F.I.R.
ಬುರ್ಖಾ ಧರಿಸಿ ಲೇಡೀಸ್ ಕೋಚ್‌ನಲ್ಲಿ ಯುವಕನ ಪಯಣ : ಮಹಿಳೆಯರಿಗೆ ಗೊತ್ತಾದಾಗ ಏನು ಮಾಡಿದರು ?
ಮುಂಬೈ ಲೋಕಲ್ ರೈಲಿನ ಲೇಡೀಸ್ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಪುರುಷನೊಬ್ಬನನ್ನು ಮಹಿಳಾ ಪ್ರಯಾಣಿಕರು ಪತ್ತೆಹಚ್ಚಿದ್ದಾರೆ. ಮಹಿಳೆಯರು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸುವ ಬೆದರಿಕೆ ಹಾಕಿದಾಗ, ಆತ ಚಲಿಸುವ ರೈಲಿನಿಂದ ಜಿಗಿದಿದ್ದಾನೆ. ಈತನ ವಿರುದ್ಧ ಪ್ರಕರಣ ದಾಖಲಾಗಿದೆ.

ಮುಂಬೈ ಲೋಕಲ್ ರೈಲಿನ ಲೇಡಿಸ್ ಕೋಚ್‌ನಲ್ಲಿ ಬುರ್ಖಾ ಧರಿಸಿ ಪುರುಷನೋರ್ವ ಪ್ರಯಾಣಿಸಿದ ಘಟನೆ ನಡೆದಿದೆ ಈ ಸಂಬಂಧ ರೈಲ್ವೆ ರಕ್ಷಣಾ ಪಡೆ, ಆರ್‌ಪಿಎಫ್ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದು ಸಂಕಿತನಿಗಾಗಿ ಹುಡುಕಾಟ ಮುಂದುವರಿಸಿದೆ ಶುಕ್ರವಾರ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಲ್ ಸಿ ಎಸ್ ಎಮ್ ಟಿ ಕಡೆಗೆ ತೆರಳುತ್ತಿದ್ದ ಲೋಕಲ್ ರೈಲಿನ ಲೇಡೀಸ್ ಭೋಗಿಯಲ್ಲಿ ಈ ಘಟನೆ ನಡೆದಿದೆ. ಬುರ್ಖಾ ಧರಿಸಿ ಮಹಿಳೆಯಂತೆ ಕಾಣಿಸಿಕೊಂಡಿದ್ದ ಆತನ ದೇಹ ಭಾಷೆ ಮತ್ತು ಚಲನವಲನ ಮಹಿಳೆಯಂತೆ ಇರಲಿಲ್ಲ ಎಂಬ ಕಾರಣದಿಂದ ಕೆಲವು ಮಹಿಳೆಯರು ಆತನನ್ನು ಪ್ರಶ್ನಿಸಲು ಮುಂದಾಗಿದ್ದಾರೆ. ಪ್ರಶ್ನಿಸಿದ ವೇಳೆ ಬುರ್ಖಾಧಾರಿಯು ಮಹಿಳೆ ಅಲ್ಲ ಪುರುಷ ಎಂಬುದು ಸ್ಪಷ್ಟವಾಗಿದ್ದು, ಇದರಿಂದ ಮಹಿಳಾ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವೀಡಿಯೋ ನೋಡಿದ ರೈಲ್ವೆ ರಕ್ಷಣಾ ದಳ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದೆ.
ಅಧಿಕಾರಿಗಳ ಪ್ರಕಾರ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್(CSMT)ಗೆ ಹೋಗುತ್ತಿದ್ದ ಲೋಕಲ್ ರೈಲಿನ ಲೇಡೀಸ್ ಬೋಗಿಯಲ್ಲಿ ಪುರುಷನೋರ್ವ ಬುರ್ಖಾ ಧರಿಸಿ ಪಯಣಿಸುತ್ತಿದ್ದಾನೆ ಎಂಬ ಅನುಮಾನ ಆ ಬೋಗಿಯಲ್ಲಿದ್ದ ಇತರ ಮಹಿಳಾ ಪ್ರಯಾಣಿಕರಿಗೆ ಬಂದಿದೆ. ಅವರು ಆತನನ್ನು ಪ್ರಶ್ನಿಸಲು ಮುಂದಾದಾಗ ಆತ ಪುರುಷ ಎಂಬುದು ತಿಳಿದು ಬಂದಿದೆ. ಮಹಿಳೆಯರು ಆತನನ್ನು ಲೇಡೀಸ್ ಬೋಗಿಯಲ್ಲಿ ಬುರ್ಖಾ ಧರಿಸಿ ಬಂದಿದ್ದಕ್ಕೆ ಪ್ರಶ್ನಿಸಿದ್ದಲ್ಲದೇ ಆ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ಅಲ್ಲದೇ ಮುಂಬರುವ ಘಾಟ್‌ಕೋಪರ್ ನಿಲ್ದಾಣದಲ್ಲಿ ಆತನನ್ನು ಪೊಲೀಸರಿಗೆ ಒಪ್ಪಿಸುವುದಾಗಿ ಬೆದರಿಕೆ ಹಾಕಿದ್ದಾರೆ
ಮಹಿಳೆಯರು ಮುಂದಿನ ಘಾಟ್ ಕೋಪರ್ ನಿಲ್ದಾಣದಲ್ಲಿ ಆತನನ್ನು ಪೊಲೀಸರಿಗೆ ಒಪ್ಪಿಸುವುದಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದರಿಂದ ಭಯಗೊಂಡ ಶಂಕಿತ ವ್ಯಕ್ತಿ ರೈಲು ನಿಲ್ದಾಣಕ್ಕೆ ತಲುಪುವ ಮುನ್ನ ರೈಲಿನಿಂದ ಜಿಗಿದಿದ್ದಾನೆ. ಚಲಿಸುತ್ತಿದ್ದ ರೈಲಿನಿಂದಲೇ ಹಾರಿ ಕೆಳಗೆ ಬಿದ್ದ ಆತ ರೈಲು ಹಳಿಗಳ ಮೇಲೆ ಓಡಿ ತಪ್ಪಿಸಿಕೊಂಡಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಮಾಹಿತಿ ಪಡೆದ ತಕ್ಷಣವೇ ರೈಲ್ವೆ ರಕ್ಷಣಾ ಪಡೆ ತನಿಖೆ ಆರಂಭಿಸಿದ್ದು, ವಿವಿಧ ನಿಲ್ದಾಣಗಳ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಮುಲುಂಡ್ ನಿಲ್ದಾಣದಲ್ಲಿ ಕರ್ಜತ್ ಲೋಕಲ್ ರೈಲನ್ನು ತಪಾಸಣೆ ನಡೆಸಿದರೂ, ಶಂಕಿತ ವ್ಯಕ್ತಿ ಆಗಲೇ ರೈಲಿನಿಂದ ಇಳಿದು ಪರಾರಿಯಾಗಿದ್ದರಿಂದ ಪೊಲೀಸರು ಆತನನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ.
