cyber crime
ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ? ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು !
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/01/children-social-media-new-1000x600.jpg&description=ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ? ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು !', 'pinterestShare', 'width=750,height=350'); return false;" title="Pin This Post">
ಬೆಂಗಳೂರು: ಮಕ್ಕಳ ಹಿತದೃಷ್ಟಿಯಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ನಿಷೇಧಿಸುವ ಕುರಿತು ಈಗಾಗಲೇ ಆಸ್ಟ್ರೇಲಿಯಾ ಮತ್ತು ಗೋವಾ ಸರ್ಕಾರಗಳು ಕೈಗೊಂಡಿರುವ ನಿರ್ಧಾರಗಳ ಬೆನ್ನಲ್ಲೇ, ಕರ್ನಾಟಕದಲ್ಲೂ ಈ ಕ್ರಮವನ್ನು ಜಾರಿಗೆ ತರುವ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.

ವಿಧಾನಸಭೆಯಲ್ಲಿ ಸಾಮಾಜಿಕ ಮಾಧ್ಯಮಗಳ ದುರುಪಯೋಗ ಮತ್ತು ಮಕ್ಕಳ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಹಿರಿಯ ನಾಯಕ ಎಸ್. ಸುರೇಶ್ ಕುಮಾರ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಹಿರಿಯ ನಾಯಕರು ಎತ್ತಿರುವ ವಿಷಯವು ತುಂಬಾ ಗಂಭೀರವಾಗಿದೆ. ಫಿನ್ಲ್ಯಾಂಡ್ ಒಂದು ನಿರ್ಧಾರ ತೆಗೆದುಕೊಂಡಿದೆ, ಯುಕೆ ಕೂಡ ಇದೇ ರೀತಿಯ ಕ್ರಮಗಳನ್ನು ಪರಿಗಣಿಸುತ್ತಿದೆ, ಮತ್ತು ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ ಮಕ್ಕಳಿಗೆ ಸಾಮಾಜಿಕ ಮಾಧ್ಯಮದ ಮಾನ್ಯತೆಯನ್ನು ನಿಷೇಧಿಸುವ ಮೂಲಕ ನಿರ್ಧಾರ ತೆಗೆದುಕೊಂಡಿತು. ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮದ ಜವಾಬ್ದಾರಿಯುತ ಬಳಕೆಯ ವಿಷಯದಲ್ಲಿ ಏನು ಮಾಡಬೇಕೆಂದು ನಾವು ಚರ್ಚಿಸುತ್ತಿದ್ದೇವೆ. ಈ ವಿಷಯವು ಚರ್ಚೆಯಲ್ಲಿದೆ” ಎಂದು ಅವರು ಹೇಳಿದರು.
ಕೇವಲ ನಿಷೇಧಕ್ಕೆ ಸೀಮಿತವಾಗದ ಸರ್ಕಾರ, ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮಗಳ ಜವಾಬ್ದಾರಿಯುತ ಬಳಕೆಗಾಗಿ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಎಂಬ ವಿಶೇಷ ಕಾರ್ಯಕ್ರಮವನ್ನು ಈಗಾಗಲೇ ಆರಂಭಿಸಿದೆ. ಐಟಿ-ಬಿಟಿ ಇಲಾಖೆಯು ಮೆಟಾ ಸಂಸ್ಥೆಯ ಸಹಯೋಗದೊಂದಿಗೆ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಒಂದು ಲಕ್ಷ ಶಿಕ್ಷಕರನ್ನು ಒಳಗೊಂಡಂತೆ ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಕಾರ್ಯ ನಡೆಸುತ್ತಿದೆ. ಡಿಜಿಟಲ್ ವ್ಯಸನದಿಂದ ಬಳಲುತ್ತಿರುವವರಿಗೆ ಸಮಾಲೋಚನೆ ಮತ್ತು ಮಾರ್ಗದರ್ಶನ ನೀಡಲು 2025 ರ ಮಾರ್ಚ್‌ನಲ್ಲಿ ‘ಬಿಯಾಂಡ್ ಸ್ಕ್ರೀನ್ಸ್’ ಎಂಬ ಹೊಸ ಕಾರ್ಯಕ್ರಮವನ್ನು ಉದ್ಘಾಟಿಸಲು ಸಿದ್ಧತೆ ನಡೆಸಲಾಗಿದೆ ಎಂದು ಸಚಿವರು ವಿವರಿಸಿದರು.
