Bantawala
ನರೇಗಾ ಬಚಾವೋ ಸಂಗ್ರಾಮ..ಕೇಂದ್ರ ಸರ್ಕಾರದ ಜನವಿರೋಧಿ ಕ್ರಮ ಖಂಡಿಸಿ ಕನ್ಯಾನದಲ್ಲಿ ಬ್ರಹತ್ ಪ್ರತಿಭಟನೆ..
ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಹಾಗೂ ಅದರ ಮೂಲ ಸ್ವರೂಪವನ್ನು ಬದಲಾಯಿಸಿರುವ ಕ್ರಮವನ್ನು ಖಂಡಿಸಿ, ಕನ್ಯಾನ ವಲಯ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ “ನರೇಗಾ ಬಚಾವೋ ಸಂಗ್ರಾಮ” ದಡಿ ಕನ್ಯಾನ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಇಂದು ಬ್ರಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ಘಾಟಿಸಿ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ಕನ್ಯಾನ ಮಾತನಾಡಿದರು.
ಮುಖ್ಯ ಭಾಷಣ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಎಂ.ಎಸ್. ಮಹಮ್ಮದ್, ನರೇಗಾ ಯೋಜನೆಯ ಮೂಲಕ ಗ್ರಾಮೀಣ ಜನರಿಗೆ ದೊರೆಯುತ್ತಿರುವ ಉದ್ಯೋಗ ಭದ್ರತೆ, ಜೀವನಾಧಾರ ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ವಿವರಿಸಿ, ಯೋಜನೆಯ ಹೆಸರಿನ ಬದಲಾವಣೆ ಮಾತ್ರವಲ್ಲ, ಅದರ ಆತ್ಮವನ್ನೇ ಕುಗ್ಗಿಸುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಕೆ.ಪಿ. ಅಬ್ದುಲ್ ರಹಿಮಾನ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಗಣೇಶ್ ಭಟ್ ನೀರ್ಪಾಜೆ ಅವರು ಉದ್ಯೋಗ ಖಾತರಿ ಯೋಜನೆಯ ಸಾಧಕ–ಬಾಧಕಗಳ ಕುರಿತು ಮಾತನಾಡಿ, ನರೇಗಾ ಯೋಜನೆ ಗ್ರಾಮೀಣ ಬಡವರ ಪಾಲಿಗೆ ಆಶಾಕಿರಣವಾಗಿದ್ದು, ಅದನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ಸಹಿಸಬಾರದೆಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇಖಾ ರಮೇಶ್, ಪಂಚಾಯತ್ ಸದಸ್ಯರು, ಬೂತ್ ಅಧ್ಯಕ್ಷರುಗಳು, ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆಯ ಅಂತ್ಯದಲ್ಲಿ, ನರೇಗಾ ಯೋಜನೆಗೆ ಬೆಂಬಲ ಸೂಚಿಸಿ ಹಾಗೂ ‘ವಿಕಸಿತ ಭಾರತ ಗ್ರಾಮೀಣ ಉದ್ಯೋಗ ಖಾತರಿ (ವಿ.ಬಿ. ಗ್ರಾಮ್ ಜಿ)’ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿ, ಗ್ರಾಮ ಪಂಚಾಯತ್ ಪಿಡಿಒ ಮೂಲಕ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜೊತೆಗೆ ಈ ವಿಷಯವನ್ನು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಯಿತು.
Bantawala
ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ
ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಡ ಕಾರ್ಮಿಕೆ ಗಾರ್ಬಲ್ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.
accident
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.

ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.
Bantawala
ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನಾ ಸಭೆ
ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನೆಯ ಸಭೆ ನಡೆಯಿತು.
ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು. ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ ಎಂ ಶೆಟ್ಟಿ ಅಳಕೆಮಜಲು, ಉಪಾಧ್ಯಕ್ಷರಾಗಿ ರೋಹಿಣಿ ರೈ ನೇರಳಕಟ್ಟೆ, ಹಾಗೂ ಚಂದ್ರಹಾಸ ರೈ ಮುಲ್ಕಾಜೆ ಮಾ ಡ, ಕಾರ್ಯದರ್ಶಿಯಾಗಿ ಗಣೇಶ್ ರೈ, ಕೋಶಾಧಿಕಾರಿಯಾಗಿ ಧನಂಜಯ ಶೆಟ್ಟಿ ಮುತ್ತೂರು, ಇವರನ್ನು ಟ್ರಸ್ಟಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರನ್ನು ಕುಟುಂಬಿಕರ ಮತ್ತು ಟ್ರಸ್ಟಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

