Connect with us

accident

ಹೋಂಡಾ ಡಿಯೋಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಮಾರುತಿ ವ್ಯಾನ್ ಪತ್ತೆ.. ವಿಟ್ಲದಲ್ಲಿ ನಡೆದಿದ್ದ ಹಿಟ್ ಆಂಡ್ ರನ್ ಪ್ರಕರಣ..ಸ್ಥಳೀಯರ ಮಾಹಿತಿಯಂತೆ ವಶಕ್ಕೆ ಪಡೆದ ವಿಟ್ಲ ಪೊಲೀಸರು..

Published

on

ಸಾಲೆತ್ತೂರು-ವಿಟ್ಲ ರಸ್ತೆಯ ಕಡಂಬು ಎಂಬಲ್ಲಿ ವಿಟ್ಲದ ಕಡೆಗೆ ಹೋಗುತ್ತಿದ್ದ ಹೋಂಡಾ ಡಿಯೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಮಾರುತಿ ವ್ಯಾನನ್ನು ಸಾರ್ವಜನಿಕರು ಪತ್ತೆಹಚ್ಚಿದ್ದಾರೆ.

ಕುಡ್ತಮುಗೇರು ಸಾಲೆತ್ತೂರು ಮಾರ್ಗವಾಗಿ ಪೆ.6ರಂದು ಪ್ರತ್ಯಕ್ಷವಾದ ವ್ಯಾನ್‌ ಸಾರ್ವಜನಿಕರ ಕಣ್ಣಿಗೆ ಬಿದ್ದಿದೆ. ಕೆ.ಎ.19ಎಮ್‌.ಹೆಚ್‌ 1518 ಮಾರುತಿ ವ್ಯಾನ್‌ ಪರಾರಿಯಾಗಿರುವುದು ಮಾದ್ಯಮಗಳಲ್ಲಿ ಪ್ರಸಾರವಾಗಿತ್ತು. ಇಂದು ಈ ವ್ಯಾನ್‌ ಕಣ್ಣಿಗೆ ಕಾಣುತ್ತಿರುವಂತೇಯೇ ಗ್ರಾಮಸ್ಥರು ವ್ಯಾನನ್ನು ಬೆನ್ನತ್ತಿದ್ದಾರೆ. ಆದರೆ ವ್ಯಾನ್‌ ಜನರ ಕಣ್ತಪ್ಪಿಸಿ ಹೋಗಿದೆ. ಹುಡುಕಾಟ ಮತ್ತೆ ಮುಂದುವರಿಸಿದಾಗ ತಾಮರಾಜೆ ಎಂಬಲ್ಲಿ ಮನೆಯೊಂದರ ಅಂಗಳದಲ್ಲಿ ವ್ಯಾನ್‌ ಕಂಡುಬಂದಿದೆ. ಇದು ಬೀಡಿ ಕಂಟ್ರಾಕ್ಟುದಾರ ಇಸ್ಮಾಯಿಲ್‌ ಮಾಲಿಕತ್ವದ ವ್ಯಾನ್‌ ಎಂದು ತಿಳಿದು ಬಂದಿದೆ. ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣ ಪೊಲೀಸರು ಅಪಘಾತವೆಸಗಿದ ಗಾಡಿಯನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.


ವಿಟ್ಲದ ಕಡೆಗೆ ಹೋಗುತ್ತಿದ್ದ ಹೋಂಡಾ ಡಿಯೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಅಪಘಾತದ ತೀವ್ರತೆಗೆ ಡಿಯೋ ವಾಹನ ಸವಾರೆ ಅಳಿಕೆ ನಿವಾಸಿ ಜೆಸಿಂತಾ ಡಿಸೋಜಾ ಮತ್ತು ಸಹಸವಾರೆ ಪೆರುವಾಯಿ ನಿವಾಸಿ ರೇಷ್ಮಾ ಡಿಸೋಜಾ ಎಂಬಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮಹಿಳಾ ಸವಾರೆಯರು ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಪರಾರಿಯಾದ ನಿರ್ದಯಿ ವ್ಯಾನ್ ಚಾಲಕನ ಹುಡುಕಾಟ ಕ್ಷಣದಿಂದ ಆರಂಭವಾಗಿತ್ತು. ಹೋಂಡಾ ಡಿಯೋಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿರುವ ಮಾರುತಿ ವ್ಯಾನ್ ಸಿಸಿ ಕ್ಯಾಮಾರದಲ್ಲಿ ಸೆರೆಯಾದ ದೃಶ್ಯವನ್ನಾಧರಿಸಿ ಹುಡುಕಾಟ ನಡೆಸಿದರೂ ವ್ಯಾನ್ ಪತ್ತೆಯಾಗಿರಲಿಲ್ಲ. ವಿಟ್ಲ ಪೊಲೀಸರು ಕೂಡಾ ವ್ಯಾನ್ ಪತ್ತೆ ಹಚ್ಚಲು ಪ್ರಯತ್ನಿಸುತ್ತಲೇ ಇದ್ದರು. ಅಪಘಾತ ಎಸಗಿ ಪರಾರಿಯಾದ ಮಾರುತಿ ವ್ಯಾನ್ ಇನ್ನೂ ಪತ್ತೆಯಾಗಿಲ್ಲ ಎಂದು ಗಾಯಾಳುಗಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೂ ವ್ಯಾನ್‌ ಪತ್ತೆಯಾಗಿದ್ದು ದೂರುದಾರರು ನಿಟ್ಟುಸಿರು ಬಿಟ್ಟಿದ್ದಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಮಾಣಿ ಸಮೀಪ ನಿಯಂತ್ರಣ ತಪ್ಪಿ ಚರಂಡಿಗೆ ಜಿಗಿದ ಇನ್ನೋವಾ ಕಾರು;ತಪ್ಪಿದ ಭೀಕರ ಪ್ರಾಣಾಪಾಯ

Published

on

ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್‌ಪಾತ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಆಳವಾದ ಚರಂಡಿಯನ್ನು ಜಿಗಿದು, ಪಕ್ಕದಲ್ಲಿದ್ದ ಬಾಳೆ ಗಿಡಗಳ ಗುಂಟೆಗೆ ಬಡಿದು ನಿಂತಿದೆ.

ಅದೃಷ್ಟವಶಾತ್ ಬಚಾವ್

ಅಪಘಾತದ ಸಮಯದಲ್ಲಿ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ, ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ಯ ಕ್ರೇನ್ ಮುಖಾಂತರ ಕಾರನ್ನು ಮೇಲಕ್ಕೆತ್ತಿ ರಸ್ತೆಗೆ ತರುವ ಕಾರ್ಯಾಚರಣೆ ನಡೆಯುತ್ತಿದೆ.

ಒಂದೇ ದಿನ ಎರಡು ಅಪಘಾತ: ಸವಾರರಲ್ಲಿ ಆತಂಕ

ಇದೇ ರಾಷ್ಟ್ರೀಯ ಹೆದ್ದಾರಿಯ ಕೇವಲ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆಯಷ್ಟೇ ಮತ್ತೊಂದು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ಸ್ಥಳೀಯ ಹಾಗೂ ಹೆದ್ದಾರಿ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಾಣಿ ಪರಿಸರದಲ್ಲಿ ಹೆದ್ದಾರಿ ಸಂಚಾರದ ವೇಳೆ ಚಾಲಕರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




Continue Reading

accident

ಗಡಿಯಾರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ನಾಲ್ವರಿಗೆ ಗಂಭೀರ ಗಾಯ, ಚಾಲಕ ದುರ್ಮರಣ

Published

on

ಬಂಟ್ವಾಳ/ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಹೆದ್ದಾರಿಯಲ್ಲಿ ಕೇಳಿಬಂದ ಭೀಕರ ಸದ್ದು: ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ದೊಡ್ಡ ಮಟ್ಟದ ಸದ್ದು ಕೇಳಿಬಂದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು (ನಂಬರ್: KA 12 N 6668) ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ದು ಕೇಳಿ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ.

ಹಾಸನ ಮೂಲದ ಪ್ರಯಾಣಿಕರು: ಕಾರಿನಲ್ಲಿ ಹಾಸನ ಮೂಲದ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕಾರು ಚಾಲಕನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಗಾಯಾಳುಗಳ ಸಂಪೂರ್ಣ ವಿವರ ಹಾಗೂ ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.




Continue Reading

accident

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

Published

on

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

Trending

Copyright © 2025 Deevatige

error: Content is protected !!