crime
ಅನ್ಯ ಸಮುದಾಯದವನಿಂದ ತಂಗಿ ಗರ್ಭಿಣಿ ? ;ವಿಜಯನಗರದ ತ್ರಿವಳಿ ಕೊಲೆಯ ಕಾರಣ ಬಯಲು; ಕುಟುಂಬವನ್ನೇ ಸರ್ವನಾಶ ಮಾಡಿದ ಅಣ್ಣ
ವಿಜಯನಗರ: ವಿಜಯನಗರದಲ್ಲಿ ನಡೆದಿದ್ದ ಭಯಾನಕ ತ್ರಿವಳಿ ಕೊಲೆ ಪ್ರಕರಣದ ಅಸಲಿ ಹಾಗೂ ರೋಚಕ ಕಾರಣ ಇದೀಗ ಬಯಲಾಗಿದೆ. ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು (Bangalore) ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಾನ್ಯ ಸಮುದಾಯದವನೊಂದಿನ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ ಮಾಡಿದ್ದಾನೆ. ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಅಕ್ಷಯ್, ಇದು ಕೇವಲ ದ್ವೇಷದ ಕೊಲೆಯಲ್ಲ, ಕುಟುಂಬದ ಗೌರವ ಉಳಿಸಿಕೊಳ್ಳಲು ಮಾಡಿದ ಕೃತ್ಯ ಎಂದು ಹೇಳಿಕೊಂಡಿದ್ದಾನೆ.

ತಂಗಿಯ ಪ್ರಿಯತಮ ಅನ್ಯ ಸಮುದಾಯಕ್ಕೆ ಸೇರಿದವ
ತಂಗಿ ಅಮೃತ (18) ಮೂರು ತಿಂಗಳ ಗರ್ಭಿಣಿ ಎಂಬ ವಿಚಾರ ತಿಳಿದ ನಂತರ ಆತ ತೀವ್ರ ಕೋಪಗೊಂಡಿದ್ದ. ತಂಗಿಯ ಪ್ರಿಯತಮ ಅನ್ಯ ಸಮುದಾಯಕ್ಕೆ ಸೇರಿದವನಾಗಿರುವುದೂ ಅಕ್ಷಯ್ ಕೋಪಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಅಕ್ಷಯ್ ತಂಗಿಯ ಮೊಬೈಲ್ ಪರಿಶೀಲಿಸಿದ ವೇಳೆ ಪಿಯುಸಿ ಓದುತ್ತಿದ್ದ ಯುವಕನೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿರುವುದು ಗೊತ್ತಾಗಿದೆ. ಬಳಿಕ ಆ ಯುವಕನಿಗೆ ಕರೆ ಮಾಡಿದ ಅಕ್ಷಯ್, ಇಬ್ಬರ ನಡುವೆ ಪ್ರೇಮ ಸಂಬಂಧ ಇರುವುದನ್ನು ತಿಳಿದುಕೊಂಡಿದ್ದ. ಇದರಿಂದ ಕೋಪಗೊಂಡ ಅಕ್ಷಯ್ ತಂಗಿಗೆ ಹಲ್ಲೆ ಮಾಡಿ ಬೆದರಿಸಿದ್ದಾನೆ. ಬಳಿಕ ಅಮೃತ ‘ನಾನು ಪ್ರೀತಿ ಮಾಡುವುದಿಲ್ಲ’ ಎಂದು ಕ್ಷಮೆ ಕೇಳಿದ್ದರೂ, ಜನವರಿ 26ರಂದು ಅವಳು ಗರ್ಭಿಣಿಯಾಗಿದ್ದಾಳೆ ಎಂಬ ವಿಚಾರ ಹೊರಬಿದ್ದಿದೆ. ಈ ವಿಷಯವನ್ನು ತಾಯಿ ಅಕ್ಷಯ್‌ಗೆ ತಿಳಿಸಿದ್ದರಿಂದ ಆತ ಇನ್ನಷ್ಟು ಕೋಪಗೊಂಡಿದ್ದಾನೆ. ಗರ್ಭಪಾತ ಮಾಡಿಸೋಣ ಎಂದು ಅಕ್ಷಯ್ ಹೇಳಿದ್ದರೂ, ತಂದೆ-ತಾಯಿ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ತನ್ನ ಮಾತಿಗೆ ಬೆಲೆ ಇಲ್ಲವೆಂದು ಭಾವಿಸಿದ ಅಕ್ಷಯ್, ತಂಗಿಯನ್ನು ಕೊಲ್ಲುವ ನಿರ್ಧಾರಕ್ಕೆ ಬಂದಿದ್ದಾನೆ.

