Educational
SSLC ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!- ಸರಕಾರದ ಸುತ್ತೋಲೆ
ಬೆಂಗಳೂರು: ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ ಸ್ವಿಚ್ ಆಫ್ ಮಾಡುವಂತೆ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ.
ಎಸ್ಎಸ್ಎಲ್ಸಿ (SSLC) ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು ಮಹತ್ವದ ಉಪಕ್ರಮ ಕೈಗೊಂಡಿದೆ. ಇದಕ್ಕಾಗಿ ಮನೆಗೆ ತೆರಳಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ ಅಭಿಯಾನದಡಿ, ಶಿಕ್ಷಕರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಈ ಅವಧಿಯಲ್ಲಿ ಮಕ್ಕಳು ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡಲು ಪ್ರೇರೇಪಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಗಳಿಸಲು ಇದು ಸಹಾಯಕವಾಗಲಿದೆ ಎಂದು ಇಲಾಖೆ ತಿಳಿಸಿದೆ. ಸರ್ಕಾರದ ಈ ಆದೇಶವನ್ನು ಕೆಲವು ವಿದ್ಯಾರ್ಥಿಗಳು ಸ್ವಾಗತಿಸಿದ್ದು, ಇದು ಓದಿಗೆ ಸಹಾಯಕವಾಗಲಿದೆ ಎಂದಿದ್ದಾರೆ. ಆದರೆ, ಪೋಷಕರು ಈ ನಿಯಮವನ್ನು ಎಷ್ಟು ಪಾಲಿಸುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ (SSLC Result) ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ‍್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ ಸ್ವಿಚ್ ಆಫ್ ಮಾಡಿಸುವಂತೆ ಸೂಚಿಸಿದೆ. PDOಗಳ ಹಂತದಲ್ಲಿಯೂ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಡಂಗೂರು ಬಾರಿಸಿ ಪೋಷಕರಿಗೆ ಜಾಗೃತಿ ಮಾಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.
Educational
ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆ: ಕಠಿಣ ಪ್ರಶ್ನೆಗಳಿಂದ ಕಂಗಾಲಾದ ವಿದ್ಯಾರ್ಥಿಗಳು; ಕೃಪಾಂಕ ನೀಡಲು ಹೆಚ್ಚಿದ ಒತ್ತಾಯ!
ರಾಜ್ಯಾದ್ಯಂತ ಶನಿವಾರ ನಡೆದ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯ ಪ್ರಶ್ನೆಪತ್ರಿಕೆಯು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಪಠ್ಯಕ್ರಮದ ಹೊರತಾದ ಮತ್ತು ಅತ್ಯಂತ ಕಠಿಣ ಪ್ರಶ್ನೆಗಳನ್ನು ಕೇಳಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೃಪಾಂಕ (Grace Marks) ನೀಡಬೇಕೆಂದು ಗಣಿತ ಶಿಕ್ಷಕರ ಸಂಘ ಹಾಗೂ ಪೋಷಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪತ್ರಿಕೆಯಲ್ಲಿ ಒಟ್ಟು 16 ಅಂಕಗಳ ಪ್ರಶ್ನೆಗಳು ಪಠ್ಯಕ್ರಮದಲ್ಲಿ (Syllabus) ಇರಲಿಲ್ಲ ಮತ್ತು 21 ಅಂಕಗಳ ಪ್ರಶ್ನೆಗಳು ಅತ್ಯಂತ ಕಠಿಣವಾಗಿದ್ದವು ಎಂದು ಶಿಕ್ಷಕರು ಆರೋಪಿಸಿದ್ದಾರೆ. ನಿಯಮದ ಪ್ರಕಾರ ಪ್ರಶ್ನೆಪತ್ರಿಕೆಯಲ್ಲಿ ಶೇ. 