Belthangady
ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ಏನಾಗಿದೆ ?
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/02/belthangadi-2-1000x600.jpg&description=ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ಏನಾಗಿದೆ ?', 'pinterestShare', 'width=750,height=350'); return false;" title="Pin This Post">
ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರಂತೆ !

ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ 16 ವರ್ಷದ ಶಾಲಾ ಬಾಲಕಿ ಕಾಲೇಜಿಗೆ ಸ್ಕೂಟಿಯಲ್ಲಿ ತೆರಳಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಒಮ್ನಿ ಬಂದಿದೆ. ಮಾರುತಿ ಒಮ್ನಿಯ ನಂಬರ್ ಪ್ಲೇಟ್ ಮುಚ್ಚಲಾಗಿತ್ತು, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ಮುಸುಕುದಾರಿ ವ್ಯಕ್ತಿಗಳು ಇದ್ದರು, ಸ್ಕೂಟಿಗೆ ಅಡ್ಡ ಇಟ್ಟು ಮೂವರು ಮುಸುಕುದಾರಿಗಳು ವಿದ್ಯಾರ್ಥಿನಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ, ಅವರು ಒಮ್ನಿಯಲ್ಲಿ ವಿದ್ಯಾರ್ಥಿನಿಯನ್ನು ಹಾಕಿಕೊಂಡು ಅಪಹರಿಸಲು ಯತ್ನಿಸಿದಾಗ ಅವಳು ಪ್ರತಿರೋಧಿಸಿ ಬೊಬ್ಬೆ ಹೊಡೆದಿದ್ದಾಳೆ. ಹಿಂದಿನಿಂದ ಒಂದು ದ್ವಿಚಕ್ರ ವಾಹನವೂ ಬಂದಿದೆ. ಇದರಿಂದ ಬೆದರಿದ ಅಪಹರಣಕಾರರು ತಮ್ಮಲ್ಲಿದ್ದ ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಅಪಹರಣಕಾರರು ಬೆದರಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ.

ಇದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರಣೆಯ ವಿದ್ಯಾರ್ಥಿನಿಯ ಹೇಳಿಕೆ. ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಎಂಬ ಸುದ್ದಿಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ಸರಕಾರ ಮತ್ತು ಗೃಹ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಆಯ್ತು. ಮದ್ಯಾಹ್ನ ನಂತರ ಘಟನೆಯ ಸತ್ಯಾಂಶ ಒಂದೊಂದಾಗಿ ಹೊರಬರುತ್ತಲೇ ಆತಂಕದ ವಾತಾವರಣ ಕಡಿಮೆಯಾಗುತ್ತಾ ಬಂದಿದೆ. ಈವರೆಗೆ ಅಪಹರಣಕಾರರ ಪತ್ತೆಯಾಗಿಲ್ಲ, ಮಾರುತಿ ಒಮ್ನಿ ಯಾವ ಸಿಸಿ ಕ್ಯಾಮಾರದಲ್ಲೂ ಕಂಡುಬರಲೇ ಇಲ್ಲ. ಅಂದರೆ ವಿದ್ಯಾರ್ಥಿನಿಯ ಸುತ್ತಲೇ ಅಪಹರಣದ ಕಥೆ ಕಂಡುಬರುತ್ತಿದೆ.
ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಬೆನ್ನಲ್ಲೇ ಜನತೆಗೆ ಸತ್ಯಾಂಶ ತಿಳಿಸಿ ಆತಂಕ ದೂರ ಮಾಡುವ ಉದ್ದೇಶಕ್ಕಾಗಿ ಮಾಧ್ಯಮ ಪ್ರತಿನಿಧಿಗಳು ಜಿಲ್ಲಾ ಎಸ್ಪಿಯವರ ಅಧಿಕೃತ ಹೇಳಿಕೆಗಾಗಿ ಕಾಯುತ್ತಿದ್ದಾರೆ.
ರಾಜಸ್ಥಾನದ ಘಟನೆ: ರಾಜಸ್ಥಾನದ ಬಿಕನೇರ್ನಲ್ಲಿ 10ನೇ ತರಗತಿಯ ಹುಡುಗಿಯೊಬ್ಬಳು ಶಾಲೆಗೆ ಹೋಗಲು ಇಷ್ಟವಿಲ್ಲದೆ ತನ್ನನ್ನು ಅಪಹರಿಸಲಾಗಿದೆ ಎಂದು ಸುಳ್ಳು ಕಥೆ ಸೃಷ್ಟಿಸಿದ್ದಳು. ಪೊಲೀಸರು ತನಿಖೆ ನಡೆಸಿದಾಗ ಆಕೆ ಸುಳ್ಳು ಹೇಳುತ್ತಿರುವುದು ಬಯಲಾಗಿತ್ತು.
