Connect with us

Uncategorized

ಹತ್ತು ಕೋಟಿ ಎಟಿಎಂ ಹಣ ದರೋಡೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಲ್ಲಿ ಮತ್ತೊಂದು ದರೋಡೆ..1ಕೋಟಿ 37ಲಕ್ಷ ಹಣದೊಂದಿಗೆ ಹಿಟಾಚಿ ಪೇಮೆಂಟ್ ಸರ್ವಿಸಸ್ ಕಂಪನಿಯ ಸಿಬ್ಬಂದಿಗಳು ಎಸ್ಕೇಪ್..

Published

on


ಬೆಂಗಳೂರಿನಲ್ಲಿ ಕಳೆದ ನವಂಬರ್ ನಲ್ಲಿ ಸಿಎಂಎಸ್ ಕ್ಯಾಶ್ ಮ್ಯಾನೇಜ್ ಮೆಂಟ್ ಕಂಪನಿಯ ಸಿಬ್ಬಂದಿಯಿಂದ 10 ಕೋಟಿ ರೂಪಾಯಿ ನಗದು ಹಣ ದರೋಡೆ ಮಾಡಲಾಗಿತ್ತು. ಇದೀಗ ಹಿಟಾಚಿ ಪೇಮೆಂಟ್ ಸರ್ವೀಸ್ ಪ್ರೈ.ಲಿಮಿಟೆಡ್ ಕಂಪನಿಯಿಂದ ಎಟಿಎಂ ಗೆ ತುಂಬುವ ಒಂದು ಕೋಟಿ ಮೂವತ್ತೇಳು ಲಕ್ಷ ರೂಪಾಯಿ ಹಣದ ಜೊತೆಗೆ ಕಂಪನಿಯ ಸಿಬ್ಬಂದಿಗಳೇ ಎಸ್ಕೇಪ್ ಆಗಿದ್ದಾರೆ. CMS ರಾಬರಿ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಲ್ಲಿ ಮತ್ತೊಂದು ಹಣ ದರೋಡೆ ಪ್ರಕರಣ ನಡೆದಿದೆ.

ATM ಗೆ ಹಣ ತುಂಬಲು ಕೊಟ್ಟಿದ್ದ ಒಂದು ಕೋಟಿ ಮೂವತ್ತೇಳು ಲಕ್ಷ ನಗದು ಹಣವನ್ನು ಖದೀಮರು ದೋಚಿದ್ದಾರೆ. 2025 ರ ನವೆಂಬರ್ ನಲ್ಲಿ ನಡೆದಿದ್ದ CMS ವಾಹನ ದರೋಡೆ ಕೇಸ್ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು.

ಹಾಡಹಗಲೇ ನಡೆದಿದ್ದ ದರೋಡೆ ಪ್ರಕರಣವನ್ನ ಕಂಡು ಜನರು ಬೆಚ್ಚಿ ಬಿದ್ದಿದ್ದರು. CMS ಮಾಜಿ ಸಿಬ್ಬಂದಿ ಮತ್ತು ತಂಡದಿಂದ ಪಕ್ಕಾ ಪ್ಲಾನ್ ಮಾಡಿ ದರೋಡೆ ಮಾಡಲಾಗಿತ್ತು.
ಈಗ HITACHI ಎಂಬ ಮತ್ತೊಂದು ಕಂಪನಿಯ ಸಿಬ್ಬಂದಿಗಳು ಹಣ ದರೋಡೆ ಮಾಡಿಕೊಂಡು ಕಾಲಿಗೆ ಬುದ್ಧಿ ಹೇಳಿದ್ದಾರೆ. ಎರಡು ಪ್ರತ್ಯೇಕ ತಂಡಗಳು ಹಣ ದರೋಡೆ ಮಾಡಿವೆ ಎಂದು ಕಂಪೆನಿಯ ಅಧಿಕಾರಿ ದೂರಿನಲ್ಲಿ ವಿವರಿಸಿದ್ದಾರೆ. ಒಂದು ತಂಡ 50 ಲಕ್ಷ ಮತ್ತೊಂದು ತಂಡದಿಂದ 80 ಲಕ್ಷ ದರೋಡೆ ಮಾಡಿ ಪರಾರಿಯಾಗಿವೆ‌ ಜನವರಿ 19ರಂದು ATMಗೆ ಹಣ ಹಾಕಲು ಕಂಪನಿಯ ಅಧಿಕಾರಿ ಮಿಥುನ್ ಸಿಬ್ಬಂದಿಗಳಿಗೆ ಸೂಚಿಸಿದ್ದರು. ಸದ್ಯ ಘಟನೆ ಸಂಬಂಧ ಕೋರಮಂಗಲ ಪೊಲೀಸ್‌ ಠಾಣೆಗೆ ಮಿಥುನ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

