Connect with us

cyber crime

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ? ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು !

Published

on

ಬೆಂಗಳೂರು: ಮಕ್ಕಳ ಹಿತದೃಷ್ಟಿಯಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ನಿಷೇಧಿಸುವ ಕುರಿತು ಈಗಾಗಲೇ ಆಸ್ಟ್ರೇಲಿಯಾ ಮತ್ತು ಗೋವಾ ಸರ್ಕಾರಗಳು ಕೈಗೊಂಡಿರುವ ನಿರ್ಧಾರಗಳ ಬೆನ್ನಲ್ಲೇ, ಕರ್ನಾಟಕದಲ್ಲೂ ಈ ಕ್ರಮವನ್ನು ಜಾರಿಗೆ ತರುವ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.

ವಿಧಾನಸಭೆಯಲ್ಲಿ ಸಾಮಾಜಿಕ ಮಾಧ್ಯಮಗಳ ದುರುಪಯೋಗ ಮತ್ತು ಮಕ್ಕಳ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಹಿರಿಯ ನಾಯಕ ಎಸ್. ಸುರೇಶ್ ಕುಮಾರ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಹಿರಿಯ ನಾಯಕರು ಎತ್ತಿರುವ ವಿಷಯವು ತುಂಬಾ ಗಂಭೀರವಾಗಿದೆ. ಫಿನ್ಲ್ಯಾಂಡ್ ಒಂದು ನಿರ್ಧಾರ ತೆಗೆದುಕೊಂಡಿದೆ, ಯುಕೆ ಕೂಡ ಇದೇ ರೀತಿಯ ಕ್ರಮಗಳನ್ನು ಪರಿಗಣಿಸುತ್ತಿದೆ, ಮತ್ತು ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ ಮಕ್ಕಳಿಗೆ ಸಾಮಾಜಿಕ ಮಾಧ್ಯಮದ ಮಾನ್ಯತೆಯನ್ನು ನಿಷೇಧಿಸುವ ಮೂಲಕ ನಿರ್ಧಾರ ತೆಗೆದುಕೊಂಡಿತು. ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮದ ಜವಾಬ್ದಾರಿಯುತ ಬಳಕೆಯ ವಿಷಯದಲ್ಲಿ ಏನು ಮಾಡಬೇಕೆಂದು ನಾವು ಚರ್ಚಿಸುತ್ತಿದ್ದೇವೆ. ಈ ವಿಷಯವು ಚರ್ಚೆಯಲ್ಲಿದೆ” ಎಂದು ಅವರು ಹೇಳಿದರು.

ಕೇವಲ ನಿಷೇಧಕ್ಕೆ ಸೀಮಿತವಾಗದ ಸರ್ಕಾರ, ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮಗಳ ಜವಾಬ್ದಾರಿಯುತ ಬಳಕೆಗಾಗಿ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಎಂಬ ವಿಶೇಷ ಕಾರ್ಯಕ್ರಮವನ್ನು ಈಗಾಗಲೇ ಆರಂಭಿಸಿದೆ. ಐಟಿ-ಬಿಟಿ ಇಲಾಖೆಯು ಮೆಟಾ ಸಂಸ್ಥೆಯ ಸಹಯೋಗದೊಂದಿಗೆ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಒಂದು ಲಕ್ಷ ಶಿಕ್ಷಕರನ್ನು ಒಳಗೊಂಡಂತೆ ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಕಾರ್ಯ ನಡೆಸುತ್ತಿದೆ. ಡಿಜಿಟಲ್ ವ್ಯಸನದಿಂದ ಬಳಲುತ್ತಿರುವವರಿಗೆ ಸಮಾಲೋಚನೆ ಮತ್ತು ಮಾರ್ಗದರ್ಶನ ನೀಡಲು 2025 ರ ಮಾರ್ಚ್‌ನಲ್ಲಿ ‘ಬಿಯಾಂಡ್ ಸ್ಕ್ರೀನ್ಸ್’ ಎಂಬ ಹೊಸ ಕಾರ್ಯಕ್ರಮವನ್ನು ಉದ್ಘಾಟಿಸಲು ಸಿದ್ಧತೆ ನಡೆಸಲಾಗಿದೆ ಎಂದು ಸಚಿವರು ವಿವರಿಸಿದರು.

