Belthangady
ಒಡಿಯೂರು ಶ್ರೀ ವಿವಿದೋದ್ಧೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಗೆ ಟೋಪಿ ಹಾಕಲು ಬಂದ ಖದೀಮರು ಅಂದರ್.. ಜಿಲ್ಲೆಯಾದ್ಯಂತ ಎಗ್ಗಿಲ್ಲದೇ ನಡೆಯುತ್ತಿದೆ ನಕಲಿ ಚಿನ್ನದ ಜಾಲ..
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/02/odiyoor-1-1000x600.jpg&description=ಒಡಿಯೂರು ಶ್ರೀ ವಿವಿದೋದ್ಧೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಗೆ ಟೋಪಿ ಹಾಕಲು ಬಂದ ಖದೀಮರು ಅಂದರ್.. ಜಿಲ್ಲೆಯಾದ್ಯಂತ ಎಗ್ಗಿಲ್ಲದೇ ನಡೆಯುತ್ತಿದೆ ನಕಲಿ ಚಿನ್ನದ ಜಾಲ..', 'pinterestShare', 'width=750,height=350'); return false;" title="Pin This Post">
ಜಿಲ್ಲೆಯಾದ್ಯಂತ ಸಹಕಾರಿ ಸಂಘದ ಶಾಖೆಗಳಿಗೆ ತೆರಳಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷ ಲಕ್ಷ ಸಾಲ ಪಡೆದು ಮಂಡಾಮೋಚುವ ಪ್ರಕರಣಗಳು ಆಗಾಗ ವರದಿಯಾಗುತ್ತಲೇ ಇದೆ.
ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ಮಡಂತ್ಯಾರು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ(ನಿ)ದ ಶಾಖೆಗೆ ಬಂದ ಇಬ್ಬರು ವ್ಯಕ್ತಿಗಳು
ಬಂದು ಮೂರು ಚಿನ್ನದ ಸರಗಳನ್ನು ನೀಡಿ ಅಡವು ಸಾಲ ಪಡೆಯಲು ಮುಂದಾಗಿದ್ದಾರೆ.

ಸಂಘದ ಸಿಬ್ಬಂದಿಗಳು ಚಿನ್ನದ ಅಸಲಿಯತ್ತು ತಿಳಿಯಲು ಪರಿವೀಕ್ಷಕರಲ್ಲಿ ನೀಡಿದಾಗ ಅದೆಲ್ಲವೂ ನಕಲಿ ಆಭರಣ ಎಂಬುದು ಸ್ಪಷ್ಟವಾಗಿದೆ.
ಈ ಬಗ್ಗೆ ತಕ್ಷಣವೇ ಎಚ್ಚೆತ್ತ ಸಂಘದ ವ್ಯವಸ್ಥಾಪಕರು ಪುಂಜಾಲಕಟ್ಟೆ ಠಾಣಾ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಬಂಟ್ವಾಳ ತಾಲೂಕು ಕುಳಿ ಗ್ರಾಮದ ಅಬ್ದುಲ್ ನಝೀರ್(43) ಮತ್ತು ಬೋಳಂತೂರು ಗ್ರಾಮದ ಪ್ರಮೋದ್ ಪಿ.(50) ಎಂಬಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಕಲಿ ಚಿನ್ನಾಭರಣ ಎಂಬುದನ್ನು ಸ್ವತಃ ಆರೋಪಿಗಳೇ ಒಪ್ಪಿಕೊಂಡಿದ್ದಾರೆ. ಸದ್ರಿ ದೂರಿಗೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಠಾಣೆಯಲ್ಲಿ
ಅಕ್ರ : 11/2026 ಕಲಂ: 318(4), 62 ಜೊತೆಗೆ 3(5)BNS 2923ಯಂತೆ ಪ್ರಕರಣ ದಾಖಲಾಗಿದ್ದು ಬಂಧಿತ ಆರೋಪಿಗಳಿಬ್ಬರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Belthangady