Continue Reading
Advertisement

award

ಶೈಕ್ಷಣಿಕ ಕ್ಷೇತ್ರದಲ್ಲಿ ಮಿಂಚಿದ ಪೆರ್ಲದ ಪ್ರತಿಭೆ: ಎಂ.ಸಿ.ಎ ಪದವಿಯಲ್ಲಿ ಅನನ್ಯ ಬಿ.ಎಸ್. ಅವರಿಗೆ ದ್ವಿತೀಯ ರ‍್ಯಾಂಕ್

Published

on

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ 2023-25ನೇ ಸಾಲಿನ ಎಂ.ಸಿ.ಎ (MCA – Master of Computer Application) ಸ್ನಾತಕೋತ್ತರ ಪದವಿಯಲ್ಲಿ ಅನನ್ಯ ಬಿ.ಎಸ್. ಅವರು ದ್ವಿತೀಯ ರ‍್ಯಾಂಕ್ ಮೂಲಕ ಅನನ್ಯ ಸಾಧನೆ ಮಾಡಿದ್ದಾರೆ.

ಇವರು ಕಾಸರಗೋಡು ಜಿಲ್ಲೆಯ ಪೆರ್ಲದವರಾಗಿದ್ದು, ಭಾಸ್ಕರ್ ಬನಾರಿ ಹಾಗೂ ಸುಜಾತಾ ಸೇರಾಜೆ ದಂಪತಿಯ ಪುತ್ರಿ. ಇವರು ಕೇರಳ ರಾಜ್ಯದಲ್ಲಿಯೇ ಪ್ರಸಿದ್ದಿ ಪಡೆದ ಖ್ಯಾತ ವ್ಯಕ್ತಿ ಸಿಪಿಎಂ ಪಕ್ಷದ ನೇತಾರನಾಗಿದ್ದ ದಿ. ಕೆ.ಪಿ. ಮದನ್ ಮಾಸ್ಟರ್ ಸೇರಾಜೆ ಅವರ ಮರಿಮೊಮ್ಮಗಳು ಎಂಬುದು ಗಮನಾರ್ಹ.

ಅನನ್ಯ ಅವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಪೆರ್ಲದ ಶ್ರೀ ಸತ್ಯನಾರಾಯಣ ಹೈಸ್ಕೂಲ್‌ನಲ್ಲಿ ಮುಗಿಸಿದ್ದು, ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 90 ಅಂಕ ಗಳಿಸಿದ್ದರು. ನಂತರ ಬಡಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪಿಯುಸಿ (ವಿಜ್ಞಾನ ವಿಭಾಗ) ಶಿಕ್ಷಣ ಪೂರೈಸಿದರು.

ಉನ್ನತ ಶಿಕ್ಷಣಕ್ಕಾಗಿ ಪುತ್ತೂರಿನ ವಿವೇಕಾನಂದ ಕಾಲೇಜನ್ನು ಸೇರಿ ಬಿ.ಸಿ.ಎ (BCA) ಪದವಿಯಲ್ಲಿ ಶೇ. 93 ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದರು. ಇದೀಗ ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಎಂ.ಸಿ.ಎ ಪದವಿಯಲ್ಲಿ ಶೇ. 94 ಅಂಕಗಳನ್ನು ಪಡೆಯುವ ಮೂಲಕ ಇಡೀ ವಿಶ್ವವಿದ್ಯಾಲಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಅನನ್ಯ ಅವರ ಈ ಸಾಧನೆಗೆ ಪೆರ್ಲ ಹಾಗೂ ಸುತ್ತಮುತ್ತಲಿನ ಭಾಗದ ಸಾರ್ವಜನಿಕರು ಮತ್ತು ಶಿಕ್ಷಣ ಪ್ರೇಮಿಗಳು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

Continue Reading

Belthangady

ಯಕ್ಷರಂಗದಲ್ಲಿ ‘ಕೃಷ್ಣ’ನ ಕ್ರೋಧ: ಪ್ರೇಕ್ಷಕರ ಶಿಳ್ಳೆಗೆ ಕೆರಳಿದ ಉಜಿರೆ ಅಶೋಕ ಭಟ್; ವೇದಿಕೆಯಲ್ಲೇ ದರ್ಪದ ಮಾತುಗಳ ಸುರಿಮಳೆ!