Continue Reading
Advertisement

cyber crime

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ‌ ಕಾಸರಗೋಡು ಗಣೇಶ್‌ ಪ್ರಸಾದ್ ಮಂಗಳೂರು ಪೊಲೀಸರ ವಶಕ್ಕೆ

Published

on

ಸೌಹಾರ್ದತೆಯ ತಾಣವಾದ ಕರಾವಳಿಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ದ್ವೇಷ ಬಿತ್ತಲು ಯತ್ನಿಸುವವರ ವಿರುದ್ಧ ಮಂಗಳೂರು ಪೊಲೀಸರು ಕಠಿಣ ಕ್ರಮ ಮುಂದುವರಿಸಿದ್ದಾರೆ. ಜನವರಿ ತಿಂಗಳಿನಲ್ಲಿ ನಡೆದ ಕಾರ್ಯಕ್ರಮವೊಂದರ ವಿಡಿಯೋಗೆ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಕಮೆಂಟ್ ಹಾಕಿದ ಆರೋಪದ ಮೇಲೆ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜನವರಿ ತಿಂಗಳಿನಲ್ಲಿ ಮಂಗಳೂರಿನ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ‘ಕಿರಾತ್’ (ಕುರಾನ್ ಪಠಣ) ಸ್ಪರ್ಧೆ ನಡೆದಿತ್ತು. ಈ ಕಾರ್ಯಕ್ರಮದ ವಿಡಿಯೋವನ್ನು ಪ್ರಮುಖ ಮಾಧ್ಯಮ ಸಂಸ್ಥೆಯಾದ ‘ಉದಯವಾಣಿ’ ತನ್ನ ಫೇಸ್‌ಬುಕ್ ಪುಟದಲ್ಲಿ ಪ್ರಸಾರ ಮಾಡಿತ್ತು. ಈ ವಿಡಿಯೋದ ಅಡಿಯಲ್ಲಿ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ನಿವಾಸಿ ಎಸ್ ಎನ್ ಕಬನುರಾಯ ಅವರ ಮಗ ಗಣೇಶ್ ಪ್ರಸಾದ್ (41 ವರ್ಷ) ಎಂಬಾತನು ತನ್ನ ಫೇಸ್‌ಬುಕ್ ಖಾತೆಯಿಂದ ಅತ್ಯಂತ ಪ್ರಚೋದನಕಾರಿ ಕಮೆಂಟ್ ಮಾಡಿದ್ದನು.“ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂಬ ವಿವಾದಾತ್ಮಕ ಹೇಳಿಕೆಯನ್ನು ಪೋಸ್ಟ್ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಮತ್ತು ಧರ್ಮಗಳ ನಡುವೆ ದ್ವೇಷ ಹುಟ್ಟುಹಾಕಲು ಯತ್ನಿಸಿದ ಆರೋಪ ಇವನ ಮೇಲಿದೆ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 15/2026 ರಂತೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮಾರ್ಚ್ 27ರಂದು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಕಲಂ 196 BNS (Bharatiya Nyaya Sanhita): ಧರ್ಮ, ಜಾತಿ ಅಥವಾ ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು. ಮತ್ತು ಕಲಂ 66 IT ಕಾಯ್ದೆ: ಮಾಹಿತಿ ತಂತ್ರಜ್ಞಾನ ದುರ್ಬಳಕೆ. ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