ಬೆಳ್ತಂಗಡಿ: 50 ಲಕ್ಷದ ರಸ್ತೆ 9 ವರ್ಷಕ್ಕೆ ಗುಂಡಿಮಯ – ಕೈಕಂಬ–ಫಾರೆಸ್ಟ್ ಬಂಗಲೆ ರಸ್ತೆ ದುಸ್ಥಿತಿ
ಬೆಳ್ತಂಗಡಿ: 2017ರಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಡಾಮರೀಕರಣಗೊಂಡ ನಾವೂರು ಗ್ರಾಮದ ಕೈಕಂಬ ಜಂಕ್ಷನ್‌ನಿಂದ ಫಾರೆಸ್ಟ್ ಬಂಗಲೆಗೆ ಸಂಪರ್ಕಿಸುವ 1.40 ಕಿ.ಮೀ ರಸ್ತೆ ಇದೀಗ ಗುಂಡಿಯಿಂದ ಗುಂಡಿಯಾಗಿ ಸಂಪೂರ್ಣ ಹದಗೆಟ್ಟಿದೆ. “ಇಲ್ಲಿ ರಸ್ತೆಯಲ್ಲಿ ಗುಂಡಿ ಇದೆಯೋ, ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಅರ್ಥವಾಗದ ಸ್ಥಿತಿ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ, ಬೆಳ್ತಂಗಡಿ ಮೂಲಕ 2017ರಲ್ಲಿ ನಿರ್ಮಾಣವಾದ ಈ 1 ಕಿ.ಮೀ ರಸ್ತೆ ಇದೀಗ ಇಂಚಿಂಚಿಗೂ ಗುಂಡಿಯಾಗಿದೆ. ಬೇಸಿಗೆಯಲ್ಲಿ ಗುಂಡಿ ಮುಚ್ಚಲು ಮಣ್ಣು ಹಾಕಲಾಗಿತ್ತು. ಆದರೆ ಮಳೆ ಆರಂಭವಾಗುತ್ತಿದ್ದಂತೆ ರಸ್ತೆ ಪೂರ್ತಿ ಕೆಸರುಮಯವಾಗಿ ಕಂಬಳ ಗದ್ದೆಯನ್ನು ನಾಚಿಸುವಂತಾಗಿದೆ.
ಜನರ ಸಂಕಷ್ಟ:
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿ ಸೇರಿದಂತೆ ಫಾರೆಸ್ಟ್ ಬಂಗಲೆ, ಕಣಾಲು, ಕಾರಿಂಜ, ಕುಂಡಡ್ಕ, ಸುಳ್ಳೊಡಿ ಮುಂತಾದ ಪ್ರದೇಶಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖ ರಸ್ತೆ ಇದಾಗಿದೆ. ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ, ನೂರಾರು ಜನರು ಕೆಲಸಕ್ಕೆ ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಅಂಗನವಾಡಿ, ಕಿ.ಪ್ರಾ ಶಾಲೆ, ಹಾಲು ಉತ್ಪಾದಕರ ಸಂಘವೂ ಇದೆ.

ಗುಂಡಿ ತಪ್ಪಿಸುವ ಭರದಲ್ಲಿ ದ್ವಿಚಕ್ರ ವಾಹನ, ಆಟೋ, ಖಾಸಗಿ ವಾಹನಗಳು ಅಡ್ಡಾದಿಡ್ಡಿ ಚಲಿಸುತ್ತಿದ್ದು, ಅಪಘಾತಗಳೂ ಸಂಭವಿಸಿವೆ. ಆದರೂ ರಸ್ತೆ ದುರಸ್ತಿ ಆಗದಿರುವುದು ದುರಂತ ಎಂದು ಸ್ಥಳೀಯರು ಬೇಸರಿಸಿದ್ದಾರೆ.
ಒತ್ತಾಯ:
“ಕೈಕಂಬದಿಂದ ಮೂರು ಮಾರ್ಗದವರೆಗಿನ ರಸ್ತೆ ಜನ, ವಾಹನ ಸಂಚರಿಸಲು ಅಯೋಗ್ಯವಾಗಿದೆ. ದಿತ್ಯೋಪಯೋಗಿ ರಸ್ತೆಯನ್ನು ತಕ್ಷಣ ದುರಸ್ತಿ ಮಾಡಬೇಕು. ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆಯೂ ಅಗತ್ಯ” ಎಂದು ಆಟೋ ರಿಕ್ಷಾ ಚಾಲಕ-ಮಾಲೀಕರಾದ ದಿನೇಶ್ ಗೌಡ ಆಗ್ರಹಿಸಿದ್ದಾರೆ.