Published

on

ಯಕ್ಷಗಾನ ಎನ್ನುವುದು ಕೇವಲ ಮನರಂಜನೆಯಲ್ಲ, ಅದೊಂದು ಶಿಸ್ತಿನ ಕಲೆ. ಆದರೆ ಇತ್ತೀಚೆಗೆ ವೇದಿಕೆಯ ಮೇಲೆ ಕಲಾವಿದರು ಮತ್ತು ಪ್ರೇಕ್ಷಕರ ನಡುವೆ ನಡೆಯುತ್ತಿರುವ ಸಂಘರ್ಷಗಳು ಕಲಾಭಿಮಾನಿಗಳಲ್ಲಿ ಬೇಸರ ಮೂಡಿಸಿವೆ. ಭಾಗವತರ ಆಲಾಪನೆಗೆ ಶಿಳ್ಳೆ ಹೊಡೆದರೆಂದು ಕಲಾವಿದ ಉಜಿರೆ ಅಶೋಕ ಭಟ್ ಅವರು ಕೃಷ್ಣನ ವೇಷದಲ್ಲಿಯೇ ಪ್ರೇಕ್ಷಕರು ಶಿಳ್ಳೆ ಹೊಡೆದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ವೇದಿಕೆಯಲ್ಲೇ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.

ನಡೆದದ್ದೇನು?
ಭಾಗವತರ ಪದ್ಯಕ್ಕೆ ಕೃಷ್ಣನ ವೇಷಧಾರಿ ಉಜಿರೆ ಅಶೋಕ ಭಟ್ ಅವರು ಅರ್ಥ ಹೇಳಲು ಸಿದ್ಧರಾಗುತ್ತಿದ್ದಂತೆ, ಭಾಗವತರ ಆಲಾಪನೆಗೆ ಪ್ರೇಕ್ಷಕರ ಸಾಲಿನಿಂದ ಕೇಳಿಬಂದ ಜೋರಾದ ಶಿಳ್ಳೆ ಮತ್ತು ಶಬ್ದಗಳಿಂದ ವಿಚಲಿತರಾಗಿದ್ದಾರೆ.. ಇದರಿಂದ ತೀವ್ರ ಅಸಮಾಧಾನಗೊಂಡ ಕಲಾವಿದರು, ಕಥೆಯ ಪ್ರಸಂಗವನ್ನು ಬದಿಗಿಟ್ಟು ನೇರವಾಗಿ ಪ್ರೇಕ್ಷಕರತ್ತ ತಿರುಗಿದರು. “ಇದು ಶಿಳ್ಳೆ ಹೊಡೆಯುವ ಜಾಗವಲ್ಲ, ಯಕ್ಷಗಾನದ ಗಂಭೀರತೆ ಅರ್ಥ ಮಾಡಿಕೊಳ್ಳಿ” ಎಂಬ ಖಡಕ್ ಮಾತುಗಳೊಂದಿಗೆ ಶಿಸ್ತಿನ ಪಾಠ ಆರಂಭಿಸಿದ್ದಾರೆ- “ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗುತ್ತೇನೆ. ಇದು ದೋಂಬರಾಟವೇ? ಇದು ಯಕ್ಷಗಾನವೇ? ಕೋಳಿ ಕಟ್ಟವೇ? ಕಂಬಳವೇ? ಎಂದು ವೇದಿಕೆಯಲ್ಲೇ ಪ್ರಶ್ನೆ ಮಾಡಿದ್ದಾರೆ. ಶಿಳ್ಳೆ ಹಾಕಿದವರು ಯಾರು? ಹುಚ್ಚರನ್ನು ಬೆಳೆಸಬೇಡಿ, ಕಲಾವಿದರನ್ನು ಬೆಳೆಸಿ, ಆಗದೆ ಇದ್ದರೆ ಬನ್ಸ್‌ ತಿಂದು ಹೋಗಿ, ಭಾಗವತರ ಕಂಠ ಹಾಳು ಮಾಡುತ್ತೀರಾ ? ನಾವು ಯಕ್ಷಗಾನ ಮಾಡಬೇಕೋ? ಎಂದು ಆಕ್ರೋಶಿತರಾಗಿ ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದ ವತಿಯಿಂದ ಯಕ್ಷಗಾನ ಮಂಡಳಿಯವರು ಕುಂದಾಪುರದ ಹನ್ನಾಬೈಲಿನಲ್ಲಿ ಮಾ.26 ರಂದು ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ, ಭಾಗವತರು ಪದ ಹಾಡುತ್ತಿರುವ ಸಂದರ್ಭದಲ್ಲಿ ಆಲಾಪನೆ ಮಾಡುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಾರೆ. ಪದ್ಯ ಮುಗಿದ ನಂತರ ಕೃಷ್ಣ ವೇಷಧಾರಿ ಅಶೋಕ್ ಭಟ್ ಗರಂ ಆಗಿ ಶಿಳ್ಳೆ ಹೊಡೆದ ಪ್ರೇಕ್ಷಕರನ್ನು ಉದ್ದೇಶಿಸಿ ಹೇಳಿದ ಮಾತುಗಳು ವೈರಲ್‌ ಆಗಿದೆ.

