Connect with us

crime

ಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..

Published

on

ಪತಿ ಇಲ್ಲದ ಸಮಯಕ್ಕೆ ಬೆಡ್‌ ರೂಮ್‌ಗೆ ನುಗ್ಗಿ ಹಿಂದಿನಿಂದ ಗಟ್ಟಿಯಾಗಿ ತಬ್ಬಿಕೊಂಡ ಕಾಮುಕ , ಅತ್ಯಾಚಾರ ನಡೆಸಲು ಮಂಚದ ಮೇಲೆ ದೂಡಿದ, ವಿರೋಧಿಸಿದ್ದಕ್ಕೆ ಮುಖದ ಮೇಲೆ ಪರಚಿ ಮೂಗು ಕಚ್ಚಿದ, ಸಮಸ್ಯೆ ಗಂಭೀರವಾಗಬಹುದೆಂದು ಗಂಟಲಿನಲ್ಲಿ ಅದುಮಿ ಕೊಲೆ ಮಾಡಲು ಯತ್ನಿಸಿದ, ಕಣ್ಣಾರೆ ನೋಡಿ ಜೋರಾಗಿ ಕೂಗುತ್ತಿರುವ ಮಗುವಿನ ಬೊಬ್ಬೆಗೆ ಗಡಿಬಿಡಿಗೊಂಡ ಕಾಮುಕ ಮಾವ…. ರಕ್ತಸಿಕ್ತವಾದ ಪತ್ನಿ ತನ್ನ ಸಂಕಷ್ಟವನ್ನು ಆಗತಾನೆ ಬಂದ ಪತಿಯೊಂದಿಗೆ ಹೇಳಿಕೊಂಡಾಗ ತಂದೆಗೆ ಸಾಥ್‌ ನೀಡಿದ ಪತಿ, ತನ್ನ ಪತಿಯ ತಂದೆಯೇ ಮಾಡಿದ ಘೋರ ಕೃತ್ಯಕ್ಕೆ ನಲುಗಿ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ದಾಖಲಾದ ಮಹಿಳೆ- ಇದು ಜಿಲ್ಲೆಯ ಗಡಿ ಪ್ರದೇಶ ಸಂಪಾಜೆಯಲ್ಲಿ ಕಾಮುಕ ಮಾವನೊಬ್ಬ ನಡೆಸಿದ ಹೃದಯವಿದ್ರಾವಕ ಘಟನೆ. ‌ ಕಾಮುಕ ಮಾವ ಮತ್ತು ವ್ಯಬಿಚಾರಿ ಮಾವನ ಕೃತ್ಯಕ್ಕೆ ಸಾಥ್‌ ನೀಡಿದ ಪತಿಗೂ ಬಿದ್ದಿದೆ ಕೇಸ್…