ಇದಾದ ಬಳಿಕ ಆತ ಕರ್ಜತ್‌ನಿಂದ ಬರುತ್ತಿದ್ದ ಮತ್ತೊಂದು ಲೋಕಲ್ ರೈಲಿಗೆ ಪ್ಲಾಟ್‌ಫಾರ್ಮ್ ಬದಲಿಸಿ ಹತ್ತಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ತಕ್ಷಣ ಮಹಿಳಾ ಪ್ರಯಾಣಿಕರು ಘಟ್ಕೊಪರ್ ನಿಲ್ದಾಣದಲ್ಲಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣವೇ ರೈಲ್ವೆ ರಕ್ಷಣಾ ಪಡೆ ತನಿಖೆ ಆರಂಭಿಸಿದ್ದು, ಮಹಿಳಾ ಕೋಚ್‌ನಲ್ಲಿ ಅನಧಿಕೃತವಾಗಿ ಪ್ರವೇಶಿಸಿ ಪ್ರಯಾಣಿಸಿದ್ದ ಆರೋಪದಡಿ ಭಾರತೀಯ ರೈಲ್ವೆ ಕಾಯ್ದೆಯ ಪ್ರಕಾರ ಆರ್‌ಪಿಎಫ್ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಶಂಕಿತನ ಗುರುತು ಪತ್ತೆಹಚ್ಚಲು ವೈರಲ್ ವೀಡಿಯೋ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.
Bantawala
ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ
ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.
ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
Bantawala
ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲು!
ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.
ಮಹಿಳೆಯ ಧೈರ್ಯ, ವೈರಲ್ ವೀಡಿಯೋ:
ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.
ಬಂಟ್ವಾಳ ಠಾಣೆಯಲ್ಲಿ ದೂರು:
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
DEATH
ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ – ವಾರೀಸುದಾರರ ಪತ್ತೆಗೆ ಪೋಲಿಸ್ ಮನವಿ
ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಎಂಬಲ್ಲಿ ಹರಿಯುವ ನೇತ್ರಾವತಿ ನದಿಯ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ.
ಆಗಸ್ಟ್ 02, 2026ರಂದು ಮಧ್ಯಾಹ್ನ ಸುಮಾರು 03:00 ಗಂಟೆಯ ವೇಳೆಗೆ ನದಿ ದಡದಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು ಮೃತದೇಹವನ್ನು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಮನವಿ:
ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ಸಾರ್ವಜನಿಕರಲ್ಲಿ ಈ ಕೆಳಗಿನಂತೆ ಕೋರಲಾಗಿದೆ:
ಇತರ ಪೊಲೀಸ್ ಠಾಣೆಗಳಿಗೆ: ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಗಂಡಸು ಕಾಣೆಯಾದ ಬಗ್ಗೆ ದೂರು ದಾಖಲಾಗಿದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.
ಸಾರ್ವಜನಿಕರಿಗೆ/ವಾರೀಸುದಾರರಿಗೆ: ಯಾರಾದರೂ ವ್ಯಕ್ತಿ ನಾಪತ್ತೆಯಾಗಿದ್ದು, ಮೃತರ ವಾರೀಸುದಾರರು ಅಥವಾ ಗುರುತು ತಿಳಿದವರು ಇದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಉಪ್ಪಿನಂಗಡಿ ಪೊಲೀಸ್ ಠಾಣೆ: 9480805362
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್‌ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
