crime
ಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
ಪತಿ ಇಲ್ಲದ ಸಮಯಕ್ಕೆ ಬೆಡ್ ರೂಮ್‌ಗೆ ನುಗ್ಗಿ ಹಿಂದಿನಿಂದ ಗಟ್ಟಿಯಾಗಿ ತಬ್ಬಿಕೊಂಡ ಕಾಮುಕ , ಅತ್ಯಾಚಾರ ನಡೆಸಲು ಮಂಚದ ಮೇಲೆ ದೂಡಿದ, ವಿರೋಧಿಸಿದ್ದಕ್ಕೆ ಮುಖದ ಮೇಲೆ ಪರಚಿ ಮೂಗು ಕಚ್ಚಿದ, ಸಮಸ್ಯೆ ಗಂಭೀರವಾಗಬಹುದೆಂದು ಗಂಟಲಿನಲ್ಲಿ ಅದುಮಿ ಕೊಲೆ ಮಾಡಲು ಯತ್ನಿಸಿದ, ಕಣ್ಣಾರೆ ನೋಡಿ ಜೋರಾಗಿ ಕೂಗುತ್ತಿರುವ ಮಗುವಿನ ಬೊಬ್ಬೆಗೆ ಗಡಿಬಿಡಿಗೊಂಡ ಕಾಮುಕ ಮಾವ…. ರಕ್ತಸಿಕ್ತವಾದ ಪತ್ನಿ ತನ್ನ ಸಂಕಷ್ಟವನ್ನು ಆಗತಾನೆ ಬಂದ ಪತಿಯೊಂದಿಗೆ ಹೇಳಿಕೊಂಡಾಗ ತಂದೆಗೆ ಸಾಥ್ ನೀಡಿದ ಪತಿ, ತನ್ನ ಪತಿಯ ತಂದೆಯೇ ಮಾಡಿದ ಘೋರ ಕೃತ್ಯಕ್ಕೆ ನಲುಗಿ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ದಾಖಲಾದ ಮಹಿಳೆ- ಇದು ಜಿಲ್ಲೆಯ ಗಡಿ ಪ್ರದೇಶ ಸಂಪಾಜೆಯಲ್ಲಿ ಕಾಮುಕ ಮಾವನೊಬ್ಬ ನಡೆಸಿದ ಹೃದಯವಿದ್ರಾವಕ ಘಟನೆ. ಕಾಮುಕ ಮಾವ ಮತ್ತು ವ್ಯಬಿಚಾರಿ ಮಾವನ ಕೃತ್ಯಕ್ಕೆ ಸಾಥ್ ನೀಡಿದ ಪತಿಗೂ ಬಿದ್ದಿದೆ ಕೇಸ್…

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕೊಳ್ಳೆಮಾರು ನಿವಾಸಿ ಸಾಹಿತ್ಯ ರೈ ಅವರೇ ಅತ್ಯಾಚಾರ ಯತ್ನಕ್ಕೆ ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದವರಾಗಿದ್ದು, ಕಾಮುಕ ಮಾವ ( ಪತಿಯ ತಂದೆ ) ಸಂಪಾಜೆ ಗ್ರಾಮದ ಕಲ್ಲುಗುಂಡಿ ನಿವಾಸಿ ನಿತ್ಯಾನಂದ ರೈ ಮತ್ತು ಪತಿ ಯಶಸ್ವಿ ಎನ್ ರೈ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ ಫೆ.3ರಂದು ರಾತ್ರಿ ಘಟನೆ ನಡೆದಿದ್ದು, ತನ್ನ ಪತಿ ಆಸ್ಪತ್ರೆಗೆ ಸೇರಿಸಲು ನಿರಾಕರಿಸಿದ ಬೆನ್ನಲ್ಲೇ ರಾತ್ರಿ 11.30ಕ್ಕೆ ಕಾರಿನಲ್ಲಿ ಬಂದ ತಂದೆ ತಾಯಿ ರಕ್ತಸಿಕ್ತರಾಗಿ ಬಿದ್ದಿದ್ದ ಸಾಹಿತ್ಯರನ್ನು ತಕ್ಷಣ ಕರೆದುಕೊಂಡು ಹೋಗಿ ಸಂಪಾಜೆ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಬಂಟ್ವಾಳದ ಮಂಚಿಗೆ ಹೋಗುವ ದಾರಿ ಮದ್ಯೆ ಮನೆ ಸಮೀಪ ತಲುಪುತ್ತಲೇ ಉಸಿರಾಟಕ್ಕೆ ತೊಂದರೆಯಾಗಿದೆ. ತಕ್ಷಣ ನೇರವಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಹಿತ್ಯ ಅವರನ್ನು ಯಶಸ್ವಿಯವರಿಗೆ ದಿನಾಂಕ 21.04.2021 ರಂದು ವಿವಾಹ ಮಾಡಿಕೊಡಲಾಗಿತ್ತು. ಅವರಿಗೆ ಮೂರುವರೆ ವರ್ಷದ ಒಂದು ಗಂಡು ಮಗು ಇದೆ. ಪತಿ ಮನೆ ಸಂಪಾಜೆ ಕಲ್ಲುಗುಂಡಿಯಲ್ಲಿ ಸಾಹಿತ್ಯ, ಅವರ ಪತಿ ಯಶಸ್ವಿ, ಮೂರುವರೆ ವರ್ಷದ ಮಗು ಹಾಗೂ ಪತಿಯ ತಂದೆ ನಿತ್ಯಾನಂದ ಸೇರಿ ನಾಲ್ಕು ಜನ ಮಾತ್ರ ವಾಸಿಸುತ್ತಿದ್ದಾರೆ. ಸಾಹಿತ್ಯ ಅವರ ವಿವಾಹವಾಗಿ ಸುಮಾರು ಮೂರು ವರ್ಷ ತನಕ ಉತ್ತಮ ರೀತಿಯ ಸಂಬಂಧದಲ್ಲಿ ಇದ್ದಿದ್ದು, ಆದರೆ ಅನಂತರ ಕ್ರಮೇಣವಾಗಿ ಮಾವ ನಿತ್ಯಾನಂದನ ಕಾಮುಕ ದೃಷ್ಠಿ ಸಾಹಿತ್ಯರವರ ಮೇಲೆ ಬಿದ್ದಿತ್ತು. ಹಲವು ಸಲ ಸಾಹಿತ್ಯರವರ ಮೈ ಮೇಲೆ ಮಾವ ಕೈ ಮಾಡಲು ಬಂದಿದ್ದು ಅದನ್ನು ವಿರೋಧಿಸಿದಕ್ಕಾಗಿ ಮಾವನು ನನ್ನ ಪತಿಯಲ್ಲಿ ನೀನು ಅವಳಿಗೆ ವಿಚ್ಛೇದನ ಕೊಡು ನಿನಗೆ ಬೇರೆ ಚಂದದ ಹುಡುಗಿಯನ್ನು ನೋಡಿ ವಿವಾಹ ಮಾಡಿಕೊಡುವುದಾಗಿ ಮಾತ್ರವಲ್ಲದೆ ಕೆಲವೊಮ್ಮೆ ಸಾಹಿತ್ಯರವರ ಗಂಡನಲ್ಲಿ ಅಂದರೆ ಅವರ ಮಗನಲ್ಲಿ ನೀನು ಅವಳನ್ನು ಕೊಲೆ ಮಾಡು ಹೆದರಬೇಡ, ಜೈಲಲ್ಲಿ ಬೇಕಿದ್ದರೆ ನಾನು ಕುಳಿತುಕೊಳ್ಳುತ್ತೇನೆ ಎಂದು ಸಹ ಮಾವ ಪ್ರಚೋದಿಸುತ್ತಲೇ ಇದ್ದಾರೆ ಎಂದು ಭಯಭೀತರಾಗಿ ಸಾಹಿತ್ಯ ತನ್ನ ತಂದೆ ತಾಯಿಯವರಲ್ಲಿ ಹೇಳಿಕೊಂಡಿದ್ದರು. ಆ ಸಮಯ ಸಾಹಿತ್ಯರವರನ್ನು ಸಮಾಧಾನ ಪಡಿಸುತ್ತಿದ್ದ ತಂದೆ ತಾಯಿಯು ನೀನು ಹೇಗಾದರೂ ಮಾಡಿ ಸಹಿಸಿಕೊಂಡು ಗಂಡನ ಮನೆಯಲ್ಲಿ ಜೀವನ ನಡೆಸು, ನೀನು ಗಂಡನನ್ನು ಬಿಟ್ಟು ಬಂದರೆ ಅದು ಕುಟುಂಬಕ್ಕೆ ಅವಮಾನ ಎಂದು ಸಾಹಿತ್ಯರವರಿಗೆ ಬುದ್ಧಿ ಮಾತು ಹೇಳುತ್ತಿದ್ದರು. ಅದೇ ರೀತಿ ಸಾಹಿತ್ಯ ಮಾವನ ಕಿರುಕುಳ ಮತ್ತು ಅಸಭ್ಯ ವರ್ತನೆಗಳ ಬಗ್ಗೆ ತನ್ನ ಪತಿಯಲ್ಲಿ ಹೇಳಿಕೊಂಡಾಗ ನೀನು ತಂದೆಯ ಮಾತನ್ನು ಪಾಲಿಸಬೇಕೆಂದು ಪತ್ನಿಗೆ ಜೋರು ಮಾಡಿ ಆಕೆಯ ಬಾಯಿ ಮುಚ್ಚಿಸುತ್ತಿದ್ದರು.