ನಮ್ಮ ಕರಾವಳಿ ಭಾಗವು ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿನ ಶಾಂತಿ ಕದಡಲು ಸಣ್ಣದೊಂದು ಕಿಡಿ ಸಾಕು ಎನ್ನುವುದನ್ನು ಸಮಾಜಘಾತುಕ ಶಕ್ತಿಗಳು ಅರಿತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಕಮೆಂಟ್ ಮಾಡುವ ಮುನ್ನ ಯೋಚಿಸಿರಿ, ನಿಮ್ಮ ಒಂದು ಕಮೆಂಟ್ ಅಥವಾ ಶೇರ್ ಸಮಾಜದ ಶಾಂತಿಯನ್ನು ಹಾಳುಗೆಡವಬಹುದು ಮತ್ತು ನಿಮ್ಮನ್ನು ಜೈಲು ಪಾಲಾಗಿಸಬಹುದು. ಯಾವುದೇ ಧರ್ಮ ಅಥವಾ ಸಮುದಾಯವನ್ನು ಗುರಿಯಾಗಿಸಿ ಹರಡುವ ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರಿಕೆ ಇರಲಿ.ಸೈಬರ್ ಕ್ರೈಂ ವಿಭಾಗವು ಪ್ರತಿಯೊಂದು ಪೋಸ್ಟ್ ಮತ್ತು ಕಮೆಂಟ್‌ಗಳ ಮೇಲೆ ತೀವ್ರ ನಿಗಾ ಇರಿಸಿದೆ. ಅನಾಮಧೇಯ ಖಾತೆಗಳ ಮೂಲಕ ದ್ವೇಷ ಹರಡಿದರೂ ತಾಂತ್ರಿಕವಾಗಿ ಪತ್ತೆಹಚ್ಚುವುದು ಈಗ ಸುಲಭವಾಗಿದೆ. ಭಾವೋದ್ವೇಗಕ್ಕೆ ಒಳಗಾಗಿ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ನಿಮ್ಮ ಭವಿಷ್ಯವನ್ನು ಹಾಳು ಮಾಡುತ್ತದೆ. ಸಮಾಜದಲ್ಲಿ ಸಾಮರಸ್ಯ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಕಾನೂನು ಉಲ್ಲಂಘಿಸುವವರ ಬಗ್ಗೆ ಮಾಹಿತಿ ಇದ್ದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ.

Continue Reading

cyber crime

AI ತಂತ್ರಜ್ಞಾನ ಬಳಸಿ ಕೋಮುದ್ವೇಷ ಹರಡುವ ವಿಡಿಯೋ ಹಂಚಿಕೆ: ಮಂಗಳೂರಿನ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

Published

on

ಮಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಈತ ಫೇಸ್‌ಬುಕ್‌ನಲ್ಲಿ “ನಝೀರ ಮಂಗಳೂರು” ಎಂಬ ಹೆಸರಿನ ಖಾತೆಯ ಮೂಲಕ ವಿವಾದಾತ್ಮಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

2025ರ ಅಕ್ಟೋಬರ್‌ನಲ್ಲಿ ಆರೋಪಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ AI ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾದ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಇದು ಸಮಾಜದಲ್ಲಿ ಶಾಂತಿ ಕದಡುವ ಮತ್ತು ಕೋಮು ಸಂಘರ್ಷಕ್ಕೆ ಪ್ರಚೋದಿಸುವ ಉದ್ದೇಶ ಹೊಂದಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196, 353(1), ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 22, 2026 ರಂದು ಬೆಂಗಳೂರಿನಲ್ಲಿ ಆತನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆತನನ್ನು ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

cyber crime

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ- ಜಾಹೀರಾತುಗಳಿಗೆ ಬಲಿಯಾಗದಿರಿ !

Published

on

“ನನ್ನನ್ನು ಗರ್ಭಿಣಿ ಮಾಡಿ. ಲಕ್ಷಾಂತರ ರೂಪಾಯಿ ಗಳಿಸಿ..ಗರ್ಭಿಣಿ ಮಾಡಿದ್ರೆ 13 ಲಕ್ಷ ರೂ. + 2BHK ಫ್ಲಾಟ್ ಗಿಫ್ಟ್ !” ಎಂಬ ಆಕರ್ಷಣಿಯ ಜಾಹೀರಾತೊಂದು ವೈರಲ್‌ ಆಗಿದ್ದು, ಇದರ ಹಿಂದೆ ಹೋದವರು ಎಲ್ಲವನ್ನೂ ಕಳೆದುಕೊಂಡು ಯಾರಿಗೂ ಹೇಳಲಾರದೆ ಒದ್ದಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವೈರಲ್ ಆಗುತ್ತಿರುವ ಒಂದು ಆಕರ್ಷಣೀಯ ಜಾಹೀರಾತಿನ ಆಫರ್‌ಗೆ ಮರುಳಾಗಿ ಸಾವಿರಾರು ಪುರುಷರು ಹಣ ಕಳೆದುಕೊಂಡಿದ್ದಾರೆ. ಇದು ಕೇವಲ ವಂಚನೆಯಾಗಿದ್ದು, ಬಿಹಾರದ ವಂಚಕರ ಗ್ಯಾಂಗ್‌ಗಳಿಂದ ನಡೆಯುತ್ತಿರುವ ಸೈಬರ್ ಕ್ರೈಂ ಎಂದು ಪೊಲೀಸರು ತಿಳಿಸಿದ್ದಾರೆ.