ಬೆಂಗಳೂರು ಅಥವಾ ಇತರ ನಗರಗಳಲ್ಲಿ ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಮಕ್ಕಳು ತಮ್ಮ ಕೈ-ಕಾಲುಗಳನ್ನು ತಾವೇ ಕಟ್ಟಿಕೊಂಡು ಅಥವಾ ಬಾಯಿಗೆ ಪಟ್ಟಿ ಅಂಟಿಸಿಕೊಂಡು ಪೋಷಕರನ್ನು ಭಯಪಡಿಸುತ್ತಾರೆ.
ಇಂತಹ ಘಟನೆಗಳು ಬಹುತೇಕ ಪರೀಕ್ಷಾ ಸಮಯ ಹತ್ತಿರಕ್ಕೆ ಬರುವ ಸಂದರ್ಭಗಳಲ್ಲಿಯೇ ನಡೆಯುತ್ತಿದ್ದು, ಪರೀಕ್ಷೆ ಅಥವಾ ಹೋಮ್ ವರ್ಕ್ ಪೂರ್ಣಗೊಳಿಸದಿದ್ದಾಗ ಶಿಕ್ಷಕರಿಗೆ ಹೆದರಿ ಹೀಗೆ ಮಾಡುತ್ತಾರೆ. ಶಾಲೆಯಲ್ಲಿ ಕಿರುಕುಳ (Bullying): ಶಾಲೆಯಲ್ಲಿ ಬೇರೆ ವಿದ್ಯಾರ್ಥಿಗಳು ತೊಂದರೆ ನೀಡುತ್ತಿದ್ದರೆ ಅಲ್ಲಿಗೆ ಹೋಗದಿರಲು ಇಂತಹ ದಾರಿ ಹುಡುಕುತ್ತಾರೆ. ತಮ್ಮ ಮಕ್ಕಳು ಅತೀ ಹೆಚ್ಚು ಅಂಕಗಳನ್ನು ಪಡೆಯಬೇಕೆಂದು ಮಕ್ಕಳ ಮೇಲೆ ಪೋಷಕರು ನಿರಂತರವಾಗಿ ಒತ್ತಡ ಹೇರುತ್ತಿರುವಾಗ ಪೋಷಕರ ಅತಿಯಾದ ನಿರೀಕ್ಷೆಗಳು ಮಕ್ಕಳನ್ನು ಇಂತಹ ಹಂತಕ್ಕೆ ತಳ್ಳಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯ ತನಿಖೆ ನಡೆಯಬೇಕಾಗಿದೆ.
arrest
ಬೆಳ್ತಂಗಡಿ: ಗುರುವಾಯನಕೆರೆ ಬಳಿ ಪತ್ತೆಯಾದ ಮೃತದೇಹದ ಗುರುತು ಪತ್ತೆ – ಯತೀಶ್ ಗೌಡ ಕೊಲೆ ಶಂಕೆ, ಮೂವರು ವಶಕ್ಕೆ
ಬೆಳ್ತಂಗಡಿ, ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆ ಎಂಬಲ್ಲಿ ಜೂನ್ 1ರಂದು ಬೆಳಿಗ್ಗೆ ಪತ್ತೆಯಾಗಿದ್ದ ಅಪರಿಚಿತ ಮೃತದೇಹದ ಗುರುತು ಪತ್ತೆಯಾಗಿದ್ದು, ಇದು ಕೊಲೆ ಎಂದು ಶಂಕಿಸಲಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ, ದಿ. ಕೂಸಪ್ಪ ಗೌಡ ಮತ್ತು ಪದ್ಮಾವತಿ ದಂಪತಿಯ ದ್ವಿತೀಯ ಪುತ್ರ ಯತೀಶ್ ಗೌಡ (33) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯತೀಶ್, ಕಳೆದ ಎರಡು ತಿಂಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ನಾಪತ್ತೆಯಾಗಿದ್ದರು.