20ರಷ್ಟು ಕಠಿಣ, ಶೇ. 20ರಷ್ಟು ಸುಲಭ ಹಾಗೂ ಶೇ. 40ರಷ್ಟು ಮಧ್ಯಮ ಮಟ್ಟದ ಪ್ರಶ್ನೆಗಳಿರಬೇಕು. ಆದರೆ, ಈ ಬಾರಿ 35ಕ್ಕೂ ಹೆಚ್ಚು ಅಂಕಗಳಿಗೆ ಕಠಿಣ ಪ್ರಶ್ನೆಗಳನ್ನು ಕೇಳುವ ಮೂಲಕ ಮಂಡಳಿಯು ನಿಯಮ ಉಲ್ಲಂಘಿಸಿದೆ ಎನ್ನಲಾಗಿದೆ. ಅನ್ವಯಿಕ ಪ್ರಶ್ನೆಗಳು ಹೆಚ್ಚಾಗಿದ್ದರಿಂದ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಪಾಸಾಗಲು ಪರದಾಡುವಂತಾಗಿದೆ. ಇನ್ನು 100ಕ್ಕೆ 100 ಅಂಕಗಳ ಗುರಿ ಹೊಂದಿದ್ದ ಪ್ರತಿಭಾವಂತ ವಿದ್ಯಾರ್ಥಿಗಳು ಕೂಡ ನಿರಾಸೆಗೊಂಡಿದ್ದಾರೆ. ಬಹುವದೋಕ್ತಿ (1 ಅಂಕ), ನಿರ್ದೇಶಾಂಕ ರೇಖಾಗಣಿತ (2 ಅಂಕ), ವೃತ್ತಗಳು (2 ಅಂಕ), ತ್ರಿಭುಜಗಳು (3 ಅಂಕ), ವರ್ಗ ಸಮೀಕರಣಗಳು (1 ಅಂಕ), ಮೇಲ್ಮೈ ವಿಸ್ತೀರ್ಣಗಳು ಮತ್ತು ಘನಫಲಗಳು (5 ಅಂಕ) ಸೇರಿದಂತೆ ಪಠ್ಯದಲ್ಲಿಲ್ಲದ ಒಟ್ಟು 16 ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳು ಕೈಚೆಲ್ಲಿದ್ದಾರೆ.
ನಾಳೆ ನಿರ್ಣಾಯಕ ಸಭೆ:
ಈ ಸಮಸ್ಯೆಯ ಕುರಿತು ಈಗಾಗಲೇ ಶಿಕ್ಷಕರ ಸಂಘದ ಪದಾಧಿಕಾರಿಗಳು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ಶಿಕ್ಷಕರ ಸಂಘಗಳು ಶಿಕ್ಷಣ ಸಚಿವರಿಗೆ ಮನವಿ ನೀಡಿವೆ.

ಈ ಹಿನ್ನೆಲೆಯಲ್ಲಿ, ಮಾರ್ಚ್ 31ರ ಮಂಗಳವಾರದಂದು ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಹಾಗೂ ಪರೀಕ್ಷಾ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವ ಬಗ್ಗೆ ಅಥವಾ ಮೌಲ್ಯಮಾಪನದ ವೇಳೆ ರಿಯಾಯಿತಿ ನೀಡುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
award
ಶೈಕ್ಷಣಿಕ ಕ್ಷೇತ್ರದಲ್ಲಿ ಮಿಂಚಿದ ಪೆರ್ಲದ ಪ್ರತಿಭೆ: ಎಂ.ಸಿ.ಎ ಪದವಿಯಲ್ಲಿ ಅನನ್ಯ ಬಿ.ಎಸ್. ಅವರಿಗೆ ದ್ವಿತೀಯ ರ‍್ಯಾಂಕ್
ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ 2023-25ನೇ ಸಾಲಿನ ಎಂ.ಸಿ.ಎ (MCA – Master of Computer Application) ಸ್ನಾತಕೋತ್ತರ ಪದವಿಯಲ್ಲಿ ಅನನ್ಯ ಬಿ.ಎಸ್. ಅವರು ದ್ವಿತೀಯ ರ‍್ಯಾಂಕ್ ಮೂಲಕ ಅನನ್ಯ ಸಾಧನೆ ಮಾಡಿದ್ದಾರೆ.

ಇವರು ಕಾಸರಗೋಡು ಜಿಲ್ಲೆಯ ಪೆರ್ಲದವರಾಗಿದ್ದು, ಭಾಸ್ಕರ್ ಬನಾರಿ ಹಾಗೂ ಸುಜಾತಾ ಸೇರಾಜೆ ದಂಪತಿಯ ಪುತ್ರಿ. ಇವರು ಕೇರಳ ರಾಜ್ಯದಲ್ಲಿಯೇ ಪ್ರಸಿದ್ದಿ ಪಡೆದ ಖ್ಯಾತ ವ್ಯಕ್ತಿ ಸಿಪಿಎಂ ಪಕ್ಷದ ನೇತಾರನಾಗಿದ್ದ ದಿ. ಕೆ.ಪಿ. ಮದನ್ ಮಾಸ್ಟರ್ ಸೇರಾಜೆ ಅವರ ಮರಿಮೊಮ್ಮಗಳು ಎಂಬುದು ಗಮನಾರ್ಹ.