“ಆಲ್ ಇಂಡಿಯಾ ಪ್ರೆಗ್ನೆಂಟ್ ಜಾಬ್” ಅಥವಾ “ಪ್ರೆಗ್ನೆಂಟ್ ಸರ್ವಿಸ್” ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ವಂಚನೆಯು ದೇಶಾದ್ಯಂತ ಹರಡಿದೆ. ಬಿಹಾರದ ನವಾದಾ, ನಾಲಂದಾ ಜಿಲ್ಲೆಗಳಲ್ಲಿ ಪೊಲೀಸರು ಇಂತಹ ಗ್ಯಾಂಗ್‌ಗಳನ್ನು ಪತ್ತೆಹಚ್ಚಿ, ಹಲವು ಜನರನ್ನು ಬಂಧಿಸಿದ್ದಾರೆ. ವಂಚಕರು ಬ್ಯಾಂಕ್ ಖಾತೆಗಳ ಮೂಲಕ ಹಣ ಸಂಗ್ರಹಿಸುತ್ತಿದ್ದು, ಪೊಲೀಸರು ಈಗ ಖಾತೆಗಳ ವಿವರಗಳನ್ನು ಕಲೆ ಹಾಕುತ್ತಿದ್ದಾರೆ.
ಸುಂದರ ಯುವತಿಯರ ಫೋಟೋಗಳು ಮತ್ತು ವಿಡಿಯೋಗಳೊಂದಿಗೆ ಪೋಸ್ಟ್ ಮಾಡಲಾದ ಈ ಜಾಹೀರಾತುಗಳು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್‌ನಲ್ಲಿ ಹರಿದಾಡುತ್ತಿವೆ. ಆಸೆಗೆ ಮರುಳಾದವರು ನೀಡಿದ ಸಂಪರ್ಕ ಸಂಖ್ಯೆಗೆ ಕರೆ ಮಾಡಿದರೆ, ವಂಚಕರು ನಯವಾಗಿ ಮಾತನಾಡಿ ಬಲೆಗೆ ಬೀಳಿಸುತ್ತಾರೆ. ಮೊದಲ ಹಂತದಲ್ಲಿ ರಿಜಿಸ್ಟ್ರೇಷನ್ ಫೀಸ್ ಎಂದು ₹20,000 (ಕೆಲವೊಮ್ಮೆ ₹799 ರಿಂದ ಆರಂಭ) ಕಟ್ಟುವಂತೆ ಒತ್ತಾಯಿಸುತ್ತಾರೆ. ಹಣ ಕಟ್ಟಿದ ಕೂಡಲೇ ವಂಚಕರ ಮೊಬೈಲ್ ಸ್ವಿಚ್ ಆಫ್. ಯಾವುದೇ ದೇಹ ಸುಖವಿಲ್ಲ, ಹಣವಿಲ್ಲ, ಫ್ಲಾಟ್‌ ಕೂಡ ಇಲ್ಲ. ಲಕ್ಷಾಂತರ ಹಣ ಕಳೆದುಕೊಂಡ ನತದೃಷ್ಟರು ಇಂತಹ ಜಾಹೀರಾತುಗಳನ್ನು ಹುಡುಕಾಡುತ್ತಲೇ ಇರುತ್ತಾರೆ.
ಅನೇಕ ರಾಜ್ಯಗಳಲ್ಲಿ ಇದೇ ರೀತಿಯ ವಂಚನೆಗಳು ಪತ್ತೆಯಾಗಿವೆ. ಹಣ ಕಳೆದುಕೊಂಡವರು ಮರ್ಯಾದೆಗಾಗಿ ದೂರು ನೀಡದೇ ಇರುವುದರಿಂದ ವಂಚಕರಿಗೆ ಇನ್ನಷ್ಟು ಬಲ ಸಿಗುತ್ತಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.