ಪತಿ ಯಶಸ್ವಿ ಎನ್ ರೈ ಸಂಪಾಜೆಪೇಟೆಯಲ್ಲಿ ಆಟೋಮೊಬೈಲ್ ಶಾಪ್ ಅನ್ನು ಹೊಂದಿದ್ದು ಅವರು ಪ್ರತಿದಿನ ರಾತ್ರಿ ಮನೆಗೆ ಬರುವಾಗ ಸುಮಾರು 9:00 ಯಾಗುತ್ತಿತ್ತು. ಫೆ.3ರಂದು ರಾತ್ರಿ ಸಾಹಿತ್ಯರವರ ಗಂಡನು ಬರುವ ಕೆಲವು ಸಮಯಗಳ ಮುಂಚೆ ಸಾಹಿತ್ಯ ತನ್ನ ಕೋಣೆಯಲ್ಲಿ ಬಟ್ಟೆಗಳನ್ನು ಮಡಚುತ್ತಿರುವ ಸಮಯ ಮಾವ ನಿತ್ಯಾನಂದ ಸಾಹಿತ್ಯಳ ಕೋಣೆಗೆ ಅಕ್ರಮ ಪ್ರವೇಶ ಮಾಡಿ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾನೆ. ಮುಂದುವರಿದು ಮಂಚಕ್ಕೆ ದೂಡಿ ಆಕೆಯ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದು, ಆ ಸಮಯ ಸಾಹಿತ್ಯ ಅವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಪ್ರಯತ್ನಿಸಿದಾಗ ಕಾಮುಕ ಮಾವ ಆಕೆಯ ಗಂಟಲಲ್ಲಿ ಅಮುಕಿ ಹಿಡಿದಿದ್ದು ಪರಿಣಾಮವಾಗಿ ಗಂಟಲಿಗೆ ಮತ್ತು ಶರೀರದ ಭಾಗಗಳಿಗೆ ಪರಚಿತ ಗಾಯಗಳಾಗಿರುವುದಾಗಿದೆ ಮತ್ತು ಅದೇ ರೀತಿ ಮತ್ತೆ ಮತ್ತೆ ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಕಾಮುಕ ಆಕೆಯ ಮೂಗಿಗೆ ಕಚ್ಚಿ ತೀವ್ರ ಸ್ವರೂಪದ ಗಾಯ ಉಂಟು ಮಾಡಿದ್ದು ಮೂಗಿನ ಗಾಯದಿಂದ ತೀವ್ರ ರಕ್ತ ಸುರಿದು ರೂಮಿನಲ್ಲಿಯೇ ಬಿದ್ದಿದ್ದರು. ಆ ವೇಳೆಗೆ ಆಕೆಯ ಎಳೆಯ ಮಗು ಈ ಕೃತ್ಯವನ್ನು ನೋಡಿ ಜೋರಾಗಿ ಕೂಗಿದ್ದು ಆ ಸಮಯ ಮಾವ ಮಗುವನ್ನು ಸಮಾಧಾನ ಪಡಿಸುವ ಸಲುವಾಗಿ ಮೇಲೆದ್ದಾಗ ಆಕೆ ಅಲ್ಲಿಂದ ಹೇಗಾದರೂ ಮಾಡಿ ತಪ್ಪಿಸಿ ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಆ ಸಮಯ ಈ ದಿನ ನೀನು ಹೇಗೆ ತಪ್ಪಿಸಿಕೊಳ್ಳುತ್ತಿ ನೋಡುತ್ತೇನೆ ಮತ್ತು ನೀನು ಈ ಬಗ್ಗೆ ಹೊರಗೆ ಈ ವಿಷಯವನ್ನು ತಿಳಿಸಿದರೆ ನಿನ್ನನ್ನು ಕೊಲೆ ನಡೆಸದೆ ಬಿಡುವುದಿಲ್ಲ ಎಂದು ಮಾವ ಜೀವ ಬೆದರಿಕೆ ಹಾಕಿದಾಗ ನಿರ್ವಾಹವಿಲ್ಲದೆ ಮಗು ಮತ್ತು ಸಾಹಿತ್ಯ ಜೋರಾಗಿ ಕೂಗಿ ಬೊಬ್ಬೆ ಹಾಕಿದಾಗ ಮಗುವಿನತ್ತ ಹೋದ ಮಾವನ ಕಣ್ತಪ್ಪಿಸಿ ಸಾಹಿತ್ಯ ಮನೆಯಿಂದ ಹೊರಗೆ ಹೋಗಿದ್ದಾರೆ. ಆ ಸಮಯ ಗಂಡನು ಮನೆಗೆ ಬಂದಿದ್ದು, ಹೊರಗಡೆ ವಿಚಾರವನ್ನು ಪತಿಯಲ್ಲಿ ತಿಳಿಸಿದಾಗ ಅವರು ತಂದೆಯ ಪರವಾಗಿ ಮಾತನಾಡಿ ನೀನು ಮನೆಯಿಂದ ಹೊರಗೆ ಯಾಕೆ ಬಂದಿದ್ದು ಎಂದು ಹೇಳಿ ಯಾವುದನ್ನೂ ಕೇಳಿಸಿಕೊಳ್ಳದೆ ಸಾಹಿತ್ಯಾಳಿಗೆ ಹಿಗ್ಗಾ ಮುಗ್ಗಾ ಬೈದಿದ್ದಾನೆ. ನಿಮ್ಮ ತಂದೆಯಿಂದ ಹಲ್ಲೆಗೊಳಗಾಗಿ ತನ್ನ ಮೂಗಿನಿಂದ ರಕ್ತ ಸುರಿಯುತ್ತಿದ್ದು, ಚಿಕಿತ್ಸೆ ನೀಡಲು ಕರೆದುಕೊಂಡು ಹೋಗಿ ಎಂದು ಪತಿಯಲ್ಲಿ ಅತ್ತು ಗೋಗರೆದಾಗ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗದೆ ನೀನು ಇಲ್ಲೇ ಸತ್ತುಹೋಗು ಎಂದು ಪತ್ನಿಗೆ ಹೇಳಿದ್ದಾನೆ. ಅನ್ಯ ಮಾರ್ಗವಿಲ್ಲದೆ ಮನೆಗೆ ಫೋನು ಮಾಡಿ ಪೊಷಕರಿಗೆ ಸಾಹಿತ್ಯ ವಿಷಯವನ್ನು ತಿಳಿಸಿದ್ದಾರೆ.
ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಹಿತ್ಯ ಪ್ರಕರಣದ ಬಗ್ಗೆ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ZERO FIR NO 01/2026 ಕಲಂ:85, 74, 115(2), 117(2), 351(2) ಜೊತೆಗೆ 3(5)BNS ನಂತೆ ಪ್ರಕರಣ ದಾಖಲಿಸಿಕೊಂಡು, ಘಟಣಾ ಸ್ಥಳದ ಆಧಾರದಲ್ಲಿ ಸುಳ್ಯ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿ ತನಿಖೆ ನಡೆಸಲಾಗುತ್ತಿದೆ.
Bantawala
ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲು!
ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.
ಮಹಿಳೆಯ ಧೈರ್ಯ, ವೈರಲ್ ವೀಡಿಯೋ:
ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.
ಬಂಟ್ವಾಳ ಠಾಣೆಯಲ್ಲಿ ದೂರು:
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
arrest
7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ
ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.
30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ
ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್‌ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.
ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
- ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
- ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
- ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
- ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
- ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 143, 147, 148, 323, 427, 504, 506, 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
- ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
- ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 143, 147, 148, 448, 504, 324, 323, 506, 427 R/w 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
- ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
- ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
- ಕಲಂಗಳು: 379 IPC (ಕಳವು).
- ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
- ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.
