಾಬರಿಗೊಂಡ ವಿನಯ್ ಅವರು ತಕ್ಷಣ ಬೈಕನ್ನು ಅಲ್ಲೇ ಬಿಟ್ಟು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಈ ವೇಳೆ ಆನೆಯು ರಸ್ತೆಯಲ್ಲಿದ್ದ ಬೈಕನ್ನು ತುಳಿದು ಜಖಂಗೊಳಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶುಕ್ರವಾರ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಈ ಕುರಿತು ಮಾತನಾಡಿದ ಅವರು, “ಒಂಟಿ ಆನೆ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಬೈಕ್ ಹಾನಿಗೊಳಗಾದ ಬಗ್ಗೆ ಇಲಾಖೆಗೆ ವರದಿ ಸಲ್ಲಿಸಲಾಗಿದ್ದು, ನಿಯಮಾನುಸಾರ ೨೦ ಸಾವಿರ ರೂ. ವರೆಗೆ ಪರಿಹಾರ ನೀಡಲು ಅವಕಾಶವಿದೆ” ಎಂದು ತಿಳಿಸಿದರು.
ಆನೆಗಳ ಚಲನವಲನದ ಬಗ್ಗೆ ನಿಗಾ ಇಡಲು ಇಲಾಖೆಯ ಸಿಬ್ಬಂದಿಗಳು ಹಗಲು-ರಾತ್ರಿ ಗಸ್ತು ತಿರುಗುತ್ತಿದ್ದಾರೆ. ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ವೇಳೆ ಕಾಡುದಾರಿಯಲ್ಲಿ ಅನಗತ್ಯವಾಗಿ ಸಂಚರಿಸಬಾರದು ಎಂದು ಅರಣ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಪುಣಚದಲ್ಲಿ ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ, ಸೊತ್ತು ವಶ!

Published

on

ವಿಟ್ಲ: ಕಾನೂನುಬಾಹಿರವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಪುಣಚ ನಿವಾಸಿಗಳಾದ ದಿವಾಕರ ಪೂಜಾರಿ (46) ಮತ್ತು ಯಶ್ವಂತ್ (34) ಬಂಧಿತ ಆರೋಪಿಗಳಾಗಿದ್ದಾರೆ.

ದಾಳಿಯ ವಿವರ:

ಮೇ 30ರಂದು ರಾತ್ರಿ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಕೋಳಿ ಅಂಕ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ರಾಮಕೃಷ್ಣ ರವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್ಐ ಮತ್ತು ಠಾಣಾ ಸಿಬ್ಬಂದಿಗಳ ತಂಡ ಸ್ಥಳಕ್ಕೆ ಜಂಟಿ ದಾಳಿ ನಡೆಸಿದೆ.

ದಾಳಿಯ ವೇಳೆ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖವಾಗಿ ಸ್ಥಳದಲ್ಲಿದ್ದ 4 ಅಂಕದ ಕೋಳಿಗಳು, ಜೂಜಾಟಕ್ಕೆ ಬಳಸುತ್ತಿದ್ದ ಕೋಳಿ ಕತ್ತಿ (ಬಾಳು), ಇತರೆ ಪರಿಕರಗಳು ಹಾಗೂ ರೂ. 4,145/- ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 119/2026 ರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ: 87, 93, ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ: 3, 11 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ: 112 ರ ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.




Continue Reading

crime

ಬೆಳ್ಳಾರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸವಣೂರು ಬಳಿ ಅಕ್ರಮ ಗೋವಧೆ ಅಡ್ಡೆ ಪತ್ತೆ, ಮೂವರ ಬಂಧನ, ಪ್ರಮುಖ ಆರೋಪಿ ಪರಾರಿ!

Published

on

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಸಮೀಪದ ಮಾಂತೂರು ಎಂಬಲ್ಲಿ ಶುಕ್ರವಾರ ಸಂಜೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಗೋವಧೆ ಅಡ್ಡೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ತೋಟದ ಮಾಲೀಕ ತಲೆಮರೆಸಿಕೊಂಡಿದ್ದಾನೆ.

