Connect with us

crime

ಐಟಿ ದಾಳಿ ವೇಳೆ ಸಿ.ಜೆ ರಾಯ್ ಆತ್ಮಹತ್ಯೆ; ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆದ ಕೇರಳ ಸಿಎಂ

Published

on

ತಿರುವನಂತಪುರ: ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಕರ್ನಾಟಕ ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದ್ದು, ಬೆಂಗಳೂರಿನ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿ ವಿತ್ತ ಸಚಿವೆ ನಿರ್ಮಲಾ​ ಸೀತಾರಾಮನ್​​ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದು ಒತ್ತಾಯಿಸಿದ್ದಾರೆ.

ಪಿಣರಾಯಿ ವಿಜಯನ್ ಪತ್ರದಲ್ಲಿ ಏನಿದೆ?
ಜನವರಿ 30, 2026ರಂದು ಆದಾಯ ತೆರಿಗೆ ಸಿಬ್ಬಂದಿ ನಡೆಸಿದ ಶೋಧ ಕಾರ್ಯಾಚರಣೆಯ ಮಧ್ಯೆ ಬೆಂಗಳೂರಿನಲ್ಲಿ ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ. ರಾಯ್ ಅಸಹಜ ಮರಣದ ಬಗ್ಗೆ ಕೇರಳದ ಜನರ ತೀವ್ರ ದುಃಖವನ್ನು ಹಂಚಿಕೊಳ್ಳಲು ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಘಟನೆಯ ಬಗ್ಗೆ ಕೇಳಿ ಉದ್ಯಮ ಸಮುದಾಯ ಮತ್ತು ನಾಗರಿಕ ಸಮಾಜ ಆಘಾತಕ್ಕೊಳಗಾಗಿದೆ. ಈ ದುರದೃಷ್ಟಕರ ಘಟನೆಯು ದೇಶದ ತೆರಿಗೆ ಆಡಳಿತದ ಮೇಲೆ ಕಪ್ಪು ಚುಕ್ಕೆಯಾಗಿದ್ದು, ಶೋಧ ಕಾರ್ಯಾಚರಣೆಯಲ್ಲಿ ಗಂಭೀರ ಲೋಪಗಳಿವೆ ಎಂದು ಕೇರಳ ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.

ಆದಾಯ ತೆರಿಗೆ ಇಲಾಖೆಯು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆಯೇ ವ್ಯಕ್ತಿಯೊಬ್ಬ, ಬಂದೂಕನ್ನು ಹಿಡಿದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎನ್ನುವುದು ಅಚ್ಚರಿಯ ಸಂಗತಿ. ಇಂತಹ ಕಾರ್ಯಾಚರಣೆಗಳು ನಡೆಯುತ್ತಿರುವಾಗ ಆ ಸ್ಥಳ ತೆರಿಗೆ ಅಧಿಕಾರಿಗಳ ನಿಯಂತ್ರಣದಲ್ಲಿರಬೇಕು ಮತ್ತು ಪರಿಶೀಲನೆ ಸುರಕ್ಷಿತವಾಗಿರಬೇಕು. ಯಾವುದೇ ಶೋಧ ಕಾರ್ಯಾಚರಣೆಯಲ್ಲಿ, ಸರ್ಚ್ ವಾರಂಟ್ ಹೊರಡಿಸಲಾದ ವ್ಯಕ್ತಿಯು ಅಧಿಕಾರಿಗಳು ಶೋಧ ನಡೆಸುತ್ತಿರುವ ಸ್ಥಳದಲ್ಲಿ ಹಾಜರಿರಬೇಕು. ಸ್ಥಾಪಿತ ಕಾರ್ಯವಿಧಾನಗಳ ಪ್ರಕಾರ ಕನಿಷ್ಠ ಇಬ್ಬರು ಸ್ವತಂತ್ರ ಸಾಕ್ಷಿಗಳು ಇರಬೇಕು. ಈ ಪ್ರಕರಣ ಸಂಬಂಧ ಮಾಧ್ಯಮಗಳ ವರದಿ ಪ್ರಕಾರ ಶೋಧ ನಡೆಯುತ್ತಿರುವಾಗಲೇ ರಾಯ್ ಮತ್ತೊಂದು ಕೋಣೆಗೆ ತೆರಳಿ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಇದು ಸತ್ಯವೇ ಆಗಿದ್ದರೆ, ಇದೊಂದು ಗಂಭೀರ ಲೋಪವಾಗಿದೆ.

ಮೃತ ವ್ಯಕ್ತಿಯ ಜೊತೆಗೆ ಅವರ ಕುಟುಂಬದತ್ತಲೂ ಗಮನಹರಿಸಬೇಕಿದ್ದು, ದಿವಂಗತ ಸಿ.ಜೆ.ರಾಯ್ ಅವರ ಸಹೋದರ ಅಧಿಕಾರಿಗಳಿಂದ ಕಿರುಕುಳದಂತಹ ಗಂಭೀರ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಸಹಜವಾಗಿಯೇ ಆದಾಯ ತೆರಿಗೆ ಇಲಾಖೆಯೂ ತನ್ನ ಹೇಳಿಕೆಯನ್ನು ನೀಡುತ್ತದೆ. ಈ ಘಟನೆಯ ಬಗ್ಗೆ ಸಂಪೂರ್ಣ ಸತ್ಯ ಹೊರಬರಬೇಕು. ಭವಿಷ್ಯದಲ್ಲಿ ಇಂತಹ ದುರಂತ ಘಟನೆಗಳು ಸಂಭವಿಸುವುದನ್ನು ತಡೆಯಬೇಕಾದರೆ ಈ ವಿಷಯದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಆದೇಶಿಸುವುದು ಅತ್ಯಗತ್ಯವಾಗಿದೆ. ಹೀಗಾಗಿ ಈ ವಿಷಯದಲ್ಲಿ ಭಾರತ ಸರ್ಕಾರದ ಅತ್ಯುತ್ತಮ ಆಯ್ಕೆಯೆಂದರೆ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವುದು. ಯಾವುದೇ ವಿಳಂಬವಿಲ್ಲದೆ ನ್ಯಾಯಾಂಗ ತನಿಖೆಗೆ ಆದೇಶಿಸುವಲ್ಲಿ ಮತ್ತು ಕಾಲಮಿತಿಯೊಳಗೆ ಸಮಗ್ರ ವರದಿಯನ್ನು ಪಡೆಯುವಲ್ಲಿ ಭಾರತ ಸರ್ಕಾರದ ಕಡೆಯಿಂದ ಯಾವುದೇ ಹಿಂಜರಿಕೆ ಇರಬಾರದು ಎಂದು ಪಿಣರಾಯಿ ವಿಜಯನ್​​ ಆಗ್ರಹಿಸಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!