Entertainment
ಮಾಯವಾದ ಬಿಸಿಲಿಗಿಟ್ಟ ಸೋಫಾ ಸೆಟ್ : ಸಿಸಿಟಿವಿ ಪರಿಶೀಲಿಸಿದಾಗ ಏನಾಯ್ತು ನೋಡಿ !
ಮನೆಯಲ್ಲಿ ಹಾಸಿಗೆ ತಲೆದಿಂಬು ಸೋಫಾಗಳನ್ನು ಬಿಸಿಲಿಗಿಡುವುದು ಸರ್ವೇ ಸಾಮಾನ್ಯ ಏಕೆಂದರೆ ಫಂಗಸ್, ತಿಗಣೆಗಳ ಕಾಟ ಜಿರಲೆ ಕಾಟ ತಪ್ಪಿಸಲು ಮತ್ತು ಬೆಚ್ಚಗಿರಲೆಂದು ಬಹುತೇಕ ಮನೆಯವರು ಬಟ್ಟೆ-ಬರೆ ಕಂಬಳಿಗಳನ್ನು ಹೊರಗಿಟ್ಟು ಬಿಸಿಲು ಕಾಯಿಸುವುದು ಎಲ್ಲರ ಅಭ್ಯಾಸ. ಆದರೆ ಇದೇ ಅಭ್ಯಾಸ ಪೇಟೆ ಬದಿಯ ಮನೆಯಲ್ಲಿದ್ದ ಮಹಿಳೆಯೊಬ್ಬರಿಗೆ ದೊಡ್ಡ ಆಘಾತವನ್ನು ತಂದುಕೊಟ್ಟಿದೆ. ತನ್ನ ಬೆಲೆ ಬಾಳುವ ಸೋಫಾವನ್ನು ಬಿಸಿಲಿಗಿಟ್ಟು ಒಳಗೆ ಹೋದವಳು ಹಿಂದಿರುಗಿ ಬಂದಾಗ ಸೋಫಾವೇ ಇಲ್ಲದಾಗಿತ್ತು..
ನಗರದಲ್ಲಿ ವಿಶಾಲವಾದ ಅಂಗಳವಿಲ್ಲದ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ತಮ್ಮ ಸೋಫಾವನ್ನು ಸ್ವಚ್ಛಗೊಳಿಸಿ, ಬಿಸಿಲು ತಾಗಲಿ ಎಂದು ಮನೆಯ ಮುಂದಿನ ರಸ್ತೆಯ ಬದಿಯಲ್ಲಿಯೇ ಇಟ್ಟರು. ಆದರೆ ಅವರು ಒಳಗೆ ಹೋಗಿ ಕೆಲವೇ ನಿಮಿಷಗಳಲ್ಲಿ ಹೊರಗೆ ಬಂದಾಗ ಸೋಫಾ ಇರಲಿಲ್ಲ. ಇಷ್ಟು ದೊಡ್ಡ ಸೋಫಾವನ್ನು ಯಾವ ಕಳ್ಳರು ಹೊತ್ತೊಯ್ದರು ಎಂದು ಗಾಬರಿಗೊಂಡು ಆಕೆ ಮನೆಯ ಸಿಸಿಟಿವಿ ಫುಟೇಜ್ ಪರಿಶೀಲಿಸಿದಾಗ ತಾನು ಯೋಚಿಸಲಾರದ ಘಟನೆಯೊಂದು ಕ್ಷಣಮಾತ್ರದಲ್ಲಿ ನಡೆದುಹೋಗಿ ಸೋಫಾ ಇನ್ನೆಂದೂ ಬಾರದ ಲೋಕಕ್ಕೆ ಹೋಗಿ ಬಿಟ್ಟಿತ್ತು.