ಇತ್ತೀಚೆಗೆ, ಹಲವಾರು ರಾಜ್ಯಗಳಲ್ಲಿ ನಡೆದ ತನಿಖೆಗಳು ಅಖಿಲ ಭಾರತ ಗರ್ಭಿಣಿ ಉದ್ಯೋಗ ಸೇವೆ ಎಂದು ಕರೆಯಲ್ಪಡುವ ವಂಚನೆಯು 2022ರ ಕೊನೆಯಲ್ಲಿ ಅಥವಾ 2023ರ ಆರಂಭದಲ್ಲಿ ಬಿಹಾರದ ನವಾಡಾ ಜಿಲ್ಲೆಯಲ್ಲಿ ಹುಟ್ಟಿಕೊಂಡಿತು ಎಂದು ಬಹಿರಂಗಪಡಿಸಿವೆ. ವಂಚಕರು ಫೇಸ್‌ಬುಕ್, ವಾಟ್ಸಾಪ್ ಮತ್ತು ಟೆಲಿಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ನಿರುದ್ಯೋಗಿ ಅಥವಾ ನಿರ್ದಿಷ್ಟ ಪುರುಷರನ್ನು ಗುರಿಯಾಗಿಸಿಕೊಳ್ಳುತ್ತಾರೆ. ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯಾಗಿಸುವ ಮೂಲಕ 5 ರಿಂದ 25 ಲಕ್ಷ ರೂ.ಗಳವರೆಗೆ ಹಣ ಗಳಿಸಬಹುದು ಎಂದು ಹೇಳಿಕೊಳ್ಳುತ್ತಾರೆ.ಬ ಇಂತಹ ವಂಚನೆಗಳಿಗೆ ಬಲಿಯಾಗುವ ಜನರು ಪಾನ್, ಆಧಾರ್ ಮತ್ತು ಸೆಲ್ಫಿಗಳಂತಹ ವೈಯಕ್ತಿಕ ವಿವರಗಳನ್ನು ಸಲ್ಲಿಸಲು ಕೇಳಲಾಗುತ್ತದೆ. ನಂತರ ನೋಂದಣಿ, ಭದ್ರತಾ ಠೇವಣಿ, ತೆರಿಗೆಗಳು ಮತ್ತು ಹೋಟೆಲ್ ಬುಕಿಂಗ್‌ಗಳಂತಹ ಹಲವಾರು ಶುಲ್ಕಗಳನ್ನು ಪಾವತಿಸಬೇಕಾಗುತ್ತದೆ. ವಂಚಕರು ನಕಲಿ ಕಾನೂನು ದಾಖಲೆಗಳು, ಮಗುವಿನ ಜನನ ಒಪ್ಪಂದಗಳು ಮತ್ತು ನಕಲಿ ಸಹಿಗಳನ್ನು ಸಹ ಹಾಕಿ ವಿಶ್ವಾಸಾರ್ಹವೆಂದು ತೋರಿಸಿಕೊಳ್ಳುತ್ತಾರೆ. ನಂತರ, ಪೊಲೀಸ್ ಕ್ರಮದ ಮೂಲಕ ಹೆಚ್ಚಿನ ಹಣವನ್ನು ಸುಲಿಗೆ ಮಾಡಲು ಪ್ರಾರಂಭಿಸುತ್ತಾರೆ.
ಭಾರತದಾದ್ಯಂತ ನೂರಾರು ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ, ವಂಚನೆಗೊಳಗಾದ ಹಲವಾರು ಮಂದಿ ಮುಜುಗರದಿಂದ ದೂರು ನೀಡಲು ಹಿಂದೇಟು ಹಾಕುತ್ತಾರೆ. ಪೊಲೀಸ್ ಮೂಲಗಳು ಹೇಳುವಂತೆ ಈ ದಂಧೆಯು ಕೋಟ್ಯಂತರ ರೂಪಾಯಿಗಳನ್ನು ವಂಚಿಸಿದೆ.

Continue Reading

Trending

Copyright © 2025 Deevatige