Connect with us

crime

ಕನ್ನಡ ರಿಯಾಲಿಟಿ ಶೋಗಳಿಗೆ ಹಣದ ಹೊಳೆಯನ್ನೇ ಹರಿಸಿದ ಸಿಜೆ ರಾಯ್; ಹನುಮಂತುಗೆ 35 ಲಕ್ಷದ ಪ್ಲ್ಯಾಟ್‌ ಕೊಟ್ಟ ಉದ್ಯಮಿ ; ಸಾವಿನ ಹಿಂದಿರುವ ಸತ್ಯಾಂಶವನ್ನು ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ -ಡಿಕೆಶಿ

Published

on

ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇನ್ನೂ ಸಿ.ಜೆ.ರಾಯ್ ಕೇವಲ ಉದ್ಯಮ ಮಾತ್ರವಲ್ಲದೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದರು. ಉದ್ಯಮಿಯಾಗಿದ್ದ ಸಿ.ಜೆ ರಾಯ್​​, ಸಾಕಷ್ಟು ಹಣ ಮಾತ್ರವಲ್ಲದೇ ಖ್ಯಾತಿಯನ್ನು ಗಳಿಸಿದ್ದರು. ಬಡ ಮಕ್ಕಳ ಶಿಕ್ಷಣಕ್ಕೆ (Education) ಸಹಾಯ ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್​ ಸಿ.ಜೆ ರಾಯ್​​ ಅವರು ಸಾವಿಗೆ ಶರಣಾಗಿದ್ದಾರೆ.


ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ (C.J. Roy) ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇನ್ನೂ ಸಿ.ಜೆ.ರಾಯ್ ಕೇವಲ ಉದ್ಯಮ ಮಾತ್ರವಲ್ಲದೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದರು.

ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದ ಸಿಜೆ ರಾಯ್, ಕಳೆದ ಸೀಸನ್ ನ ಬಿಗ್ ಬಾಸ್ ನಲ್ಲಿ ಕಾನ್ಫಿಡೆಂಟ್ ಗ್ರೂಪ್‌ನಿಂದ 50 ಲಕ್ಷ ರೂಪಾಯಿ ನೀಡಿದ್ದರು. ಕೇವಲ ಬಿಗ್ ಬಾಸ್ ಮಾತ್ರವಲ್ಲದೆ ಬೇರೆ ಬೇರೆ ರಿಯಾಲಿಟಿ ಶೋ ಗಳಿಗೂ ಕೂಡ ಸಿಜೆ ರಾಯ್ ಬಹಳಷ್ಟು ದೊಡ್ಡ ಮೊತ್ತದ ಬಹುಮಾನವನ್ನು ನೀಡಿದ್ದರು. ಬಿಗ್ ಬಾಸ್ 11ರ ಸಿಸನ್​ ವಿನ್ನರ್​​​ ಹನುಮಂತು ಗೆ 35ಲಕ್ಷ ರೂ ಮೌಲ್ಯದ ಪ್ಲಾಟ್​ನ್ನು ರಾಯ್​ ನೀಡಿದ್ದರು, ಇದಷ್ಟೇ ಅಲ್ಲದೇ 1 ಕೋಟಿ ಹಣವನ್ನ ಮಕ್ಕಳ ವಿದ್ಯಾಬ್ಯಾಸಕ್ಕೆ ಕೊಟ್ಟಿದ್ದರು. ಪರೀಕ್ಷೆಯಲ್ಲಿ 80 ಪರ್ಸೆಂಟ್ ಮಾರ್ಕ್ ಪಡೆದಿದ್ದ 201 ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಈ ಹಣವನ್ನು ಮೀಸಲಿಟ್ಟಿದ್ದರು. ಇತ್ತೀಚಿಗೆ ತಮಿಳಿನ ಐಡೆಂಟಿಟಿ ಸಿನಿಮಾಕ್ಕೆ ಬಂಡವಾಳ ಹೂಡಿದ್ದರು. ಸುದೀಪ್ ,ಯಶ್ ಸೇರಿದಂತೆ ಹಲವಾರು ಸ್ಟಾರ್ ನಟರ ಜೊತೆ ಸಿಜೆ ರಾಯ್ ಒಡೆನಾಟ ಹೊಂದಿದ್ದರು.

ಮಾರುತಿ 800 ಕಾರನ್ನು ಮರು ಖರೀದಿಸಿದ್ದ ರಾಯ್​!
ಕಾನ್ಫಿಡೆಂಟ್​​​ ಗ್ರೂಪ್​​ನ ಸಂಸ್ಥಾಪಕ, ಚೇರ್​ಮನ್​​ ಆಗಿದ್ದ ಸಿ.ಜೆ ರಾಯ್​ ಅವರು ದುಬಾರಿ ಕಾರುಗಳನ್ನು ಹೊಂದಿದ್ದಾರೆ. ಇವರ ಬಳಿ 12 ರೋಲ್ಸ್​ ರಾಯ್​​, ಬುಗಾಟಿ, ಬೆಂಟ್ಲಿ ಸೇರಿದಂತೆ ಹತ್ತು ಹಲವಾರು ದುಬಾರಿ ಕಾರುಗಳು ಗ್ಯಾರೇಜ್​ನಲ್ಲಿರಿಸಿದ್ದಾರೆ. ಇಷ್ಟೇಲ್ಲಾ ಕಾರುಗಳು ಇದ್ದರೂ ಕೂಡ ಸಿ.ಜೆ ರಾಯ್​ ಅವರು ತಮ್ಮ ಮೊದಲ ಕಾರನ್ನು ಹುಡುಕಿ ಮರು ಖರೀದಿಸಿದ್ದರು. ಕಾರನ್ನು ಹುಡುಕಲು ಸಹಾಯ ಮಾಡಿದ್ದ ವ್ಯಕ್ತಿಗಳಿಗೆ 10 ಲಕ್ಷ ಬಹುಮಾನ ಕೊಟ್ಟಿದ್ದರು.
ರಾಯ್ ಅವರು ತಮ್ಮ ವೃತ್ತಿಜೀವನದ ಆರಂಭದಲ್ಲಿ ಅಂದ್ರೆ ಸುಮಾರು 25 ವರ್ಷ ವಯಸ್ಸಿನಲ್ಲಿರುವಾಗ ಮಾರುತಿ ಕಾರನ್ನು ಖರೀದಿಸಿದ್ದರು. ಆದ್ರೆ ಮಾರಾಟ ಮಾಡಲು ಮನಸ್ಸು ಇಲ್ಲದ್ದಿದ್ದರು ಮಾರಾಟ ಮಾಡಿದ್ದರು. ಆದ್ರೆ ಇತ್ತೀಚಿಗೆ ಆ ಕಾರನ್ನು ಮತ್ತೆ ಪಡೆಯಲು ರಾಯ್​ ಅವರು ನಿರ್ಧರಿಸಿದ್ದರು. ತಮ್ಮ ಮೊದಲ ಕಾರನ್ನು ವಾಪಸ್​​ ಪಡೆಯಲು ನಿರ್ಧರಿಸಿದ್ದ ರಾಯ್​ ಅವರು, ಮಾರುತಿ 800 ಕಾರಿನ ಸಂಖ್ಯೆ ಮತ್ತು ಹಳೆ ದಾಖಲೆ ಮೂಲಕ ಮತ್ತೆ ಕಾರನ್ನು ಪತ್ತೆ ಮಾಡಿದ್ದರು. ಬಳಿಕ 10 ಲಕ್ಷ ರೂ ಕೊಟ್ಟು ಖರೀದಿ ಮಾಡಿದ್ದರು. ಈ ಬಗ್ಗೆ ತಮ್ಮ ಇನ್​ಸ್ಟಾ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು.