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕೊಳ್ಳೆಮಾರು ನಿವಾಸಿ ಸಾಹಿತ್ಯ ರೈ ಅವರೇ ಅತ್ಯಾಚಾರ ಯತ್ನಕ್ಕೆ ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದವರಾಗಿದ್ದು, ಕಾಮುಕ ಮಾವ ( ಪತಿಯ ತಂದೆ ) ಸಂಪಾಜೆ ಗ್ರಾಮದ ಕಲ್ಲುಗುಂಡಿ ನಿವಾಸಿ ನಿತ್ಯಾನಂದ ರೈ ಮತ್ತು ಪತಿ ಯಶಸ್ವಿ ಎನ್‌ ರೈ ವಿರುದ್ಧ ಪೊಲೀಸ್‌ ದೂರು ದಾಖಲಾಗಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ ಫೆ.3ರಂದು ರಾತ್ರಿ ಘಟನೆ ನಡೆದಿದ್ದು, ತನ್ನ ಪತಿ ಆಸ್ಪತ್ರೆಗೆ ಸೇರಿಸಲು ನಿರಾಕರಿಸಿದ ಬೆನ್ನಲ್ಲೇ ರಾತ್ರಿ 11.30ಕ್ಕೆ ಕಾರಿನಲ್ಲಿ ಬಂದ ತಂದೆ ತಾಯಿ ರಕ್ತಸಿಕ್ತರಾಗಿ ಬಿದ್ದಿದ್ದ ಸಾಹಿತ್ಯರನ್ನು ತಕ್ಷಣ ಕರೆದುಕೊಂಡು ಹೋಗಿ ಸಂಪಾಜೆ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಬಂಟ್ವಾಳದ ಮಂಚಿಗೆ ಹೋಗುವ ದಾರಿ ಮದ್ಯೆ ಮನೆ ಸಮೀಪ ತಲುಪುತ್ತಲೇ ಉಸಿರಾಟಕ್ಕೆ ತೊಂದರೆಯಾಗಿದೆ. ತಕ್ಷಣ ನೇರವಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಹಿತ್ಯ ಅವರನ್ನು ಯಶಸ್ವಿಯವರಿಗೆ ದಿನಾಂಕ 21.04.2021 ರಂದು ವಿವಾಹ ಮಾಡಿಕೊಡಲಾಗಿತ್ತು. ಅವರಿಗೆ ಮೂರುವರೆ ವರ್ಷದ ಒಂದು ಗಂಡು ಮಗು ಇದೆ. ಪತಿ ಮನೆ ಸಂಪಾಜೆ ಕಲ್ಲುಗುಂಡಿಯಲ್ಲಿ ಸಾಹಿತ್ಯ, ಅವರ ಪತಿ ಯಶಸ್ವಿ, ಮೂರುವರೆ ವರ್ಷದ ಮಗು ಹಾಗೂ ಪತಿಯ ತಂದೆ ನಿತ್ಯಾನಂದ ಸೇರಿ ನಾಲ್ಕು