ಒಂದೊಂದಾಗಿ ನಡೆಯಿತು ಭೀಕರ ಹತ್ಯೆ
ಪೊಲೀಸ್ ತನಿಖೆ ವೇಳೆ ದೊರೆತಿರುವ ಮಾಹಿತಿ ಪ್ರಕಾರ, ಜನವರಿ 26ರಂದು ಮೊದಲು ಅಕ್ಷಯ್ ತನ್ನ ತಾಯಿಯನ್ನು ಕೊಂದಿದ್ದಾನೆ. ಕೊಲೆ ಬಳಿಕ ಸ್ನಾನ ಮಾಡಿ ರಕ್ತಸಿಕ್ತ ಬಟ್ಟೆಗಳನ್ನು ನಾಶಪಡಿಸಿದ್ದಾನೆ. ಸಂಜೆ ತಂಗಿ ಮನೆಗೆ ಬಂದಾಗ ಆಕೆಯನ್ನೂ ಹತ್ಯೆ ಮಾಡಿ, ತಾಯಿಯ ಮೃತದೇಹದ ಪಕ್ಕದಲ್ಲೇ ಮಲಗಿಸಿದ್ದಾನೆ. ಮತ್ತೆ ಸ್ನಾನ ಮಾಡಿ ಅದೇ ಬಟ್ಟೆ ಧರಿಸಿದ್ದಾನೆ. ರಾತ್ರಿ 10.30ರ ಸುಮಾರಿಗೆ ಕುಡಿದು ಮನೆಗೆ ಬಂದ ತಂದೆ ಸೋಫಾದ ಮೇಲೆ ಕೂತಿದ್ದಾಗ, ಅಕ್ಷಯ್ ಅವರ ಕುತ್ತಿಗೆ ಕತ್ತರಿಸಿ ಕೊಲೆ ಮಾಡಿದ್ದಾನೆ. ತಂದೆಯ ಮೃತದೇಹವನ್ನೂ ತಾಯಿ ಹಾಗೂ ತಂಗಿಯ ಪಕ್ಕ ಇಟ್ಟಿದ್ದಾನೆ. ನಂತರ ಆ ಕೊಠಡಿಗೆ ಬೀಗ ಹಾಕಿ, ಮತ್ತೆ ಸ್ನಾನ ಮಾಡಿ ಬೇರೆ ಬಟ್ಟೆ ಧರಿಸಿದ್ದಾನೆ.
ಮೂರು ಕೊಲೆಗಳ ಬಳಿಕ ತಾಯಿ ಹಾಗೂ ತಂಗಿಯ ಮೊಬೈಲ್‌ಗಳನ್ನು ತೆಗೆದುಕೊಂಡು ಬೆಂಗಳೂರಿಗೆ ಬಂದ ಅಕ್ಷಯ್ (ಆತನ ಮೊಬೈಲ್ ಮನೆಯಲ್ಲೇ ಬಿಟ್ಟುಬಂದಿದ್ದ), ಜಯದೇವ ಆಸ್ಪತ್ರೆ ಬಳಿ ಫೋಟೋ ತೆಗೆದು ತನ್ನ ಮೊಬೈಲ್ಗೆ ಕಳುಹಿಸಿದ್ದಾನೆ. ನಂತರ ಆ ಮೊಬೈಲ್‌ಗಳನ್ನು ಆಸ್ಪತ್ರೆ ಸಮೀಪದ ಡಸ್ಟ್‌ಬಿನ್‌ನಲ್ಲಿ ಎಸೆದಿದ್ದಾನೆ. ಈ ಸಂದರ್ಭದಲ್ಲಿ ಅಕ್ಷಯ್ ತನ್ನ ಮಾವ ವಸಂತನನ್ನು ಭೇಟಿ ಮಾಡಿ ಎಲ್ಲ ವಿಚಾರ ತಿಳಿಸಿದ್ದಾನೆ. ಶವಗಳನ್ನು ಹೂತು ‘ಮಿಸ್ಸಿಂಗ್’ ನಾಟಕ ಆಡೋಣ ಎಂಬ ಐಡಿಯಾ ಮಾವನೇ ಕೊಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರಂತೆ ಜನವರಿ 27ರ ರಾತ್ರಿ ಕೊಟ್ಟೂರಿಗೆ ವಾಪಸ್ ಆಗಿದ್ದ ಅಕ್ಷಯ್, ಟೈಲ್ಸ್ ಕಟರ್ ಹಾಗೂ ಡ್ರಿಲ್ಲಿಂಗ್ ಯಂತ್ರ ತರಿಸಿ, 5×5 ಅಳತೆಯ ಗುಂಡಿ ತೋಡಿ ಮೂವರ ಶವಗಳನ್ನು ಹೂತಿದ್ದಾನೆ.