ಘಟನೆಯ ಹಿನ್ನೆಲೆ ಮತ್ತು ದೂರು:
ಜೂನ್ 1ರಂದು ಬೆಳಿಗ್ಗೆ ಗುರುವಾಯನಕೆರೆಯ ಶ್ರೀದೇವಿ ಹಾರ್ಡ್ವೇರ್ ಬಳಿ ಅಪರಿಚಿತ ಮೃತದೇಹ ಇರುವ ಬಗ್ಗೆ ಭಾವಚಿತ್ರ ಸಹಿತ ಮಾಹಿತಿ ವಾಟ್ಸಾಪ್ ಮೂಲಕ ಮೃತರ ಸಹೋದರ ನಿತಿನ್ (34) ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ನಿತಿನ್, ಮೃತದೇಹವನ್ನು ತನ್ನ ಸಹೋದರ ಯತೀಶ್ ಗೌಡ ಎಂದು ಗುರುತಿಸಿದ್ದಾರೆ.
ಸಿಸಿಟಿವಿ ತನಿಖೆ ಮತ್ತು ಕೊಲೆ ಶಂಕೆ:
ಮೃತದೇಹದ ಮೇಲೆ ಹಲ್ಲೆಯ ಗುರುತುಗಳಿದ್ದ ಹಿನ್ನೆಲೆಯಲ್ಲಿ, ದೂರುದಾರರು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಜೂನ್ 1ರ ಬೆಳಿಗ್ಗಿನ ಸಮಯ ಮೂವರು ವ್ಯಕ್ತಿಗಳು ಯತೀಶ್ ಅವರ ಮೇಲೆ ಹಲ್ಲೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿಗಳ ತೀವ್ರ ಹಲ್ಲೆಯಿಂದಾಗಿಯೇ ಯತೀಶ್ ಮೃತಪಟ್ಟಿರುವುದಾಗಿ ಅವರ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸ್ ಕಾರ್ಯಾಚರಣೆ, ಮೂವರ ವಶಕ್ಕೆ:
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಿತಿನ್ ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ : 65/2026, ಕಲಂ: 115(2), 103 ಜೊತೆಗೆ 3(5) ಬಿ.ಎನ್.ಎಸ್ (BNS) ರಂತೆ ಕೊಲೆ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ:
ಯಶೋಧರ (35) – ನಿವಾಸಿ: ಮಿತ್ತಬಾಗಿಲು, ಬೆಳ್ತಂಗಡಿ
ಮೋಹನ್ (30) – ನಿವಾಸಿ: ಚಾರ್ವಾಕ, ಕಡಬ
ಇಬ್ರಾಹಿಂ (54) – ನಿವಾಸಿ: ಪದಂಗಡಿ, ಬೆಳ್ತಂಗಡಿ
ವಶಕ್ಕೆ ಪಡೆದಿರುವ ಮೂವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಕೊಲೆಗೆ ನಿಖರವಾದ ಕಾರಣ ಮತ್ತು ಹಲ್ಲೆಯ ಹಿಂದಿನ ಸತ್ಯಾಸತ್ಯತೆಗಳನ್ನು ಪತ್ತೆಹಚ್ಚಲು ಬೆಳ್ತಂಗಡಿ ಪೊಲೀಸರು ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
accident
ಬೆಳ್ತಂಗಡಿ – ಪುತ್ತೂರು ಭಾಗದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು : ಇಬ್ಬರು ಬಲಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಪುತ್ತೂರು ಭಾಗಗಳಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ತಲಾ ಓರ್ವರು ಮೃತಪಟ್ಟ ದುರ್ಘಟನೆಗಳು ವರದಿಯಾಗಿವೆ.
ಮುಂಡಾಜೆ: ಬೈಕ್-ಕಾರು ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಯುವಕ ಸಾವು

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕ ಅಗರಿ ಕ್ರಾಸ್ ಬಳಿ ಭಾನುವಾರ ನಡೆದ ಬೈಕ್ ಹಾಗೂ ಕಾರಿನ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ, ಸೋಮವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾರ್ಯತಡ್ಕ ನಿವಾಸಿ ಗಣೇಶ್ (36) ಮೃತಪಟ್ಟ ದುರ್ದೈವಿ.
ಘಟನೆಯ ವಿವರ:
ಭಾನುವಾರ ಉಜಿರೆ ಕಡೆಯಿಂದ ಕಕ್ಕಿಂಜೆ ಕಡೆಗೆ ಗಣೇಶ್ ಅವರು ತಮ್ಮ ಬೈಕ್ನಲ್ಲಿ ತೆರಳುತ್ತಿದ್ದಾಗ, ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಕಾರಿನ ಬಲಭಾಗದ ಸೈಡ್ ಮಿರರ್ಗೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ.