arrest
ಬಂಟ, ಬಿಲ್ಲವ ಸಮುದಾಯಕ್ಕೆ ಅವಹೇಳನ: ಆರೋಪಿ ಅನಿತಾ ಕಾಸರಗೋಡು ಜೈಲುಪಾಲು
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕರಾವಳಿಯ ಪ್ರತಿಷ್ಠಿತ ಬಂಟ ಮತ್ತು ಬಿಲ್ಲವ ಸಮುದಾಯಗಳ ಕುರಿತು ಅತ್ಯಂತ ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಆರೋಪಿ ಅನಿತಾ ಕಾಸರಗೋಡು ಅವರನ್ನು ಬರ್ಕೆ ಠಾಣೆಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ಅನಿತಾ ಕಾಸರಗೋಡು ಸದ್ಯ ಕಾನೂನು ಬಲೆಗೆ ಬಿದ್ದು ಜೈಲು ಪಾಲಾಗಿದ್ದಾಳೆ.

ಕಾನೂನು ಹೋರಾಟದಲ್ಲಿ ಜಯ
ಬಿಲ್ಲವ ಸಮುದಾಯವನ್ನು ಅತ್ಯಂತ ಕೆಟ್ಟ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸಲಾಯಿತು. ಸರಕಾರಿ ವಕೀಲರಾದ ಅಶ್ವಿತಾ ವಿ. ಅಮೀನ್, ವಕೀಲರಾದ ಪ್ರಸಾದ್ ಬಂಗೇರ ಮತ್ತು ಅರುಣ್ ಬಂಗೇರ ಅವರು ಸಮಾಜದ ಪರವಾಗಿ ಪ್ರಬಲವಾಗಿ ವಾದಿಸಿ, ಆರೋಪಿಗೆ ಜೈಲು ಶಿಕ್ಷೆ (ನ್ಯಾಯಾಂಗ ಬಂಧನ) ಆಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕಾನೂನು ಹೋರಾಟದ ಪ್ರತಿ ಹಂತದಲ್ಲೂ ಹಗಲಿರುಳು ಶ್ರಮಿಸಿ, ನ್ಯಾಯ ಒದಗಿಸುವಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರದ ಉಪಾಧ್ಯಕ್ಷರಾದ ಶ್ರೀ ದೀಪಕ್ ಕೋಟ್ಯಾನ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಇವರಿಗೆ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಮಲ್ ಕಾರ್ಕಳ ಹಾಗೂ ಸೋಮೇಶ್ವರ ಪುರಸಭಾ ಸದಸ್ಯರಾದ ದೀಪಕ್ ಪಿಲಾರ್ ಅವರು ಸಾಥ್ ನೀಡಿದ್ದಾರೆ.

ಬಂಟ ಸಮುದಾಯದಿಂದಲೂ ಆಕ್ರೋಶ: ಪುತ್ತೂರಿನಲ್ಲಿ ದೂರು ದಾಖಲು
ಬಿಲ್ಲವ ಸಮಾಜದ ಜೊತೆಗೆ ಬಂಟ ಸಮುದಾಯವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕುರಿತು ಪುತ್ತೂರಿನಲ್ಲೂ ಪ್ರಕರಣ ದಾಖಲಾಗಿದೆ. ಅಪ್ಪಟ ಕರಾವಳಿಯ ಸಂಸ್ಕೃತಿಯ ಭಾಗವಾಗಿರುವ ಬಂಟ ಸಮಾಜಕ್ಕೆ ಅವಮಾನ ಮಾಡಿರುವುದನ್ನು ಖಂಡಿಸಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು. ಪ್ರತಿಷ್ಠಿತ ಸಮಾಜದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಗುರವಾಗಿ ಮಾತನಾಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದರು.