ಸಿಸಿಟಿವಿಯಲ್ಲಿ ಕಂಡಿದ್ದು ಈ ರೀತಿ ಇತ್ತು. ಪೌರಸಭೆಯ ಕಸ ತೆಗೆಯುವ ಲಾರಿ ಬಂದಿತು. ಕಾರ್ಮಿಕರು ರಸ್ತೆಯಲ್ಲಿ ಇಟ್ಟಿದ್ದ ಸೋಫಾವನ್ನು ಎಸೆಯಲು ಇಟ್ಟ ವಸ್ತು ಎಂದು ಭಾವಿಸಿ, ಸುಲಭವಾಗಿ ಲಾರಿಗೆ ತುಂಬಿಸಿ ಕೊಂಡೊಯ್ದರು. ಮಹಿಳೆ ಒಳಗೆ ಹೋಗುತ್ತಿದ್ದಂತೆಯೇ ಈ ಘಟನೆ ನಡೆದಿತ್ತು. ಯಾರೂ ದುರುದ್ದೇಶಪೂರ್ವಕವಾಗಿ ಮಾಡಿರಲಿಲ್ಲ ಕೇವಲ ತಪ್ಪು ತಿಳಿವಳಿಕೆಯಿಂದ ಆಗಿದ್ದ ಅನಾಹುತವೊಂದು ನಡೆದುಹೋಗಿತ್ತು.
ನಗರಗಳಲ್ಲಿ ಮನೆಯ ಮುಂದೆ ರಸ್ತೆಯಲ್ಲೇ ಕಸ, ಹಳೆಯ ವಸ್ತುಗಳನ್ನು ಇಡುವುದು ಸಾಮಾನ್ಯ. ಮುಂಜಾನೆ ಪೌರ ಕಾರ್ಮಿಕರು ಬಂದಾಗ ಅದನ್ನು ತೆಗೆದುಕೊಂಡು ಹೋಗುತ್ತಾರೆ. ಈ ಸಂದರ್ಭದಲ್ಲಿ ಸೋಫಾ ಸಹ ಅದೇ ರೀತಿ ಅವರಿಗೆ ರಿಜೆಕ್ಟೆಡ್ ಆಗಿ ಕಾಣಿಸಿತು. ಅವಸರವಸರವಾಗಿ ಬರುವ ಪೌರಕಾರ್ಮಿಕರು ಮಾರ್ಗದ ಬದಿಯಲ್ಲಿ ಇಟ್ಟಿದ್ದೆಲ್ಲಾ ಕಸದ ಪಟ್ಟಿಗೆ ಸೇರಿಸಿಕೊಂಡು ವಿಲೇವಾರಿ ಮಾಡುತ್ತಾರೆ.
ಈ ವೀಡಿಯೊ ವೈರಲ್ ಆಗುತ್ತಿದ್ದಂತೆ ಇನ್ನು ಮುಂದೆ ಸೋಫಾ ಹೊರಗಿಡುವ ಮೊದಲು ಬೋರ್ಡ್ ಹಾಕಬೇಕು, ‘ಇದು ಎಸೆಯಲು ಅಲ್ಲ’ ಅಂತ!” ಎಂದು ಜನರು ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಸೋಫಾವನ್ನು ಕದ್ದೊಯ್ಯಲು ಯಾವತ್ತೂ ಕಳ್ಳರಿಗೆ ಸಾಧ್ಯವಿರಲಿಲ್ಲ ಆದರೆ ಸಣ್ಣ ಅಜಾಗ್ರತೆಯಿಂದ ದೊಡ್ಡ ನಷ್ಟವನ್ನು ಅನುಭವಿಸಿದ್ದಾರೆ ಸೋಪಾದ ಮಾಲಕಿ

DEATH
ಡ್ರಾಮಾ ಜೂನಿಯರ್ಸ್ ಸೂರಜ್ ಅಜ್ಜಿ, ಸೋಷಿಯಲ್ ಮೀಡಿಯಾ ಸ್ಟಾರ್ ಲಕ್ಷ್ಮೀ ನಾಯ್ಕ (93) ವಿಧಿವಶ
ಸರಿಯಾಗಿ ಕಿವಿ ಕೇಳಿಸದಿದ್ದರೂ, ಕಣ್ಣು ಮಂಜಾಗಿದ್ದರೂ ತನ್ನ ಮರಿಮೊಮ್ಮಗ ಹೇಳಿಕೊಟ್ಟಂತೆ ನಟನೆ ಮಾಡುತ್ತಲೇ ಫೇಮಸ್ ಆದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಜನಪ್ರಿಯ ವ್ಯಕ್ತಿತ್ವ, ಸಾಮಾಜಿಕ ಜಾಲತಾಣದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನ ಗೆದ್ದಿದ್ದ ‘ರೀಲ್ಸ್ ಅಜ್ಜಿ’ ಲಕ್ಷ್ಮೀ ನಾಯ್ಕ (93) ಅವರು ಭಾನುವಾರ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಗ್ರಾಮೀಣ ಸೊಗಡಿನ ಅನಭಿಷಿಕ್ತ ನಟಿ:
ಕಳೆದ ಕೆಲವು ವರ್ಷಗಳಿಂದ ತಮ್ಮ ಮೊಮ್ಮಗ, ‘ಡ್ರಾಮಾ ಜೂನಿಯರ್ಸ್’ ಖ್ಯಾತಿಯ ಸೂರಜ್ ಅವರೊಂದಿಗೆ ಸೋಷಿಯಲ್ ಮೀಡಿಯಾ ರೀಲ್ಸ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಲಕ್ಷ್ಮೀ ನಾಯ್ಕ ಅವರು ಮನೆಮಾತಾಗಿದ್ದರು. ಇವರ ನೈಜ ನಟನೆ, ಮುಗ್ಧತೆ ಹಾಗೂ ಅಪ್ಪಟ ಹಳ್ಳಿ ಸೊಗಡಿನ ಮಾತುಗಳಿಗೆ ಮಾರುಹೋಗದವರೇ ಇಲ್ಲ. ಮೊಮ್ಮಗ ಸೂರಜ್ ಮಾಡುವ ತಮಾಷೆಯ ಪ್ರಶ್ನೆಗಳಿಗೆ ಅಜ್ಜಿ ನೀಡುತ್ತಿದ್ದ ಉತ್ತರಗಳು ಹಾಗೂ ಅವರ ವಿಶಿಷ್ಟ ಶೈಲಿಯ ನಗು ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ನಲ್ಲಿ ಸದಾ ವೈರಲ್ ಆಗುತ್ತಿದ್ದವು.
ಲಕ್ಷಾಂತರ ಅಭಿಮಾನಿಗಳ ಕಂಬನಿ:
ವೃದ್ಧಾಪ್ಯದ ನಡುವೆಯೂ ಸದಾ ಲವಲವಿಕೆಯಿಂದ ಇರುತ್ತಿದ್ದ ಇವರ ನಿಧನದ ಸುದ್ದಿಯನ್ನು ಸೂರಜ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನನ್ನ ಅಜ್ಜಿ ಇನ್ನು ನೆನಪು ಮಾತ್ರ” ಎಂದು ಅವರು ಭಾವುಕವಾಗಿ ಬರೆದುಕೊಂಡಿದ್ದು, ಸಾವಿರಾರು ಅಭಿಮಾನಿಗಳು ಅಜ್ಜಿಯ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸುತ್ತಿದ್ದಾರೆ.

ವಾರ್ಧಕ್ಯದಿಂದ ಕೊನೆಯುಸಿರು:
ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಲಕ್ಷ್ಮೀ ನಾಯ್ಕ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮಂಚಿಕೇರಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ, ಇಡೀ ಕರ್ನಾಟಕದ ನೆಟ್ಟಿಗರಿಗೆ ತಮ್ಮ ವಿಡಿಯೋಗಳ ಮೂಲಕ ನಗು ಹಂಚಿದ್ದ ಒಬ್ಬ ಅದ್ಭುತ ಕಲಾವಿದೆಯನ್ನು ಕರುನಾಡು ಕಳೆದುಕೊಂಡಂತಾಗಿದೆ.
Belthangady
ಯಕ್ಷರಂಗದಲ್ಲಿ ‘ಕೃಷ್ಣ’ನ ಕ್ರೋಧ: ಪ್ರೇಕ್ಷಕರ ಶಿಳ್ಳೆಗೆ ಕೆರಳಿದ ಉಜಿರೆ ಅಶೋಕ ಭಟ್; ವೇದಿಕೆಯಲ್ಲೇ ದರ್ಪದ ಮಾತುಗಳ ಸುರಿಮಳೆ!
