crime
ಮದುವೆಯಾಗಿ 45 ದಿನಕ್ಕೆ ಲವರ್ ಜೊತೆ ಪತ್ನಿ ಪರಾರಿ;ಪತಿ ಆತ್ಮಹತ್ಯೆ, ಜೊತೆಗೆ ಮದುವೆ ಮಾಡಿಸಿದವನೂ ಆತ್ಮಹತ್ಯೆ.
ಪ್ರೀತಿ ಪ್ರೇಮದ ಬಲೆಗೆ ಬಿದ್ದ ಪ್ರೇಮಿಗಳು ಮನೆಯವರ ಒತ್ತಾಯಕ್ಕೋ, ಸಮಾಜದ ಕಟ್ಟುಪಾಡಿಗಾಗಿಯೋ, ಅದ್ಧೂರಿಯಾಗಿ ಮದುವೆಯಾಗಿ ನಂತರ ತನ್ನ ಹಳೇಯ ಸ್ನೇಹಿತನೊಂದಿಗೋ ಸ್ನೇಹಿತೆಯೊಂದಿಗೋ ಪ್ರೀತಿ ಪ್ರೇಮದಲ್ಲಿ ಮುಂದುವರಿದು ಕೊನೆಗೆ ಅವರೊಂದಿಗೆ ಪರಾರಿಯಾದಾಗ ನಂಬಿ ಮದುವೆಯಾದವರ ಗತಿ ಅದೋಃಗತಿಯಾದ ಬಹಳಷ್ಟು ಉದಾಹರಣೆಗಳನ್ನು ಕಾಣಬಹುದಾಗಿದೆ. ಇಲ್ಲೊಬ್ಬಳು ಮದುವೆಯಾಗಿ ಹುಚ್ಛಾಟ ಮೆರೆದಾಗ ಆಗಬಾರದ ಅನಾಹುತಕ್ಕೆ ಇಬ್ಬರು ಬಲಿಯಾದ ಘಟನೆಯೊಂದು ದಾವಣಗೆರೆಯಿಂದ ವರದಿಯಾಗಿದೆ.
ಮದುವೆಯಾಗಿ 45 ದಿನಗಳಲ್ಲಿ ಬಾಯ್ ಫ್ರೆಂಡ್ ಕುಮಾರ್ ಜತೆ ಪತ್ನಿ ಪರಾರಿಯಾದ ಹಿನ್ನೆಲೆ ಮನನೊಂದ ಪತಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೆ ಮದುವೆ ಮಾಡಿಸಿದ ಸಂಬಂಧಿ ಕೂಡಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ತಾಲೂಕು ಗುಮ್ಮನೂರು ಗ್ರಾಮದಲ್ಲಿ ಮದುವೆಯಾದ ಎರಡೇ ತಿಂಗಳಿಗೆ ನವ ವಿವಾಹಿತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹರೀಶ್ (32) ಆತ್ಮಹತ್ಯೆಗೆ ಶರಣಾಗಿರುವ ನವ ವಿವಾಹಿತನಾಗಿದ್ದಾನೆ. ಪರ ಪುರುಷನ ಜೊತೆ ಪತ್ನಿ ಓಡಿ ಹೋದಳು ಎನ್ನುವ ಕಾರಣಕ್ಕೆ ಮನನೊಂದು ಹರೀಶ್ ಆತ್ಮಹತ್ಯೆಗೆ ಶರಣಾದರೆ, ಮದುವೆ ಮಾಡಿಸಿದ ಪತ್ನಿಯ ಮಾವ ಕೂಡಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹರೀಶ್ ನೇಣಿಗೆ ಶರಣಾಗುವ ಮುನ್ನವೇ ಡೆತ್ ನೋಟ್ ಸಹ ಬರೆದಿಟ್ಟಿದ್ದಾನೆ. ಪತ್ನಿ ಅನಗತ್ಯ ಕಿರುಕುಳ ನೀಡುತ್ತಿದ್ದಾಳೆ. ಬೇರೆ ಯುವಕನೊಂದಿಗೆ ಓಡಿ ಹೋಗಿ ನಾನು ನಿನಗೆ ಹಿಂಸೆ ನೀಡುತ್ತಿರುವೆ ಎಂದು ಆರೋಪಿಸಿದ್ದಾಳೆ. ಪತ್ನಿ ಹಾಗೂ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಇತ್ತು. ಇದೇ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಶರಣಾಗುತ್ತಿದ್ದೇನೆ ಎಂದು ಡೆತ್ ನೋಟ್ನಲ್ಲಿ ಹರೀಶ್ ಉಲ್ಲೇಖಿಸಿದ್ದಾರೆ. ಪತ್ನಿ ಹಾಗೂ ಆಕೆ ತಂದೆ, ತಾಯಿ, ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು. ಆಸ್ತಿಗಿಂತ ಮಾನ ಮುಖ್ಯವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ತನ್ನನ್ನು ಕ್ಷಮಿಸಿ ಎಂದು ಕುಟುಂಬ ಸದಸ್ಯರಿಗೆ ಹರೀಶ್ ಕ್ಷಮೆಯನ್ನೂ ಕೇಳಿದ್ದು, ಪತ್ನಿಯ ಕಡೆಯವರು ನೀಡಿದ ಹಿಂಸೆಗೆ ತನ್ನ ತಂದೆ ತಾಯಿ ಮನೆ ಬಿಡುವ ಯೋಚನೆ ಕೂಡ ಮಾಡಿದ್ದರು ಎಂದು ಆರೋಪಿಸಿ ತನ್ನ ಸಾವಿಗೆ ಹೆಂಡತಿ, ಅತ್ತೆ ಮಾವ ಹಾಗೂ ಹೆಂಡತಿಯನ್ನ ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಬರೆದಿಟ್ಟು