ಕಲಾವಿದನ ಆಕ್ರೋಶಕ್ಕೆ ಕಾರಣವೇನು?
ಉಜಿರೆ ಅಶೋಕ ಭಟ್ ಅವರ ವಾದದ ಪ್ರಕಾರ, ಯಕ್ಷಗಾನದ ಅರ್ಥಗಾರಿಕೆ ಎನ್ನುವುದು ಏಕಾಗ್ರತೆಯಿಂದ ನಡೆಯಬೇಕಾದ ಪ್ರಕ್ರಿಯೆ. ಪ್ರೇಕ್ಷಕರು ಅನಗತ್ಯವಾಗಿ ಶಿಳ್ಳೆ ಹಾಕುವುದು ಅಥವಾ ಗದ್ದಲ ಮಾಡುವುದು ಕಲೆಯ ಗೌರವಕ್ಕೆ ಧಕ್ಕೆ ತರುತ್ತದೆ. “ನಾವು ಕಷ್ಟಪಟ್ಟು ಕಲೆ ಪ್ರದರ್ಶಿಸುವಾಗ ಶಿಸ್ತು ಇರಬೇಕು” ಎನ್ನುವುದು ಅವರ ಆಕ್ರೋಶದ ಹಿಂದಿನ ಆಶಯವಾಗಿತ್ತು.