ಅನನ್ಯ ಅವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಪೆರ್ಲದ ಶ್ರೀ ಸತ್ಯನಾರಾಯಣ ಹೈಸ್ಕೂಲ್‌ನಲ್ಲಿ ಮುಗಿಸಿದ್ದು, ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 90 ಅಂಕ ಗಳಿಸಿದ್ದರು. ನಂತರ ಬಡಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪಿಯುಸಿ (ವಿಜ್ಞಾನ ವಿಭಾಗ) ಶಿಕ್ಷಣ ಪೂರೈಸಿದರು.
ಉನ್ನತ ಶಿಕ್ಷಣಕ್ಕಾಗಿ ಪುತ್ತೂರಿನ ವಿವೇಕಾನಂದ ಕಾಲೇಜನ್ನು ಸೇರಿ ಬಿ.ಸಿ.ಎ (BCA) ಪದವಿಯಲ್ಲಿ ಶೇ. 93 ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದರು. ಇದೀಗ ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಎಂ.ಸಿ.ಎ ಪದವಿಯಲ್ಲಿ ಶೇ. 94 ಅಂಕಗಳನ್ನು ಪಡೆಯುವ ಮೂಲಕ ಇಡೀ ವಿಶ್ವವಿದ್ಯಾಲಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಅನನ್ಯ ಅವರ ಈ ಸಾಧನೆಗೆ ಪೆರ್ಲ ಹಾಗೂ ಸುತ್ತಮುತ್ತಲಿನ ಭಾಗದ ಸಾರ್ವಜನಿಕರು ಮತ್ತು ಶಿಕ್ಷಣ ಪ್ರೇಮಿಗಳು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
Bantawala
ಸಾಹಿತ್ಯ ಸಾಧನೆಗೆ ವಿಟ್ಲದ ಡಾ. ಮೈತ್ರಿ ಭಟ್ ಅವರಿಗೆ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ಗೌರವ
ಬೆಂಗಳೂರು: ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ಬೆಂಗಳೂರಿನ ಪಶುವೈದ್ಯ ಕಾಲೇಜು ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘2026ನೇ ವರ್ಷದ ಅಂತರಾಷ್ಟ್ರೀಯ ಮಹಿಳಾ ರಾಜ್ಯ ಸಮ್ಮೇಳನ’ದಲ್ಲಿ ಸಾಹಿತ್ಯ ಕ್ಷೇತ್ರದ ಗಣನೀಯ ಸಾಧನೆಗಾಗಿ ವಿಟ್ಲದ ಡಾ. ಮೈತ್ರಿ ಭಟ್ ಅವರಿಗೆ ಪ್ರತಿಷ್ಠಿತ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಾಹಿತ್ಯ ಲೋಕಕ್ಕೆ ಡಾ. ಮೈತ್ರಿ ಭಟ್ ಅವರು ನೀಡುತ್ತಿರುವ ನಿರಂತರ ಕೊಡುಗೆ ಮತ್ತು ಅವರ ಸಾಂಸ್ಕೃತಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ನಾಡಿನ ವಿವಿಧ ಕ್ಷೇತ್ರಗಳ ಸಾಧಕಿಯರು ಭಾಗವಹಿಸಿದ್ದ ಈ ಸಮ್ಮೇಳನದಲ್ಲಿ ಮೈತ್ರಿ ಭಟ್ ಅವರ ಸಾಧನೆಯನ್ನು ಗಣ್ಯರು ಶ್ಲಾಘಿಸಿದರು.

ಪ್ರಶಸ್ತಿ ಪುರಸ್ಕೃತ ಡಾ. ಮೈತ್ರಿ ಭಟ್ ಅವರು ವಿಟ್ಲದ ನಿವಾಸಿ ರವಿಶಂಕರ ಕುಳಮರ್ವ ಅವರ ಪತ್ನಿಯಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ವಿಟ್ಲದ ಹೆಮ್ಮೆಯನ್ನು ರಾಜ್ಯಮಟ್ಟದಲ್ಲಿ ಪಸರಿಸಿದ ಇವರ ಸಾಧನೆಗೆ ಸ್ಥಳೀಯ ಗಣ್ಯರು ಹಾಗೂ ಸಾಹಿತ್ಯಾಸಕ್ತರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
-
crime1 day agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