ಜನ ಮಾತ್ರ ವಾಸಿಸುತ್ತಿದ್ದಾರೆ. ಸಾಹಿತ್ಯ ಅವರ ವಿವಾಹವಾಗಿ ಸುಮಾರು ಮೂರು ವರ್ಷ ತನಕ ಉತ್ತಮ ರೀತಿಯ ಸಂಬಂಧದಲ್ಲಿ ಇದ್ದಿದ್ದು, ಆದರೆ ಅನಂತರ ಕ್ರಮೇಣವಾಗಿ ಮಾವ ನಿತ್ಯಾನಂದನ ಕಾಮುಕ ದೃಷ್ಠಿ ಸಾಹಿತ್ಯರವರ ಮೇಲೆ ಬಿದ್ದಿತ್ತು. ಹಲವು ಸಲ ಸಾಹಿತ್ಯರವರ ಮೈ ಮೇಲೆ ಮಾವ ಕೈ ಮಾಡಲು ಬಂದಿದ್ದು ಅದನ್ನು ವಿರೋಧಿಸಿದಕ್ಕಾಗಿ ಮಾವನು ನನ್ನ ಪತಿಯಲ್ಲಿ ನೀನು ಅವಳಿಗೆ ವಿಚ್ಛೇದನ ಕೊಡು ನಿನಗೆ ಬೇರೆ ಚಂದದ ಹುಡುಗಿಯನ್ನು ನೋಡಿ ವಿವಾಹ ಮಾಡಿಕೊಡುವುದಾಗಿ ಮಾತ್ರವಲ್ಲದೆ ಕೆಲವೊಮ್ಮೆ ಸಾಹಿತ್ಯರವರ ಗಂಡನಲ್ಲಿ ಅಂದರೆ ಅವರ ಮಗನಲ್ಲಿ ನೀನು ಅವಳನ್ನು ಕೊಲೆ ಮಾಡು ಹೆದರಬೇಡ, ಜೈಲಲ್ಲಿ ಬೇಕಿದ್ದರೆ ನಾನು ಕುಳಿತುಕೊಳ್ಳುತ್ತೇನೆ ಎಂದು ಸಹ ಮಾವ ಪ್ರಚೋದಿಸುತ್ತಲೇ ಇದ್ದಾರೆ ಎಂದು ಭಯಭೀತರಾಗಿ ಸಾಹಿತ್ಯ ತನ್ನ ತಂದೆ ತಾಯಿಯವರಲ್ಲಿ ಹೇಳಿಕೊಂಡಿದ್ದರು. ಆ ಸಮಯ ಸಾಹಿತ್ಯರವರನ್ನು ಸಮಾಧಾನ ಪಡಿಸುತ್ತಿದ್ದ ತಂದೆ ತಾಯಿಯು ನೀನು ಹೇಗಾದರೂ ಮಾಡಿ ಸಹಿಸಿಕೊಂಡು ಗಂಡನ ಮನೆಯಲ್ಲಿ ಜೀವನ ನಡೆಸು, ನೀನು ಗಂಡನನ್ನು ಬಿಟ್ಟು ಬಂದರೆ ಅದು ಕುಟುಂಬಕ್ಕೆ ಅವಮಾನ ಎಂದು ಸಾಹಿತ್ಯರವರಿಗೆ ಬುದ್ಧಿ ಮಾತು ಹೇಳುತ್ತಿದ್ದರು. ಅದೇ ರೀತಿ ಸಾಹಿತ್ಯ ಮಾವನ ಕಿರುಕುಳ ಮತ್ತು ಅಸಭ್ಯ ವರ್ತನೆಗಳ ಬಗ್ಗೆ ತನ್ನ ಪತಿಯಲ್ಲಿ ಹೇಳಿಕೊಂಡಾಗ ನೀನು ತಂದೆಯ ಮಾತನ್ನು ಪಾಲಿಸಬೇಕೆಂದು ಪತ್ನಿಗೆ ಜೋರು ಮಾಡಿ ಆಕೆಯ ಬಾಯಿ ಮುಚ್ಚಿಸುತ್ತಿದ್ದರು.