ಸಾವಿನ ಹಿಂದಿರುವ ಸತ್ಯಾಂಶವನ್ನು ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ -ಡಿಕೆಶಿ
ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದ ಕುರಿತು ರಾಜ್ಯ ಸರಕಾರ ಗಂಭೀರವಾಗಿ ನಡೆದುಕೊಂಡಿದ್ದು ಈ ಸಾವಿನ ಹಿಂದಿರುವ ಸತ್ಯಾಂಶವನ್ನು ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ


ಸಿ.ಜೆ. ರಾಯ್ ಅವರು ಸಮಾಜದಲ್ಲಿ ಒಳ್ಳೆಯ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ವ್ಯಕ್ತಿ. ಅವರ ಬಗ್ಗೆ ಉತ್ತಮ ಅಭಿಪ್ರಾಯವಿತ್ತು. ಇಂತಹ ಘಟನೆ ನಡೆಯಬಾರದಿತ್ತು ಎಂದು ಡಿಸಿಎಂ ವಿಷಾದ ವ್ಯಕ್ತಪಡಿಸಿದರು. “ಒಬ್ಬ ಉದ್ಯಮಿ ಈ ಮಟ್ಟಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾದರೆ, ಅದರ ಹಿಂದೆ ಏನಿದೆ ಎಂಬುದನ್ನು ಗಂಭೀರವಾಗಿ ಪರಿಶೀಲಿಸಲೇಬೇಕು” ಎಂದು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ಅಧಿಕಾರಿಗಳ ತಂಡ ಕೇರಳದಿಂದ ಬಂದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಕೇಂದ್ರ ಸರ್ಕಾರದ ಗಮನಕ್ಕೂ ವಿಚಾರ ಹೋಗಿದ್ದು, ದೆಹಲಿಯಿಂದ ವರದಿ ಕೇಳಲಾಗಿದೆ ಎಂಬ ಮಾಹಿತಿಯೂ ಇದೆ.
ಐಟಿ ಇಲಾಖೆ ವಿಚಾರ ರಾಜಕೀಯವಾಗಿ ಸೂಕ್ಷ್ಮ ವಿಷಯವಾಗಿರುವುದರಿಂದ ಈ ಬಗ್ಗೆ ಮಾತನಾಡುವುದು ಕೆಲವೊಮ್ಮೆ ರಾಜಕೀಯ ಬಣ್ಣ ಪಡೆಯುತ್ತದೆ ಎಂದು ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. “ಐಟಿ ಬಗ್ಗೆ ಮಾತನಾಡಿದರೆ ರಾಜಕೀಯ ಆಗುತ್ತದೆ. ಆದರೆ ಇಲ್ಲಿ ಮಾನವೀಯ ದೃಷ್ಟಿಯಿಂದ ನೋಡಬೇಕು. ಯಾರ ಮೇಲಾದರೂ ಅನಗತ್ಯ ಕಿರುಕುಳ ನಡೆದಿದ್ದರೆ ಅದು ಖಂಡನೀಯ. ಈ ರೀತಿಯ ನಡೆ ಸರಿಯಲ್ಲ” ಎಂದು ಅವರು ಹೇಳಿದರು.
ರಾಜ್ಯ ಸರ್ಕಾರ ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ, ಸಂಪೂರ್ಣ ಪಾರದರ್ಶಕವಾಗಿ ತನಿಖೆ ನಡೆಸಲಿದೆ ಎಂಬ ಭರವಸೆಯನ್ನು ಡಿಸಿಎಂ ನೀಡಿದರು. “ಯಾರೇ ಆಗಿರಲಿ, ತಪ್ಪಿದ್ದರೆ ಅದು ಹೊರಬರಬೇಕು. ತಪ್ಪಿಲ್ಲದಿದ್ದರೆ ಅವರ ಮಾನ ಹಾನಿಯಾಗಬಾರದು. ಸತ್ಯವೇ ಅಂತಿಮ” ಎಂದು ಹೇಳಿದರು

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ

Published

on

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.

ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.

ದಾಳಿಯ ವಿವರ:

ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು:

ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲು:

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Continue Reading

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

arrest

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.

30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ

ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್‌ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.

ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:

  1. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
    • ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
  2. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
    • ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
  3. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
    • ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
  4. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
    • ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
  5. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
    • ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
  6. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 323, 427, 504, 506, 149 IPC.
  7. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
  8. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
    • ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
  9. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
    • ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
  10. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 448, 504, 324, 323, 506, 427 R/w 149 IPC.
  11. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
    • ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
  12. ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
    • ಕಲಂಗಳು: 379 IPC (ಕಳವು).
  13. ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
    • ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.

ಪೊಲೀಸರ ಸಕಾಲಿಕ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

Continue Reading

Trending

Copyright © 2025 Deevatige

error: Content is protected !!