ಮುಂಬಯಿ ಬಿಲ್ಲವ ಸಮಾಜದಿಂದಲೂ ಪೊಲೀಸ್ ದೂರು
ಆರೋಪಿ ಅನಿತಾ ಕಾಸರಗೋಡು ಇಡೀ ಬಿಲ್ಲವ ಸಮಾಜ ತಲೆತಗ್ಗಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆಕ್ಷೇಪಾರ್ಹ ಹೇಳಿಕೆಗಳನ್ನು ಮುಂಬಯಿ ಬಿಲ್ಲವ ಸಮಾಜದ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಮುಂಬಯಿ ಬಿಲ್ಲವ ಸಮಾಜದ ಪ್ರಮುಖರು ಹಾಗೂ ಮುಖಂಡರ ನಿಯೋಗವು ಮುಂಬಯಿನ ವಾಕೋಲಾ ಪೊಲೀಸ್ ಠಾಣೆಗೆ (Vakola Police Station) ಖುದ್ದಾಗಿ ಭೇಟಿ ನೀಡಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕೃತವಾಗಿ ದೂರು ಪತ್ರವನ್ನು ಸಲ್ಲಿಸಿದ್ದರು. ಈ ಮೂಲಕ ದೇಶದ ಯಾವುದೇ ಮೂಲೆಯಲ್ಲಿದ್ದರೂ ಸಮಾಜಕ್ಕೆ ಅವಮಾನ ಮಾಡುವವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಗಟ್ಟಿಯಾದ ಸಂದೇಶವನ್ನು ಮುಂಬಯಿ ಬಿಲ್ಲವರು ರವಾನಿಸಿದ್ದರು
ಬೆಂಗಳೂರಿನಲ್ಲಿ ಅಕ್ಕನ ಮನೆಯಲ್ಲಿ ಬಂಧನ: ಈ ನಡುವೆ, ‘ಬಿರುವೆರ್ ಕುಡ್ಲ’ ಸಂಘಟನೆಯ ಪ್ರಮುಖರಾದ ರಾಕೇಶ್ ಪೂಜಾರಿ ಅವರು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದರು. ದೂರಿನ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಬರ್ಕೆ ಪೊಲೀಸರು, ಆರೋಪಿಯು ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನಲ್ಲಿರುವ ಆಕೆಯ ಸಹೋದರಿಯ (ಅಕ್ಕನ) ನಿವಾಸದ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜೂನ್ 25ರವರೆಗೆ ನ್ಯಾಯಾಂಗ ಬಂಧನ: ಬಂಧಿತ ಆರೋಪಿ ಅನಿತಾ ಕಾಸರಗೋಡು ಅವರನ್ನು ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ಜೂನ್ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಸಮುದಾಯಗಳ ನಡುವೆ ಶಾಂತಿ ಕದಡುವ ಹಾಗೂ ಸಮಾಜದ ಗಣ್ಯ ವ್ಯಕ್ತಿಗಳು ಮತ್ತು ಸಮುದಾಯಗಳಿಗೆ ಅವಮಾನಿಸುವ ಇಂತಹ ಕೃತ್ಯಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ಈಗಲೂ ಆಕ್ರೋಶ ಮುಂದುವರಿದಿದೆ.