ಮೃತ ಗಣೇಶ್ ಅವರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸಂತಾಪ:
ಮೃತ ಗಣೇಶ್ ಅವರು ಕಾರ್ಯತಡ್ಕದಲ್ಲಿ ‘ಗಣೇಶ್ ಸ್ಟುಡಿಯೋ’ ನಡೆಸುತ್ತಿದ್ದು, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (SKPA) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಬೆಳ್ತಂಗಡಿ ವಲಯದ ಸಕ್ರಿಯ ಸದಸ್ಯರಾಗಿದ್ದರು. ಯುವ ಛಾಯಾಗ್ರಾಹಕನ ಅಕಾಲಿಕ ನಿಧನಕ್ಕೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು, 7 ಮಂದಿಗೆ ಗಾಯ

ಕಡಬ: ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳದ ಅಪಾಯಕಾರಿ ತಿರುವಿನಲ್ಲಿ ಮೇ 25ರಂದು ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ಧರ್ಮಸ್ಥಳದ ಕಡೆಯಿಂದ ಸುಬ್ರಹ್ಮಣ್ಯದತ್ತ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಈ ಅಪಘಾತ ನಡೆದಿದೆ. ಬೆಂಗಳೂರು ದೇವನಹಳ್ಳಿ ಕೋಟೆ ನಿವಾಸಿ ಸಂಜು ವಿ. ಅವರು ಚಲಾಯಿಸುತ್ತಿದ್ದ ಟೆಂಪೋ ಟ್ರಾವೆಲರ್ (ಕೆಎ 43 ಎ 6435) ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ಶೇಟ್ ಮಲ್ಲಿಕಾ ಮದ್ರಾಸ್ ಅವರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಕೆಂಜಳದ ಅಪಾಯಕಾರಿ ತಿರುವಿನಲ್ಲಿ ಎರಡೂ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ.
ಮೃತರು ಮತ್ತು ಗಾಯಾಳುಗಳ ವಿವರ: ಅಪಘಾತದ ತೀವ್ರತೆಗೆ ಟೆಂಪೋ ಟ್ರಾವೆಲರ್ನಲ್ಲಿದ್ದ ಚಿಕ್ಕಬಳ್ಳಾಪುರ ತಾಲೂಕಿನ ಕೆರೆಸಂದ್ರಮನೆ ನಿವಾಸಿ ಅಂಜನಮ್ಮ (47) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಅಪಘಾತದಲ್ಲಿ 5 ವರ್ಷದ ಬಾಲಕಿ ನಯಾನಿಕಾ ತೀವ್ರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದಂತೆ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ನರಸಿಂಹಯ್ಯ, ವಿ. ಮಂಜುನಾಥ್, ವಿ. ಗಂಗಾಧರ್, ಪವಿತ್ರಾ, ಸಿರಿಪ್ರಿಯಾ ಹಾಗೂ ರತ್ನಮ್ಮ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಟೆಂಪೋದಲ್ಲಿದ್ದ ಲೋಕೇಶ್ ದೇವನಹಳ್ಳಿ, ಪವನ್ ಸೋಮನಹಳ್ಳಿ ಕನಕಪುರ, ಕವಿತಾ ಸಿ.ಎಂ., ಜೀವನ್, ಆಶಾ, ಪ್ರೀತಮ್ ಹಾಗೂ ಶಿವ ಅವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.



Belthangady
ಕಾರಿನೊಳಗೆ ಸಿಲುಕಿಕೊಂಡ ಮಗು; ಸಮಯಪ್ರಜ್ಞೆ ಮೆರೆದು ಗ್ಲಾಸ್ ಒಡೆದು ರಕ್ಷಿಸಿದ ಸಾರ್ವಜನಿಕರು
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಜಂಕ್ಷನ್ ಬಳಿ ಚಾಲಕನ ಅಜಾಗರೂಕತೆಯಿಂದಾಗಿ ಕಾರಿನ ಡೋರ್ ಆಟೋಮೆಟಿಕ್ ಲಾಕ್ ಆಗಿ, ಮಗುವೊಂದು ಕಾರಿನೊಳಗೆ ಸಿಲುಕಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮೇ 25ರಂದು ಸೋಮವಾರ ನಡೆದಿದೆ.