ಯಕ್ಷಗಾನ ಎನ್ನುವುದು ಕೇವಲ ಮನರಂಜನೆಯಲ್ಲ, ಅದೊಂದು ಶಿಸ್ತಿನ ಕಲೆ. ಆದರೆ ಇತ್ತೀಚೆಗೆ ವೇದಿಕೆಯ ಮೇಲೆ ಕಲಾವಿದರು ಮತ್ತು ಪ್ರೇಕ್ಷಕರ ನಡುವೆ ನಡೆಯುತ್ತಿರುವ ಸಂಘರ್ಷಗಳು ಕಲಾಭಿಮಾನಿಗಳಲ್ಲಿ ಬೇಸರ ಮೂಡಿಸಿವೆ. ಭಾಗವತರ ಆಲಾಪನೆಗೆ ಶಿಳ್ಳೆ ಹೊಡೆದರೆಂದು ಕಲಾವಿದ ಉಜಿರೆ ಅಶೋಕ ಭಟ್ ಅವರು ಕೃಷ್ಣನ ವೇಷದಲ್ಲಿಯೇ ಪ್ರೇಕ್ಷಕರು ಶಿಳ್ಳೆ ಹೊಡೆದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ವೇದಿಕೆಯಲ್ಲೇ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.
ನಡೆದದ್ದೇನು?
ಭಾಗವತರ ಪದ್ಯಕ್ಕೆ ಕೃಷ್ಣನ ವೇಷಧಾರಿ ಉಜಿರೆ ಅಶೋಕ ಭಟ್ ಅವರು ಅರ್ಥ ಹೇಳಲು ಸಿದ್ಧರಾಗುತ್ತಿದ್ದಂತೆ, ಭಾಗವತರ ಆಲಾಪನೆಗೆ ಪ್ರೇಕ್ಷಕರ ಸಾಲಿನಿಂದ ಕೇಳಿಬಂದ ಜೋರಾದ ಶಿಳ್ಳೆ ಮತ್ತು ಶಬ್ದಗಳಿಂದ ವಿಚಲಿತರಾಗಿದ್ದಾರೆ.. ಇದರಿಂದ ತೀವ್ರ ಅಸಮಾಧಾನಗೊಂಡ ಕಲಾವಿದರು, ಕಥೆಯ ಪ್ರಸಂಗವನ್ನು ಬದಿಗಿಟ್ಟು ನೇರವಾಗಿ ಪ್ರೇಕ್ಷಕರತ್ತ ತಿರುಗಿದರು. “ಇದು ಶಿಳ್ಳೆ ಹೊಡೆಯುವ ಜಾಗವಲ್ಲ, ಯಕ್ಷಗಾನದ ಗಂಭೀರತೆ ಅರ್ಥ ಮಾಡಿಕೊಳ್ಳಿ” ಎಂಬ ಖಡಕ್ ಮಾತುಗಳೊಂದಿಗೆ ಶಿಸ್ತಿನ ಪಾಠ ಆರಂಭಿಸಿದ್ದಾರೆ- “ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗುತ್ತೇನೆ. ಇದು ದೋಂಬರಾಟವೇ? ಇದು ಯಕ್ಷಗಾನವೇ? ಕೋಳಿ ಕಟ್ಟವೇ? ಕಂಬಳವೇ? ಎಂದು ವೇದಿಕೆಯಲ್ಲೇ ಪ್ರಶ್ನೆ ಮಾಡಿದ್ದಾರೆ. ಶಿಳ್ಳೆ ಹಾಕಿದವರು ಯಾರು? ಹುಚ್ಚರನ್ನು ಬೆಳೆಸಬೇಡಿ, ಕಲಾವಿದರನ್ನು ಬೆಳೆಸಿ, ಆಗದೆ ಇದ್ದರೆ ಬನ್ಸ್ ತಿಂದು ಹೋಗಿ, ಭಾಗವತರ ಕಂಠ ಹಾಳು ಮಾಡುತ್ತೀರಾ ? ನಾವು ಯಕ್ಷಗಾನ ಮಾಡಬೇಕೋ? ಎಂದು ಆಕ್ರೋಶಿತರಾಗಿ ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದ ವತಿಯಿಂದ ಯಕ್ಷಗಾನ ಮಂಡಳಿಯವರು ಕುಂದಾಪುರದ ಹನ್ನಾಬೈಲಿನಲ್ಲಿ ಮಾ.26 ರಂದು ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ, ಭಾಗವತರು ಪದ ಹಾಡುತ್ತಿರುವ ಸಂದರ್ಭದಲ್ಲಿ ಆಲಾಪನೆ ಮಾಡುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಾರೆ. ಪದ್ಯ ಮುಗಿದ ನಂತರ ಕೃಷ್ಣ ವೇಷಧಾರಿ ಅಶೋಕ್ ಭಟ್ ಗರಂ ಆಗಿ ಶಿಳ್ಳೆ ಹೊಡೆದ ಪ್ರೇಕ್ಷಕರನ್ನು ಉದ್ದೇಶಿಸಿ ಹೇಳಿದ ಮಾತುಗಳು ವೈರಲ್ ಆಗಿದೆ.