ಹರೀಶ್ ನೇಣಿಗೆ ಕೊರಳೊಡ್ಡಿದ್ದಾನೆ. ಮದುವೆಯಾಗಿ ಎರಡುವರೆ ತಿಂಗಳಲ್ಲಿ ಹೆಂಡತಿ ಪರ ಪುರುಷನೊಂದಿಗೆ ಓಡಿ ಹೋಗಿದ್ದು, ಬಳಿಕ ಹರೀಶ್ ಮೇಲೆ ಕೆಲವರು ಇಲ್ಲ- ಸಲ್ಲದ ಆರೋಪ ಮಾಡಿದ್ದರಂತೆ. ಜೊತೆಗೆ ಪ್ರಾಣ ಬೆದರಿಕೆ ಹಾಕಿದ್ದರಂತೆ. ಇದ್ರಿಂದ ಮನನೊಂದು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಗನ ಸಾವಿಗೆ ಆತನ ಹೆಂಡ್ತಿಯೇ ಕಾರಣ ಎಂದು ಹರೀಶ್ ಕುಟುಂಬಸ್ಥರು ಕೂಡ ಆರೋಪ ಮಾಡಿದ್ದಾರೆ. ಇತ್ತ ತನ್ನ ಅಂತ್ಯ ಸಂಸ್ಕಾರವನ್ನ ಬಸವ ಧರ್ಮ ಪ್ರಕಾರವಾಗಿ ನೆರವೇರಿಸುವಂತೆಯೂ ಹರೀಶ್ ತನ್ನ ಡೆತ್ ನೋಟ್ ನಲ್ಲಿ ಬರೆದಿದ್ದು, ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಇತ್ತ ಹರೀಶ್ ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿಯುತ್ತಿದ್ದಂತೆ ಮುಂದೆ ನಿಂತು ಇವರ ಮದುವೆ ಮಾಡಿಸಿದ್ದ ಮೃತ ಹರೀಶ್ ಪತ್ನಿ ಸರಸ್ವತಿ ಅವರ ಸೋದರಮಾವ ರುದ್ರೇಶ್(40) ಕೂಡ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರುದ್ರೇಶ್ ದಾವಣಗೆರೆಯ ಅನೆಕೊಂಡದ ನಿವಾಸಿಯಾಗಿದ್ದು, 4 ದಿನದ ಹಿಂದೆ ಕುಮಾರ್ ಎಂಬಾತನ ಜತೆ ಹರೀಶ್ ಪತ್ನಿ ಓಡಿಹೋಗಿದ್ದಳು. ಇದರಿಂದ ಅವಮಾನ ತಾಳಲಾರದೆ ರುದ್ರೇಶ್ ಆತ್ಮಹತ್ಯೆಗೆ ವಿಷ ಸೇವಿಸಿದ್ದರು. ರುದ್ರೇಶ್ ಅವರನ್ನ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ರುದ್ರೇಶ್ ಕೂಡ ಸಾವನ್ನಪ್ಪಿದ್ದಾರೆ.ಒಟ್ಟಿನಲ್ಲಿ ಯುವತಿಯ ಹುಚ್ಚಾಟಕ್ಕೆ ಇಬ್ಬರ ಪ್ರಾಣ ಹೋಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ
crime
ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ:
- ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
- ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
- ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:
ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ
crime
ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ
ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.
crime
ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ವಿವರಣೆ:
ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.
ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.
ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).
ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