ಪ್ರೇಕ್ಷಕ ಪ್ರಭುಗಳನ್ನು ಮರೆತರೇ ಕಲಾವಿದರು?
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆಗಳು ಜೋರಾಗಿವೆ:
ಯಕ್ಷಗಾನದ ಪಾವಿತ್ರ್ಯತೆ ಉಳಿಯಬೇಕು, ಕಲಾವಿದನಿಗೆ ಗೌರವ ಸಿಗಬೇಕು. ಶಿಳ್ಳೆ ಹಾಕುವುದು ಕಲೆಗೆ ಮಾಡುವ ಅವಮಾನ ಎಂದು ಒಂದು ವರ್ಗ ವಾದಿಸಿದರೆ , ವೇದಿಕೆಯ ಮೇಲೆ ಕೃಷ್ಣನಂತಹ ದೈವಸ್ವರೂಪಿ ಪಾತ್ರಧಾರಿ ಕಲಾವಿದನಿಗೆ ಸಂಯಮ ಇರಬೇಕು. ಪ್ರೇಕ್ಷಕರನ್ನು ಹೀನಾಯವಾಗಿ ಕಾಣುವುದು ಒಬ್ಬ ವೃತ್ತಿಪರ ಕಲಾವಿದನ ಲಕ್ಷಣವಲ್ಲ. ಕಲಾವಿದನ ಮಾತುಗಳಲ್ಲಿ ಸ್ಪಷ್ಟವಾಗಿ ದರ್ಪ, ಅಹಂಕಾರ ಮತ್ತು ತನ್ನ ಸಾಧನೆಯ ಮೇಲಿನ ಅತಿಯಾದ ಹೆಮ್ಮೆಯ ಭಾವನೆಗಳು ಕಾಣುತ್ತಿರುವುದರಿಂದ ಆತನು ತನ್ನನ್ನು ಇತರರಿಗಿಂತ ಮೇಲಿರುವವನಾಗಿ ಚಿತ್ರಿಸಿಕೊಂಡು, ತನ್ನ ಸಾಧನೆಗಳನ್ನು ದೊಡ್ಡದಾಗಿ ಹೇಳಿಕೊಳ್ಳುವ ವೇಳೆ ಇತರರ ಕೊಡುಗೆಗಳನ್ನು ಕಡಿಮೆ ಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದೆ. ಒಬ್ಬ ಕಲಾವಿದ ಇವತ್ತು ಈ ಮಟ್ಟಕ್ಕೆ ಬೆಳೆಯಬೇಕಾದರೆ ಪ್ರೇಕ್ಷಕರ ಪ್ರೋತ್ಸಾಹವೇ ಕಾರಣ. ಅಭಿಮಾನದಿಂದ ಪ್ರೇಕ್ಷಕರು ಹಾಕುವ ಶಿಳ್ಳೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸಬೇಕು. ಪ್ರೇಕ್ಷಕರಿಲ್ಲದೆ ಕಲೆ ಇಲ್ಲ, ಕಲಾವಿದರಿಲ್ಲದೆ ಸಂಸ್ಕೃತಿ ಇಲ್ಲ. ಇಬ್ಬರ ನಡುವೆ ಸಮನ್ವಯ ಇರಬೇಕಾದ ಅನಿವಾರ್ಯತೆ ಇಂದು ಎದುರಾಗಿದೆ. ಒಬ್ಬ ಕಲಾವಿದ ಇವತ್ತು ಈ ಮಟ್ಟಕ್ಕೆ ಬೆಳೆಯಬೇಕಾದರೆ ಅದಕ್ಕೆ ಪ್ರೇಕ್ಷಕರ ಪ್ರೋತ್ಸಾಹ ಮತ್ತು ಅಭಿಮಾನವೇ ಕಾರಣ. ಶಿಳ್ಳೆ ಎನ್ನುವುದು ಅಭಿಮಾನದ ಸಂಕೇತವೂ ಆಗಿರಬಹುದು. ಸಣ್ಣ ತಪ್ಪುಗಳಿಗಾಗಿ ಪ್ರೇಕ್ಷಕ ಪ್ರಭುಗಳನ್ನು ವೇದಿಕೆಯ ಮೇಲಿಂದಲೇ ಹಿಯಾಳಿಸುವುದು ಕಲಾವಿದನಿಗೆ ಶೋಭೆ ತರುವುದಿಲ್ಲ. “ಕಲಾವಿದ ಬೆಳೆಯಲು ಬೇಕಾದ ಪ್ರೇಕ್ಷಕ ಸ್ನೇಹಿ ಮನೋಭಾವವನ್ನು ಅಶೋಕ ಭಟ್ ಅವರು ಮರೆತರೇ?” ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ವೇದಿಕೆಯ ಮೇಲಿಂದ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಳ್ಳುವುದು ಕಲಾವಿದನ ಅಹಂಕಾರವನ್ನು ತೋರಿಸುತ್ತದೆ. ಎಂಬುವುದು ಕಲಾಭಿಮಾನಿಗಳ ಕಡೆಯಿಂದ ಕೇಳಿಬರುತ್ತಿರುವ ವಾದಗಳು ಕಲಾವಿದನ ಈ ದರ್ಪದ ನಡೆ ಯಕ್ಷಗಾನದ ಆಂತರಿಕ ಶಿಸ್ತನ್ನು ಎತ್ತಿ ಹಿಡಿಯುವುದೋ ಅಥವಾ ಪ್ರೇಕ್ಷಕರನ್ನು ಕಲೆಯ ಸಂಭ್ರಮದಿಂದ ದೂರ ತಳ್ಳುವುದೋ ಎಂಬ ಬಗ್ಗೆ ಈಗ ಗಂಭೀರ ಚರ್ಚೆ ನಡೆಯುತ್ತಿದೆ.