accident
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
arrest
ಬೆಳ್ತಂಗಡಿ: ಸರಣಿ ಕಳ್ಳತನದ ಅಂತರಾಜ್ಯ ಗ್ಯಾಂಗ್ ಪತ್ತೆ; ಇಬ್ಬರ ಬಂಧನ, ₹23.67 ಲಕ್ಷ ಮೌಲ್ಯದ ಸೊತ್ತು ವಶ
ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂತರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು ರೂ. 23,67,000/- ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ವಿವರ:
ಹಮೀದ್ (42): ಕಾಸರಗೋಡು ನಿವಾಸಿ (ಮೂಲತಃ ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕರಾಯಿ ನಿವಾಸಿ). ಈತನನ್ನು ಮೇ 15, 2026 ರಂದು ಬಂಧಿಸಲಾಗಿತ್ತು.
ಜಾಬೀರ್ @ ಜಾಬೀ (38): ಕಾಸರಗೋಡು ನಿವಾಸಿ (ಮೂಲತಃ ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ). ಹಮೀದ್ ನೀಡಿದ ಮಾಹಿತಿ ಮೇರೆಗೆ ಈತನನ್ನು ಜೂನ್ 07, 2026 ರಂದು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ ಮತ್ತು ತನಿಖೆ:
ಕಳೆದ ಏಪ್ರಿಲ್ 5, 2026 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಚಿನ್ನಾಭರಣ ಮತ್ತು ನಗದು ಕಳ್ಳತನವಾಗಿತ್ತು. ಈ ಕುರಿತು ದಾಖಲಾಗಿದ್ದ ಅ.ಕ್ರ: 38/2026 ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸ್ ತಂಡ ಮೊದಲು ಹಮೀದ್‌ನನ್ನು ತಡೆದು ವಿಚಾರಣೆ ನಡೆಸಿದಾಗ ಕಳ್ಳತನದ ಜಾಲ ಪತ್ತೆಯಾಗಿದೆ.
ವಶಪಡಿಸಿಕೊಂಡ ಸೊತ್ತುಗಳು: ಆರೋಪಿಗಳಿಂದ ಈ ಕೆಳಗಿನ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ:
ಪುಂಜಾಲಕಟ್ಟೆ ಠಾಣಾ ಪ್ರಕರಣಕ್ಕೆ ಸಂಬಂಧಿಸಿ: 68.690 ಗ್ರಾಂ ಚಿನ್ನಾಭರಣ ಮತ್ತು ರೂ. 2,00,000/- ನಗದು.
ಉಪ್ಪಿನಂಗಡಿ ಠಾಣಾ ಪ್ರಕರಣಕ್ಕೆ (ಅ.ಕ್ರ: 28/2025) ಸಂಬಂಧಿಸಿ: 21.810 ಗ್ರಾಂ ಚಿನ್ನಾಭರಣ.
ಇತರ: ಕೃತ್ಯಕ್ಕೆ ಬಳಸಿದ ಕಾರು. (ವಶಪಡಿಸಿಕೊಂಡ ಒಟ್ಟು ಸೊತ್ತಿನ ಮೌಲ್ಯ ರೂ. 23,67,000/-)
5 ಕಳ್ಳತನ ಪ್ರಕರಣಗಳ ಸುಳಿವು:
ಪೊಲೀಸ್ ತನಿಖೆಯ ವೇಳೆ ಈ ಆರೋಪಿಗಳು ಕರಾವಳಿಯ ವಿವಿಧೆಡೆ ಸರಣಿ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಕುಂಬಳೆ, ಉಪ್ಪಿನಂಗಡಿ, ಬಂಟ್ವಾಳ ನಗರ ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 5 ಕಳ್ಳತನ ಪ್ರಕರಣಗಳಲ್ಲಿ ಈ ಇಬ್ಬರು ಭಾಗಿಯಾಗಿರುವುದು ದೃಢಪಟ್ಟಿದೆ. ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡ:
ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಉಪವಿಭಾಗಾಧೀಕ್ಷಕಿ (DySP) ಶ್ರೀಮತಿ ರೋಹಿಸಿ ಸಿ.ಕೆ. ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.
ತಂಡದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್, ಉಪ್ಪಿನಂಗಡಿ ಗ್ರಾಮಾಂತರ ಸಿ.ಪಿ.ಐ ನಾಗರಾಜ್ ಹೆಚ್.ಇ, ಪುಂಜಾಲಕಟ್ಟೆ ಪಿ.ಎಸ್.ಐ ರಾಜೇಶ್ ಕೆ.ವಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಅವರು ತಾಂತ್ರಿಕ ನೆರವು ನೀಡಿದ್ದಾರೆ. ಪೊಲೀಸರ ಈ ಸಮಯಪ್ರಜ್ಞೆ ಮತ್ತು ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