ಕಲಾವಿದನ ಆಕ್ರೋಶಕ್ಕೆ ಕಾರಣವೇನು?
ಉಜಿರೆ ಅಶೋಕ ಭಟ್ ಅವರ ವಾದದ ಪ್ರಕಾರ, ಯಕ್ಷಗಾನದ ಅರ್ಥಗಾರಿಕೆ ಎನ್ನುವುದು ಏಕಾಗ್ರತೆಯಿಂದ ನಡೆಯಬೇಕಾದ ಪ್ರಕ್ರಿಯೆ. ಪ್ರೇಕ್ಷಕರು ಅನಗತ್ಯವಾಗಿ ಶಿಳ್ಳೆ ಹಾಕುವುದು ಅಥವಾ ಗದ್ದಲ ಮಾಡುವುದು ಕಲೆಯ ಗೌರವಕ್ಕೆ ಧಕ್ಕೆ ತರುತ್ತದೆ. “ನಾವು ಕಷ್ಟಪಟ್ಟು ಕಲೆ ಪ್ರದರ್ಶಿಸುವಾಗ ಶಿಸ್ತು ಇರಬೇಕು” ಎನ್ನುವುದು ಅವರ ಆಕ್ರೋಶದ ಹಿಂದಿನ ಆಶಯವಾಗಿತ್ತು.
ಪ್ರೇಕ್ಷಕ ಪ್ರಭುಗಳನ್ನು ಮರೆತರೇ ಕಲಾವಿದರು?
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆಗಳು ಜೋರಾಗಿವೆ:
ಯಕ್ಷಗಾನದ ಪಾವಿತ್ರ್ಯತೆ ಉಳಿಯಬೇಕು, ಕಲಾವಿದನಿಗೆ ಗೌರವ ಸಿಗಬೇಕು. ಶಿಳ್ಳೆ ಹಾಕುವುದು ಕಲೆಗೆ ಮಾಡುವ ಅವಮಾನ ಎಂದು ಒಂದು ವರ್ಗ ವಾದಿಸಿದರೆ , ವೇದಿಕೆಯ ಮೇಲೆ ಕೃಷ್ಣನಂತಹ ದೈವಸ್ವರೂಪಿ ಪಾತ್ರಧಾರಿ ಕಲಾವಿದನಿಗೆ ಸಂಯಮ ಇರಬೇಕು. ಪ್ರೇಕ್ಷಕರನ್ನು ಹೀನಾಯವಾಗಿ ಕಾಣುವುದು ಒಬ್ಬ ವೃತ್ತಿಪರ ಕಲಾವಿದನ ಲಕ್ಷಣವಲ್ಲ. ಕಲಾವಿದನ ಮಾತುಗಳಲ್ಲಿ ಸ್ಪಷ್ಟವಾಗಿ ದರ್ಪ, ಅಹಂಕಾರ ಮತ್ತು ತನ್ನ ಸಾಧನೆಯ ಮೇಲಿನ ಅತಿಯಾದ ಹೆಮ್ಮೆಯ ಭಾವನೆಗಳು ಕಾಣುತ್ತಿರುವುದರಿಂದ ಆತನು ತನ್ನನ್ನು ಇತರರಿಗಿಂತ ಮೇಲಿರುವವನಾಗಿ ಚಿತ್ರಿಸಿಕೊಂಡು, ತನ್ನ ಸಾಧನೆಗಳನ್ನು ದೊಡ್ಡದಾಗಿ ಹೇಳಿಕೊಳ್ಳುವ ವೇಳೆ ಇತರರ ಕೊಡುಗೆಗಳನ್ನು ಕಡಿಮೆ ಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದೆ. ಒಬ್ಬ ಕಲಾವಿದ ಇವತ್ತು ಈ ಮಟ್ಟಕ್ಕೆ ಬೆಳೆಯಬೇಕಾದರೆ ಪ್ರೇಕ್ಷಕರ ಪ್ರೋತ್ಸಾಹವೇ ಕಾರಣ. ಅಭಿಮಾನದಿಂದ ಪ್ರೇಕ್ಷಕರು ಹಾಕುವ ಶಿಳ್ಳೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸಬೇಕು. ಪ್ರೇಕ್ಷಕರಿಲ್ಲದೆ ಕಲೆ ಇಲ್ಲ, ಕಲಾವಿದರಿಲ್ಲದೆ ಸಂಸ್ಕೃತಿ ಇಲ್ಲ. ಇಬ್ಬರ ನಡುವೆ ಸಮನ್ವಯ ಇರಬೇಕಾದ ಅನಿವಾರ್ಯತೆ ಇಂದು ಎದುರಾಗಿದೆ. ಒಬ್ಬ ಕಲಾವಿದ ಇವತ್ತು ಈ ಮಟ್ಟಕ್ಕೆ ಬೆಳೆಯಬೇಕಾದರೆ ಅದಕ್ಕೆ ಪ್ರೇಕ್ಷಕರ ಪ್ರೋತ್ಸಾಹ ಮತ್ತು ಅಭಿಮಾನವೇ ಕಾರಣ. ಶಿಳ್ಳೆ ಎನ್ನುವುದು ಅಭಿಮಾನದ ಸಂಕೇತವೂ ಆಗಿರಬಹುದು. ಸಣ್ಣ ತಪ್ಪುಗಳಿಗಾಗಿ ಪ್ರೇಕ್ಷಕ ಪ್ರಭುಗಳನ್ನು ವೇದಿಕೆಯ ಮೇಲಿಂದಲೇ ಹಿಯಾಳಿಸುವುದು ಕಲಾವಿದನಿಗೆ ಶೋಭೆ ತರುವುದಿಲ್ಲ. “ಕಲಾವಿದ ಬೆಳೆಯಲು ಬೇಕಾದ ಪ್ರೇಕ್ಷಕ ಸ್ನೇಹಿ ಮನೋಭಾವವನ್ನು ಅಶೋಕ ಭಟ್ ಅವರು ಮರೆತರೇ?” ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ವೇದಿಕೆಯ ಮೇಲಿಂದ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಳ್ಳುವುದು ಕಲಾವಿದನ ಅಹಂಕಾರವನ್ನು ತೋರಿಸುತ್ತದೆ. ಎಂಬುವುದು ಕಲಾಭಿಮಾನಿಗಳ ಕಡೆಯಿಂದ ಕೇಳಿಬರುತ್ತಿರುವ ವಾದಗಳು ಕಲಾವಿದನ ಈ ದರ್ಪದ ನಡೆ ಯಕ್ಷಗಾನದ ಆಂತರಿಕ ಶಿಸ್ತನ್ನು ಎತ್ತಿ ಹಿಡಿಯುವುದೋ ಅಥವಾ ಪ್ರೇಕ್ಷಕರನ್ನು ಕಲೆಯ ಸಂಭ್ರಮದಿಂದ ದೂರ ತಳ್ಳುವುದೋ ಎಂಬ ಬಗ್ಗೆ ಈಗ ಗಂಭೀರ ಚರ್ಚೆ ನಡೆಯುತ್ತಿದೆ.