ವೇದಿಕೆಯಲ್ಲಿ ಅರ್ಥ ಹೇಳಲು ಬಂದ ಪಾತ್ರಧಾರಿ ಭಾಗವತರಲ್ಲಿ ಅನುಮತಿ ಕೇಳಿದ ಬಳಿಕ ತನ್ನ ಬುದ್ಧಿವಾದದ ಮಾತು ಆರಂಭಿಸಬೇಕಾಗಿತ್ತು. ಅಥವಾ ವ್ಯವಸ್ಥಾಪಕರಲ್ಲಿ ತಿಳಿಸಬೇಕಿತ್ತು ಅದ್ಯಾವುದೂ ಇಲ್ಲದೇ ಏಕಾಏಕಿ ಶಿಳ್ಳೆ ಹೊಡೆದ ಪ್ರೇಕ್ಷಕರಿಗೆ ಬುದ್ಧಿ ಮಾತಿನ ಮೂಲಕ ವೇದಿಕೆಯಲ್ಲೇ ತನ್ನ ಅಹಂಕಾರ ಪ್ರವೃತ್ತಿಯನ್ನು ಅಶೋಕ್ ಭಟ್ ಸಾಬೀತು ಪಡಿಸಿರುವುದು ಯಕ್ಷಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

Uncategorized

ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳು ಪೊಲೀಸರ ವಶಕ್ಕೆ

Published

on

ಬೆಳ್ತಂಗಡಿ/ಬಂಟ್ವಾಳ: ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಂಡು ಕಳೆದ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ಪ್ರಕರಣ 1: ವೇಣೂರು ಪೊಲೀಸರ ಕಾರ್ಯಾಚರಣೆ
ಬೆಳ್ತಂಗಡಿ ನ್ಯಾಯಾಲಯದಲ್ಲಿ ದಾಖಲಾಗಿದ್ದ CC No. 356/2019 ಪ್ರಕರಣಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲೆಯ ಕಾಪು ನಿವಾಸಿ ಮಣಿಕಂಠ (35) ಎಂಬಾತ ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನ ಪತ್ತೆಗಾಗಿ ನಿರಂತರ ಪ್ರಯತ್ನ ನಡೆಸುತ್ತಿದ್ದ ವೇಣೂರು ಪೊಲೀಸ್ ಠಾಣೆಯ ತಂಡವು, ಖಚಿತ ಮಾಹಿತಿಯ ಮೇರೆಗೆ ಉಡುಪಿಯಲ್ಲಿ ಕಾರ್ಯಾಚರಣೆ ನಡೆಸಿ ಈತನನ್ನು ದಸ್ತಗಿರಿ ಮಾಡಿದೆ. ಬಳಿಕ ಆರೋಪಿಯನ್ನು ಮಾನ್ಯ ಬಂಟ್ವಾಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ಪ್ರಕರಣ 2: ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆ
ಬಂಟ್ವಾಳ ವೀರಕಂಬ ನಿವಾಸಿ ಮಹಮ್ಮದ್ ಅಶ್ರಫ್ (38) ಎಂಬಾತ ಬಂಟ್ವಾಳ ನಗರ ಪೊಲೀಸ್ ಠಾಣೆಯ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳಲ್ಲಿ (ಅ.ಕ್ರ :117/2019 ಮತ್ತು ಅ.ಕ್ರ :111/2020) ಆರೋಪಿಯಾಗಿದ್ದನು. ಮಾನ್ಯ ಬಂಟ್ವಾಳ ACJ & JMFC ನ್ಯಾಯಾಲಯಕ್ಕೆ ಹಾಜರಾಗದೆ ಈತನು ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದನು.

ವಿಶೇಷವೆಂದರೆ, ಈತನ ವಿರುದ್ಧ ಈ ಹಿಂದೆ 10ಕ್ಕೂ ಅಧಿಕ ಬಾರಿ ವಾರಂಟ್ ಜಾರಿಯಾಗಿದ್ದರೂ ಈತ ಸಿಕ್ಕಿಬಿದ್ದಿರಲಿಲ್ಲ. ಬಂಟ್ವಾಳ ನಗರ ಪೊಲೀಸ್ ಠಾಣೆಯ ASI ಸುಜು ಮತ್ತು CHC 665 ರವರನ್ನೊಳಗೊಂಡ ತಂಡವು ಅಂತಿಮವಾಗಿ ಈತನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

Continue Reading

Trending

Copyright © 2025 Deevatige