ಘಟನೆಯ ವಿವರ: ಮದ್ದಡ್ಕದ ಕುವೆಟ್ಟು ನಿವಾಸಿಯೊಬ್ಬರು ತಮ್ಮ ಮಗುವಿನೊಂದಿಗೆ ಕಾರಿನಲ್ಲಿ ಬಂದಿದ್ದು, ರಸ್ತೆ ಬದಿಯ ಅಂಗಡಿಯೊಂದರ ಬಳಿ ಕಾರನ್ನು ನಿಲ್ಲಿಸಿದ್ದರು. ಚಾಲಕನು ಕಾರಿನ ಕೀ ಮತ್ತು ಮಗುವನ್ನು ಒಳಗಡೆಯೇ ಬಿಟ್ಟು, ಇಂಜಿನ್ ಆಫ್ ಮಾಡಿ ಹೊರಗೆ ಇಳಿದು ಅಂಗಡಿಗೆ ತೆರಳಿದ್ದಾರೆ. ಆದರೆ, ಅವರು ಇಳಿದ ತಕ್ಷಣ ಕಾರಿನ ಸೆಂಟ್ರಲ್ ಲಾಕಿಂಗ್ ಸಿಸ್ಟಮ್ನಿಂದಾಗಿ ಡೋರ್ಗಳು ಆಟೋಮೆಟಿಕ್ ಆಗಿ ಲಾಕ್ ಆಗಿವೆ.
ಕಾರಿನ ಕೀ ಒಳಗಡೆಯೇ ಇದ್ದಿದ್ದರಿಂದ ಹೊರಗಿನಿಂದ ಬಾಗಿಲು ತೆರೆಯಲು ಸಾಧ್ಯವಾಗದೆ ಚಾಲಕ ಗಾಬರಿಗೊಂಡಿದ್ದಾರೆ. ಇದೇ ವೇಳೆ ಕಾರಿನ ಒಳಗಿದ್ದ ಮಗು ಗಾಬರಿಗೊಂಡು ಜೋರಾಗಿ ಅಳಲು ಪ್ರಾರಂಭಿಸಿದೆ. ಬಿಸಿಲಿನ ಬೇಗೆಯೂ ಹೆಚ್ಚಿದ್ದರಿಂದ ಕಾರಿನೊಳಗೆ ಉಸಿರಾಟದ ತೊಂದರೆಯಾಗುವ ಭೀತಿ ಎದುರಾಗಿತ್ತು.
ಸಾರ್ವಜನಿಕರ ಸಮಯಪ್ರಜ್ಞೆ: ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರು ಮತ್ತು ಅಂಗಡಿ ಮುಂಗಟ್ಟುಗಳ ಮಾಲೀಕರು ಕಾರಿನ ಬಳಿ ಧಾವಿಸಿ ಬಂದಿದ್ದಾರೆ. ಕಂಪನಿಕೀ ಇಲ್ಲದೆ ಬಾಗಿಲು ತೆರೆಯಲು ಕಂಬಿ, ಸ್ಕ್ರೂಡ್ರೈವರ್ ಬಳಸಿ ವಿವಿಧ ರೀತಿಯಲ್ಲಿ ಹರಸಾಹಸ ಪಟ್ಟರೂ ಯಾವುದೇ ಪ್ರಯೋಜನವಾಗಲಿಲ್ಲ. ಮಗುವಿನ ಅಳು ಹೆಚ್ಚಾಗುತ್ತಿರುವುದನ್ನು ಮತ್ತು ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಾರ್ವಜನಿಕರು ಸಮಯಪ್ರಜ್ಞೆ ಮೆರೆದಿದ್ದಾರೆ.
ಮಗುವಿಗೆ ಯಾವುದೇ ಗಾಯವಾಗದಂತೆ ಎಚ್ಚರಿಕೆ ವಹಿಸಿ, ಕಾರಿನ ಹಿಂಬದಿಯ ಕಿಟಕಿಯ ಗ್ಲಾಸ್ (ಗಾಜು) ಅನ್ನು ಬಲವಾಗಿ ಒಡೆದಿದ್ದಾರೆ. ತದನಂತರ ಒಳಗಡೆಯಿದ್ದ ಬಾಗಿಲಿನ ಲಾಕ್ ಅನ್ನು ತೆಗೆದು ಮಗುವನ್ನು ಯಶಸ್ವಿಯಾಗಿ ಹೊರಗೆ ತಂದು ರಕ್ಷಿಸಿದ್ದಾರೆ. ಸಾರ್ವಜನಿಕರ ಈ ತ್ವರಿತ ನಿರ್ಧಾರ ಮತ್ತು ಸಮಯಪ್ರಜ್ಞೆಗೆ ಸ್ಥಳೀಯರು ಹಾಗೂ ಮಗುವಿನ ಪೋಷಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.



-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