arrest
ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಫೇಸ್‌ಬುಕ್‌ನಲ್ಲಿ ಜಾತಿ ನಿಂದನೆ, ಜೀವಬೆದರಿಕೆ: ಕಾರ್ಕಳದಲ್ಲಿ ಆರೋಪಿ ಬಂಧನ
ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ರಾಜ್ಯದ ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಹಾಗೂ ಜಾತಿ ನಿಂದನೆಯ ಕಮೆಂಟ್ ಮಾಡಿ, ದ್ವೇಷ ಹರಡಲು ಯತ್ನಿಸಿದ ಆರೋಪದ ಮೇಲೆ ಕಾರ್ಕಳ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಕೆರ್ವಾಶೆ ನಲ್ಕೆದಬೆಟ್ಟು ನಿವಾಸಿ, ಭೋಜ ಬಂಗೇರ ಅವರ ಪುತ್ರ ಸುದೀರ್ ಬಂಗೇರ (48) ಬಂಧಿತ ಆರೋಪಿ.
ಪ್ರಕರಣದ ಹಿನ್ನೆಲೆ: ಫೇಸ್‌ಬುಕ್‌ನ “NAMMA KARLA” ಎಂಬ ಪೇಜ್‌ನಲ್ಲಿ ಗೃಹ ಸಚಿವರ ಕುರಿತಾದ ಪೋಸ್ಟ್ ಒಂದಕ್ಕೆ ಆರೋಪಿ ಸುದೀರ್ ಬಂಗೇರ ಅವಹೇಳನಕಾರಿ ಕಮೆಂಟ್ ಮಾಡಿದ್ದನು. ಕಮೆಂಟ್‌ನಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸಚಿವರ ಜಾತಿಯನ್ನು ಉಲ್ಲೇಖಿಸಿ ನಿಂದನೆ ಮಾಡಲಾಗಿತ್ತು. ಇದು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಹಾಗೂ ವಿವಿಧ ಸಮುದಾಯಗಳ ನಡುವೆ ದ್ವೇಷ ಮತ್ತು ವೈರತ್ವ ಸೃಷ್ಟಿಸುವ ಉದ್ದೇಶದಿಂದ ಕೂಡಿದೆ ಎಂದು ಸುರೇಶ್ ಎಂಬುವವರು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದಾಖಲಾದ ಪ್ರಕರಣಗಳು: ದೂರಿನ ಅನ್ವಯ ಕಾರ್ಕಳ ನಗರ ಪೊಲೀಸರು ಅಪರಾಧ ಸಂಖ್ಯೆ 82/2026 ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 351(3), 196, 353(2) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ (SC/ST Act) ಕಲಂ 3(1)(r) ಮತ್ತು 3(1)(u) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ



crime
ಯುಪಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ‘ಡಿಜಿಟಲ್ ಅರೆಸ್ಟ್’ ಭೀತಿಯಿಂದ ಗೃಹಿಣಿ ಆತ್ಮಹತ್ಯೆ; ಅಂತ್ಯಕ್ರಿಯೆ ವೇಳೆ ಬಯಲಾಯ್ತು ಸೈಬರ್ ಕ್ರಿಮಿನಲ್‌ಗಳ ಕೃತ್ಯ!
ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ದುರಂತವೊಂದು ಸಂಭವಿಸಿದೆ. ಸೈಬರ್ ಅಪರಾಧಿಗಳ ‘ಡಿಜಿಟಲ್ ಅರೆಸ್ಟ್’ (Digital Arrest) ಜಾಲಕ್ಕೆ ಸಿಲುಕಿ ಭಯಭೀತರಾದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಏನಿದು ಘಟನೆ? ಮೃತ ಮಹಿಳೆಯನ್ನು ಶಾಂತಿ ಎಂದು ಗುರುತಿಸಲಾಗಿದೆ. ವಂಚಕರು ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಆಕೆಗೆ ವಿಡಿಯೋ ಕಾಲ್ ಮಾಡಿ, ಆಕೆಯ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಅಥವಾ ಯಾವುದೋ ಕಾನೂನುಬಾಹಿರ ಕೃತ್ಯ ನಡೆದಿದೆ ಎಂದು ಬೆದರಿಸಿದ್ದಾರೆ. ಗಂಟೆಗಟ್ಟಲೆ ಆಕೆಯನ್ನು ‘ಡಿಜಿಟಲ್ ಬಂಧನ’ದಲ್ಲಿರಿಸಿ (ವಿಡಿಯೋ ಕಾಲ್‌ನಿಂದ ಕಟ್ ಆಗದಂತೆ ತಡೆದು) ತೀವ್ರ ಮಾನಸಿಕ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.