ಪತಿ ಯಶಸ್ವಿ ಎನ್‌ ರೈ ಸಂಪಾಜೆಪೇಟೆಯಲ್ಲಿ ಆಟೋಮೊಬೈಲ್ ಶಾಪ್ ಅನ್ನು ಹೊಂದಿದ್ದು ಅವರು ಪ್ರತಿದಿನ ರಾತ್ರಿ ಮನೆಗೆ ಬರುವಾಗ ಸುಮಾರು 9:00 ಯಾಗುತ್ತಿತ್ತು. ಫೆ.3ರಂದು ರಾತ್ರಿ ಸಾಹಿತ್ಯರವರ ಗಂಡನು ಬರುವ ಕೆಲವು ಸಮಯಗಳ ಮುಂಚೆ ಸಾಹಿತ್ಯ ತನ್ನ ಕೋಣೆಯಲ್ಲಿ ಬಟ್ಟೆಗಳನ್ನು ಮಡಚುತ್ತಿರುವ ಸಮಯ ಮಾವ ನಿತ್ಯಾನಂದ ಸಾಹಿತ್ಯಳ ಕೋಣೆಗೆ ಅಕ್ರಮ ಪ್ರವೇಶ ಮಾಡಿ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾನೆ. ಮುಂದುವರಿದು ಮಂಚಕ್ಕೆ ದೂಡಿ ಆಕೆಯ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದು, ಆ ಸಮಯ ಸಾಹಿತ್ಯ ಅವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಪ್ರಯತ್ನಿಸಿದಾಗ ಕಾಮುಕ ಮಾವ ಆಕೆಯ ಗಂಟಲಲ್ಲಿ ಅಮುಕಿ ಹಿಡಿದಿದ್ದು ಪರಿಣಾಮವಾಗಿ ಗಂಟಲಿಗೆ ಮತ್ತು ಶರೀರದ ಭಾಗಗಳಿಗೆ ಪರಚಿತ ಗಾಯಗಳಾಗಿರುವುದಾಗಿದೆ ಮತ್ತು ಅದೇ ರೀತಿ ಮತ್ತೆ ಮತ್ತೆ ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಕಾಮುಕ ಆಕೆಯ ಮೂಗಿಗೆ ಕಚ್ಚಿ ತೀವ್ರ ಸ್ವರೂಪದ ಗಾಯ ಉಂಟು ಮಾಡಿದ್ದು ಮೂಗಿನ ಗಾಯದಿಂದ ತೀವ್ರ ರಕ್ತ ಸುರಿದು ರೂಮಿನಲ್ಲಿಯೇ ಬಿದ್ದಿದ್ದರು. ಆ ವೇಳೆಗೆ ಆಕೆಯ ಎಳೆಯ ಮಗು ಈ ಕೃತ್ಯವನ್ನು ನೋಡಿ ಜೋರಾಗಿ ಕೂಗಿದ್ದು ಆ ಸಮಯ ಮಾವ ಮಗುವನ್ನು ಸಮಾಧಾನ ಪಡಿಸುವ ಸಲುವಾಗಿ ಮೇಲೆದ್ದಾಗ ಆಕೆ ಅಲ್ಲಿಂದ ಹೇಗಾದರೂ ಮಾಡಿ ತಪ್ಪಿಸಿ ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಆ ಸಮಯ ಈ ದಿನ ನೀನು ಹೇಗೆ ತಪ್ಪಿಸಿಕೊಳ್ಳುತ್ತಿ ನೋಡುತ್ತೇನೆ ಮತ್ತು ನೀನು ಈ ಬಗ್ಗೆ ಹೊರಗೆ ಈ ವಿಷಯವನ್ನು ತಿಳಿಸಿದರೆ ನಿನ್ನನ್ನು ಕೊಲೆ ನಡೆಸದೆ ಬಿಡುವುದಿಲ್ಲ ಎಂದು ಮಾವ ಜೀವ ಬೆದರಿಕೆ ಹಾಕಿದಾಗ ನಿರ್ವಾಹವಿಲ್ಲದೆ ಮಗು ಮತ್ತು ಸಾಹಿತ್ಯ ಜೋರಾಗಿ ಕೂಗಿ ಬೊಬ್ಬೆ ಹಾಕಿದಾಗ ಮಗುವಿನತ್ತ ಹೋದ ಮಾವನ ಕಣ್ತಪ್ಪಿಸಿ ಸಾಹಿತ್ಯ ಮನೆಯಿಂದ ಹೊರಗೆ ಹೋಗಿದ್ದಾರೆ. ಆ ಸಮಯ ಗಂಡನು ಮನೆಗೆ ಬಂದಿದ್ದು, ಹೊರಗಡೆ ವಿಚಾರವನ್ನು ಪತಿಯಲ್ಲಿ ತಿಳಿಸಿದಾಗ ಅವರು ತಂದೆಯ ಪರವಾಗಿ ಮಾತನಾಡಿ ನೀನು ಮನೆಯಿಂದ ಹೊರಗೆ ಯಾಕೆ ಬಂದಿದ್ದು ಎಂದು ಹೇಳಿ ಯಾವುದನ್ನೂ ಕೇಳಿಸಿಕೊಳ್ಳದೆ ಸಾಹಿತ್ಯಾಳಿಗೆ ಹಿಗ್ಗಾ ಮುಗ್ಗಾ ಬೈದಿದ್ದಾನೆ. ನಿಮ್ಮ ತಂದೆಯಿಂದ ಹಲ್ಲೆಗೊಳಗಾಗಿ ತನ್ನ ಮೂಗಿನಿಂದ ರಕ್ತ ಸುರಿಯುತ್ತಿದ್ದು, ಚಿಕಿತ್ಸೆ ನೀಡಲು ಕರೆದುಕೊಂಡು ಹೋಗಿ ಎಂದು ಪತಿಯಲ್ಲಿ ಅತ್ತು ಗೋಗರೆದಾಗ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗದೆ ನೀನು ಇಲ್ಲೇ ಸತ್ತುಹೋಗು ಎಂದು ಪತ್ನಿಗೆ ಹೇಳಿದ್ದಾನೆ. ಅನ್ಯ ಮಾರ್ಗವಿಲ್ಲದೆ ಮನೆಗೆ ಫೋನು ಮಾಡಿ ಪೊಷಕರಿಗೆ ಸಾಹಿತ್ಯ ವಿಷಯವನ್ನು ತಿಳಿಸಿದ್ದಾರೆ.