ದೃಶ್ಯಂ ಸಿನಿಮಾ ನೋಡಿ ಅದರಂತೆ ಎಸ್ಕೇಪ್ ಆಗಲು ಪ್ಲಾನ್
ಮೂವರನ್ನು ಕೊಂದ ಅಕ್ಷಯ್ ರಾತ್ರಿಯಿಡೀ ತಪ್ಪಿಸಿಕೊಳ್ಳಲು ಪ್ಲಾನ್ ಮಾಡ್ತಾ ಟಿವಿ ನೋಡ್ತಿದ್ದ ಎನ್ನಲಾಗ್ತಿದೆ. ದೃಶ್ಯಂ ಸಿನಿಮಾ ನೋಡಿ ಅದರಂತೆ ಎಸ್ಕೇಪ್ ಆಗಲು ಪ್ಲಾನ್ ಮಾಡಿದ್ದನಂತೆ. ಪೊಲೀಸ್ರ ತನಿಖೆ ವೇಳೆ ಒಂದೊಂದೇ ವಿಚಾರಗಳು ಬಯಲಾಗಿದೆ. ಪೊಲೀಸರನ್ನೇ ಡೈವರ್ಟ್ ಮಾಡೋಕೆ ಮುಂದಾದ ಅಕ್ಷಯ್ ಅಪ್ಪ-ಅಮ್ಮ ಹಾಗೂ ತಂಗಿ ಮಿಸ್ಸಿಂಗ್ ಆಗಿದ್ದಾರೆ ಎಂದು ಕಂಪ್ಲೇಂಟ್ ಕೊಟ್ಟಿದ್ದಾನೆ. ಆದರೆ ಬೆಂಗಳೂರು ಪೊಲೀಸರಿಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ನಾಟಕ ಬಯಲಾಗಿದ್ದು, ಕೊನೆಗೆ ಅಕ್ಷಯ್ ಮತ್ತು ವಸಂತನನ್ನು ಬಂಧಿಸಲಾಗಿದೆ
ತಂಗಿ ಪ್ರಿಯಕರನನ್ನು ಕೊಂದನಾ?
ಯುವತಿಯ ಪ್ರಿಯಕರನನ್ನೂ ಕೊಲೆ ಮಾಡಿದ್ದಾನಾ..? ಎಂದು ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ವಿಜಯನಗರ ಜಿಲ್ಲೆ ಪೊಲೀಸರ ಜೊತೆ ಸೇರಿ ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಂಗಿಯ ಪ್ರಿಯಕರನನ್ನೂ ಕೊಲೆ ಮಾಡಿರಬಹುದು ಅನ್ನೋ ಅನುಮಾನ ವ್ಯಕ್ತವಾಗಿದೆ. ತನಿಖೆ ವೇಳೆ ಒಂದೊಂದೇ ಸ್ಫೋಟಕ ವಿಚಾರಗಳು ಬಯಲಾಗ್ತಿದೆ.
crime
ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ:
- ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
- ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಜಂಕ್ಷನ್ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
- ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:
ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ
crime
ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ
ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.
crime
ಸಕಲೇಶಪುರ ಲಾಡ್ಜ್ನಲ್ಲಿ ಕರಾಳ ರಾತ್ರಿ: ಬಾತ್ರೂಮ್ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ವಿವರಣೆ:
ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.
ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್ನಲ್ಲಿ ಮೂವರು ಒಂದೇ ರೂಮ್ನಲ್ಲಿ ತಂಗಿದ್ದರು.
ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್ನ ಬಾತ್ರೂಮ್ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).
ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾತ್ರೂಮ್ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್‌ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
