accident
ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತ, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇನ್ನಿಲ್ಲ
ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದಾರೆ. ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ಇಂದು ಬೆಳಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿದ್ದು, ವಿಮಾನದಲ್ಲಿದ್ದ 6 ಮಂದಿ ಕೂಡ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ವಿಮಾನದಲ್ಲಿ ಅಜಿತ್ ಪವಾರ್ ಸೇರಿದಂತೆ 5 ಜನರು ಇದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಅಪಘಾತದ ನಂತರ ವಿಮಾನದಿಂದ ಹೊಗೆಯ ಗೊಂಚಲುಗಳು ಕಾಣಿಸಿಕೊಂಡಿವೆ ಎಂದು ತಿಳಿದುಬಂದಿದೆ. ಅಜಿತ್ ಪವಾರ್ ಮುಂಬೈನಿಂದ ಬಾರಾಮತಿಗೆ ಪ್ರಯಾಣಿಸುತ್ತಿದ್ದರು. ಅಲ್ಲಿ ಜಿಲ್ಲಾ ಪರಿಷತ್ ಚುನಾವಣೆಯ ಪ್ರಚಾರಕ್ಕಾಗಿ ಹಲವು ಸಭೆಗಳಲ್ಲಿ ಭಾಗವಹಿಸಬೇಕಿತ್ತು. ಲ್ಯಾಂಡಿಂಗ್ ಸಮಯದಲ್ಲಿ ವಿಮಾನವು ರನ್‌ವೇಯಿಂದ ಹೊರಗೆ ಹೋಗಿ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ (Maharshtra DCM) ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ (Ajith Pawar) ವಿಮಾನ ಪತನಗೊಂಡಿದೆ. ಈ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿದ್ದ 6 ಮಂದಿ ಕೂಡ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಅಜಿತ್ ಪವಾರ್ ಚಾರ್ಟರ್ ವಿಮಾನ ಬಾರಾಮತಿಯಲ್ಲಿ ಅಪಘಾತಕ್ಕೀಡಾಗಿದೆ. ಇಂದು ಬೆಳಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ಈ ದುರಂತ ಸಂಭವಿಸಿದೆ.

ಘಟನಾ ಸ್ಥಳದ ದೃಶ್ಯಗಳು ವಿಮಾನದ ಅವಶೇಷಗಳು ಪ್ರದೇಶದಾದ್ಯಂತ ಹರಡಿಕೊಂಡಿದೆ. ಬೆಂಕಿಯ ಜ್ವಾಲೆಗಳು ಮತ್ತು ದಟ್ಟವಾದ ಹೊಗೆ ಅದರಿಂದ ಹೊರಬರುತ್ತಿತ್ತು. ಬಾರಾಮತಿ ವಿಮಾನ ನಿಲ್ದಾಣದ ಬಳಿ ಅಪಘಾತ ಸಂಭವಿಸಿದಾಗ ಆ ವಿಮಾನದಲ್ಲಿ ಅಜಿತ್ ಪವಾರ್ ಅವರ ಅಂಗರಕ್ಷಕರು ಸಹ ಇದ್ದರು ಎಂದು ವರದಿಯಾಗಿದೆ.
ಅಜಿತ್ ಪವಾರ್ ದುರ್ಮರಣ ಹೊಂದಿದ ಸುದ್ದಿ ತಿಳಿದ ಬೆನ್ನಲ್ಲೇ ಸುಪ್ರಿಯಾ ಸುಳೆ, ಸುನೇತ್ರಾ ಪವಾರ್ ಮತ್ತು ಪಾರ್ಥ್ ಪವಾರ್ ದೆಹಲಿಯಿಂದ ಬಾರಾಮತಿಗೆ ತೆರಳಿದ್ದಾರೆ. ನಿರ್ಗಮಿಸುವ ಮೊದಲು, ಮೂವರು ನಾಯಕರು ಪ್ರಸ್ತುತ ಶರದ್ ಪವಾರ್ ಅವರ ನಿವಾಸದಲ್ಲಿ ಒಟ್ಟಿಗೆ ಇದ್ದಾರೆ, ಅಲ್ಲಿ ಅವರು ಜಂಟಿಯಾಗಿ ತಮ್ಮ ಪ್ರಯಾಣದ ವೇಳಾಪಟ್ಟಿಯನ್ನು ಯೋಜಿಸುತ್ತಿದ್ದಾರೆ.
accident
ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ನಡೆದಿದೆ.
ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ನಿವಾಸಿ ಭಾರತಿ (48) ಅಪಘಾತಕ್ಕೀಡಾದ ಮಹಿಳೆ. ಇವರು ತನ್ನ ಮಗಳು ದೀಪ್ತಿ ಅವರೊಂದಿಗೆ ಸಜಿಪಮುನ್ನೂರಿನ ಗುಳಿಗಜ್ಜನ ಕಟ್ಟೆಗೆ ಕಾಣಿಕೆ ಹಾಕಲು ಬಂದಿದ್ದರು. ಕಾಣಿಕೆ ಮುಗಿಸಿ ವಾಪಸ್ಸಾಗುವಾಗ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬಂದ ಬಿಳಿ ಬಣ್ಣದ ಕಾರು ಮಹಿಳೆಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ: ಡಿಕ್ಕಿಯ ರಭಸಕ್ಕೆ ಭಾರತಿ ಅವರು ಗಾಳಿಯಲ್ಲಿ ಹಾರಿ ರಸ್ತೆಯ ಬದಿಗೆ ಬಿದ್ದಿದ್ದಾರೆ. ಅಪಘಾತದ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಭಾರತಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
accident
ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು
ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್‌ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:
ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
accident
ರಸ್ತೆ ತಿರುವಿನಲ್ಲಿ ದಿಢೀರನೆ ತೆರೆದುಕೊಂಡ ಬಾಗಿಲು..ಸರ್ಕಾರಿ ಬಸ್ಸಿಂದ ಹೊರಕ್ಕೆಸೆಯಲ್ಪಟ್ಟು ಸಹೋದರಿಯರಿಗೆ ಗಂಭೀರ ಗಾಯ.
ಬೆಳ್ತಂಗಡಿ : ಸರ್ಕಾರಿ ಬಸ್ಸಿನಲ್ಲಿ ಶಾಲೆಗೆ ತೆರಳುತ್ತಿದ್ದ ಸಹೋದರಿಯರಿಬ್ಬರು
ರಸ್ತೆ ತಿರುವಿನಲ್ಲಿ ಏಕಾಏಕಿ ಬಸ್ಸಿನ ಬಾಗಿಲು ತೆರೆದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ರೇಷ್ಮೆರೋಡ್ ಎಂ ಆರ್ ಪಿ ಎಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಬೆಳಿಗ್ಗೆ ಎಂದಿನಂತೆ ಗೇರುಕಟ್ಟೆಯಿಂದ ಬೆಳ್ತಂಗಡಿ ಶಾಲೆಗೆ ತೆರಳಲು ಕೆಎಸ್ ಆರ್ ಟಿ ಸಿ ಬಸ್ ಗೆ ಹತ್ತಿದ್ದ ಸಹೋದರಿಯರು ರೇಷ್ಮೆ ರೋಡ್ ಎಂಬಲ್ಲಿನ ರಸ್ತೆ ತಿರುವಿನಲ್ಲಿ ದಿಢೀರನೆ ಬಸ್ಸಿನ ಬಾಗಿಲು ತೆರೆಯಲ್ಪಟ್ಟು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ಸಂಚರಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟ ಸಹೋದರಿಯರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಸ್ಥಳೀಯರು ಬೆಳ್ತಂಗಡಿ ಹಾಗೂ ಉಜಿರೆ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
ಸಹೋದರಿಯರ ಪೈಕಿ ಒಬ್ಬಾಕೆ ಎಸ್ ಎಸ್ ಎಲ್.ಸಿ ಪರೀಕ್ಷೆಗೆ ತೆರಳುತ್ತಿದ್ದು ಮತ್ತೊಬ್ಬಳು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಾಗರಾಜ ಹಾಗೂ ರೂಪ ದಂಪತಿಗಳ ಪುತ್ರಿಯರು ಗಾಯಾಳುಗಳೆಂದು ತಿಳಿದುಬಂದಿದೆ. ಗಾಯಾಳು ಸಹೋದರಿಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