ಅಡಿಕೆ ತೋಟದಲ್ಲಿ ನಡೀತಿತ್ತು ಕೃತ್ಯ

ದಿನಾಂಕ 29.05.2026ರಂದು ಸಂಜೆ, ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ನಿವಾಸಿ ನಝೀರ್ ಎಂಬಾತನಿಗೆ ಸೇರಿದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋವಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾಳಿ ನಡೆಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ತೋಟವೊಂದರಲ್ಲಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿ ಒಂದು ಕೋಣ ಮತ್ತು ಎರಡು ದನಗಳು ಸೇರಿದಂತೆ ಒಟ್ಟು ಮೂರು ಮೂಕಪ್ರಾಣಿಗಳನ್ನು ವಧೆ ಮಾಡಿ, ಮಾಂಸ ಮಾಡಲು ಸಿದ್ಧಪಡಿಸುತ್ತಿದ್ದ ದೃಶ್ಯ ಕಂಡುಬಂದಿದ್ದು, ಮೂರು ಗೋವುಗಳ ಕಳೆಬರಹಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಮೂವರ ಬಂಧನ – ಪ್ರಮುಖ ಆರೋಪಿ ಪರಾರಿ

ಪೊಲೀಸರು ಧಾಳಿ ನಡೆಸಿದ ವೇಳೆ ಸ್ಥಳದಲ್ಲಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತರನ್ನು:

  • ಕೆ. ಅಬ್ದುಲ್ ರಫೀಕ್ (37 ವರ್ಷ)
  • ಅದ್ರಾಮ ಮಂತೂರು (41 ವರ್ಷ)
  • ಅಬ್ದುಲ್ ಖಾದರ್ ಪಣೆಮಜಲು (57 ವರ್ಷ) ಎಂದು ಗುರುತಿಸಲಾಗಿದೆ.

ವಿಚಾರಣೆಯ ವೇಳೆ ಇವರು ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ಮಾಡುತ್ತಿರುವುದು ದೃಢಪಟ್ಟಿದೆ. ಆದರೆ, ಈ ಅಕ್ರಮ ಗೋವಧೆ ಅಡ್ಡೆಯ ಪ್ರಮುಖ ಆರೋಪಿ ಹಾಗೂ ಸ್ಥಳದ ಮಾಲೀಕನಾದ ನಝೀರ್ ಧಾಳಿಯ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಬೆಳ್ಳಾರೆ ಎಸ್‌ಐ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ

ಬೆಳ್ಳಾರೆ ಸಬ್ ಇನ್ಸ್‌ಪೆಕ್ಟರ್ ಸಂತೋಷ್ ಬಿ.ಪಿ. ಅವರ ನೇತೃತ್ವದಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಸತೀಶ್, ಶ್ರೀಧರ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಪ್ರಕರಣ ದಾಖಲು: ಸ್ಥಳದಲ್ಲಿದ್ದ ಜಾನುವಾರು ಮಾಂಸ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 36/2026, ಕಲಂ 4, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2023 ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.

ಸಾರ್ವಜನಿಕರಿಂದ ಮುಕ್ತ ಕಂಠದ ಶ್ಲಾಘನೆ: ಸವಣೂರು ಮತ್ತು ಮಾಂತೂರು ಪರಿಸರದಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋವಧೆ ದಂಧೆಕೋರರಿಗೆ ಈ ದಾಳಿಯ ಮೂಲಕ ಬೆಳ್ಳಾರೆ ಪೊಲೀಸರು ಸಿಂಹಸ್ವಪ್ನವಾಗಿದ್ದಾರೆ. ಪೊಲೀಸರ ಈ ಸಮಯಪ್ರಜ್ಞೆ ಮತ್ತು ತತ್‌ಕ್ಷಣದ ಭರ್ಜರಿ ಕಾರ್ಯಾಚರಣೆಯನ್ನು ಪರಿಸರದ ಸಾರ್ವಜನಿಕರು ಹಾಗೂ ನಾಗರಿಕರು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.

Continue Reading

Bantawala

ಬಂಟ್ವಾಳ: ಅಕ್ರಮ ಜಾನುವಾರು ವಧೆ ಅಡ್ಡೆಗೆ ಪೊಲೀಸರ ದಿಢೀರ್ ದಾಳಿ; ಇಬ್ಬರು ಆರೋಪಿಗಳ ಬಂಧನ, 6 ದನಗಳ ರಕ್ಷಣೆ!