ಪೊಲೀಸರ ಸಕಾಲಿಕ ಕಾರ್ಯಾಚರಣೆ
ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

crime
ಮಣಿಪಾಲ: ಬಾರ್, ಪಬ್‌ಗಳ ಮೇಲೆ ಪೊಲೀಸರ ಮಿಂಚಿನ ದಾಳಿ; ಮದ್ಯ ಸೇವಿಸುತ್ತಿದ್ದ 64 ಯುವಕರು, 23 ಯುವತಿಯರು
ಮಣಿಪಾಲ: 21 ವರ್ಷದೊಳಗಿನವರಿಗೆ ಅಕ್ರಮವಾಗಿ ಮದ್ಯ ಹಾಗೂ ಹುಕ್ಕಾ ಪೂರೈಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪ್ರಮುಖ ಬಾರ್ ಮತ್ತು ಪಬ್‌ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಮದ್ಯ ಸೇವನೆಯಲ್ಲಿ ತೊಡಗಿದ್ದ 64 ಯುವಕರು, 23 ಯುವತಿಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು 87 ಮಂದಿ ಸಿಕ್ಕಿಬಿದ್ದಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ, ಮಣಿಪಾಲ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಈ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆಗಾಗಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನೊಳಗೊಂಡ 6 ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು.
ದಾಳಿಗೊಳಗಾದ ಬಾರ್ ಮತ್ತು ಪಬ್‌ಗಳು:
ಪೊಲೀಸರು ಮಣಿಪಾಲ ವ್ಯಾಪ್ತಿಯ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು:
- ಎಕ್ಸ್ಟಸಿ 7ನೇ ಹೆವೆನ್ ಪಬ್, ಮಣಿಪಾಲ್
- ಸಾಯಿ ಸಾಗರ್ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
- ಡೌನ್ ದಿ ರೋಡ್ ಬಾರ್ ಮತ್ತು ರೆಸ್ಟೋರೆಂಟ್, ಮಣಿಪಾಲ್
- ಡೆಕ್ಸ್ಟರ್ ಬಾರ್ ಮತ್ತು ರೆಸ್ಟೋರೆಂಟ್
- ಡೀ ಟೀ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
- ಜನನಿ ಬಾರ್ ಮತ್ತು ರೆಸ್ಟೋರೆಂಟ್ (ಎಡ್ಜ್ ಬಾರ್ ಮತ್ತು ರೆಸ್ಟೋರೆಂಟ್), ಈಶ್ವರ್ ನಗರ
ಕಾನೂನು ಉಲ್ಲಂಘನೆ ಮತ್ತು ಪ್ರಕರಣ ದಾಖಲು:
ಕರ್ನಾಟಕ ಅಬಕಾರಿ ಪರವಾನಗಿ ನಿಯಮಗಳ 10(1)(ಇ), ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 36(1)(ಬಿ) ಹಾಗೂ ತಂಬಾಕು ಉತ್ಪನ್ನಗಳ ನಿಯಂತ್ರಣ (COTPA) ಕಾಯ್ದೆಯನ್ನು ಉಲ್ಲಂಘಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕ-ಯುವತಿಯರಿಗೆ ಮದ್ಯ ಹಾಗೂ ಹುಕ್ಕಾ ಮಾರಾಟ ಮಾಡುತ್ತಿದ್ದದ್ದು ತಪಾಸಣೆ ವೇಳೆ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸಿದ ಆಯಾ ಪಬ್ ಮತ್ತು ಬಾರ್‌ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ (ಮ್ಯಾನೇಜರ್) ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ 6 ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.
ಪೊಲೀಸರ ಎಚ್ಚರಿಕೆ:
“21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ, ಮದ್ಯ/ಹುಕ್ಕಾ ಪೂರೈಸುವ ಅಥವಾ ಅಬಕಾರಿ ಕಾಯ್ದೆ ಹಾಗೂ COTPA ಕಾಯ್ದೆಗಳನ್ನು ಉಲ್ಲಂಘಿಸುವ ಬಾರ್ ಮತ್ತು ರೆಸ್ಟೋರೆಂಟ್‌ಗಳ ವಿರುದ್ಧ ಮುಂಬರುವ ದಿನಗಳಲ್ಲೂ ಇಂತಹುದೇ ಕಠಿಣ ಕಾನೂನು ಕ್ರಮಗಳು ಮುಂದುವರಿಯಲಿವೆ.” ಎಂದು ಪೊಲೀಸರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್‌ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
-
Bantawala7 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