ವೇದಿಕೆಯಲ್ಲಿ ಅರ್ಥ ಹೇಳಲು ಬಂದ ಪಾತ್ರಧಾರಿ ಭಾಗವತರಲ್ಲಿ ಅನುಮತಿ ಕೇಳಿದ ಬಳಿಕ ತನ್ನ ಬುದ್ಧಿವಾದದ ಮಾತು ಆರಂಭಿಸಬೇಕಾಗಿತ್ತು. ಅಥವಾ ವ್ಯವಸ್ಥಾಪಕರಲ್ಲಿ ತಿಳಿಸಬೇಕಿತ್ತು ಅದ್ಯಾವುದೂ ಇಲ್ಲದೇ ಏಕಾಏಕಿ ಶಿಳ್ಳೆ ಹೊಡೆದ ಪ್ರೇಕ್ಷಕರಿಗೆ ಬುದ್ಧಿ ಮಾತಿನ ಮೂಲಕ ವೇದಿಕೆಯಲ್ಲೇ ತನ್ನ ಅಹಂಕಾರ ಪ್ರವೃತ್ತಿಯನ್ನು ಅಶೋಕ್ ಭಟ್ ಸಾಬೀತು ಪಡಿಸಿರುವುದು ಯಕ್ಷಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
Belthangady
ಬೆಳ್ತಂಗಡಿಯಲ್ಲಿ ಮಾಚ್ 22ರಂದು ‘ಯುವ ಸಾಹಿತ್ಯ ಚುಟುಕು ಕವಿಗೋಷ್ಠಿ’ ಸಂಭ್ರಮ
ಬೆಳ್ತಂಗಡಿ: ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ‘ಯುವ ಸಾಹಿತ್ಯ ಚುಟುಕು ಕವಿಗೋಷ್ಠಿ’ ಕಾರ್ಯಕ್ರಮವು ಇದೇ ಬರುವ ಮಾರ್ಚ್ 22, ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿಯ ಜೆಸಿಐ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೂಡಬಿದಿರೆ ತಾಲೂಕು ಜಾನಪದ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಪದ್ಮಶ್ರೀ ಭಟ್ ನಿಡ್ನೋಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಶಿವಪ್ರಸಾದ್ ಕೊಕ್ಕಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಸಂಪತ್ ಬಿ. ಸುವರ್ಣ, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀ ಹರೀಶ್ ಸುಲಾಯ ಒಡ್ಡಂಬೆಟ್ಟು, ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀ ಯದುಪತಿ ಗೌಡ ಹಾಗೂ ಬೆಳ್ತಂಗಡಿ ಜೆಸಿಐ ಅಧ್ಯಕ್ಷ ಶ್ರೀ ಜಿತೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಗೌರವಾನ್ವಿತ ಆಹ್ವಾನಿತರಾಗಿ ಮಂಗಳೂರು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀ ಗೋಪಾಲಕೃಷ್ಣ ಶಾಸ್ತ್ರಿ, ಸಾಮಾಜಿಕ ಮುಖಂಡರಾದ ಶ್ರೀ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು, ಶ್ರೀ ಧಾಮೋದರ ಬಂಗೇರ, ಉದ್ಯಮಿಗಳಾದ ಶ್ರೀ ಶ್ರೀನಿವಾಸ ದೇವಾಡಿಗ ಅಳದಂಗಡಿ ಮತ್ತು ಶ್ರೀ ಅನಿಲ್ ಅಂಜನ್ ಕಾಲಿಪಟ್ಟ ಉಪಸ್ಥಿತರಿರುತ್ತಾರೆ.

ಕವಿಗೋಷ್ಠಿ ವಿಶೇಷ:
ದ್ವಿಭಾಷಾ ಸಾಹಿತಿ ಆರ್ಯನ್ ಸವಣಾಲು ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದ್ದು, ಜಿಲ್ಲೆಯ ವಿವಿಧ ಭಾಗಗಳ ಸುಮಾರು 25ಕ್ಕೂ ಹೆಚ್ಚು ಉದಯೋನ್ಮುಖ ಮತ್ತು ಅನುಭವಿ ಕವಿಗಳು ತಮ್ಮ ಚುಟುಕು ಕವನಗಳನ್ನು ವಾಚಿಸಲಿದ್ದಾರೆ. ಕಾರ್ಯಕ್ರಮವನ್ನು ಶ್ರೀ ರಾಜೇಶ್ ಆಚಾರ್ಯ ಸವಣಾಲು ಮತ್ತು ವಿದ್ಯಶ್ರೀ ಅಡೂರು ನಿರೂಪಿಸಲಿದ್ದಾರೆ. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ಕೋರಿದ್ದಾರೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