Published

on

ಬಂಟ್ವಾಳ: ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಜಾನುವಾರು ವಧೆ ಅಡ್ಡೆಯೊಂದಕ್ಕೆ ಬಂಟ್ವಾಳ ನಗರ ಪೊಲೀಸರು ಬುಧವಾರ ತಡರಾತ್ರಿ ದಿಢೀರ್ ದಾಳಿ ನಡೆಸಿದ್ದಾರೆ. ಕೃತ್ಯದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ವಧೆಗಾಗಿ ಕಟ್ಟಿ ಹಾಕಲಾಗಿದ್ದ 6 ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್‌ ಸಾದೀಕ್‌ (30) ಎಂದು ಗುರುತಿಸಲಾಗಿದೆ.

ನಡೆದದ್ದೇನು?

ಮೇ 27ರ ಬುಧವಾರ ತಡರಾತ್ರಿ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿ ಮನೆಯೊಂದರ ಹಿಂಭಾಗದ ಕೊಟ್ಟಿಗೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂದೀಪ್‌ ಕುಮಾರ್‌ ಶೆಟ್ಟಿರವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್‌ಐ ಮತ್ತು ಸಿಬ್ಬಂದಿಗಳ ತಂಡ ಸ್ಥಳಕ್ಕೆ ಜಂಟಿ ದಾಳಿ ನಡೆಸಿದೆ.

ಪೊಲೀಸರು ಸ್ಥಳಕ್ಕೆ ತಲುಪಿದಾಗ ಆರೋಪಿಗಳು ಜಾನುವಾರೊಂದನ್ನು ವಧೆ ಮಾಡಿ ಮಾಂಸ ಕತ್ತರಿಸುತ್ತಿರುವುದು ಕಂಡುಬಂದಿದೆ. ಇನ್ನೂ ಹೆಚ್ಚಿನ ಸಂಖ್ಯೆಯ ದನಗಳನ್ನು ವಧೆ ಮಾಡುವ ಉದ್ದೇಶದಿಂದ ಅಲ್ಲಿ ಕಟ್ಟಿಹಾಕಲಾಗಿತ್ತು. ಆದರೆ ಅವುಗಳನ್ನು ಕೊಲ್ಲುವ ಮೊದಲೇ ಪೊಲೀಸರು ಎಂಟ್ರಿ ಕೊಟ್ಟು ಆರೋಪಿಗಳ ಸ್ಕೆಚ್ ಉಲ್ಟಾ ಮಾಡಿದ್ದಾರೆ.

ಸ್ವಾಧೀನಪಡಿಸಿಕೊಂಡ ಸೊತ್ತುಗಳು:

ಸ್ಥಳದಲ್ಲಿ ವಧೆ ಮಾಡಲಾಗಿದ್ದ ಒಂದು ಜಾನುವಾರಿನ ಮಾಂಸ

ವಧೆಯಿಂದ ಪಾರುಗಾಣಿಸಿ ರಕ್ಷಿಸಲಾದ 06 ಜೀವಂತ ಜಾನುವಾರುಗಳು

ಕೃತ್ಯಕ್ಕೆ ಬಳಸಲಾದ ಒಂದು ಕಾರು ಹಾಗೂ ಮಾರಕಾಸ್ತ್ರ/ಸಾಮಾಗ್ರಿಗಳು

ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಈ ದಂಧೆ ನಡೆಸುತ್ತಿರುವುದು ವಿಚಾರಣೆ ವೇಳೆ ದೃಢಪಟ್ಟಿದೆ. ಪೊಲೀಸರು ಕೃತ್ಯದ ಸ್ಥಳದಲ್ಲಿದ್ದ ಮಾಂಸ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ

ಪ್ರಕರಣ ದಾಖಲು:

ಬಂಧಿತ ಆರೋಪಿಗಳು, ರಕ್ಷಿಸಲಾದ ಜಾನುವಾರುಗಳು ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದಿರುವ ಬಂಟ್ವಾಳ ನಗರ ಠಾಣೆಯ ಪೊಲೀಸರು, ಅ crime ಸಂಖ್ಯೆ 68/2026 ರಂತೆ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020” ರ ಕಲಂ: 4, 7, 12 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.






Continue Reading

Trending

Copyright © 2025 Deevatige

error: Content is protected !!