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಹಿತ್ಯ ಪ್ರಕರಣದ ಬಗ್ಗೆ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ZERO FIR NO 01/2026 ಕಲಂ:85, 74, 115(2), 117(2), 351(2) ಜೊತೆಗೆ 3(5)BNS ನಂತೆ ಪ್ರಕರಣ ದಾಖಲಿಸಿಕೊಂಡು, ಘಟಣಾ ಸ್ಥಳದ ಆಧಾರದಲ್ಲಿ ಸುಳ್ಯ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿ ತನಿಖೆ ನಡೆಸಲಾಗುತ್ತಿದೆ.

Continue Reading
Advertisement

Belthangady

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ

Published

on

ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.

ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.

ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಮಾರ್ಚ್‌ 25ರಂದು ವೇಣೂರು ಪೊಲೀಸ್‌ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್‌ಪಿ ನೇತೃತ್ವದ ತಂಡವು ಮಾರ್ಚ್‌ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.

Continue Reading

accident

ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು

Published

on

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್‌ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:

ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

crime

ಪೊಲೀಸ್ ಭೇಟೆ: ದೇವಸ್ಥಾನದ ಕಳ್ಳ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Published

on

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಮತ್ತು ಉರ್ವಾ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಅಂತರರಾಜ್ಯ ಕಳ್ಳ ಹಾಗೂ ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಂಜಾರು ದೇವಸ್ಥಾನದ ಹುಂಡಿ ಕಳವು: ತಮಿಳುನಾಡು ಮೂಲದ ಆರೋಪಿ ಅರೆಸ್ಟ್
ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ಮೂರು ಕಾಣಿಕೆ ಹುಂಡಿಗಳಿಂದ ಸುಮಾರು ರೂ. 25,000/- ಹಣವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಬಜಪೆ ಪೊಲೀಸರು ಮಾರ್ಚ್ 31ರಂದು ಅಂತರರಾಜ್ಯ ಕಳ್ಳ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂಬಾತನನ್ನು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿಯಾದ ಈತ, ರೈಲಿನಲ್ಲಿ ಬಂದು ಕಳ್ಳತನ ನಡೆಸಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದ. ಈತ ಉಡುಪಿಯ ಬ್ರಹ್ಮಾವರ ಠಾಣೆಯ ಕಳವು ಪ್ರಕರಣ ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಬಜಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮುಂಬೈನಲ್ಲಿ ಸೆರೆ
ಮತ್ತೊಂದು ಪ್ರಕರಣದಲ್ಲಿ, ದರೋಡೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ (LPC) ವಾರಂಟ್ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಶೋಕ ನಗರದ ನಿವಾಸಿ ಸುಹಾನ್ @ ಸೋನು (33) ಬಂಧಿತ ಆರೋಪಿ.
ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಮಾರ್ಚ್ 29ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಬೀಡುಬಿಟ್ಟಿದ್ದ ಆರೋಪಿಯನ್ನು ಉರ್ವಾ ಎಎಸ್ಐ ಲಕ್ಷ್ಮಣ್ ಮತ್ತು ತಂಡ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಈತನ ಮೇಲೆ ಉರ್ವಾ ಮತ್ತು ಮಂಗಳೂರು ಉತ್ತರ ಠಾಣೆಗಳಲ್ಲಿ ದರೋಡೆ ಸಂಚು ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಪ್ರಕರಣಗಳು ದಾಖಲಾಗಿವೆ.

ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Trending

Copyright © 2025 Deevatige