ಇದರಿಂದ ತೀವ್ರವಾಗಿ ಹೆದರಿದ ಮಹಿಳೆ, ತನ್ನ ಮದುವೆಯ ವಾರ್ಷಿಕೋತ್ಸವಕ್ಕೆ ಒಂದು ದಿನ ಬಾಕಿ ಇರುವಾಗಲೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ತನ್ನ ಪತಿಗೆ ವಾಟ್ಸಾಪ್ ಸಂದೇಶ ಕಳುಹಿಸಿ, “ನನ್ನನ್ನು ಕ್ಷಮಿಸಿ, ನಮ್ಮ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ” ಎಂದು ಬರೆದಿದ್ದಾರೆ.
ದುರಂತ ಬಯಲಾದದ್ದು ಹೇಗೆ? ಮಹಿಳೆಯ ಅಂತ್ಯಕ್ರಿಯೆಯ ಸಮಯದಲ್ಲಿ ಆಕೆಯ ಮೊಬೈಲ್‌ಗೆ ಸತತವಾಗಿ ಕರೆಗಳು ಬಂದಾಗ ಕುಟುಂಬಸ್ಥರಿಗೆ ಅನುಮಾನ ಬಂದಿದೆ. ನಂತರ ಪರಿಶೀಲಿಸಿದಾಗ ಸೈಬರ್ ವಂಚಕರು ಆಕೆಯನ್ನು ಹೇಗೆ ಬೆದರಿಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಇಂತಹ ‘ಡಿಜಿಟಲ್ ಅರೆಸ್ಟ್’ ವಂಚನೆಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಅಪರಿಚಿತ ಕರೆಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಡಿಜಿಟಲ್ ಅರೆಸ್ಟ್ ಎಂದರೇನು?
ಇದು ಸೈಬರ್ ವಂಚಕರ ಹೊಸ ತಂತ್ರವಾಗಿದ್ದು, ಸಂತ್ರಸ್ತರನ್ನು ಮನೆಯಿಂದ ಹೊರಬರದಂತೆ ಹೆದರಿಸಿ, ವಿಡಿಯೋ ಕರೆ ಮೂಲಕ ಪೊಲೀಸ್, ಸಿಬಿಐ ಅಥವಾ ಇಡಿ ಅಧಿಕಾರಿಗಳಂತೆ ನಟಿಸಿ, ಸುಳ್ಳು ಪ್ರಕರಣಗಳಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಾರೆ.
ಎಚ್ಚರಿಕೆ:
ಪೊಲೀಸರು ಅಥವಾ ಯಾವುದೇ ತನಿಖಾ ಸಂಸ್ಥೆಗಳು ವಿಡಿಯೋ ಕರೆಗಳ ಮೂಲಕ ಅಥವಾ ವಾಟ್ಸಾಪ್‌ನಲ್ಲಿ ಯಾರನ್ನೂ ‘ಡಿಜಿಟಲ್ ಅರೆಸ್ಟ್’ ಮಾಡುವುದಿಲ್ಲ. ಇಂತಹ ಕರೆಗಳು ಬಂದರೆ ತಕ್ಷಣವೇ 1930 ಗೆ ಕರೆ ಮಾಡಿ ಸೈಬರ್ ಕ್ರೈಮ್‌ಗೆ ದೂರು ನೀಡಿ.


-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
